ಉಪಯುಕ್ತ ಮಾಹಿತಿ, ಸೌಂದರ್ಯ

17 ವರ್ಷಗಳ ನಂತರ ಭಾರತಕ್ಕೆ ಒಲಿದ ವಿಶ್ವ ಸುಂದರಿ ಮಾನುಷಿ ಚಿಲ್ಲರ್ ..!ತಿಲಿಲಿಯಲು ಈ ಲೇಖನ ಓದಿ ..

307

17 ವರ್ಷಗಳ ನಂತರ ಭಾರತ ವಿಶ್ವ ಸುಂದರಿ ಪಟ್ಟವನ್ನು ತನ್ನದಾಗಿಸಿಕೊಂಡಿದೆ. ಚೀನಾದ ಸಾನ್ಯಾ ಸಿಟಿಯಲ್ಲಿ ನಡೆದ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧೀಕರಿಸಿದ್ದ ಮಾನುಷಿ ಚಿಲ್ಲರ್ 2017 ವಿಶ್ವ ಸುಂದರಿ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. 108 ಸುಂದರಿಯರನ್ನು ಹಿಂದಿಕ್ಕಿ ಮಾನುಷಿ ಈ ಸೌಂದರ್ಯ ಸ್ಪರ್ಧೆಯಲ್ಲಿ ಗೆಲುವು ಸಾಧಿಸಿದ್ದಾರೆ.

2000 ಇಸವಿಯಲ್ಲಿ ಪ್ರಿಯಾಂಕಾ ಚೋಪ್ರಾ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಗೆಲುವು ಸಾಧಿಸಿದ್ದರು.

ಹರಿಯಾಣ ನಿವಾಸಿಯಾದ ಮಾನುಷಿ ವೈದ್ಯಕೀಯ ವಿದ್ಯಾರ್ಥಿನಿ. 20ರ ಹರೆಯದ ಈಕೆ ದೆಹಲಿಯ ಸೇಂಟ್ ಥಾಮಸ್ ಸ್ಕೂಲ್‍ನಲ್ಲಿ ವಿದ್ಯಾಭ್ಯಾಸ ಮುಗಿಸಿ ಭಗತ್ ಫೂಲ್ ಸಿಂಗ್ ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ವ್ಯಾಸಾಂಗ ಮಾಡುತ್ತಿದ್ದಾರೆ. . ಈಕೆಯ ಪೋಷಕರೂ ವೈದ್ಯರು.

ಮಾನುಷಿ ಕೂಚಿಪುಡಿ ನೃತ್ಯ ಪರಿಣಿತೆ. ಅಷ್ಟೇ ಅಲ್ಲ, ಸಮಾಜ ಸೇವೆಯಲ್ಲೂ ತೊಡಗಿಸಿಕೊಂಡಿದ್ದು, ಪ್ರಾಜೆಕ್ಟ್ ಶಕ್ತಿ ಎಂಬ ಕಾರ್ಯಕ್ರಮದ ಅಡಿಯಲ್ಲಿ ಮಹಿಳೆಯರಲ್ಲಿ ಋತುಸ್ರಾವದ ಸಮಯದಲ್ಲಿ ನೈರ್ಮ ಲ್ಯದ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. 20 ಗ್ರಾಮಗಳಿಗೆ ಭೇಟಿ ನೀಡಿ, 5000 ಮಹಿಳೆಯರಲ್ಲಿ ಜಾಗೃತಿ ಮೂಡಿಸಿದ್ದಾರೆ.

ಈ ಸ್ಪರ್ಧೆಯಲ್ಲಿ ಬ್ಯೂಟಿ ವಿತ್ ಎ ಪರ್ಪಸ್ ಎಂಬ ಪಟ್ಟವನ್ನೂ ಮಾನುಷಿ ತಮ್ಮದಾಗಿಸಿಕೊಂಡಿದ್ದಾರೆ. ಇಂಗ್ಲೆಂಡ್‌ನ ಸ್ಟೆಫಾನಿ ಹಿಲ್ ಮೊದಲ ರನ್ನರ್ ಅಪ್ ಮತ್ತು ಮೆಕ್ಸಿಕೊದ ಆಂಡ್ರಿಯಾ ಮೇಜಾ ದ್ವಿತೀಯ ರನ್ನರ್ ಅಪ್ ಸ್ಥಾನ ಗಳಿಸಿದ್ದಾರೆ. ಸ್ಪರ್ಧೆಯ ಪ್ರಶ್ನೋತ್ತರ ಸುತ್ತಿನಲ್ಲಿ ಯಾವ ವೃತ್ತಿಗೆ ಹೆಚ್ಚಿನ ಸಂಬಳಕ್ಕೆ ಅರ್ಹ ಮತ್ತು ಯಾಕೆ ಎಂಬ ಪ್ರಶ್ನೆಯನ್ನು ಮಾನುಷಿಯವರಲ್ಲಿ ಕೇಳಲಾಗಿತ್ತು.
ಸಂಬಳದ ಪ್ರಶ್ನೆ ಅಲ್ಲ ಆದರೆ ಅತೀ ಹೆಚ್ಚು ಗೌರವ ಗಳಿಸುವವಳು ಅಮ್ಮ ಎಂದು ಮಾನುಷಿ ಉತ್ತರಿಸಿದ್ದಾಳೆ.

ಈ ಹಿಂದೆ ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್ 2017 ರಲ್ಲೂ ಮಾನುಷಿ ಗೆದ್ದಿದ್ದಳು. ಚೀನಾ ಸಾನ್ಯಾ ನಗರದಲ್ಲಿ ನಡೆದ ಸಮಾರಂಭದಲ್ಲಿ 2016ರ ಪೋಟೋì ರಿಕೋದ ಸ್ಟೆಫಾನಿ ಡೆಲ್ ವಾಲೆಯಿಂದ ಕಿರೀಟವನ್ನು ಮಾನುಷಿ ಮುಡಿಗೇರಿಸಿಕೊಂಡಿದ್ದಾರೆ.

ವಿಡಿಯೋ ನೋಡಲು ಈ ಲಿಂಕ್ ಮೇಲೆ ಕ್ಲಿಕ್ಕ್ ಮಾಡಿ:https://youtu.be/E8B1c3NpLpc

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಈ ಸಮೀಕ್ಷೆಯ ಪ್ರಖಾರ ದೇಶದ ಅತ್ಯಂತ ಜನಪ್ರಿಯ ವ್ಯಕ್ತಿ ಮತ್ತು ರಾಜಕಾರಣಿ ಯಾರು ಗೊತ್ತಾ..?

    ಇನ್ನೇನು ಲೋಕಸಭಾ ಚುನಾವಣಾ ಹತ್ತಿರ ಆಗುತ್ತಿದ್ದು, ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಈಗಾಗಲೇ ಭರ್ಜರಿ ತಯಾರಿ ನಡೆಯುತ್ತಿದೆ. ಇದೇ ಸಮಯದಲ್ಲಿ ದೇಶದ ಅತ್ಯಂತ ಜನಪ್ರಿಯ ರಾಜಕಾರಣಿ ಯಾರೆಂದು ಸಮೀಕ್ಷೆ ನಡೆದಿದ್ದು, ಪ್ರಧಾನಿ ನರೇಂದ್ರ ಮೋದಿ ಅತ್ಯಂತ ಜನಪ್ರಿಯ ರಾಜಕಾರಣಿ ಎಂದು ಜನರ ಅಭಿಪ್ರಾಯವಾಗಿದೆ.   ರಾಜಕೀಯ ತಂತ್ರರೂಪಕ ಪ್ರಶಾಂತ್ ಕಿಶೋರ್ ನೇತೃತ್ವದ ಇಂಡಿಯನ್ ಪೊಲಿಟಿಕಲ್ ಆಕ್ಷನ್ ಕಮಿಟಿ(ಐ-ಪ್ಯಾಕ್) ನಡೆಸಿದ ಸಮೀಕ್ಷೆಯಲ್ಲಿ ದೇಶದ 712 ಜಿಲ್ಲೆಗಳ 57 ಲಕ್ಷ ಮಂದಿ ಮತ ನೀಡಿದ್ದು ಪ್ರಧಾನಿ ಮೋದಿ ಅತಿ ಜನಪ್ರಿಯ ಮತ್ತು…

  • India, Place

    ಕೈಲಾಸ ಪರ್ವತ

    ಕೈಲಾಸ ಪರ್ವತವು ಟಿಬೆಟ್ ನ ಹಿಮಾಲಯ  ಶ್ರೇಣಿಯ ಗಾಂಗ್ ಡೈಸ್ ಸರಣಿಯ ಒಂದು ಶಿಖರ. ಈ ಪರ್ವತಪ್ರದೇಶವು ಏಷ್ಯಾದ ಹಲವು ಮಹಾನದಿಗಳಿಗೆ ಮೂಲಸ್ಥಾನವಾಗಿದೆ. ಸಿಂಧೂ ನದಿ , ಸಟ್ಲೆಜ್ ನದಿ ಮತ್ತು ಬ್ರಹ್ಮಪುತ್ರ ಈ ಆಸುಪಾಸಿನಲ್ಲಿಯೇ ಉಗಮಿಸುತ್ತವೆ. ಕೈಲಾಸಪರ್ವತವು ಹಿಂದೂ ಬೌದ್ಧ, ಜೈನ ಮತ್ತು ಬಾನ್ಧರ್ಮೀಯರಿಗೆ ಪವಿತ್ರ ತಾಣವಾಗಿದೆ. ಹಿಂದೂ ನಂಬಿಕೆಗಳ ಪ್ರಕಾರ ಕೈಲಾಸಪರ್ವತವು ಪರಶಿವನ ನೆಲೆ. ಕೈಲಾಸಪರ್ವತವು ಟಿಬೆಟ್ ನಲ್ಲಿ ಮಾನಸಸರೋವರ ಮತ್ತು ರಾಕ್ಷಸ್ ತಾಲ್ ಗಳ ಮಗ್ಗುಲಲ್ಲಿದೆ. ಕೈಲಾಸಪರ್ವತದ ಆರೋಹಣವನ್ನು ಮಾಡಿದುದರ ಬಗೆಗೆ ಯಾವುದೇ ದಾಖಲೆಗಳಿಲ್ಲ. ಹಿಂದೂ ಮತ್ತು ಬೌದ್ಧ ಧರ್ಮೀಯರು ಕೈಲಾಸಪರ್ವತವನ್ನು ಅತಿ ಪವಿತ್ರ ತಾಣವಾಗಿ ಪರಿಗಣಿಸುವುದರಿಂದಾಗಿ ಈ…

  • ಆಧ್ಯಾತ್ಮ, ಜ್ಯೋತಿಷ್ಯ

    ಕೊಲ್ಲೂರು ಶ್ರೀ ಮೂಕಾಂಬಿಕೆ ದೇವಿಯ ಆಶೀರ್ವಾದದಿಂದ ಈ ವಾರದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ,.!

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಮೇಷ :ನಿಮ್ಮ ಅಪಾರ…

  • ಆರೋಗ್ಯ

    10 ಆರೋಗ್ಯ ಸೂಚನೆಗಳು/ ಸಲಹೆ

    ನೆನಪಿನಲ್ಲಿಟ್ಟುಕೊಳ್ಳಬೇಕಾದ ಪ್ರಮುಖ ವಿಷಯಗಳು: ನಮ್ಮ ಆರೋಗ್ಯ ಉತ್ತಮ ವಾಗಿರಲು ಇವು ಮುಖ್ಯ 1. ಬಿಪಿ: 120/80 2. ನಾಡಿ: 70 – 100 3. ತಾಪಮಾನ: 36.8 – 37 4. ಉಸಿರು: 12-16 5. ಹಿಮೋಗ್ಲೋಬಿನ್: ಪುರುಷ -13.50-18 ಹೆಣ್ಣು – 11.50 – 16 6. ಕೊಲೆಸ್ಟ್ರಾಲ್: 130 – 200 7. ಪೊಟ್ಯಾಸಿಯಮ್: 3.50 – 5 8. ಸೋಡಿಯಂ: 135 – 145 9. ಟ್ರೈಗ್ಲಿಸರೈಡ್‌ಗಳು: 220 10. ದೇಹದಲ್ಲಿನ ರಕ್ತದ…