ರೆಸಿಪಿ

15 ನಿಮಿಷಗಳಲ್ಲಿ ಫಟಾಫಟ್ ‘ಎಗ್ ಪಲಾವ್’ ಮಾಡೋದು ಹೇಗೆ ಗೊತ್ತಾ..?

373

ಬಾಯಲ್ಲಿ ನೀರೂರಿಸುವ ಖಾದ್ಯವೆಂದರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ? ಅದರಲ್ಲೂ ಫಟಾಫಟ್ ಎಂದು ತಯಾರಿಸಲಾಗುವ ಖಾದ್ಯಗಳು ನಮ್ಮ ಜಂಜಾಟಗಳಿಂದ ಕೂಡಿದ ಜೀವನ ಶೈಲಿಗೆ ಅತ್ಯಂತ ಸಹಕಾರಿ.ಅದರಲ್ಲೂ ಎಗ್ ಪಲಾವ್ ಎಂದರೆ ಯಾರಿಗೆ ತಾನೇ ಇಷ್ಟ ಇಲ್ಲ. ಕೇವಲ 15 ನಿಮಿಷಗಳಲ್ಲಿ ಎಗ್ ಪಲಾವ್ ಮಾಡಿ…

ಬೇಕಾದ ಪದಾರ್ಥಗಳು :

*ಅನ್ನ – 2 ಕಪ್

*ಮೊಟ್ಟೆ- 2

*ಈರುಳ್ಳಿ- 2 (ಕತ್ತರಿಸಿದಂತಹುದು)

*ಬೆಳ್ಳುಳ್ಳಿ- 4 ತುಂಡುಗಳು (ಕತ್ತರಿಸಿದಂತಹುದು)

*ಟೊಮೇಟೊ – 2 (ಕತ್ತರಿಸಿದಂತಹುದು)

*ಹಸಿ ಮೆಣಸಿನಕಾಯಿ- 2 (ಕತ್ತರಿಸಿದಂತಹುದು)

*ತಾಜಾ ಅವರೆ ಕಾಳು – 1/4 ಕಪ್

*ಅರಿಶಿನ ಪುಡಿ- 1/2

*ಖಾರದ ಪುಡಿ- 1 ಟೀ.ಚಮಚ

*ಕರಿ ಮೆಣಸಿನ ಪುಡಿ – 1 ಟೀ.ಚಮಚ

*ಗರಂ ಮಸಾಲ ಪುಡಿ- 1 ಟೀ.ಚಮಚ

*ಉರಿದ ಎಳ್ಳಿನ ಪುಡಿ – 1 ಟೀ.ಚಮಚ

*ಉಪ್ಪು- ರುಚಿಗೆ ತಕ್ಕಷ್ಟು

ತಯಾರಿಸುವ ವಿಧಾನ :

*ಬಾಣಲೆಯ ಮೇಲೆ ಎಣ್ಣೆಯನ್ನು ಹಾಕಿ, ಅದರಲ್ಲಿ ಈರುಳ್ಳಿಗಳನ್ನು ಹಾಕಿಕೊಂಡು ಹೊಂಬಣ್ಣ ಬರುವವರೆಗೆ ಉರಿಯಿರಿ. *ನಂತರ ಕತ್ತರಿಸಿದ ಬೆಳ್ಳುಳ್ಳಿಗಳನ್ನು ಸೇರಿಸಿ, ಕೆಲವು ಕ್ಷಣಗಳವರೆಗೆ ಉರಿಯಿರಿ.

*ಮೊಟ್ಟೆಗಳನ್ನು ಹುಷಾರಾಗಿ ಒಡೆದು, ಬಾಣಲೆಗೆ ಹಾಕಿ. ಮೊಟ್ಟೆಗಳನ್ನು ಚೆನ್ನಾಗಿ ಮಿಶ್ರಣ ಮಾಡುತ್ತ ಬೇಯಿಸಿ.

*ಈಗ ಉಪ್ಪು, ಕರಿ ಮೆಣಸು, ಅರಿಶಿನ ಪುಡಿ, ಖಾರದ ಪುಡಿ, ಹಸಿ ಮೆಣಸಿನ ಕಾಯಿ, ಟೊಮೇಟೊಗಳನ್ನೆಲ್ಲಾ ಹಾಕಿ 3-4 ನಿಮಿಷಗಳ ಕಾಲ ಬೇಯಿಸಿ.

*ಇನ್ನು ಈ ಮಿಶ್ರಣಕ್ಕೆ ಅನ್ನವನ್ನು ಹಾಕಿ ಚೆನ್ನಾಗಿ ಬೆರೆಸಿ. ನಂತರ ಗರಂ ಮಸಾಲ ಪುಡಿಯನ್ನು ಬೆರೆಸಿ, ಚೆನ್ನಾಗಿ ಮಿಶ್ರಣ ಮಾಡಿ.

*ಇದೆಲ್ಲ ಮುಗಿದ ಮೇಲೆ, ಒಲೆಯನ್ನು ಆರಿಸಿ. ಈ ಖಾದ್ಯದ ಮೇಲೆ ಎಳ್ಳು ಪುಡಿಯನ್ನು ಚಿಮುಕಿಸಿ. ಬಿಸಿಯಾಗಿರುವಾಗಲೆ ಬಡಿಸಿ. ಈಗ ನೋಡಿ ರುಚಿ ರುಚಿಯಾದ ಮೊಟ್ಟೆ ಪುಲಾವ್ ನಿಮ್ಮ ಮುಂದೆ ಸಿದ್ಧವಾಗಿರುತ್ತದೆ. ಇದನ್ನು ಸಾರಿನ ಜೊತೆಗೆ ಅಥವಾ ಸಾರಿಲ್ಲದೆ ಬೇಕಾದರು ಸೇವಿಸಬಹುದು.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ, ಉಪಯುಕ್ತ ಮಾಹಿತಿ

    ದೇವರಿಗೆ ಅಗರಬತ್ತಿ ಹಚ್ಚಿ ಪೂಜೆ ಮಾಡುವುದು ಏಕೆ ಗೊತ್ತಾ?ಇದರ ಹಿಂದೆ ಕಾರಣ…

    ಭಗವಂತನ ಸಾನಿಧ್ಯದಲ್ಲಿ ಅಗರ್ಬತ್ತಿ ಹಚ್ಚುವುದು ಪೂಜೆ ಮತ್ತು ಪ್ರಾರ್ಥನೆಯ ಮಹತ್ವದ ಅಂಶ. ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಧ್ಯಾನದ ವೇಳೆ ಊದಿನಕಡ್ಡಿ ಹಚ್ಚುವ ಸಂಪ್ರದಾಯವಿದೆ. ಇದೊಂದು ಪುರಾತನ ಆಚರಣೆ. ಊದಿನಕಡ್ಡಿ ಮನೆ ತುಂಬ ಸುಗಂಧ ಪಸರಿಸುವುದು ಮಾತ್ರವಲ್ಲ, ಇದನ್ನು ಹಚ್ಚುವುದಕ್ಕೆ ವೈಜ್ಞಾನಿಕ ಕಾರಣವೂ ಇದೆ. ಪುರಾತನ ಕಾಲದಲ್ಲಿ ಹಲವು ಔಷಧೀಯ ವಸ್ತುಗಳನ್ನು ಊದಿನಕಡ್ಡಿಯಲ್ಲಿ ಅಳವಡಿಸಲಾಗುತ್ತಿತ್ತು. ಲೋಬಾನ ಹಾಗೂ ಗುಗ್ಗಲ್ ಅತ್ಯಂತ ಜನಪ್ರಿಯವಾಗಿದ್ದವು. ಅದನ್ನು ಇಂದಿಗೂ ಬಳಸಲಾಗುತ್ತದೆ. ಲೋಬಾನವನ್ನು ಬಾಸ್ವೆಲ್ಲಿಯಾ ಎಂಬ ಮರದ ಅಂಟಿನಿಂದ ತಯಾರಿಸಲಾಗುತ್ತದೆ. ನಾವು ಅದರ ಸುಗಂಧವನ್ನು…

  • ಆರೋಗ್ಯ, ಉಪಯುಕ್ತ ಮಾಹಿತಿ

    ಹಾಲಿನಲ್ಲಿ ಬೆಲ್ಲ ಬೆರಸಿ ಕುಡಿಯುವುದರಿಂದ ಏನೆಲ್ಲಾ ಉಪಯೋಗಗಳಿವೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಹಾಲು ಸಂಪೂರ್ಣ ಆಹಾರ. ನಮ್ಮ ಶರೀರಕ್ಕೆ ಅಗತ್ಯವಾಗಿ ಬೇಕಾಗುವ ವಿಟಮಿನ್ ಗಳನ್ನು ಒದಗಿಸುತ್ತದೆ.ಬೆಲ್ಲವನ್ನು ಸಕ್ಕರಗೆ ಬದಲಿಯಾಗಿ ಉಪಯೋಗಿಸುತ್ತಾರೆ. ಬೆಲ್ಲದಿಂದ ಅನೇಕ ಸಿಹಿ ಪದಾರ್ಥಗಳನ್ನೂ ಮಾಡುತ್ತಾರೆ. ಸಕ್ಕರೆಗಿಂತ ಬೆಲ್ಲವನ್ನು ಸೇವಿಸುವುದರಿಂದ ಹೆಚ್ಚಿನ ಲಾಭವಿದೆ. ಬಿಸಿ ಬಿಸಿ ಹಾಲಿಗೆ ಸ್ವಲ್ಪ ಬೆಲ್ಲವನ್ನು ಸೇರಿಸಿ ಸೇವಿಸಿದರೆ ಹೇಗಿರುತ್ತದೆಂದು ಗೊತ್ತೆ? ತುಂಬಾ ರುಚಿಕರವಾಗಿರುತ್ತದೆ…! ಕೆಲವರು ಹೀಗೆ ಬಿಸಿ ಹಾಲಿಗೆ ಬೆಲ್ಲವನ್ನು ಸೇರಿಸಿ ಕುಡಿಯುತ್ತಾರೆ. ಹೀಗೆ ಮಾಡುವುದರಿಂದ ಕೇವಲ ರುಚಿಕರವಾಗಿರುವುದೇ ಅಲ್ಲದೇ ಇತರೆ ಅನಾರೋಗ್ಯ ಸಮಸ್ಯೆಗಳು…

  • ಸುದ್ದಿ

    ನನಗೆ ವಯಸ್ಸಾಗಿದೆ ಗನ್ ಹಿಡಿಯಲು ಸಾಧ್ಯವಿಲ್ಲ!ಅಣ್ಣಾ ಅಜಾರೆಯವರು ಈ ಮಾತನ್ನು ಹೇಳಿದ್ದೇಕೆ ಗೊತ್ತಾ?

    ಜಮ್ಮು ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಿಂದ ೪೫ ಜನ ಸೈನಿಕರು ಹುತಾತ್ಮರಾಗಿದ್ದು, ಈ ರಕ್ಕಸರ ಕೃತ್ಯಕ್ಕೆ ಪ್ರತೀಕಾರ ಕೈಗೊಳ್ಳಲೇಬೇಕು ಎಂದು ಪ್ರಧಾನಿ ಮೋದಿಯನ್ನು ಎಲ್ಲರೂ ಒತ್ತಾಯಿಸುತ್ತಿದ್ದಾರೆ. ಈ ನಡುವೆ ಸಾಮಾಜಿಕ ಹೋರಾಟಗಾರ ಅಣ್ಣಾ ಅಜಾರೆ ಅವರು ಹೇಳಿರುವ ಮಾತು ಎಂತಹವರಲ್ಲೂ ರಕ್ತ ಕುದಿಯುವಂತೆ ಮಾಡಿದೆ.ನಮ್ಮ ಯೋಧರಿಗೆ ಸಹಾಯ ಮಾಡಲು ಸೇನಾ ವಾಹನದ ಡ್ರೈವರ್ ಆಗಿ ಕೆಲಸ ಮಾಡಲು ಶಕ್ತಿ ನನಗೆ ಇದೆ ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಹೇಳಿದ್ದಾರೆ. ಲೋಕಪಾಲ ಮಸೂದೆ ಜಾರಿಗೆ ಒತ್ತಾಯಿಸಿ ಉಪವಾಸ…

  • ಸುದ್ದಿ

    ರಷ್ಯಾ ಅಭಿಮಾನಿಯ ವಿಡಿಯೋ ನೋಡಿ ಬೆರಗಾದ ಕಿಚ್ಚ ಸುದೀಪ್,.!

    ಅಭಿಮಾನಿ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ರಷ್ಯಾದ ಅಭಿಮಾನಿಯೊಬ್ಬರು ವಿಡಿಯೋ ಮಾಡಿ ಅವರ  ಮೆಚ್ಚುಗೆ ಸೂಚಿಸಿದ್ದಾರೆ. ಈ ವಿಡಿಯೋ ನೋಡಿ ಕಿಚ್ಚ ಸುದೀಪ್ ಅವರು ರಷ್ಯಾದ ಅಭಿಮಾನಿಗೆ ಬೆರಗಾಗಿದ್ದಾರೆ  ಮರೀನಾ ಕಾರ್ಟಿಂಕಾ ಎಂಬವರು ಈ ವಿಡಿಯೋದಲ್ಲಿ ಸುದೀಪ್ ಅವರ ನಟನೆ ಬಗ್ಗೆ ಮಾತನಾಡಿದ್ದಾರೆ. ಅಲ್ಲದೆ ಮುಂಬರುವ ದಿನಗಳಲ್ಲಿ ನಿಮ್ಮನ್ನು ಭೇಟಿ ಮಾಡುತ್ತೇನೆ ಎಂದು ಮರೀನಾ ವಿಡಿಯೋದಲ್ಲಿ ತಿಳಿಸಿದ್ದಾರೆ . ವಿಡಿಯೋದಲ್ಲಿ ಏನಿದೆ? :ನಾನು ನಿಮ್ಮ ಬಹುದೊಡ್ಡ ಅಭಿಮಾನಿ. ನೀವು ನಡೆಸಿಕೊಡುವ ಬಿಗ್ ಬಾಸ್ ಕಾರ್ಯಕ್ರಮವನ್ನು ನಾನು ನೋಡಲು…

  • ಸುದ್ದಿ

    ಕಾಂಗ್ರೆಸ್‍ಗೆ ವೋಟ್ ಹಾಕಬೇಡಿ, ಬಿಜೆಪಿಗೆ ವೋಟ್ ಹಾಕಿ ಎಂದು ಹೇಳುವ ಮೂಲಕ ಹಣ ಹಂಚಿದ್ರಾ ಜೆಡಿಎಸ್ ಮುಖಂಡ..!?

    ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್, ಕಾಂಗ್ರೆಸ್‍ಗೆ ಕೈ ಕೊಟ್ಟಿತ್ತಾ ಎಂಬ ಪ್ರಶ್ನೆಯೊಂದು ಜಿಲ್ಲೆಯ ಜನರಲ್ಲಿ ಮೂಡಿದೆ. ಯಾಕಂದ್ರೆ ದೋಸ್ತಿ ಅಭ್ಯರ್ಥಿಯನ್ನು ಕೆಡವಲು ದೋಸ್ತಿಗಳೇ ಪ್ಲಾನ್ ಮಾಡಿಕೊಂಡ್ರಾ ಎಂಬ ಮಾತುಗಳು ಕೇಳಿಬರುತ್ತಿವೆ. ಹೌದು. ಜೆಡಿಎಸ್ ಮುಖಂಡ ಮಂಜುನಾಥ್ ಅವರು ಬಿಜೆಪಿ ಅಭ್ಯರ್ಥಿಗೆ ಮತ ಹಾಕುವಂತೆ ಕರೆ ನೀಡಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್‍ಗೆ ವೋಟ್ ಹಾಕಬೇಡಿ, ಬಿಜೆಪಿಗೆ ವೋಟ್ ಹಾಕಿ ಎಂದು ಹೇಳುವ ಮೂಲಕ ಮಂಜುನಾಥ್ ಅವರು ಕಾಂಗ್ರೆಸ್ ಸೋಲಿಸಲು ಹಣ ಹಂಚಿದ್ದಾರೆ ಎಂದು ಆರೋಪಿಸಲಾಗಿದೆ. ಚಾಮರಾಜನಗರ ಕಾಂಗ್ರೆಸ್ ಅಭ್ಯರ್ಥಿ…