ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚೆಗಷ್ಟೇ 1.5 ಕೋಟಿ ರೂಪಾಯಿ ಮೊತ್ತದ ಪ್ರತಿಷ್ಠಿತ ರೋಲೆಕ್ಸ್ ಪ್ರಶಸ್ತಿಗೆ ಪಾತ್ರರಾದ ವನ್ಯಜೀವಿ ತಜ್ಞೆ ಕೃತಿ ಕಾರಂತ್ ಅವರು, ಪ್ರಶಸ್ತಿಗಾಗಿ ಸುಳ್ಳು ದಾಖಲೆಗಳನ್ನು ಸೃಷ್ಟಿಸಿದ್ದಾರೆ ಎಂದು ಅರಣ್ಯ ಇಲಾಖೆ ಆರೋಪಿಸಿದೆ. ಖ್ಯಾತ ವನ್ಯಜೀವಿ ತಜ್ಞ ಉಲ್ಲಾಸ್ ಕಾರಂತ್ ಅವರ ಮಗಳು ಮತ್ತು ಖ್ಯಾತ ಸಾಹಿತಿ ದಿ. ಶಿವರಾಮ ಕಾರಂತ್ ಅವರ ಮೊಮ್ಮಗಳಾದ ಕೃತಿ ಕಾರಂತ್, ಆಧಾರ ರಹಿತ ಮತ್ತು ನಕಲಿ ದಾಖಲೆಗಳನ್ನು ನೀಡಿ ಈ ಪ್ರಶಸ್ತಿ ಪಡೆದುಕೊಂಡಿದ್ದಾರೆ ಎಂದು ಅರಣ್ಯ ಇಲಾಖೆ ಗಂಭೀರ ಆರೋಪ ಮಾಡಿದೆ. ಈ ಸಂಬಂಧ ಅದು ಟ್ವಿಟ್ಟರ್, ಫೇಸ್‌ಬುಕ್‌ಗಳಲ್ಲಿ ಬರೆದಿದ್ದು, ಪತ್ರಿಕಾ ಪ್ರಕಟಣೆ ಹೊರಡಿಸಿದೆ.
ಅರಣ್ಯ ಸೇವೆ ಮತ್ತು ಅರಣ್ಯ ಶಾಲೆ ಎಂಬ ಯೋಜನೆಗಳ ಮೂಲಕ ವನ್ಯ ಬದುಕಿನ ಬಗ್ಗೆ ಅರಿವು ಮೂಡಿಸುವ ಹಾಗೂ ಚಿಕ್ಕಮಕ್ಕಳಲ್ಲಿ ವನ್ಯಜೀವಿ, ಅರಣ್ಯದ ಬಗ್ಗೆ ಪ್ರೀತಿ ಬೆಳೆಸುವ ಕಾರ್ಯಕ್ಕಾಗಿ ಈ ಪ್ರಶಸ್ತಿ ದೊರೆತಿದೆ. ಜತೆಗೆ ಬಂಡೀಪುರ, ನಾಗರಹೊಳೆ ಅರಣ್ಯದಂಚಿನಲ್ಲಿ ವಾಸಿಸುವ ಸಾವಿರಾರು ಜನರಿಗೆ ಕಾಡುಪ್ರಾಣಿ-ಮಾನವ ಸಂಘರ್ಷದಿಂದ ತೊಂದರೆಗೊಳಗಾದ ಕುಟುಂಬಗಳಿಗೆ ಪರಿಹಾರ ಕೊಡಿಸಿದ್ದೇವೆ ಎಂದು ಕೃತಿ ಕಾರಂತ್ ಹೇಳಿಕೊಂಡಿದ್ದರು.
ಬಂಡೀಪುರ ಹುಲಿ ಯೋಜನೆಯ ನಿರ್ದೇಶಕ ಟಿ. ಬಾಲಚಂದ್ರ ಅವರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ವನ್ಯಜೀವಿಗಳ ದಾಳಿಗೆ ಬಲಿಯಾದವರು/ಬೆಳೆ ಹಾನಿಗೆ ತುತ್ತಾದವರಿಗೆ ಪರಿಹಾರ ಪಾವತಿ ಪ್ರಕ್ರಿಯೆಯಲ್ಲಿ ಯಾವುದೇ ಸಂಸ್ಥೆ, ವ್ಯಕ್ತಿ ಅಥವಾ ಎನ್‌ಜಿಓ ಭಾಗಿಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅಧಿಕಾರಿಗಳನ್ನು ಸಂಪರ್ಕಿಸಿಲ್ಲ ಕೃತಿ ಕಾರಂತ್ ಅವರ ಕಾರ್ಯದ ಬಗ್ಗೆ ಅರಣ್ಯ ಇಲಾಖೆಗೆ ಯಾವುದೇ ಮಾಹಿತಿ ಇಲ್ಲ. ಅವರು ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸಮಾಲೋಚನೆಯನ್ನೂ ನಡೆಸಿಲ್ಲ. ಪರಿಹಾರ ಒದಗಿಸುವ ಒಂದೇ ಒಂದು ಪ್ರಕರಣದಲ್ಲಿಯೂ ಅವರು ಅಧಿಕಾರಿಗಳನ್ನು ಸಂಪರ್ಕಿಸಿಲ್ಲ. ಹೀಗಾಗಿ ಪರಿಹಾರ ಕೊಡಿಸಿರುವ ಹೇಳಿಕೆಯೇ ಸುಳ್ಳಾಗಿದೆ ಎಂದು ಆರೋಪಿಸಿದೆ.
13,702 ಅರ್ಜಿಗಳ ವಿಲೇವಾರಿ ಮಾನವ-ಪ್ರಾಣಿ ಸಂಘರ್ಷದಿಂದ ಜೀವ ಹಾನಿ ಮತ್ತು ಬೆಳೆ ಹಾನಿಯಾದ ಕುಟುಂಬಗಳಿಗೆ ಪರಿಹಾರ ಒದಗಿಸಲು 6,505 ಜನರ ಪರವಾಗಿ 13,702 ಅರ್ಜಿಗಳನ್ನು ವಿಲೇವಾರಿ ಮಾಡಿಸಿ ಅವರಿಗೆ ಪರಿಹಾರ ಕೊಡಿಸಿರುವುದಾಗಿ ಅವರು ಹೇಳಿಕೊಂಡಿದ್ದಾರೆ. ಈ ದಾಖಲೆಗಳನ್ನು ರೋಲೆಕ್ಸ್ ಸಂಸ್ಥೆಗೂ ನೀಡಿದ್ದಾರೆ. ಆದರೆ, ಅರಣ್ಯ ಇಲಾಖೆಯ ಸಿಬ್ಬಂದಿ ಸ್ವತಃ ಇಲ್ಲಿನ ಜನರನ್ನು ಭೇಟಿ ಮಾಡಿ ಅವರಿಂದ ಮಾಹಿತಿ ಪಡೆದು ಪರಿಹಾರವನ್ನು ಒದಗಿಸಿದೆ ಎಂದು ಹೇಳಿದೆ.
ಕೃತಿ ಕಾರಂತ್ ಅವರನ್ನು ನೋಡಿಯೇ ಇಲ್ಲ ಕಾಡು ಪ್ರಾಣಿಗಳು ದಾಳಿ ಮಾಡಿದರೆ ನಮ್ಮ ಸಿಬ್ಬಂದಿಯೇ ಅಲ್ಲಿಗೆ ಹೋಗುತ್ತಾರೆ. ಅವರ ಹೆಸರು-ಹಾನಿಯ ವಿವರಗಳನ್ನು ಬರೆದುಕೊಂಡು ಬರುತ್ತಾರೆ. ಜನರಿಗೆ ಪರಿಹಾರ ನೀಡಲು ನಮಗೆ ಮಧ್ಯವರ್ತಿಗಳ ಅವಶ್ಯಜತೆ ಇಲ್ಲ. ನಾವು ಕೃತಿ ಕಾರಂತ್ ಯಾರೆಂದು ಅವರನ್ನು ನೋಡಿಯೇ ಇಲ್ಲ. ಬಂಡೀಪುರ, ನಾಗರಹೊಳೆಯಲ್ಲಿ ಯಾವ ಎನ್‌ಜಿಓ ಕೂಡ ಕೆಲಸ ಮಾಡಿಲ್ಲ ಎಂದು ಎಪಿಸಿಎಫ್ ಜಗತ್ ರಾಮ್ ಅವರು ಹೇಳಿರುವುದಾಗಿ ಖಾಸಗಿ ವಾಹಿನಿಯೊಂದು ವರದಿ ಮಾಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿಯೊಬ್ಬ ವ್ಯಕ್ತಿಯೂ ಪ್ರತಿಷ್ಠೆ, ಗೌರವ, ಉನ್ನತ ಹುದ್ದೆ ಬಯಸ್ತಾನೆ. ಆದ್ರೆ ಕೆಲವೇ ಕೆಲವು ವ್ಯಕ್ತಿಗಳು ಮಾತ್ರ ಜೀವನದಲ್ಲಿ ಬಯಸಿದ್ದನ್ನು ಪಡೆಯಲು ಯಶಸ್ವಿಯಾಗ್ತಾರೆ. ಪ್ರತಿಷ್ಠೆ, ಗೌರವ ಪ್ರಾಪ್ತಿಯಾಗಲು ಜ್ಯೋತಿಷ್ಯ ಶಾಸ್ತ್ರದಲ್ಲಿ ಕೆಲವೊಂದು ಉಪಾಯಗಳನ್ನು ಹೇಳಲಾಗಿದೆ. ಅದನ್ನು ಪಾಲಿಸಿದ್ರೆ ಉನ್ನತ ಹುದ್ದೆ ಜೊತೆ ಸುಖ ಪ್ರಾಪ್ತಿಯಾಗಲಿದೆ. ಉಪಾಯ: ಸ್ನಾನ ಮಾಡುವ ನೀರಿಗೆ ಬೆಲ್ಲ, ಬಂಗಾರದ ಯಾವುದಾದ್ರೂ ವಸ್ತು, ಅರಿಶಿನ, ಜೇನುತುಪ್ಪ, ಸಕ್ಕರೆ, ಉಪ್ಪು, ಹಳದಿ ಬಣ್ಣದ ಹೂ, ಇವುಗಳಲ್ಲಿ ಯಾವುದಾದ್ರೂ ಒಂದನ್ನು ಹಾಕಿ. ಪ್ರತಿ ದಿನ ಈ ಉಪಾಯ ಅನುಸರಿಸಿದ್ರೆ ಯಶಸ್ಸು…
ಕರ್ನಾಕಟ ವಿಧಾನಸಭಾ ಕ್ಷೇತ್ರಗಳಲ್ಲಿ ಬಹಳ ಮುಖ್ಯ ಪಾತ್ರವಾಯಿಸುವ ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಯಾರಿಗೆ ವಿಜಯಲಕ್ಷ್ಮಿ ಒಲಿಯುವುದು ಎನ್ನುವುದೇ ಯಕ್ಷಪ್ರಶ್ನೆಯಾಗಿದೆ
ಹೊಸ ವರ್ಷ ಶುರುವಾಗಿದೆ. ಹೊಸ ವರ್ಷ ಒಳ್ಳೆಯದನ್ನು ನೀಡಲಿ ಎಂದು ಎಲ್ಲರೂ ಬಯಸ್ತಾರೆ. ಹೊಸ ವರ್ಷ ಕೆಲವರ ಅದೃಷ್ಟ ಬದಲಿಸಿದ್ರೆ ಮತ್ತೆ ಕೆಲವರ ದುರಾದೃಷ್ಟಕ್ಕೆ ಕಾರಣವಾಗಬಹುದು. ಜ್ಯೋತಿಷ್ಯ ಶಾಸ್ತ್ರದಲ್ಲಿಯೂ ಹೊಸ ವರ್ಷ ಯಾವ ರಾಶಿಗೆ ಯಾವ ಫಲ ನೀಡಲಿದೆ ಎಂಬುದನ್ನು ಹೇಳಲಾಗಿದೆ. ಮಕರ ಸಂಕ್ರಾಂತಿ ನಂತ್ರ ವೃಶ್ಚಿಕ ರಾಶಿಯವರ ಅದೃಷ್ಟ ಬದಲಾಗಲಿದ್ದು ಏನೆಲ್ಲಾ ಬದಲಾವಣೆಗಳು ಆಗಲಿದೆ ನೋಡಿ… ಹೊಸ ವರ್ಷದಲ್ಲಿ ಈ ರಾಶಿಯವರ ಅದೃಷ್ಟ ಬದಲಾಗ್ತಿದೆ. ವ್ಯಾಪಾರದಲ್ಲಿ ವೃದ್ಧಿಯಾಗಲಿದೆ. ಅರ್ಧಕ್ಕೆ ನಿಂತ ಕೆಲಸ ಯಶಸ್ವಿಯಾಗಿ ಪೂರ್ಣಗೊಳ್ಳಲಿದೆ. ಈ…
ನಟ ಉಪೇಂದ್ರ ರಾಜಕೀಯಕ್ಕೆ ಬರುವ ವಿಷಯ ದೊಡ್ಡ ಚರ್ಚೆಯನ್ನು ಹುಟ್ಟುಹಾಕಿದೆ. ಅನೇಕರು ಉಪ್ಪಿ ರಾಜಕೀಯಕ್ಕೆ ಬರಲಿ ಎಂದು ಸ್ವಾಗತಿಸುತ್ತಿದ್ದರೇ, ಇನ್ನೂ ಕೆಲವರು ಇದು ಸಿನಿಮಾದಷ್ಟು ಸುಲಭವಲ್ಲ ಎಂದು ಹೇಳುತ್ತಿದ್ದಾರೆ.
ಬಿಗ್ ಬಾಸ್ ಮನೆಯಲ್ಲಿ ಸಂಡೇ ಪಂಚಾಯಿತಿ ನಡೆದಿದೆ. ಅಂತಿಮವಾಗಿ ಮನೆಯಿಂದ ಚೈತ್ರಾ ಕೊಟ್ಟೂರು ಹೊರಗೆ ಬಂದಿದ್ದಾರೆ. ನಾಲ್ಕನೇ ವಾರ ಎಲಿಮಿನೇಶನ್ ನಲ್ಲಿ ಚೈತ್ರಾ ಹೊರಗೆ ಬಂದಿದ್ದಾರೆ. ಯಸ್ ಮತ್ತು ನೋ ಪ್ರಶ್ನೆಗಳ ಮೂಲಕ ಅನೇಕ ವಿಚಾರಗಳನ್ನು ಸುದೀಪ್ ಕೆಣಕಿದರು. ಮೊದಲನೇ ವಾರ ಗುರುಲಿಂಗ ಸ್ವಾಮೀಜಿ, ಎರಡನೇ ವಾರ ಚೈತ್ರಾ ವಾಸುದೇವನ್ ಮತ್ತು ಮೂರನೇ ವಾರ ದುನಿಯಾ ರಶ್ಮಿ ಹೊರಗೆ ಬಂದಿದ್ದಾರೆ. ರಾಜು. ತಾಳಿಕೋಟೆ ಅಂತಿಮ ಘಟ್ಟದವರೆಗೆ ಬಂದು ಸೇಫ್ ಆಗಿದ್ದಾರೆ. ಎರಡು ತಿಂಗಳು ಆದ ಮೇಲೆ ನಾನೊಂದು…
ಮಹಾರಾಷ್ಟ್ರದಲ್ಲಿ ವರುಣನ ರೌದ್ರಾವತಾರ ಮುಂದುವರಿದಿದೆ. ಮಲಾಡ್‍ನ ಕರೂರ್ ಗ್ರಾಮದಲ್ಲಿ ಇಂದು ಬೆಳಗ್ಗೆ ಗೋಡೆ ಕುಸಿದು 18 ಮಂದಿ ದಾರುಣವಾಗಿ ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಬೆಳ್ಳಂಬೆಳಗ್ಗೆ ಈ ದುರಂತ ನಡೆದಿದ್ದು, ಬೆಟ್ಟದ ಇಳಿಜಾರಿನಲ್ಲಿ ನಿರ್ಮಿಸಲಾಗಿರುವ ಗುಡಿಸಲುಗಳ ಮೇಲೆಯೇ 20 ಅಡಿ ಉದ್ದ ಹಾಗೂ ಬಹು ಎತ್ತರದ ಗೋಡೆ ಕುಸಿದಿದ್ದು, 18 ಮಂದಿ ಮೃತಪಟ್ಟಿದ್ದು, ಹಲವರು ತೀವ್ರ ಗಾಯಗೊಂಡಿರುವ ಪರಿಣಾಮ ಸಾವು, ನೋವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.ಈಗಾಗಲೇ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಎನ್‌ಡಿಆರ್‌ಫ್ ಪಡೆ…