ಸುದ್ದಿ

2018 ರಲ್ಲಿ ಮೊದಲ ಬಾರಿಗೆ ಮತದಾನ ಮಾಡಲಿರುವ ಯುವಜನತೆಗೆ ಅರಿವು ಮೂಡಿಸಲು 5K ಓಟದಲ್ಲಿ ಸ್ಪರ್ಧಿಗಳೊಂದಿಗೆ ಸ್ವತಃ ತಾವೂ ಕೂಡ ಪಾಲ್ಗೊಂಡ ಮಲ್ಲೇಶ್ವರಂ ಶಾಸಕರಾದ ಡಾ.ಅಶ್ವತ್ಥ್ ನಾರಾಯಣ್ ರವರು..

113

ಮತದಾನ ಪ್ರತಿಯೊಬ್ಬರ ಹಕ್ಕು ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರವಾದರೂ , ಮತದಾನದ ದಿನ ಎಷ್ಟೋ ಮಂದಿ ಮನೆಯಿಂದ ಹೊರಬರುವುದಿಲ್ಲ.. ಅದರಲ್ಲಿ ಕೆಲವರು ಯುವ ಜನತೆಯೂ ಕೂಡ ಸೇರಿರುತ್ತಾರೆ.. ಅದರಲ್ಲೂ 2000 ಸಾಲಿನ ವರ್ಷದಲ್ಲಿ ಹುಟ್ಟಿದವರಿಗೆ 2018 ರಲ್ಲಿ ನಡೆಯುವ ಚುನಾವಣೆಯಲ್ಲಿ ಮೊದಲ ವೋಟ್ ಮಾಡುವ ಅವಕಾಶವಾಗಿದೆ..

ಹೌದು 2018 ರಲ್ಲಿ ಮೊದಲ ಬಾರಿಗೆ ವೋಟ್ ಮಾಡುತ್ತಿರುವ ಯುವ ಜನತೆಯ ಜೊತೆಗೆ ಎಲ್ಲಾ ವರ್ಗದವರಿಗೂ ಮತದಾನದ ಮಹತ್ವವನ್ನು ತಿಳಿಸಿ ಅರಿವು ಮೂಡಿಸಲೆಂದೇ ಮಲ್ಲೇಶ್ವರಂ ನ “ನಮ್ಮ ವೋಟ್ ಫೌಂಡೇಷನ್” ನವರು 5K ಓಟವನ್ನು ಫೆಬ್ರವರಿ 25ರಂದು ಆಯೋಜಿಸಿದ್ದರು..

ಮಲ್ಲೇಶ್ವರಂ ಶಾಸಕರಾದ ಡಾ.ಅಶ್ವತ್ಥ್ ನಾರಾಯಣ್ ರವರು ಚಾಲನೆ ನೀಡಿದ ಈ ಅಭಿಯಾನದಲ್ಲಿ 2000 ಸ್ಪರ್ಧಿಗಳು ಭಾಗವಹಿಸುವ ಮೂಲಕ ಅಭೂತಪೂರ್ವ ಯಶಸ್ಸು ಕಂಡಿತು..

ಚಾಲನೆ ನೀಡಿದ್ದಷ್ಟೇ ಅಲ್ಲದೇ ಸ್ವತಃ ತಾವೂ ಕೂಡ ಸ್ಪರ್ಧಿಗಳೊಂದಿಗೆ ಪಾಲ್ಗೊಂಡು ಎಲ್ಲೂ ನಿಲ್ಲದೇ ಓಟವನ್ನು ಪೂರ್ಣಗೊಳಿಸಿದ್ದು ವಿಶೇಷವಾಗಿತ್ತು.. ಕಾರ್ಯಕ್ರಮವನ್ನು ಉದ್ಘಾಟಿಸಿ ಕೇವಲ ಸ್ಪೂರ್ತಿಯ ಮಾತುಗಳನ್ನಾಡಿ ಮನೆಗೆ ಹೋಗುವ ಬದಲು ಸ್ಪರ್ಧಿಗಳೊಂದಿಗೆ ಭಾಗವಹಿಸಿ ಕ್ರೀಡಾ ಸ್ಪೂರ್ತಿ ಮೆರೆದಿದ್ದು ನಿಜಕ್ಕೂ ಹೆಮ್ಮೆಯ ವಿಷಯವೇ ಸರಿ..

ಮಲ್ಲೇಶ್ವರಂ ಪ್ಲೇ ಗ್ರೌಂಡ್ ನಲ್ಲಿ ಶುರುವಾದ ಓಟ 5 ಕಿ ಮೀ ಸಾಗಿ ಮತ್ತದೇ ಆಟದ ಮೈದಾನದಲ್ಲಿ ಮುಕ್ತಾಯಗೊಂಡಿತು.. ಸಂಪೂರ್ಣ 5 ಕಿ ಮೀ ಅನ್ನು ಶಾಸಕರು ನಿರಾಯಾಸವಾಗಿ ಪೂರ್ಣಗೊಳಿಸಿದ್ದು ಓಟದಲ್ಲಿ ಭಾಗವಹಿಸಿದ ಎಷ್ಟೋ ಯುವಕರಿಗೆ ಹುಬ್ಬೇರುವಂತೆ ಮಾಡಿತು..

ಕ್ಷೇತ್ರದ ಜನತೆಗೆ ಶಾಸಕರುಗಳು ನೋಡಲು ಸಿಗುವುದೇ ಅಪರೂಪ ಆದರೆ ಮಲ್ಲೇಶ್ವರಂ ಶಾಸಕರಾದ ಡಾ.ಅಶ್ವತ್ಥ್ ನಾರಾಯಣ್ ರವರ ವಿಚಾರದಲ್ಲಿ ಈ ಅಭಿಪ್ರಾಯ ಬದಲಾಗುತ್ತದೆ.. ಸದಾ ಜನರ ನಡುವೆಯ ಜನಸಾಮಾನ್ಯರಂತೆ ಕಾಣುವ ಇವರು ಪ್ರತಿಭೆಗಳನ್ನು ಪ್ರೋತ್ಸಾಹಿಸುತ್ತಾ ಅವರಿಗೆ ಅವಕಾಶಗಳನ್ನು ಮಾಡಿಕೊಡುವುದರಲ್ಲಿ ಮೊದಲಿಗರೆಂದೇ ಹೇಳಬಹುದು..

ಡೌನ್ ಟು ಅರ್ಥ್ ಪರ್ಸನಾಲಿಟಿ ಇಂದಲೇ ಎಲ್ಲರಿಗೂ ಇಷ್ಟವಾಗುವ ಡಾ.ಅಶ್ವತ್ಥ್ ನಾರಾಯಣ್ ರವರು ಎಂದಿಗೂ ಹೀಗೆ ಇರಲಿ ಎಂಬುದೇ ನಮ್ಮ ಆಶಯ..

ಏನೇ ಆಗಲಿ ಮತದಾನ ನಮ್ಮ ನಿಮ್ಮೆಲ್ಲರ ಹಕ್ಕು.. ವೋಟ್ ಮಾಡಲು ಮರೆಯದಿರಿ.. ಮರೆತವರನ್ನು ಕರೆತಂದು ಮತದಾನ ಮಾಡಿ..

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಯಶ್ ತುಂಬಿಸಿದ್ರು ಕೆರೆ, ಆಫಿಸರ್ಸ್ ತುಂಬಿಕೊಂಡ್ರು ಜೇಬು..!

    ಕೊಪ್ಪಳ: ತಲ್ಲೂರು ಕೆರೆ ಯಾರಿಗೆ ನೆನಪಿಲ್ಲ ಹೇಳಿ.. ನಟ ಯಶ್ ಆ ಜಿಲ್ಲೆಯ ತಲ್ಲೂರು ಕೆರೆಯನ್ನು ಅಭಿವೃದ್ದಿ ಪಡಿಸಿ ಅಧುನಿಕ ಭಗಿರಥನಾಗಿದ್ದರು. ಈ ಕಾರಣಕ್ಕಾಗಿಯೇ ತಲ್ಲೂರು ಕೆರೆ ಜನಮಾನಸದಲ್ಲಿ ಉಳಿದಿದೆ. ಆದ್ರೆ ಇದೇ ಕೆರೆಯಲ್ಲಿ ಯಶ್ ಅಭಿವೃದ್ದಿ ಪಡಿಸುವ ಮೊದಲು ಅದೊಂದು ಇಲಾಖೆ ಬರೊಬ್ಬರಿ ಒಂದು ಕೋಟಿ ಖರ್ಚು ಮಾಡಿದೆ ಅಂತಾ ಹಣ ಗುಳುಂ ಮಾಡಿದೆ. ನಟ ಯಶ್ 2017ರಲ್ಲಿ ತಮ್ಮ ಯಶೋಮಾರ್ಗ ಫೌಂಡೇಶನ್ ವತಿಯಿಂದ ಸ್ವಂತ ಖರ್ಚಿನಲ್ಲಿ ಬರೊಬ್ಬರಿ 70 ಲಕ್ಷಕ್ಕೂ ಅಧಿಕ ಹಣ ಖರ್ಚು…

  • ಸುದ್ದಿ

    ಮಹಾಮಳೆಯ ಆರ್ಭಟಕ್ಕೆ ಉತ್ತರ ತತ್ತರ ..!

    ಅನೇಕ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನರು ಜೀವನ ಅಸ್ತವ್ಯಸ್ತವಾಗಿದೆ. ಇನ್ನೊಂದೆಡೆ ಪ್ರಳಯ ಮಳೆ, ಡ್ಯಾಂಗಳಿಂದ ಮುನ್ನುಗ್ಗಿ ಬರುತ್ತಿರುವ ಜಲರಾಶಿಯ ನಡುವೆ ತೇವಾಂಶದಿಂದ ಮಣ್ಣು ಸಡಿಲುಗೊಂಡು ಬಹುತೇಕ ಕಡೆಗಳಲ್ಲಿ ಭೂಕುಸಿತವಾಗುತ್ತಿದೆ. ಅತಿಯಾದ ಮಳೆಯಿಂದಾಗಿ ಉತ್ತರ ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಫೋಷಣೆ ಮಾಡಲಾಗಿದೆ. ಮನೆ, ಕಟ್ಟಡಗಳು ನೋಡನೋಡುತ್ತಿದ್ದಂತೆ ನೆಲಕ್ಕುರುಳುತ್ತಿವೆ. ರಸ್ತೆಗಳು ಬಿರುಕು ಬಿಡುತ್ತಿದ್ದು, ಗುಡ್ಡಗಳು ಹೊರಳಿ ಬೀಳುತ್ತಿವೆ. ಕಣ್ಣ ಮುಂದೆಯೇ ಎಲ್ಲವನ್ನೂ ಕಳೆದುಕೊಂಡು ಸಂತ್ರಸ್ತರಾಗಿರುವವರ ಕಣ್ಣೀರು, ಗೋಳಾಟ ಕೇಳಿದರೆ ಹೊಟ್ಟೆ ಉರಿಯುತ್ತದೆ. ಪ್ರವಾಹದ ಎದುರು ಈಜಲಾಗದು,…

  • ಕವಿ

    ಮಾಸ್ತಿ ವೆಂಕಟೇಶ ಅಯ್ಯಂಗಾರರು ಕನ್ನಡಿಗರಿಗೆ ಒಂದು ಆದರ್ಶ..!ತಿಳಿಯಲು ಈ ಲೇಖನ ಓದಿ..

    ಕನ್ನಡದ ಒಬ್ಬ ಅಪ್ರತಿಮ ಲೇಖಕರು. ಕನ್ನಡ ಸಾಹಿತ್ಯ ಲೋಕದಲ್ಲಿ ಮಾಸ್ತಿ ಎಂದೇ ಖ್ಯಾತರಾಗಿರುವ ಈ ಸಾಹಿತಿ ಶ್ರೀನಿವಾಸ ಎಂಬ ಕಾವ್ಯನಾಮದಡಿಯಲ್ಲಿ ಬರೆಯುತ್ತಿದರು.

  • ಸುದ್ದಿ

    ರಸ್ತೆ ರಿಪೇರಿ ಬಳಿಕ ಹೊಸ ರೂಲ್ಸ್ ಜಾರಿಗೆ ನಿಟ್ಟುಸಿರು ಬಿಟ್ಟ ವಾಹನ ಸವಾರರು,.!

    ಹೊಸ ಟ್ರಾಫಿಕ್ ನಿಯಮ ಜಾರಿಯಾಗುತ್ತಿದ್ದಂತೆ ಪರ ವಿರೋಧ ಕೇಳಿ ಬಂದಿದೆ. ಇದರಲ್ಲಿ ರಸ್ತೆ ರಿಪೇರಿ ಮಾಡಿ ಹೊಸ ನಿಯಮ ಜಾರಿ ಮಾಡಿ ಅನ್ನೋ ಒತ್ತಾಯ  ಕೇಳಿ ಬಂದಿತ್ತು. ಇದೀಗ ಈ ಮಾತನ್ನು ಗಂಭೀರವಾಗಿ ಪರಿಗಣಿಸಿರುವ ನೆರೆ ರಾಜ್ಯ ರಸ್ತೆ ರಿಪೇರಿ ಬಳಿಕ ಹೊಸ ನಿಯಮ ಜಾರಿ ಮಾಡಲು ಮುಂದಾಗಿದೆ. ಹೊಸ ಟ್ರಾಫಿಕ್ ರೂಲ್ಸ್ ಜಾರಿಯಾಗಿ 10 ದಿನಗಳಾಗಿವೆ. ಆಗಲೇ ಕೋಟಿ ಕೋಟಿ ರೂಪಾಯಿ ದಂಡ ವಸೂಲಿ ಮಾಡಲಾಗಿದೆ. ನಿಯಮ ಉಲ್ಲಂಘಿಸಿದವರು ದುಬಾರಿ ದಂಡ ಕಟ್ಟಿ ಸುಸ್ತಾಗಿದ್ದಾರೆ. ದುಬಾರಿ…

  • ಜ್ಯೋತಿಷ್ಯ, ಭವಿಷ್ಯ

    ಭಾನುವಾರದ ದಿನ ಭವಿಷ್ಯ..ಈ ದಿನದ ನಿಮ್ಮ ನಕ್ಷತ್ರ ಭವಿಷ್ಯ ಶುಭವೋ, ಅಶುಭವೋ ನೋಡಿ ತಿಳಿಯಿರಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಭಾನುವಾರ, 15/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:07:47 ಸೂರ್ಯಾಸ್ತ18:46:28 ಹಗಲಿನ ಅವಧಿ12:38:40 ರಾತ್ರಿಯ ಅವಧಿ11:20:26 ಚಂದ್ರಾಸ್ತ18:12:49 ಚಂದ್ರೋದಯ30:22:33* ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್…

  • ಸುದ್ದಿ

    ಜೋಗ ಜಲಪಾತದಲ್ಲಿ ನಾಪತ್ತೆಯಾಗಿದ್ದ ಜ್ಯೋತಿರಾಜ್(ಕೋತಿರಾಜ್) ಸಿಕ್ಕಿದ್ದು ಯಾವ ಸ್ಥಿತಿಯಲ್ಲಿ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಜೋಗ ಜಲಪಾತದ ನೆತ್ತಿ ಪ್ರದೇಶದ ಜಲಪಾತಕ್ಕೆ ಧುಮುಕಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಹುಡುಕಲು ಜಲಪಾತಕ್ಕೆ ಇಳಿದ ಸಾಹಸಿ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ ಕತ್ತಲಾದರೂ ವಾಪಸ್ಸು ಬರದೆ ಇದ್ದದ್ದು, ಎಲ್ಲರ ಆತಂಕಕ್ಕೆ ಕಾರಣವಾಗಿತ್ತು.