ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಕ್ಷೇತ್ರದಲ್ಲೇ ಬಾಲ್ಯವಿವಾಹ ನಡೆದಿದ್ದು, ಈ ಬಾಲ್ಯ ವಿವಾಹದ ವರದಿ ಮಾಡಲು ತೆರಳಿದ್ದ ಮಾಧ್ಯಮದವರ ಮೇಲೆ ಹಲ್ಲೆ ಯತ್ನವೂ ನಡೆದಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗಶೆಟ್ಟಿ ಸ್ವಕ್ಷೇತ್ರ ಚಾಮರಾಜನಗರದ ಕಲ್ಯಾಣ ಮಂಟಪವೊಂದರಲ್ಲಿ ಬಾಲ್ಯ ವಿವಾಹ ನಡೆದಿದೆ. ಸಚಿವರ ಸಮುದಾಯಕ್ಕೆ ಸೇರಿದ 16 ವರ್ಷದ ಬಾಲಕಿಗೆ 24 ವರ್ಷದ ಯುವಕನೊಂದಿಗೆ ವಿವಾಹ ನೆರವೇರಿದೆ.ಚಾಮರಾಜನಗರದ ಉಪ್ಪಾರ ಬಡಾವಣೆಯ ಬಾಲಕಿಯೊಂದಿಗೆ ಅದೇ ಬಡಾವಣೆಯ ಯುವಕನೊಂದಿಗೆ ಮದುವೆ ನಡೆಯುತ್ತಿರುವ ಬಗ್ಗೆ ಮಕ್ಕಳ ಸಹಾಯವಾಣಿಗೆ ದೂರವಾಣಿ ಕರೆಯೊಂದು ಬಂದಿದೆ.
ಈ ಮಾಹಿತಿ ಆಧರಿಸಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪೊಲೀಸರೊಂದಿಗೆ ಕಲ್ಯಾಣಮಂಟಪಕ್ಕೆ ಹೋಗಿದ್ದಾರೆ. ಆದರೆ ಅಷ್ಟೊತ್ತಿಗೆ ಮಾಂಗಲ್ಯಧಾರಣೆ ಆಗಿ ಹೋಗಿತ್ತು. ಬಾಲಕಿಗೆ 18 ವರ್ಷ ತುಂಬಿರುವ ಬಗ್ಗೆ ದಾಖಲಾತಿ ಒದಗಿಸುವಲ್ಲಿ ವಿಫಲವಾದ ಹಿನ್ನೆಲೆಯಲ್ಲಿ ಮದುಮಗ ಮಹೇಶ್ ಸೇರಿದಂತೆ ಆರು ಮಂದಿಯನ್ನು ಬಂಧಿಸಲಾಗಿದೆ. ಬಾಲಕಿಯನ್ನು ವಶಕ್ಕೆ ಪಡೆದು ಬಾಲಮಂದಿರದಲ್ಲಿ ಆಶ್ರಯ ನೀಡಲಾಗಿದೆ.
ಈ ಸಂದರ್ಭದಲ್ಲಿ ವರದಿ ಮಾಡಲು ಹೋದ ಮಾಧ್ಯಮದವರ ಮೇಲೆ ಬಾಲಕಿಯ ಸಂಬಂಧಿಕರು ಹಲ್ಲೆ ಮಾಡಲು ಯತ್ನಿಸಿದ್ದಾರೆ. ಜೊತೆಗೆ ವಿಡಿಯೋ ಮಾಡದಂತೆ ಧಮ್ಕಿ ಹಾಕಿದ್ದಾರೆ.ಬಾಲ್ಯ ವಿವಾಹದ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಸಿ.ಪುಟ್ಟರಂಗಶೆಟ್ಟಿ, ಬಾಲ್ಯ ವಿಹಾಹಕ್ಕೆ ತಮ್ಮ ತೀವ್ರ ವಿರೋಧವಿದ್ದು ಯಾವುದೇ ಮುಲಾಜಿಲ್ಲದೆ ಪೋಷಕರ ವಿರುದ್ಧ ಕ್ರಮ ಜರುಗಿಸಲು ಪೊಲೀಸರಿಗೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ಈಗಿನ ಸೋಶಿಯಲ್ ಮಿಡಿಯಾಗಳಾದ ಫೇಸ್ಬುಕ್,ಟ್ವಿಟ್ಟರ್, ಹಾಗೂ ಯೂ ಟೂಬ್’ಗಳಲ್ಲಿ ರಾತ್ರೋ ರಾತ್ರಿ ಫೇಮಸ್ ಆದವರಿದ್ದಾರೆ. ಅವರು ಹೇಗಿದ್ದಾರೆ ಅನ್ನುವುದು ಮುಖ್ಯ ಅಲ್ಲ. ಅವರಲ್ಲಿ ಏನು ಟ್ಯಾಲೆಂಟ್ ಇದೆ ಅನ್ನುವುದು ಮುಖ್ಯ. ಅಂತಹ ಟ್ಯಾಲೆಂಟ್ ಇದ್ದವರು ಸೋಶಿಯಲ್ ಮಿಡಿಯಾಗಳಿಂದ ಸೂಪರ್ ಸ್ಟಾರ್ ಆಗಬಹುದು.
ರಂಗು ರಂಗಾದ ನಮ್ಮ ದೇಶದಲ್ಲಿ ನಾನಾ ವಿಧಗಳ ಜಾತ್ರೆ, ಮೇಳಗಳು ಆಯೋಜನೆಗೊಳ್ಳುವುದು ಸಾಮಾನ್ಯ. ಅಷ್ಟೆ ಏಕೆ, ಪ್ರಾಣಿಗಳಿಗೆಂದು ಸಮರ್ಪಿತವಾದ ಉತ್ಸವಗಳೂ ಕೂಡ ನಮ್ಮಲ್ಲಿ ಕಂಡುಬರುತ್ತವೆ. ಇಂದಿನ ಈ ಲೇಖನದಲ್ಲಿ ಒಂಟೆಗಳ ಉತ್ಸವದ ಕುರಿತು ತಿಳಿಯಿರಿ. ಇದೊಂದು ವಿಶಿಷ್ಟ ಉತ್ಸವವಾಗಿದ್ದು ರಾಜಸ್ಥಾನ ರಾಜ್ಯದಲ್ಲಿ ಈ ಮೇಳವು ಕಂಡುಬರುತ್ತದೆ ರಾಜಸ್ತಾನಲ್ಲಿ ಪ್ರತಿವರ್ಷ ಪುಷ್ಕರ್ ಮೇಳ ನಡೆಯುತ್ತದೆ. ಈ ಮೇಳವೇ ಒಂಟೆಗಳಿಗಾಗಿ ಸ್ಪರ್ಧೆಯನ್ನು ಇಟ್ಟಿರುವಂತಹದ್ದು. ಈ ಮೇಳವು ನೋಡಲೂ ತುಂಬಾ ಸುಂದರವಾಗಿರುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಈ ಮೇಳದಲ್ಲಿ ಭಾಗವಹಿಸುತ್ತಾರೆ. ಪುಷ್ಕರ್…
ಶನಿವಾರ, 21/4/2018, ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:– ಎಲ್ಲಾ ವಿಚಾರಕ್ಕೂ ಪರರ ಸಲಹೆಯನ್ನು ಕೇಳುತ್ತಾ ಕೂತರೆ ಉತ್ತಮ ಅವಕಾಶ ತಪ್ಪಿ ಹೋಗುವುದು ಸಾಧ್ಯತೆ. ಅಂಜಿಕೆ, ಅಧೈರ್ಯ ಬದಿಗಿಟ್ಟು? ಕಾರ್ಯವನ್ನು ಮುನ್ನುಗ್ಗಿ ಮಾಡಿ. ದೈವಬಲವಿದೆ. ನೀವು ಯಶಸ್ಸನ್ನು ಹೊಂದುವಿರಿ….
ತರಕಾರಿ ಅಥವಾ ಹಣ್ಣುಗಳ ಸಿಪ್ಪೆಗಳಿಂದ ಹಲವಾರು ಪ್ರಯೋಜನಗಳಿವೆ. ಇವುಗಳನ್ನು ಬಿಸಾಡುವ ಬದಲು ಅವುಗಳಿಂದ ಲಾಭಗಳನ್ನು ಪಡೆದುಕೊಳ್ಳಿ. ಯಾವ ಸಿಪ್ಪೆಯಲ್ಲಿ ಏನು ಲಾಭ ಎಂಬುದರ ವಿವರ ಇಲ್ಲಿದೆ. ನಿಂಬೆ ಸಿಪ್ಪೆ : ಹಳದಿ ಬಣ್ಣದ ಈ ಸಿಪ್ಪೆಯಲ್ಲಿ ನಾರು, ವಿಟಮಿನ್ ಸಿ, ಬಿ6, ಕ್ಯಾಲ್ಷಿಯಂ, ಐರನ್ ಮತ್ತು ಮೆಗ್ನೀಷಿಯಂಗಳಿವೆ. ಇವುಗಳು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ. ನಿಂಬೆ ಸಿಪ್ಪೆಯ ರುಚಿ ನಾಲಿಗೆಯ ರುಚಿ ಹೆಚ್ಚುವಂತೆ ಮಾಡುತ್ತದೆ. ಕಲ್ಲಂಗಡಿ ಸಿಪ್ಪೆ : ಇದರ ಹಸಿರು ಸಿಪ್ಪೆಯಲ್ಲಿರುವ ಸಿಟ್ರಲ್ಲೈನ್ ಎಂಬ ಅಮಿನೊ…
ಈವರೆಗೆ ವಾಸ್ತುವಿಗೆ ಸಂಬಂಧಿಸಿದಂತೆ ಅನೇಕ ವಿಷಯಗಳನ್ನು ಹೇಳಿದ್ದೇವೆ. ಫೆಂಗ್ ಶೂಯಿಯಲ್ಲಿ ಯಾವ ವಸ್ತು ಮನೆಯಲ್ಲಿದ್ದರೆ ಶುಭ ಹಾಗೆ ಯಾವ ಜಾಗದಲ್ಲಿ ಯಾವ ವಸ್ತು ಇರಬೇಕು ಎಂಬೆಲ್ಲ ವಿಷಯಗಳನ್ನು ಹೇಳಲಾಗಿದೆ. ಇದ್ರ ಜೊತೆಗೆ ಫೆಂಗ್ ಶೂಯಿಯಲ್ಲಿ ಬಟ್ಟೆಗೂ ಮಹತ್ವ ನೀಡಲಾಗಿದೆ. ಯಾವ ಬಟ್ಟೆ ಧರಿಸ್ತೇವೆ ಹಾಗೆ ಬಟ್ಟೆಯನ್ನು ಹೇಗೆ ಬಳಸ್ತೇವೆ ಎಂಬುದು ಫೆಂಗ್ ಶೂಯಿಯಲ್ಲಿ ಮಹತ್ವ ಪಡೆದಿದೆ. ನೀವು ಧರಿಸುವ ಬಟ್ಟೆ ನಿಮ್ಮ ಸೌಂದರ್ಯವನ್ನು ಹೆಚ್ಚಿಸಬಹುದು. ಆದ್ರೆ ಇದೇ ಬಟ್ಟೆ ನಿಮ್ಮ ದುರಾದೃಷ್ಟಕ್ಕೆ ಕಾರಣವಾಗಬಹುದು. ಮನೆಯಿಂದ ಹೊರ ಹೋಗುವಾಗಲ್ಲ…
ಸ್ವಾತಂತ್ರ್ಯ ಪೂರ್ವದ ಘಟನೆ. ಪಂಜಾಬಿನ ಒಂದು ಹಳ್ಳಿ. 3 ವರ್ಷದ ಬಾಲಕನೊಬ್ಬ ತನ್ನ ತಂದೆಯೊಂದಿಗೆ ಸುತ್ತಾಡಿ ಬರಲು ಮನೆಯಿಂದ ಹೊರಟ. ಅವರೊಂದಿಗೆ ಅವನ ತಂದೆಯ ಮಿತ್ರರೊಬ್ಬರು ಇದ್ದರು. ಮೂವರೂ ಮಾತಾಡುತ್ತ ಮುಂದೆ ಮುಂದೆ ಹೋಗಿ ಅವರ ಊರಿನ ಗಡಿಯಾಚೆ ನಡೆದರು.