ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಂಪ್ಯೂಟರ್‌ಗಳು, ಕಂಪನಿಯ ಸರ್ವರ್‌ಗಳನ್ನು ಹ್ಯಾಕ್ ಮಾಡುವುದನ್ನು ಕೇಳಿದ್ದೇವೆ. ಆದರೆ ಸೂರತ್‌ನಲ್ಲಿ ಕಂಡುಕೇಳರಿಯದ ಪ್ರಕರಣವೊಂದು ವರದಿಯಾಗಿದೆ. ಮನೆಯೊಂದರ ಬೆಡ್‌ರೂಂನಲ್ಲಿ ಅಳವಡಿಸಲಾಗಿದ್ದ ಸ್ಮಾರ್ಟ್ ಟೀವಿಯನ್ನು ಹ್ಯಾಕ್ ಮಾಡಿ, ದಂಪತಿಯ ಲೈಂಗಿಕ ಕ್ರಿಯೆ ದೃಶ್ಯಗಳನ್ನು ಸೆರೆ ಹಿಡಿದು, ಅಶ್ಲೀಲ ಜಾಲತಾಣಕ್ಕೆ ಅಪ್‌ಲೋಡ್ ಮಾಡಲಾಗಿರುವ ಘಟನೆ ನಡೆದಿದೆ. ತನ್ನದೇ ವಿಡಿಯೋ ಆನ್‌ಲೈನ್ ಅಶ್ಲೀಲ ಜಾಲತಾಣದಲ್ಲಿರುವುದನ್ನು ಪತಿ ನೋಡಿದ ಬಳಿಕ ಈ ಅಕ್ರಮ ಬಯಲಾಗಿದೆ. ಇದು ಸ್ಮಾರ್ಟ್ ಟೀವಿ ಬಳಕೆದಾರರಿಗೆ ಎಚ್ಚರಿಕೆ ಗಂಟೆಯಾಗಿದೆ.
ಪೊಲೀಸರಿಗೆ ದೂರು ನೀಡಿದರೆ ಮುಜುಗರಕ್ಕೆ ಗುರಿಯಾಗಬೇಕಾಗುತ್ತದೆ ಎಂಬ ಕಾರಣಕ್ಕೆ ಈ ದಂಪತಿ, ಖಾಸಗಿ ಸೈಬರ್ ತಜ್ಞರ ಸಹಾಯದಿಂದ ಅಶ್ಲೀಲ ವೆಬ್ ತಾಣದಿಂದ ವಿಡಿಯೋವನ್ನು ಅಳಿಸಿ ಹಾಕುವಲ್ಲಿ ಸಫಲವಾಗಿದೆ.ಸೂರತ್‌ನಲ್ಲಿರುವ, ಹೆಚ್ಚಾಗಿ ಸಿರಿವಂತರು ವಾಸಿಸುವ ಬಡಾವಣೆಯ ನಿವಾಸಿಯಾಗಿರುವ ರಾಜೇಶ್ (ಹೆಸರು ಬದಲಿಸಲಾಗಿದೆ) ಎಂಬುವರಿಗೆ ಸ್ಮಾರ್ಟ್ ಟೀವಿ ಮೂಲಕ ಅಶ್ಲೀಲ ವೆಬ್‌ಸೈಟ್‌ಗಳನ್ನು ಸಂದರ್ಶಿಸಿ, ವಿಡಿಯೋ ನೋಡುವ ಅಭ್ಯಾಸವಿದೆ. ಒಂದು ದಿನ ಇದೇ ರೀತಿಯ ವಿಡಿಯೋ ನೋಡುತ್ತಿರುವಾಗ,
ರಾಜೇಶ್ ಅವರು ತಮ್ಮ ಪತ್ನಿ ಜತೆ ಕಳೆದ ಖಾಸಗಿ ಕ್ಷಣಗಳ ವಿಡಿಯೋ ವೆಬ್‌ಸೈಟ್‌ನಲ್ಲಿ ಗೋಚರವಾಗಿದೆ. ಇದನ್ನು ನೋಡಿ ದಂಗಾದ ಅವರು ಪೊಲೀಸರಿಗೆ ದೂರು ನೀಡಲು ಮುಜುಗರವಾಗಿದೆ. ಹೀಗಾಗಿ ಖಾಸಗಿ ಸೈಬರ್ ತಜ್ಞರ ಮೊರೆ ಹೋಗಿದ್ದಾರೆ.ಆ ತಜ್ಞರು ರಾಜೇಶ್ ಮಲಗುವ ಕೋಣೆಯಲ್ಲೆಲ್ಲಾ ಜಾಲಾಡಿದ್ದಾರೆ. ಯಾವುದೇ ಕ್ಯಾಮೆರಾ ಸಿಕ್ಕಿಲ್ಲ. ವಿಡಿಯೋ ಯಾವ ರೀತಿ ಸೆರೆಯಾಯಿತು ಹಾಗೂ ಅಪ್‌ಲೋಡ್ ಆಯಿತು ಎಂಬ ವಿಚಾರಕ್ಕಾಗಿ ಸಾಕಷ್ಟುತಲೆಕೆಡಿಸಿಕೊಂಡಿದ್ದಾರೆ. ಕೊನೆಗೆ ಕೋಣೆಯಲ್ಲಿದ್ದ ಟೀವಿ ಮೇಲೆ ಅನುಮಾನ ಬಂದಿದೆ.
ರಾಜೇಶ್ ಅವರು ಅಶ್ಲೀಲ ವೆಬ್‌ಸೈಟ್‌ಗಳಿಗೆ ಭೇಟಿ ನೀಡುತ್ತಿದ್ದರು. ಆ ಸಂದರ್ಭದಲ್ಲಿ ಹ್ಯಾಕರ್ ಟೀವಿಯನ್ನು ಕಂಪ್ಯೂಟರ್ ರೀತಿ ಹ್ಯಾಕ್ ಮಾಡಿದ್ದಾನೆ. ಅದರಲ್ಲಿದ್ದ ಕೆಮೆರಾವನ್ನು ನಿಯಂತ್ರಿಸಿ, ತನಗೆ ಬೇಕಾದಾಗ ವಿಡಿಯೋ ಸೆರೆ ಹಿಡಿದಿದ್ದಾನೆ. ಆ ಟೀವಿ ವೈಫೈ ಜತೆ ಸಂಪರ್ಕ ಹೊಂದಿದ್ದ ಕಾರಣ ದೃಶ್ಯಗಳು ನೇರವಾಗಿ ಆತನಿಗೆ ಸಿಕ್ಕಿವೆ. ಬಳಿಕ ಆತ ವಿಡಿಯೋವನ್ನು ಆನ್‌ಲೈನ್‌ಗೆ ಅಪ್‌ಲೋಡ್ ಮಾಡಿದ್ದಾನೆ ಎಂಬ ಸಂಗತಿ ಬೆಳಕಿಗೆ ಬಂದಿದೆ.ರಾಜೇಶ್ ಅವರು ಸೈಬರ್ ತಜ್ಞರ ಸಹಾಯದಿಂದ ಆ ವಿಡಿಯೋವನ್ನು ಅಳಿಸಿ ಹಾಕುವಲ್ಲಿ ಸಫಲರಾಗಿದ್ದಾರೆ.
ಟೀವಿ ತಯಾರಿಕಾ ಕಂಪನಿಗಳು ಹಲವು ಭದ್ರತಾ ಅಂಶಗಳನ್ನು ಅಳವಡಿಸಿರುವುದಾಗಿ ಹೇಳಿದರೂ, ಆನ್‌ಲೈನ್ ಭದ್ರತೆಯ ಖಾತ್ರಿ ಇಲ್ಲ ಎಂದು ತಜ್ಞರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
9 ವರ್ಷಗಳ ಹಿಂದೆ ಪಶ್ಚಿಮ ಬಂಗಾಳದಲ್ಲಿ ನಡೆದ ಘಟನೆಯನ್ನ ಆಧರಿಸಿ, ವಿಕಾಸ್ ಪುಷ್ಪಗಿರಿ ಕಟ್ಟಿಕೊಟ್ಟಿರೋ ಸಿನಿಮಾ ನ್ಯೂರಾನ್. ಕೆಲವು ದಿನಗಳ ಹಿಂದೆಯಷ್ಟೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಈ ಚಿತ್ರದ ಟ್ರೈಲರ್ ಮತ್ತು ಸಾಂಗ್ಸ್ ರಿಲೀಸ್ ಮಾಡಿದರು.ಈ ಚಿತ್ರದ ಮೂಲಕ ಉದಯೋನ್ಮುಖ ನಟ ಯುವ ಚಿತ್ರರಂಗಕ್ಕೆ ಎಂಟ್ರಿ ಕೊಡ್ತಿದ್ದಾರೆ. ನೇಹಾ ಪಾಟೀಲ್, ವೈಷ್ಣವಿ ಮತ್ತು ಶಿಲ್ಪಾ ನಾಯಕಿಯರಾಗಿ ಬಣ್ಣ ಹಚ್ಚಿದ್ದಾರೆ. ಪಿಎಚ್ಡಿಗಾಗಿ ಸಂಶೋಧನೆ ನಡೆಸಲು ಹೊರಡುವ ಸ್ಟೂಡೆಂಟ್ಸ್ ಕಾಣೆಯಾಗುತ್ತಾರೆ. ಅವರು ಎಲ್ಲೋದ್ರು..? ಏನಾದ್ರು..? ಮುಂದೇನಾಗುತ್ತೆ ಅನ್ನೋ ರೋಚಕ…
ಬೆಳ್ಳಂಬೆಳಗ್ಗೆ ಮೆಡಿಸಿನ್ ತಯಾರಿಕಾ ಘಟಕದ ರಿಯಾಕ್ಟರ್ ಸ್ಫೋಟಗೊಂಡು ಹೊತ್ತಿ ಉರಿದ ಘಟನೆ ತುಮಕೂರಿನ ಸತ್ಯಮಂಗಲ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಸತ್ಯಮಂಗಲ ಕೈಗಾರಿಕಾ ಪ್ರದೇಶದಲ್ಲಿದ್ದ ಬೇಳೂರು ಬಾಯರ್ ಮೆಡಿಸಿನ್ ತಯಾರಿಕಾ ಘಟಕದ ಬಾಯ್ಲರ್ ನ ರಿಯಾಕ್ಟರ್ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದೆ. ಇಂದು ಬೆಳಗ್ಗೆ 8:30ರ ಸುಮಾರಿಗೆ ಸೋರಿಕೆಯಾಗಿ ಸ್ಫೋಟಗೊಂಡಿದೆ. ಬೆಳ್ಳಂಬೆಳಗ್ಗೆ ಗ್ರಾಮದ ಮೆಡಿಸಿನ್ ಫ್ಯಾಕ್ಟರಿಯ ಬಾಯ್ಲರ್ನ ತಾಪಮಾನದಲ್ಲಿ ಏರುಪೇರಾಗಿ ಈ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಸ್ಫೋಟದ ತೀವ್ರತೆಗೆ ಫ್ಯಾಕ್ಟರಿಯ ಛಾವಣಿ ಕಿತ್ತು ಹೋಗಿದ್ದು, ಅವಶೇಷಗಳು ಗ್ರಾಮದ ಸುತ್ತಮುತ್ತಲ ಮನೆಗಳ…
ಇನ್ನೇನು ಲೋಕಸಭಾ ಚುನಾವಣಾ ಹತ್ತಿರ ಆಗುತ್ತಿದ್ದು, ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಈಗಾಗಲೇ ಭರ್ಜರಿ ತಯಾರಿ ನಡೆಯುತ್ತಿದೆ. ಇದೇ ಸಮಯದಲ್ಲಿ ದೇಶದ ಅತ್ಯಂತ ಜನಪ್ರಿಯ ರಾಜಕಾರಣಿ ಯಾರೆಂದು ಸಮೀಕ್ಷೆ ನಡೆದಿದ್ದು, ಪ್ರಧಾನಿ ನರೇಂದ್ರ ಮೋದಿ ಅತ್ಯಂತ ಜನಪ್ರಿಯ ರಾಜಕಾರಣಿ ಎಂದು ಜನರ ಅಭಿಪ್ರಾಯವಾಗಿದೆ. ರಾಜಕೀಯ ತಂತ್ರರೂಪಕ ಪ್ರಶಾಂತ್ ಕಿಶೋರ್ ನೇತೃತ್ವದ ಇಂಡಿಯನ್ ಪೊಲಿಟಿಕಲ್ ಆಕ್ಷನ್ ಕಮಿಟಿ(ಐ-ಪ್ಯಾಕ್) ನಡೆಸಿದ ಸಮೀಕ್ಷೆಯಲ್ಲಿ ದೇಶದ 712 ಜಿಲ್ಲೆಗಳ 57 ಲಕ್ಷ ಮಂದಿ ಮತ ನೀಡಿದ್ದು ಪ್ರಧಾನಿ ಮೋದಿ ಅತಿ ಜನಪ್ರಿಯ ಮತ್ತು…
ಹಕ್ಕಿ ಜ್ವರದ ಸೋಂಕು ಗಾಳಿಯ ಮೂಲಕ ಮನುಷ್ಯರಿಗೆ ಹರಡುತ್ತದೆ. ಆದರೆ ಇದು ಮನುಷ್ಯರಿಂದ ಮನುಷ್ಯರಿಗೆ ಹರಡುವ ಸೋಂಕಲ್ಲ.ಹಕ್ಕಿ ಜ್ವರ ಅಥವಾ ಕೋಳಿ ಶೀತ ಜ್ವರ ಹೆಚ್5ಏನ್1 ವೈರಸ್ನಿಂದ ಹರಡುವ ರೋಗವಾಗಿದೆ.ವೈಜ್ಞಾನಿಕವಾಗಿ ಹಕ್ಕಿ ಜ್ವರವನ್ನು ಹಕ್ಕಿ ಇನ್ಫ್ಲೂಯೆನ್ಜ ಅಥವಾ ಬರ್ಡ್ ಫ್ಲೂ ಎನ್ನುತ್ತಾರೆ.
ಕರ್ನಾಟಕದ ಮುಂಬರುವ ವಿಧಾನಸಭಾ ಚುನಾವಣೆ 2018 ಕುರಿತಂತೆ ಸಿ ಫೋರ್ ಸಂಸ್ಥೆಯು ಚುನಾವಣಾ ಪೂರ್ವ ಸಮೀಕ್ಷೆ ನಡೆಸಿ, ಆಗಸ್ಟ್ 20 ರಂದು ಪ್ರಕಟಿಸಿದೆ.
ನಮ್ಮ ಜೀವನದ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಮನುಷ್ಯನಿಗೂ ನಿದ್ರೆ ಅತ್ಯಾವಶ್ಯಕವಾಗಿದ್ದು, ನಮ್ಮ ಜೀವನದ ಮೂರನೇ ಒಂದು ಭಾಗವನ್ನು ನಾವು ನಿದ್ರೆಯಲ್ಲೇ ಕಳೆಯುತ್ತೇವೆ. ಆದರೆ ಬದಲಾದ ಜೀವನ ಶೈಲಿಯಿಂದಾಗಿ ಇಂದು ನಿದ್ದೆಗೆಡುವುದು ಸಾಮಾನ್ಯ ಎಂಬಂತಾಗಿ ಹೋಗಿದ್ದು, ಇದರಿಂದಾಗಿ ಭವಿಷ್ಯದಲ್ಲಿ ಸಾಕಷ್ಟು ಆರೋಗ್ಯಕರ ದುಷ್ಪರಿಣಾಮಗಳು ಸಂಭವಿಸುತ್ತವೆ