ಸುದ್ದಿ

2018 ರಲ್ಲಿ ಮೊದಲ ಬಾರಿಗೆ ಮತದಾನ ಮಾಡಲಿರುವ ಯುವಜನತೆಗೆ ಅರಿವು ಮೂಡಿಸಲು 5K ಓಟದಲ್ಲಿ ಸ್ಪರ್ಧಿಗಳೊಂದಿಗೆ ಸ್ವತಃ ತಾವೂ ಕೂಡ ಪಾಲ್ಗೊಂಡ ಮಲ್ಲೇಶ್ವರಂ ಶಾಸಕರಾದ ಡಾ.ಅಶ್ವತ್ಥ್ ನಾರಾಯಣ್ ರವರು..

124

ಮತದಾನ ಪ್ರತಿಯೊಬ್ಬರ ಹಕ್ಕು ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರವಾದರೂ , ಮತದಾನದ ದಿನ ಎಷ್ಟೋ ಮಂದಿ ಮನೆಯಿಂದ ಹೊರಬರುವುದಿಲ್ಲ.. ಅದರಲ್ಲಿ ಕೆಲವರು ಯುವ ಜನತೆಯೂ ಕೂಡ ಸೇರಿರುತ್ತಾರೆ.. ಅದರಲ್ಲೂ 2000 ಸಾಲಿನ ವರ್ಷದಲ್ಲಿ ಹುಟ್ಟಿದವರಿಗೆ 2018 ರಲ್ಲಿ ನಡೆಯುವ ಚುನಾವಣೆಯಲ್ಲಿ ಮೊದಲ ವೋಟ್ ಮಾಡುವ ಅವಕಾಶವಾಗಿದೆ..

ಹೌದು 2018 ರಲ್ಲಿ ಮೊದಲ ಬಾರಿಗೆ ವೋಟ್ ಮಾಡುತ್ತಿರುವ ಯುವ ಜನತೆಯ ಜೊತೆಗೆ ಎಲ್ಲಾ ವರ್ಗದವರಿಗೂ ಮತದಾನದ ಮಹತ್ವವನ್ನು ತಿಳಿಸಿ ಅರಿವು ಮೂಡಿಸಲೆಂದೇ ಮಲ್ಲೇಶ್ವರಂ ನ “ನಮ್ಮ ವೋಟ್ ಫೌಂಡೇಷನ್” ನವರು 5K ಓಟವನ್ನು ಫೆಬ್ರವರಿ 25ರಂದು ಆಯೋಜಿಸಿದ್ದರು..

ಮಲ್ಲೇಶ್ವರಂ ಶಾಸಕರಾದ ಡಾ.ಅಶ್ವತ್ಥ್ ನಾರಾಯಣ್ ರವರು ಚಾಲನೆ ನೀಡಿದ ಈ ಅಭಿಯಾನದಲ್ಲಿ 2000 ಸ್ಪರ್ಧಿಗಳು ಭಾಗವಹಿಸುವ ಮೂಲಕ ಅಭೂತಪೂರ್ವ ಯಶಸ್ಸು ಕಂಡಿತು..

ಚಾಲನೆ ನೀಡಿದ್ದಷ್ಟೇ ಅಲ್ಲದೇ ಸ್ವತಃ ತಾವೂ ಕೂಡ ಸ್ಪರ್ಧಿಗಳೊಂದಿಗೆ ಪಾಲ್ಗೊಂಡು ಎಲ್ಲೂ ನಿಲ್ಲದೇ ಓಟವನ್ನು ಪೂರ್ಣಗೊಳಿಸಿದ್ದು ವಿಶೇಷವಾಗಿತ್ತು.. ಕಾರ್ಯಕ್ರಮವನ್ನು ಉದ್ಘಾಟಿಸಿ ಕೇವಲ ಸ್ಪೂರ್ತಿಯ ಮಾತುಗಳನ್ನಾಡಿ ಮನೆಗೆ ಹೋಗುವ ಬದಲು ಸ್ಪರ್ಧಿಗಳೊಂದಿಗೆ ಭಾಗವಹಿಸಿ ಕ್ರೀಡಾ ಸ್ಪೂರ್ತಿ ಮೆರೆದಿದ್ದು ನಿಜಕ್ಕೂ ಹೆಮ್ಮೆಯ ವಿಷಯವೇ ಸರಿ..

ಮಲ್ಲೇಶ್ವರಂ ಪ್ಲೇ ಗ್ರೌಂಡ್ ನಲ್ಲಿ ಶುರುವಾದ ಓಟ 5 ಕಿ ಮೀ ಸಾಗಿ ಮತ್ತದೇ ಆಟದ ಮೈದಾನದಲ್ಲಿ ಮುಕ್ತಾಯಗೊಂಡಿತು.. ಸಂಪೂರ್ಣ 5 ಕಿ ಮೀ ಅನ್ನು ಶಾಸಕರು ನಿರಾಯಾಸವಾಗಿ ಪೂರ್ಣಗೊಳಿಸಿದ್ದು ಓಟದಲ್ಲಿ ಭಾಗವಹಿಸಿದ ಎಷ್ಟೋ ಯುವಕರಿಗೆ ಹುಬ್ಬೇರುವಂತೆ ಮಾಡಿತು..

ಕ್ಷೇತ್ರದ ಜನತೆಗೆ ಶಾಸಕರುಗಳು ನೋಡಲು ಸಿಗುವುದೇ ಅಪರೂಪ ಆದರೆ ಮಲ್ಲೇಶ್ವರಂ ಶಾಸಕರಾದ ಡಾ.ಅಶ್ವತ್ಥ್ ನಾರಾಯಣ್ ರವರ ವಿಚಾರದಲ್ಲಿ ಈ ಅಭಿಪ್ರಾಯ ಬದಲಾಗುತ್ತದೆ.. ಸದಾ ಜನರ ನಡುವೆಯ ಜನಸಾಮಾನ್ಯರಂತೆ ಕಾಣುವ ಇವರು ಪ್ರತಿಭೆಗಳನ್ನು ಪ್ರೋತ್ಸಾಹಿಸುತ್ತಾ ಅವರಿಗೆ ಅವಕಾಶಗಳನ್ನು ಮಾಡಿಕೊಡುವುದರಲ್ಲಿ ಮೊದಲಿಗರೆಂದೇ ಹೇಳಬಹುದು..

ಡೌನ್ ಟು ಅರ್ಥ್ ಪರ್ಸನಾಲಿಟಿ ಇಂದಲೇ ಎಲ್ಲರಿಗೂ ಇಷ್ಟವಾಗುವ ಡಾ.ಅಶ್ವತ್ಥ್ ನಾರಾಯಣ್ ರವರು ಎಂದಿಗೂ ಹೀಗೆ ಇರಲಿ ಎಂಬುದೇ ನಮ್ಮ ಆಶಯ..

ಏನೇ ಆಗಲಿ ಮತದಾನ ನಮ್ಮ ನಿಮ್ಮೆಲ್ಲರ ಹಕ್ಕು.. ವೋಟ್ ಮಾಡಲು ಮರೆಯದಿರಿ.. ಮರೆತವರನ್ನು ಕರೆತಂದು ಮತದಾನ ಮಾಡಿ..

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ಹಿ೦ದೂ ಧರ್ಮದ ಬಗ್ಗೆ ತಿಳಿದುಕೊಳ್ಳಲೇಬೇಕಾದ ಕೆಲವು ವಿಷಯಗಳು…ತಿಳಿಯಲು ಈ ಲೇಖನಿ ಓದಿ…

    ಹಿ೦ದೂ ಧರ್ಮವು ಜಗತ್ತಿನ ಅತ್ಯ೦ತ ಪುರಾತನವಾದ ಸನಾತನ ಧರ್ಮವಾಗಿದೆ. ವೈವಿಧ್ಯಮಯವಾದ ರೀತಿನೀತಿ, ಆಚರಣೆಗಳು, ಸ೦ಪ್ರದಾಯಗಳು, ಕಲ್ಪನೆಗಳು, ಇವೆಲ್ಲವುಗಳ ಸ೦ಯೋಜನೆಯಾಗಿರುವ ಹಿ೦ದೂ ಪದ್ಧತಿಯು ಎ೦ದೆ೦ದಿಗೂ ಅತ್ಯ೦ತ ರೋಮಾ೦ಚಕವಾಗಿರುವ ನ೦ಬಿಕೆಯಾಗಿದೆ.

  • ಉಪಯುಕ್ತ ಮಾಹಿತಿ

    ಜನಸಂಖ್ಯೆಯನ್ನು ನಿಯಂತ್ರಿಸಲು ಈ ಸಲಹೆ ನೀಡಿದ ಬಾಬಾ ರಾಮ್‌ ದೇವ್…!

    ದೇಶದಲ್ಲಿ ಹೊಸ ಸರ್ಕಾರ ರಚನೆಗೂ ಮುನ್ನ ಯೋಗ‌ ಗುರು ಬಾಬಾ ರಾಮ್‌ ದೇವ್ ದೇಶದ ಜನಸಂಖ್ಯೆ ನಿಯಂತ್ರಣದ ಬಗ್ಗೆ ಸಲಹೆಯೊಂದನ್ನು ನೀಡಿದ್ದಾರೆ. ದೇಶದ ಜನಸಂಖ್ಯೆ ನಿಯಂತ್ರಣಕ್ಕೆ ಕಾನೂನು ಜಾರಿಗೆ ಬರಬೇಕೆಂದಿರುವ ಬಾಬಾ ರಾಮ್‌ ದೇವ್, ಎರಡು ಮಕ್ಕಳ ನಂತ್ರ ಮೂರನೇ ಮಗುವಿಗೆ ಮತದಾನದ ಹಕ್ಕು ನೀಡಬಾರದು. ಜೊತೆಗೆ ಯಾವುದೇ ಸರ್ಕಾರಿ ಸೌಲಭ್ಯವನ್ನು ನೀಡಬಾರದು ಎಂದು ಹೇಳಿದ್ದಾರೆ. ಹೆಚ್ಚಾಗುತ್ತಿರುವ ಜನಸಂಖ್ಯೆಗೆ ಭಾರತ ಸಿದ್ಧವಿಲ್ಲ. ಭಾರತದಲ್ಲಿ 150 ಕೋಟಿಗಿಂತ ಹೆಚ್ಚು ಜನಸಂಖ್ಯೆ ಇರಬಾರದು ಎಂದು ಯೋಗ ಗುರು ಹೇಳಿದ್ದಾರೆ. ಈ…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 12 ಜನವರಿ, 2019 ತಾತ್ಕಾಲಿಕ ಸಾಲಕ್ಕಾಗಿ ನಿಮ್ಮ ಬಳಿ ಬರುವವರನ್ನು ನಿರ್ಲಕ್ಷಿಸಿ. ಎಲ್ಲರನ್ನೂ ನಿಮ್ಮ ದೊಡ್ಡಪಾರ್ಟಿಗೆ…

  • ಸುದ್ದಿ

    ರೈತರಿಗೆ ಮತ್ತೊಂದು ಬಂಪರ್ ಆಫರ್ ಕೊಟ್ಟ ಮೋದಿ ಸರ್ಕಾರ…!

    ಮುಂದಿನ ವರ್ಷಗಳಲ್ಲಿ ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಹಲವು ಯೋಜನೆ ಕೈಗೊಂಡಿರುವ ಕೇಂದ್ರ ಸರ್ಕಾರ ಮತ್ತೊಂದು ಹೊಸ ಯೋಜನೆ ಜಾರಿಗೊಳಿಸಿದೆ. ರೈತರಿಗೆ ಕೃಷಿ ಕಾರ್ಯಗಳಿಗೆ ಯಂತ್ರಗಳನ್ನು ಬಾಡಿಗೆಗೆ ನೀಡಲು ಕೃಷಿ ಸಚಿವಾಲಯ ಸಿ.ಹೆಚ್.ಸಿ. ಫಾರ್ಮ್ ಮೆಷಿನರಿ ಆಪ್ ಪರಿಚಯಿಸಿದೆ. ಇದರ ಮೂಲಕ ರೈತರು ಕೃಷಿ ಉಪಕರಣ ಬಾಡಿಗೆ ಪಡೆಯಬಹುದಾಗಿದೆ. ಕೃಷಿ ಕೇಂದ್ರಗಳಿಂದ 50 ಕಿಲೋಮೀಟರ್ ದೂರದಲ್ಲಿನ ಪ್ರದೇಶಗಳಿಗೆ ಕೃಷಿ ಉಪಕರಣಗಳನ್ನು ಬಾಡಿಗೆಗೆ ಪಡೆಯಬಹುದಾಗಿದೆ. 12 ಭಾಷೆಗಳಲ್ಲಿ ಆಪ್ ಮಾಹಿತಿ ನೀಡಲಿದೆ. ರೈತರು ತಮಗೆ ಅಗತ್ಯವಿರುವ ಕೃಷಿ ಯಂತ್ರೋಪಕರಣಗಳ…