ಇತ್ತೀಚೆಗಷ್ಟೇ 1.5 ಕೋಟಿ ರೂಪಾಯಿ ಮೊತ್ತದ ಪ್ರತಿಷ್ಠಿತ ರೋಲೆಕ್ಸ್ ಪ್ರಶಸ್ತಿಗೆ ಪಾತ್ರರಾದ ವನ್ಯಜೀವಿ ತಜ್ಞೆ ಕೃತಿ ಕಾರಂತ್ ಅವರು, ಪ್ರಶಸ್ತಿಗಾಗಿ ಸುಳ್ಳು ದಾಖಲೆಗಳನ್ನು ಸೃಷ್ಟಿಸಿದ್ದಾರೆ ಎಂದು ಅರಣ್ಯ ಇಲಾಖೆ ಆರೋಪಿಸಿದೆ. ಖ್ಯಾತ ವನ್ಯಜೀವಿ ತಜ್ಞ ಉಲ್ಲಾಸ್ ಕಾರಂತ್ ಅವರ ಮಗಳು ಮತ್ತು ಖ್ಯಾತ ಸಾಹಿತಿ ದಿ. ಶಿವರಾಮ ಕಾರಂತ್ ಅವರ ಮೊಮ್ಮಗಳಾದ ಕೃತಿ ಕಾರಂತ್, ಆಧಾರ ರಹಿತ ಮತ್ತು ನಕಲಿ ದಾಖಲೆಗಳನ್ನು ನೀಡಿ ಈ ಪ್ರಶಸ್ತಿ ಪಡೆದುಕೊಂಡಿದ್ದಾರೆ ಎಂದು ಅರಣ್ಯ ಇಲಾಖೆ ಗಂಭೀರ ಆರೋಪ ಮಾಡಿದೆ. ಈ ಸಂಬಂಧ ಅದು ಟ್ವಿಟ್ಟರ್, ಫೇಸ್‌ಬುಕ್‌ಗಳಲ್ಲಿ ಬರೆದಿದ್ದು, ಪತ್ರಿಕಾ ಪ್ರಕಟಣೆ ಹೊರಡಿಸಿದೆ.
ಅರಣ್ಯ ಸೇವೆ ಮತ್ತು ಅರಣ್ಯ ಶಾಲೆ ಎಂಬ ಯೋಜನೆಗಳ ಮೂಲಕ ವನ್ಯ ಬದುಕಿನ ಬಗ್ಗೆ ಅರಿವು ಮೂಡಿಸುವ ಹಾಗೂ ಚಿಕ್ಕಮಕ್ಕಳಲ್ಲಿ ವನ್ಯಜೀವಿ, ಅರಣ್ಯದ ಬಗ್ಗೆ ಪ್ರೀತಿ ಬೆಳೆಸುವ ಕಾರ್ಯಕ್ಕಾಗಿ ಈ ಪ್ರಶಸ್ತಿ ದೊರೆತಿದೆ. ಜತೆಗೆ ಬಂಡೀಪುರ, ನಾಗರಹೊಳೆ ಅರಣ್ಯದಂಚಿನಲ್ಲಿ ವಾಸಿಸುವ ಸಾವಿರಾರು ಜನರಿಗೆ ಕಾಡುಪ್ರಾಣಿ-ಮಾನವ ಸಂಘರ್ಷದಿಂದ ತೊಂದರೆಗೊಳಗಾದ ಕುಟುಂಬಗಳಿಗೆ ಪರಿಹಾರ ಕೊಡಿಸಿದ್ದೇವೆ ಎಂದು ಕೃತಿ ಕಾರಂತ್ ಹೇಳಿಕೊಂಡಿದ್ದರು.
ಬಂಡೀಪುರ ಹುಲಿ ಯೋಜನೆಯ ನಿರ್ದೇಶಕ ಟಿ. ಬಾಲಚಂದ್ರ ಅವರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ವನ್ಯಜೀವಿಗಳ ದಾಳಿಗೆ ಬಲಿಯಾದವರು/ಬೆಳೆ ಹಾನಿಗೆ ತುತ್ತಾದವರಿಗೆ ಪರಿಹಾರ ಪಾವತಿ ಪ್ರಕ್ರಿಯೆಯಲ್ಲಿ ಯಾವುದೇ ಸಂಸ್ಥೆ, ವ್ಯಕ್ತಿ ಅಥವಾ ಎನ್‌ಜಿಓ ಭಾಗಿಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅಧಿಕಾರಿಗಳನ್ನು ಸಂಪರ್ಕಿಸಿಲ್ಲ ಕೃತಿ ಕಾರಂತ್ ಅವರ ಕಾರ್ಯದ ಬಗ್ಗೆ ಅರಣ್ಯ ಇಲಾಖೆಗೆ ಯಾವುದೇ ಮಾಹಿತಿ ಇಲ್ಲ. ಅವರು ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸಮಾಲೋಚನೆಯನ್ನೂ ನಡೆಸಿಲ್ಲ. ಪರಿಹಾರ ಒದಗಿಸುವ ಒಂದೇ ಒಂದು ಪ್ರಕರಣದಲ್ಲಿಯೂ ಅವರು ಅಧಿಕಾರಿಗಳನ್ನು ಸಂಪರ್ಕಿಸಿಲ್ಲ. ಹೀಗಾಗಿ ಪರಿಹಾರ ಕೊಡಿಸಿರುವ ಹೇಳಿಕೆಯೇ ಸುಳ್ಳಾಗಿದೆ ಎಂದು ಆರೋಪಿಸಿದೆ.
13,702 ಅರ್ಜಿಗಳ ವಿಲೇವಾರಿ ಮಾನವ-ಪ್ರಾಣಿ ಸಂಘರ್ಷದಿಂದ ಜೀವ ಹಾನಿ ಮತ್ತು ಬೆಳೆ ಹಾನಿಯಾದ ಕುಟುಂಬಗಳಿಗೆ ಪರಿಹಾರ ಒದಗಿಸಲು 6,505 ಜನರ ಪರವಾಗಿ 13,702 ಅರ್ಜಿಗಳನ್ನು ವಿಲೇವಾರಿ ಮಾಡಿಸಿ ಅವರಿಗೆ ಪರಿಹಾರ ಕೊಡಿಸಿರುವುದಾಗಿ ಅವರು ಹೇಳಿಕೊಂಡಿದ್ದಾರೆ. ಈ ದಾಖಲೆಗಳನ್ನು ರೋಲೆಕ್ಸ್ ಸಂಸ್ಥೆಗೂ ನೀಡಿದ್ದಾರೆ. ಆದರೆ, ಅರಣ್ಯ ಇಲಾಖೆಯ ಸಿಬ್ಬಂದಿ ಸ್ವತಃ ಇಲ್ಲಿನ ಜನರನ್ನು ಭೇಟಿ ಮಾಡಿ ಅವರಿಂದ ಮಾಹಿತಿ ಪಡೆದು ಪರಿಹಾರವನ್ನು ಒದಗಿಸಿದೆ ಎಂದು ಹೇಳಿದೆ.
ಕೃತಿ ಕಾರಂತ್ ಅವರನ್ನು ನೋಡಿಯೇ ಇಲ್ಲ ಕಾಡು ಪ್ರಾಣಿಗಳು ದಾಳಿ ಮಾಡಿದರೆ ನಮ್ಮ ಸಿಬ್ಬಂದಿಯೇ ಅಲ್ಲಿಗೆ ಹೋಗುತ್ತಾರೆ. ಅವರ ಹೆಸರು-ಹಾನಿಯ ವಿವರಗಳನ್ನು ಬರೆದುಕೊಂಡು ಬರುತ್ತಾರೆ. ಜನರಿಗೆ ಪರಿಹಾರ ನೀಡಲು ನಮಗೆ ಮಧ್ಯವರ್ತಿಗಳ ಅವಶ್ಯಜತೆ ಇಲ್ಲ. ನಾವು ಕೃತಿ ಕಾರಂತ್ ಯಾರೆಂದು ಅವರನ್ನು ನೋಡಿಯೇ ಇಲ್ಲ. ಬಂಡೀಪುರ, ನಾಗರಹೊಳೆಯಲ್ಲಿ ಯಾವ ಎನ್‌ಜಿಓ ಕೂಡ ಕೆಲಸ ಮಾಡಿಲ್ಲ ಎಂದು ಎಪಿಸಿಎಫ್ ಜಗತ್ ರಾಮ್ ಅವರು ಹೇಳಿರುವುದಾಗಿ ಖಾಸಗಿ ವಾಹಿನಿಯೊಂದು ವರದಿ ಮಾಡಿದೆ.
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ವಾಸಿಸುವವನೇ ಮನೆ ಒಡೆಯ ಎಂಬ ಐತಿಹಾಸಿಕ ಕಾಯ್ದೆ ಜಾರಿಗೆ ರಾಷ್ಟ್ರಪತಿಯವರ ಅಂಕಿತ ವಷ್ಟೇ ಬಾಕಿ. ಭೂ ಸುಧಾರಣೆಗಳ ತಿದ್ದುಪಡಿ ಕಾಯ್ದೆಯಲ್ಲಿ ‘ಯಾವುದೇ ಇತರ ಕಾನೂನು ಏನೇ ಇದ್ದರೂ, 1979ರ ಜನವರಿ ಮೊದಲ ದಿನಕ್ಕೆ ನಿಕಟಪೂರ್ವದಲ್ಲಿ ಯಾವುದೇ ಕೃಷಿ ಕಾರ್ಮಿಕನು, ಯಾವುದೇ ಗ್ರಾಮದಲ್ಲಿ ತನಗೆ ಸೇರಿರದ ಭೂಮಿಯಲ್ಲಿರುವ ವಾಸದ ಮನೆಯಲ್ಲಿ ಸಾಮಾನ್ಯವಾಗಿ ವಾಸಿಸುತ್ತಿದ್ದಲ್ಲಿ, ಅಂಥ ವಾಸದ ಮನೆಯನ್ನು, ಅದು ಇರುವ ನಿವೇಶನದ ಸಹಿತವಾಗಿ ಮತ್ತು ಅದಕ್ಕೆ ನಿಕಟವಾಗಿ ತಾಗಿಕೊಂಡಿರುವ ಮತ್ತು ಅದರ ಅನುಭೋಗಕ್ಕೆ ಅವಶ್ಯವಾಗಿರುವ ಭೂಮಿಯು ಅದರ ಮಾಲೀಕನಾಗಿ ನೋಂದಾಯಿಸಿಕೊಳ್ಳಲು ಹಕ್ಕುಳ್ಳವನಾಗಿರತಕ್ಕದ್ದು’ ಎಂದು ಹೇಳಿದೆ.
ನಮ್ಮ ದೇಹದ ವಿಸರ್ಜನಾಂಗಗಳಲ್ಲಿ ಕಿಡ್ನಿಯ ಪಾತ್ರ ಅತೀ ಮಹತ್ವವನ್ನು ಪಡೆದಿದೆ. ದೇಹದಲ್ಲಿರುವ ಕಶ್ಮಲ ಮತ್ತು ವಿಷಕಾರಿ ಅಂಶಗಳನ್ನು ದೇಹದಿಂದ ಹೊರದೂಡಿ ದೇಹವನ್ನು ಸದಾ ಕಾಪಾಡುವ ಅಂಗ ಇದಾಗಿದೆ. ದೇಹದ ನೀರಿನಾಂಶದ ಮಟ್ಟವನ್ನು ಸದಾ ನಿಯಂತ್ರಣದಲ್ಲಿ ಇಟ್ಟು ಆರೋಗ್ಯವಾಗಿರುವಂತೆ ನೋಡಿಕೊಳ್ಳುತ್ತದೆ. ದೇಹದ ಈ ಅಂಗವನ್ನು ಉತ್ತಮವಾಗಿಸಿ ಆರೋಗ್ಯವನ್ನು ಸದಾ ಕಾಪಾಡಿಕೊಳ್ಳಲು ನಾವು ತೆಗೆದುಕೊಳ್ಳುವ ಆಹಾರಗಳಿಂದ ಸಾಧ್ಯ. ಕಿಡ್ನಿಯ ರೋಗಗಳನ್ನು ತಡೆಗಟ್ಟಿ ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸುವಂತೆ ಮಾಡಲು ತೆಗೆದುಕೊಳ್ಳಬಹುದಾದ ಆಹಾರ ಕ್ರಮಗಳ ಬಗ್ಗೆ ಇಲ್ಲಿ ಚರ್ಚಿಸಲಾಗಿದೆ. ಲಿಂಬೆಕಾಯಿ ಲಿಂಬೆಕಾಯಿಯಲ್ಲಿ ಸಿಟ್ರಿಕ್…
ಬಡವರ ಸೇಬು ಎಂದೇ ಖ್ಯಾತಿ ಪಡೆದಿರುವ ಸೀಬೆ ಅಥವಾ ಪೇರಳ ಹಣ್ಣು ಎಲ್ಲಾ ಖಾಯಿಲೆಗೂ ರಾಮಬಾಣ. ಸೇಬಿನ ಬದಲು ದಿನಕ್ಕೊಂದು ಸೀಬೆಹಣ್ಣು ತಿಂದು ವೈದ್ಯರಿಂದ ದೂರ ಇರಿ ಎಂದು ಹೇಳಬಹುದು. ಏಕೆಂದರೆ ಉತ್ತಮ ಹಣ್ಣುಗಳಲ್ಲಿ ಸೀಬೆಹಣ್ಣು ಕೂಡ ಒಂದು. ಅಗತ್ಯವಾಗಿ ಬೇಕಾಗಿರುವ ಪ್ರಮುಖ ಪೌಷ್ಟಿಕಾಂಶಗಳನ್ನು ಹೊಂದಿರುವ ಹಣ್ಣು ಇದು. ಸ್ಲಿಮ್ ಆಗಬೇಕೆನ್ನುವವರು ಡಯಟಿಂಗ್ ಲಿಸ್ಟ್‌ನಲ್ಲಿ ಸೀಬೆಹಣ್ಣನ್ನು ಸೇರಿಸಿಕೊಳ್ಳಬಹುದು. ಕಡಿಮೆ ಕ್ಯಾಲೋರಿಯ ಈ ಹಣ್ಣು , ದೇಹಕ್ಕೆ ವಿಟಮಿನ್‌ಗಳ ಮಹಾಪೂರವನ್ನೇ ಪೂರೈಸುವುದರೊಂದಿಗೆ ಕೊಬ್ಬಿನಾಂಶದ ಪ್ರಮಾಣವನ್ನು ಕುಂಠಿತಗೊಳಿಸುತ್ತದೆ ಎನ್ನುತ್ತಾರೆ ಎಕ್ಸ್‌ಪರ್ಟ್ಸ್. ಇದು…
ಹೈದರಾಬಾದ್: ಧೂಮಪಾನ ನಿಷೇಧ ಪ್ರದೇಶದಲ್ಲಿ ಸಿಗರೇಟ್ ಸೇದಿದ್ದಕ್ಕಾಗಿ ಟಾಲಿವುಡ್ ನಟ ರಾಮ್ ಪೋಥಿನೇನಿ ಅವರಿಗೆ ಸೋಮವಾರ ಹೈದರಾಬಾದ್ ಪೊಲೀಸರು 200 ರೂಪಾಯಿ ದಂಡ ವಿಧಿಸಿದ್ದಾರೆ. ಈ ಘಟನೆ ನಗರದ ಐತಿಹಾಸಿಕ ಚಾರ್ಮಿನಾರ್ ಬಳಿ ನಡೆದಿದೆ. ನಟ ರಾಮ್ ತಮ್ಮ ಮುಂಬರುವ ‘ಐಸ್ಮಾರ್ಟ್ ಶಂಕರ್’ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಸಿನಿಮಾದಲ್ಲಿ ಅವರ ಪಾತ್ರದ ಭಾಗವಾಗಿ ನಟ ಸಿಗರೇಟ್ ಸೇದಿದ್ದರು. ನಟ ರಾಮ್ ಸಿಗರೇಟ್ ನಿಷೇಧಿಸಿದ್ದ ಪ್ರದೇಶದಲ್ಲಿ ಧೂಮಪಾನ ಮಾಡಿದ್ದರು. ಅದರ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಸಾಮಾಜಿಕ…