News

ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ
ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !
ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು
ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ!
ರೇಷನ್ ಹಣದ Status Check ಮಾಡಲು ಈ ಲಿಂಕ್ ಮೂಲಕ ಪರೀಕ್ಷಿಸಿಕೊಳ್ಳಿ
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-30 ಸಾವಿರ ದಂಡ
ಈ ಲಿಂಕ್‌ ಕ್ಲಿಕ್‌ ಮಾಡಿದರೆ ಗೃಹಲಕ್ಷ್ಮೀ ಯೋಜನೆಯ ಅರ್ಜಿ
ಗೃಹಜ್ಯೋತಿ ಯೋಜನೆಗೆ ಅರ್ಜಿಸಲ್ಲಿಕೆ ಹೇಗೆ? ಜೂನ್‌ 15 ರಿಂದ ಅರ್ಜಿ ಆಹ್ವಾನ
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-35 ಸಾವಿರ ದಂಡ
ನೂತನ ಸಂಸತ್ ಭವನದ ಉದ್ಘಾಟನೆ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯ ಬಿಡುಗಡೆ..!!
ಉಪಯುಕ್ತ ಮಾಹಿತಿ

14 ವಾಹನಗಳನ್ನು ಓಡಿಸಿ ದಾಖಲೆ ಬರೆದ 2ನೇ ತರಗತಿ ವಿದ್ಯಾರ್ಥಿ! ಮೈಸೂರಿನ ಈ ಸಾಹಸಿ ಬಗ್ಗೆ ತಿಳಿಯಲು ಇಲ್ಲಿ ನೋಡಿ…

288

7 ವರ್ಷದ  ಬಾಲಕಿಯಬ್ಬಳು 14 ವಾಹನಗಳನ್ನು ಚಾಲನೆ ಮಾಡುವ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಲ್ಲಿ  ದಾಖಲೆ ನಿರ್ಮಿಸಿದ್ದಾಳೆ. ಮೈಸೂರಿನ 2ನೇ ತರಗತಿ ವಿದ್ಯಾರ್ಥಿ ಈ ಸಾಹಸ ಮಾಡಿದ್ದಾಳೆ.

2ನೇ ತರಗತಿ ಓದುತ್ತಿರುವ ರಿಫಾ ತಸ್ಕೀನ್ ದಾಖಲೆ ನಿರ್ಮಿಸಿರುವ ಪುಟ್ಟ ಬಾಲಕಿಯಾಗಿದ್ದಾಳೆ. ದ್ವಿಚಕ್ರ ವಾಹನದಿಂದ ಬಹುಚತ್ರದ ಲಾರಿಯ ಸ್ವೀ ರಿಂಗ್ ಹಿಡಿದು ಕು ಳಿತ ಬಾಲಕಿ ದೂಳೆಬ್ಬಿಸುವ ವೇಗದಲ್ಲಿ ಮೈಸೂರಿನ ಈದ್ಗಾ ಮೈದಾನದಲ್ಲಿ ಹಲವು ಸುತ್ತುಗಳನ್ನು ಹಾಕುವ ಮೂಲಕ ನೆರೆದಿದ್ದ ಜನರಲ್ಲಿ ಅಚ್ಚರಿಯನ್ನುಂಟು ಮಾಡಿದಳು. ಬಳಿಕ ಬನ್ನಿಮಂಟಪದ ಸಂತ ಸೋಸೆಫ್ ಶಾಲೆಯ ಆವರಣದಲ್ಲಿ ಒಟು 14 ವಾಹನಗಳನ್ನು ಚಾಲನೆ ಮಾಡಿದ್ದಾಳೆ.

ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ನ ತೀರ್ಪುಗಾರ ಸಂತೋಷ್ ಅಗರ್ವಾರ್ ಅವರ ಉಪಸ್ಥಿತಿಯಲ್ಲಿ ರಿಫಾ ತಸ್ಕೀನ್ ವಾಹನ ಚಾಲನೆ ಮಾಡಿದಳು, ಲಾರಿ, ಆಂಬುಲೆನ್ಸ್, ದ್ವಿಚಕ್ರ ವಾಹನ ಹಾಗೂ ಕಾರು ಸೇರಿದಂತೆ 14 ವಿವಿಧ ವಾಹನಗಳನ್ನು ಓಡಿಸಿದ್ದಾಳೆ. ಈ ಮೂಲಕ ಅತಿ ಕಿರಿಯ ವಯಸ್ಸಿನಲ್ಲಿ ಬಹುಚಕ್ರ ವಾಹನ ಚಾಲನೆ ಮಾಡಿದ ಬಾಲಕಿ ಎಂಬ ಕೀರ್ತಿಗೆ ತಸ್ಕಿ ನ್ ಪಾತ್ರಳಾಗಿದ್ದಾಳೆಂದು ಸಂತೋಷ್ಅಗರ್ವಾಲ್ ಅವರು ಘೋಷಣೆ  ಮಾಡಿದ್ದಾರೆ.

ಇನ್ನು ಕೆಲವೇ ದಿನಗಳಲ್ಲಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಅಧಿಕೃತ ವೆಬ್ ಸೈಟ್ನಲ್ಲಿ ಬಾಲಕಿಯ ಹೆಸರನ್ನು ಸೇರ್ಪಡೆಗೊಳಿಸಲಾಗುತ್ತದೆ.  2018-19ನೇ ಸಾಲಿನ ವಾರ್ಷಿಕ ನಿಯತಕಾಲಿಕೆಯಲ್ಲೂ ಬಾಲಕಿಯ ಹೆಸರನ್ನು ಪ್ರಕಟಿಸಲಾಗುತ್ತದೆ ಎಂದು ಅಗರ್ವಾಲ್ ಅವರು ತಿಳಿಸಿದ್ದಾರೆ. ದಾಖಲೆ ಬರೆದಿರುವ ರಿಫಾಗೆ ಪ್ರಸ್ತುತ ತಾತ್ಕಾಲಿಕ ಪ್ರಮಾಣ ಪತ್ರವನ್ನು ನೀಡಲಾಗುತ್ತದೆ. ಮುಖ್ಯ ಪ್ರಮಾಣಪತ್ರವನ್ನು ಮುಂದಿನ 2 ವಾರಗಳಲ್ಲಿ ನೀಡಲಾಗುತ್ತದೆ. ವಾಹನಗಳ ಸಂಖ್ಯೆಗಳು, ದಾಖಲೆಯ ಪ್ರಾಮುಖ್ಯತೆ ಸೇರಿದಂತೆ ಇನ್ನಿತರೆ ಮಾಹಿತಿಗಳನ್ನು ಸ್ಥಳೀಯ ಸಾರಿಗೆ ಕಚೇರಿಯಿಂದ ಮಾಹಿತಿಗಳನ್ನು ಪಡೆದು, ಸ್ಥಳೀಯ ಶಾಸಕರ ಅನುಮತಿ ಪತ್ರ ಪಡೆದ ಬಳಿಕ ನೀಡಲಾಗುತ್ತದೆ ಎಂದಿದ್ದಾರೆ.

ತಾನು ಬರೆದಿರುವ ದಾಖಲೆಗೆ ಬಾಲಕಿ ರಿಫಾ ಸಂತಸವನ್ನು ವ್ಯಕ್ತಪಡಿಸಿದ್ದು, ಭವಿಷ್ಯದಲ್ಲಿ ನಾನು ಯುದ್ಧ ಪೈಲಟ್ ಆಗಬೇಕೆಂದು ಬಯಸಿದ್ದೇನೆಂದು ಹೇಳಿಕೊಂಡಿದ್ದಾಳೆ, ಭಾರತೀಯ ವಾಯು ಸೇನಗೆ ಸೇರ್ಪಡೆಗೊಳ್ಳಲು ಪುತ್ರಿ ಬಯಸಿದ್ದಾಳೆಂದು ರಿಫಾ ತಂದೆ ತಜುದ್ದೀನ್ ಅವರು ಹೇಳಿದ್ದಾರೆ.

 

About the author / 

admin

Categories

Date wise

  • ಟೊಮೇಟೋ ಅಂಚೆ ಲಕೋಟೆ ಬಿಡುಗಡೆ

    ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…

ಏನ್ ಸಮಾಚಾರ