ಸುದ್ದಿ

ಹಾಲಲ್ಲ,ಆಲ್ಕೋಹಾಲ್‍ನಲ್ಲೂ ಕಲಬೆರಕೆ; ಬಾಟಲ್ ಖಾಲಿ ಮಾಡುವಾಗ ಬಯಲಿಗೆ ಬಂದ ಸತ್ಯ..! ಈ ಗಟನೆ ನಡೆದಿದ್ದು ಎಲ್ಲಿ ಗೊತ್ತಾ?

71

ಬಿಯರ್ ಕುಡಿಯುವಾಗ ಬಾಟಲಿಯಲ್ಲಿ ಕಲಬೆರಕೆ ಮಾಡಿರುವುದು ಪತ್ತೆಯಾಗಿದ್ದು, ಕೋಲಾರದ ಗ್ರಾಹಕರೊಬ್ಬರು ಇದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.ಕೋಲಾರ ಜಿಲ್ಲೆಯ ಮಾಲೂರಿನ ಬೈರಸಂದ್ರ ಬಳಿಯ ಶ್ರೀ ಲಕ್ಷ್ಮೀ ವೈನ್ಸ್‍ನಲ್ಲಿ ಖರೀದಿಸಿದ ಬಿಯರ್ ನಲ್ಲಿ ಕಲಬೆರಕೆ ಮಾಡಿರುವುದು ಪತ್ತೆಯಾಗಿದೆ.

ಚಿಲ್ಡ್ ಬಿಯರ್ ನಲ್ಲಿ ಕಲಬೆರಕೆಯಾಗಿದ್ದು, ಅರ್ಧ ಬಾಟಲಿ ಕುಡಿದ ಬಳಿಕ ಇದು ಗ್ರಾಹಕನ ಅರಿವಿಗೆ ಬಂದಿದೆ. ಈ ಕುರಿತು ಬಾರ್ ಮಾಲೀಕರ ವಿರುದ್ಧ ಗ್ರಾಹಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಿಕ್ಸ್ ಮಾಡುವ ವೇಳೆ ಏನೋ ಬಿದ್ದಿದೆ ಎಂದು ಬಾರ್ ಮಾಲೀಕರು ಸಮರ್ಥಿಸಿಕೊಂಡಿದ್ದಾರೆ.

ಕೋಲಾರದಲ್ಲಿ ಈ ಪ್ರಕರಣ ನಡೆದಿದ್ದು, ಟ್ಯೂಬರ್ಗ್ ಬಿಯರ್‍ಗೆ ಕಲಬೆರಕೆ ಮಾಡಲಾಗಿದೆ. ಇದನ್ನು ಕಂಡ ಗ್ರಾಹಕರು ಗಾಬರಿಯಾಗಿದ್ದು, ಮಾಲೀಕರ ವಿರುದ್ಧ ಅಬಕಾರಿ ಇಲಾಖೆ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.

ಈ ಕುರಿತು ತನಿಖೆ ನಡೆಸಿ ಬಾರ್ ಅಥವಾ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಗ್ರಾಹಕರು ಅಬಕಾರಿ ಅಧಿಕಾರಿಗಳಿಗೆ ಒತ್ತಾಯ ಮಾಡಿದ್ದಾರೆ. ಘಟನೆ ನಂತರ ಅಬಕಾರಿ ಸಬ್ ಇನ್ಸ್‍ಪೆಕ್ಟರ್ ನಾರಾಯಣಸ್ವಾಮಿ ಹಾಗೂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ ಗ್ರಾಹಕರು ನೀಡಿದ ದೂರಿನ ಆಧಾರದ ಮೇಲೆ ತನಿಖೆ ಪ್ರಾರಂಭಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕೇವಲ 850ರೂಪಾಯಿಗೆ ತೆಗೆದುಕೊಂಡಿದ್ದ ಉಂಗುರ ಮಾರಿದಾಗ ಸಿಕ್ಕಿದ್ದು 4.5 ಕೋಟಿ ರೂಪಾಯಿ!ಅಚ್ಚರಿ ಆದರೂ ಇದು ನಿಜ…

    ಹೆಚ್ಚಿನ ಸಂಖ್ಯೆಯ ಮಹಿಳೆಯರಿಗೆ ಬೆಲೆ ಬಾಳುವ ಆಭರಣಗಳು ತಮ್ಮದಾಗಬೇಕು ಎಂಬ ಆಸೆ ಇರುತ್ತದೆ. ಆರ್ಥಿಕವಾಗಿ ಚಿನ್ನದ ಆಭರಣ ಖರೀದಿಸಲು ಸಾಧ್ಯವಾಗದಿದ್ದಾಗ ಮಾರುಕಟ್ಟೆಯಲ್ಲಿ ದೊರೆಯುವ ನಕಲಿ ಆಭರಣಗಳನ್ನು ಖರೀದಿಸುತ್ತಾರೆ. ಅಂತೆಯೇ ಇಂಗ್ಲೆಂಡ್ ನಿವಾಸಿಯ ಮಹಿಳೆ 33 ವರ್ಷಗಳ ಹಿಂದೆ ಮಾರುಕಟ್ಟೆಯಲ್ಲಿ 850 ರೂ.ಗೆ ಖರೀದಿಸಿದ್ದ ವಜ್ರದ ಉಂಗುರ ಇಂದು ಬರೋಬ್ಬರಿ 6.5 ಕೋಟಿ ರೂ.ಗೆ ಮಾರಾಟವಾಗಿದೆ. ವಜ್ರದ ಉಂಗುರ ಧರಿಸಬೇಕೆಂದು ಆಸೆ ಪಟ್ಟಿದ್ದ ಲಂಡನ್ ನಿವಾಸಿ 33 ವರ್ಷಗಳ ಹಿಂದೆ ಡೆಬ್ರಾ ಗಾಂಡರ್ಡ್(55), ರಸ್ತೆ ಬದಿಯ ಅಂಗಡಿಯಲ್ಲಿ 850…

  • ದೇಶ-ವಿದೇಶ

    ಜಗತ್ತಿನ ಹತ್ತು ಸರ್ವಾಧಿಕಾರಿಗಳ ಶಾಸನದ ಬಗ್ಗೆ ನಿಮಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ ..

    ಜಗತ್ತಿನ ಸರ್ವಾಧಿಕಾರಿಗಳಲ್ಲಿ 10 ಹತ್ತು ಮಂದಿ ಅಗ್ರ ಗಣ್ಯರು ಇವರೇ ವಿಶ್ವದ ಹತ್ತು ಸರ್ವಾಧಿಕಾರಿಗಳು ಅಲ್ಲಿ ಇವರು ಹೇಳಿದ್ದೇ ಶಾಸನ, ಮಾಡಿದ್ದೇ ಕಾನೂನು

  • ಸುದ್ದಿ

    ಮೊಟ್ಟೆ ತಿನ್ನುವವರು ಇದನ್ನು ತಪ್ಪದೇ ಓದಲೇಬೇಕು,.!

    ಬೆಳಿಗ್ಗೆ ಉಪಹಾರದ ಜೊತೆ ಮೊಟ್ಟೆ ಸೇವಿಸಿದ್ರೆ ಆರೋಗ್ಯಕ್ಕೆ ಒಳ್ಳೆಯದು. ಮೊಟ್ಟೆ ಶಕ್ತಿಯನ್ನು ಹೆಚ್ಚು ಮಾಡುತ್ತೆ. ಹಾಗಾಗಿಯೇ ಅನೇಕರು ಬೆಳಿಗ್ಗೆ, ಸಂಜೆ ಮೊಟ್ಟೆ ಸೇವಿಸ್ತಾರೆ. ಆದ್ರೆ ನೀವು ಸೇವಿಸುವ ಮೊಟ್ಟೆಯಲ್ಲಿ ಶಕ್ತಿ ನೀಡುವಂತ ಅಂಶ ಇರಬೇಕೆಂದೇನೂ ಇಲ್ಲ. ಯಾಕೆಂದ್ರೆ ಮಾರುಕಟ್ಟೆಯಲ್ಲಿ ಮೊಟ್ಟೆಗೆ ಬೇಡಿಕೆ ಹೆಚ್ಚಾಗ್ತಾ ಇದ್ದಂತೆ ಕೃತಕವಾಗಿ ಮೊಟ್ಟೆ ತಯಾರಿಸಲಾಗ್ತಾ ಇದೆ. ಈ ಮೊಟ್ಟೆಯನ್ನು ಹೇಗೆ ತಯಾರಿಸಲಾಗುತ್ತೆ ಎನ್ನುವ ವಿಷಯ ಗೊತ್ತಾದ್ರೆ ಕೆಲವರು ಇಂದಿನಿಂದಲೇ ಮೊಟ್ಟೆ ಸೇವನೆಯನ್ನು ನಿಲ್ಲಿಸಿದ್ರೂ ಸಂಶಯವಿಲ್ಲ. ಈಗ ಒಂದು ಕೋಳಿಗೆ ಮೊಟ್ಟೆ ಉತ್ಪಾದಿಸಲು ಸುಮಾರು…

  • nation, National, News Paper

    ಅತಿ ಹೆಚ್ಚು ಸಾಕ್ಷರತೆ ಹೊಂದಿರುವ ಭಾರತದ ಟಾಪ್ 5 ರಾಜ್ಯಗಳು ಇಲ್ಲಿವೆ.

    “ಓದುವುದಕ್ಕಿಂತ ದೊಡ್ಡ ಸಂತೋಷವಿಲ್ಲ, ಸ್ನೇಹಿತರಿಗಿಂತ ದೊಡ್ಡವರಲ್ಲ ..” ಎಂದು ಪ್ರಧಾನಿ ನರೇಂದ್ರ ಹೇಳಿದರು. 50 ವರ್ಷಗಳಿಗಿಂತ ಹೆಚ್ಚು ಕಾಲ ಅಂತರರಾಷ್ಟ್ರೀಯ ಸಾಕ್ಷರತಾ ದಿನವು ಎಲ್ಲರಿಗೂ ಸಾಕ್ಷರತೆಯ ಮಹತ್ವದ ಬಗ್ಗೆ ನೆನಪಿಸುತ್ತಿದೆ. ಸಾಂಕ್ರಾಮಿಕ ಸಮಯದಲ್ಲಿ ವಿಶ್ವದ ಮಿಲಿಯನ್ ಜನರಲ್ಲಿ ಸುಮಾರು 733 ಮಿಲಿಯನ್ ಜನರಿಗೆ ಓದಲು ಮತ್ತು ಬರೆಯಲು ಸಾಧ್ಯವಾಗುತ್ತಿಲ್ಲ ಎಂದು ಯುನೆಸ್ಕೋ ಹೇಳಿದೆ. ನಾವು .. ಸಾಕ್ಷರತೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವಾಗ, ಸುಧಾರಣೆಯನ್ನು ತೋರಿಸಿದ ಭಾರತೀಯ ರಾಜ್ಯಗಳ ನೋಟ ಇಲ್ಲಿದೆ. ಜನಗಣತಿ…

  • ವ್ಯಕ್ತಿ ವಿಶೇಷಣ

    ಬರಗಾಲಕ್ಕೆ ಸೆಡ್ಡು ಹೊಡೆದು ಹೈನುಗಾರಿಕೆಯಲ್ಲಿ ಸಾಧನೆ ಮಾಡಿ ರಾಷ್ಟ್ರ ಪ್ರಶಸ್ತಿ ಪಡೆದ ಮಹಿಳೆ..!ತಿಳಿಯಲು ಈ ಲೇಖನ ಓದಿ..

    ಹೆಣ್ಣು ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಬಹುದು ಎಂಬುದನ್ನ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಂಪುರದ ಮಹಿಳೆಯೊಬ್ಬರು ನಿರೂಪಿಸಿದ್ದಾರೆ. ರಾಂಪುರ ಗ್ರಾಮದ ಕೃಷಿಕ ಕುಟುಂಬದ ಮಹಿಳೆ ರೋಜಾ ಬರಗಾಲಕ್ಕೆ ಸೆಡ್ಡು ಹೊಡೆದು ತಂತ್ರಜ್ಞಾನವನ್ನ ಅಳವಡಿಸಿಕೊಂಡು ಹೈನುಗಾರಿಕೆ ಮಾಡ್ತಿದ್ದಾರೆ. ಇದರಿಂದ ನಿತ್ಯ 500 ಲೀಟರ್ ಹಾಲು ಉತ್ಪಾದಿಸುವ ಮೂಲಕ ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರೋಜಾ ಕಾರ್ಯಕ್ಕೆ ಅವರ ಪತಿಯು ಕೂಡ ಬೆಂಬಲವಾಗಿ ನಿಂತಿದ್ದಾರೆ. ನಿತ್ಯ 500 ಲೀಟರ್ ಹಾಲು ಉತ್ಪಾದಿಸಿ ಶಿಮುಲ್ ಡೈರಿಗೆ ಸರಬರಾಜು ಮಾಡುವ ಮೂಲಕ ಅಧಿಕ…

  • ಜ್ಯೋತಿಷ್ಯ

    ದೇವರು ಕನಸಿನಲ್ಲಿ ಕಾಣಿಸಿಕೊಂಡರೆ ಏನಾಗುತ್ತೆ ಗೊತ್ತಾ..?

    ಪ್ರತಿಯೊಂದು ಕನಸಿಗೂ ಒಂದೊಂದು ಸಂಕೇತವಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿ ಕನಸು ನಮ್ಮ ಭವಿಷ್ಯದ ಮೇಲೆ ಪ್ರಭಾವ ಬೀರುತ್ತದೆ. ಮುಂದೆ ಏನಾಗಬಹುದು ಎಂಬುದನ್ನು ಕನಸಿನಲ್ಲಿ ಕಂಡ ವಿಷ್ಯಗಳಿಂದ ಹೇಳಬಹುದಾಗಿದೆ. ಕನಸು ಅನೇಕ ಮುನ್ಸೂಚನೆಗಳನ್ನು ನೀಡುತ್ತದೆ. ಪ್ರತಿಯೊಬ್ಬರೂ ರಾತ್ರಿ ಮಲಗಿದಾಗ ಕನಸು ಕಾಣ್ತಾರೆ. ಪ್ರತಿಯೊಬ್ಬರಿಗೂ ಪ್ರತಿ ದಿನ ಬೇರೆ ಬೇರೆ ಕನಸುಗಳು ಕಾಣ್ತವೆ. ಕೆಲವರಿಗೆ ಕನಸಿನಲ್ಲಿ ಪದೇ ಪದೇ ದೇವರು ಕಾಣಿಸಿಕೊಳ್ತಾನೆ. ಕನಸಿನಲ್ಲಿ ದೇವರು ಕಂಡ್ರೆ ಖುಷಿಪಡಬೇಕು. ಇದು ಶುಭ ಸಂಕೇತ. ಯಾರಿಗೆ ದೇವರ ಕೃಪೆ ಇರುತ್ತದೆಯೋ ಅವ್ರಿಗೆ…