News

ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ
ನೂತನ ಸಂಸತ್ ಭವನದ ಉದ್ಘಾಟನೆ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯ ಬಿಡುಗಡೆ..!!
2000 ರೂಪಾಯಿ ಮುಖಬೆಲೆ ನೋಟು ಚಲಾವಣೆಯನ್ನು ಹಿಂಪಡೆದ ಭಾರತೀಯ ರಿಸರ್ವ್ ಬ್ಯಾಂಕ್ !
ಬಿಜೆಪಿ 2023 ಚುನಾವಣಾ ಪ್ರಣಾಳಿಕೆಯಲ್ಲಿ ಏನಿದೆ?
ಬಂಗಾರಪೇಟೆ (ಮೀ) ವಿಧಾನಸಭಾ ಕ್ಷೇತ್ರದ ನಾಮನಿರ್ದೇಶಿತ ಅಭ್ಯರ್ಥಿಗಳ ಪಟ್ಟಿ
ಹಸುವಿನ ಹೊಟ್ಟೆಯಲ್ಲಿ ಇತ್ತು ಬರೋಬರಿ 15 ಕೆಜಿ !!!!!!!!!
ಬಿಜೆಪಿ ಪಕ್ಷ ದಿಂದ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದೆ
ಬಿಜೆಪಿ ಪಕ್ಷ ದಿಂದ ಅಭ್ಯರ್ಥಿಗಳ ಪಟ್ಟಿ ಪ್ರಕಟ
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-20 ಸಾವಿರ ದಂಡ
5 ಬಾರಿ ಶಾಸಕರಾಗಿ ಗೆದ್ದ ಇವರು ಈಗ ಏನು ಮಾಡುತ್ತಿದ್ದಾರೆ ಗೊತ್ತಾ? ಈ ವ್ಯಕ್ತಿಯಿಂದ ರಾಜಕೀಯ ನಾಯಕರು ಕಲಿಯಬೇಕು
ಉತ್ತಮ ಆರೋಗ್ಯ ಟಿಪ್ಸ್
budget

ಕರ್ನಾಟಕ ಬಜೆಟ್

20

– ಉದ್ಯೋಗ ಸಿಗದವರಿಗೆ ‘ಯುವಸ್ನೇಹಿ’ ಯೋಜನೆ ಘೋಷಣೆ;

– ಪದವಿ ಶಿಕ್ಷಣವನ್ನು ಪೂರೈಸಿ ಮೂರು ವರ್ಷಗಳಾದರೂ ಉದ್ಯೋಗ ದೊರೆಯದ ಯುವಕರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸುವುದಕ್ಕಾಗಿ ‘ಯುವಸ್ನೇಹಿ’ ಯೋಜನೆ ಅಡಿ ಒಂದು ಬಾರಿಯ ಆರ್ಥಿಕ ನೆರವಾಗಿ 2,000 ರೂ. ನೀಡಲಾಗುವುದು.

ತುಮಕೂರು ಜಿಲ್ಲೆಯ ಚಿಕ್ಕನಾಯಕಹಳ್ಳಿಯಲ್ಲಿ ಹೊಸ ಪಾಲಿಟೆಕ್ನಿಕ್ ಕಾಲೇಜು ಆರಂಭ

-ರಾಜ್ಯದಲ್ಲಿ ಹೊಸದಾಗಿ 2 NCC  ಘಟಕ ಸ್ಥಾಪನೆ

-ಖಾನಪುರ, ಆನೇಕಲ್, ಶಿರಹಟ್ಟಿ, ಶೃಂಗೇರಿ, ಯಳಂದೂರು, ನೆಲಮಂಗಲ ಮತ್ತು ಹೊಸಕೋಟೆ ತಾಲೂಕುಗಳಲ್ಲಿ ಕಾರ್ಯಾಚರಿಸುತ್ತಿರುವ ಸಮುದಾಯ ಆರೋಗ್ಯ ಕೇಂದ್ರಗಳನ್ನು 100 ಹಾಸಿಗೆಗಳ ಸಾಮರ್ಥ್ಯದ ತಾಲೂಕು ಆಸ್ಪತ್ರೆಗಳಾಗಿ ಹಂತ ಹಂತವಾಗಿ ಮೇಲ್ದರ್ಜೆಗೆ.

ಮೀನುಗಾರರ ದೋಣಿಗಳಿಗೆ ರಿಯಾಯಿತಿ ದರದಲ್ಲಿ ನೀಡುತ್ತಿರುವ ಡೀಸೆಲ್ ಮಿತಿಯನ್ನು 1.5 ಲಕ್ಷ ಕಿಲೋ ಲೀಟರ್ ನಿಂದ 2 ಲಕ್ಷ ಕಿಲೋ ಲೀಟರ್ ಗೆ ಹೆಚ್ಚಳ

– ಯಾದಗಿರಿ, ರಾಯಚೂರು ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಸೀಗಡಿ ಕೃಷಿ ಕ್ಲಸ್ಟರ್ ಗಳ ಸ್ಥಾಪನೆ

– ಮೀನು ರಫ್ತು ಮತ್ತು ಮೌಲ್ಯ ವರ್ಧನೆಗಾಗಿ ಬೈಂದೂರು ತಾಲೂಕಿನ ಕಂಬದಕೋಣೆಯಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ Sea Food Park ಸ್ಥಾಪನೆ

– ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ

– ವಿಶೇಷ ಚೇತನ‌ ಮಕ್ಕಳಿಗಾಗಿ 1000 ಗ್ರಾಮೀಣ ಗ್ರಂಥಾಲಯಗಳ ಉನ್ನತೀಕರಣ

– ಪ್ರತೀ ವರ್ಷ 200 ಕೋಟಿ ವೆಚ್ಚದಲ್ಲಿ 2 ಸಾವಿರ ಕೆರೆಗಳ ಅಬಿವೃದ್ಧಿ

ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮಕ್ಕೆ ಹೆಚ್ಚವರಿ 110 ಕೋಟಿ ಅನುದಾನ

-ವಕ್ಫ್ ಆಸ್ತಿ, ಖಬರಸ್ತಾನ್ ಗಳ ಸಂರಕ್ಷಣೆ, ಅಭಿವೃದ್ಧಿಗಾಗಿ 10 ಕೋಟಿ ರೂ.

– ಅಲ್ಪಸಂಖ್ಯಾತ ಪದವೀದರ ಮಹಿಳೆಯರಿಗೆ ಉದ್ಯೋಗವಕಾಶ

 

ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ರಾಜ್ಯದ ಪ್ರಥಮ ಪರಿಸರ ವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ.

– ಬಿಪಿಎಲ್ ಕಾರ್ಡ್‌ದಾರರಿಗೆ ಮಾಸಿಕ ಅಕ್ಕಿ 5 ರಿಂದ 6 ಕೆ.ಜಿಗೆ ಹೆಚ್ಚಳ.

– ಗೃಹಿಣಿ ಶಕ್ತಿ ಯೋಜನೆ ಘೋಷಣೆ: ಗೃಹಿಣಿಯರಿಗೆ ತಿಂಗಳಿಗೆ 500 ರೂ. ಸಹಾಯ ಧನ

– ಆ್ಯಸಿಡ್ ದಾಳಿ ಸಂತ್ರಸ್ತ್ರರಿಗೆ 3 ಸಾವಿರ ರೂ. ಬದಲು 10 ಸಾವಿರ ರೂ. ಮಾಸಾಶನ

– ಎಲ್ಲ ಜಿಲ್ಲೆ ಹಾಗೂ ತಾಲೂಕು ಕ್ರೀಡಾಂಗಣಗಳಲ್ಲಿ ಜಿಮ್‌ ಸ್ಥಾಪಿಸಲು 100 ಕೋಟಿ ರೂ. ಅನುದಾನ

– ಅಂತರಾಷ್ಟ್ರೀಯ ಕ್ರೀಡಾ ತರಬೇತಿಗೆ 50 ಕೋಟಿ ರೂ.

 

ರೈತ ವಿದ್ಯಾನಿಧಿ ಯೋಜನೆ ವಿಸ್ತರಣೆ: ಮೀನುಗಾರರು, ಟ್ಯಾಕ್ಸಿ–ಆಟೋ ಚಾಲಕರ ಮಕ್ಕಳಿಗೂ ಯೋಜನೆ ವಿಸ್ತಣೆ

-ಮುಖ್ಯಮಂತ್ರಿ ವಿದ್ಯಾಶಕ್ತಿ ಯೋಜನೆ:  ಸರಕಾರಿ ಪದವಿ ಪೂರ್ವ ಮತ್ತು ಸರಕಾರಿ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಪೂರ್ಣ ಶುಲ್ಕ ವಿನಾಯಿತಿ

ಬೆಂಗಳೂರು ಟ್ರಾಫಿಕ್ ನಿಯಂತ್ರಣ ಯೋಜನೆಗೆ 150 ಕೋ.ರೂ.

– ಬೆಂಗಳೂರು ನಗರ ಅಭಿವೃದ್ಧಿಗೆ 10 ಸಾವಿರ ಕೋಟಿ ರೂ.

– ಆರ್ಟಿಫಿಷಿಯನ್ ಇಂಟೆಲಿಜೆನ್ಸ ಮೂಲಕ ಟ್ರಾಫಿಕ್ ನಿರ್ವಹಣೆಗೆ ಯೋಜನೆ


– ರೈತರಿಗೆ 5 ಲಕ್ಷ ರೂಪಾಯಿವರೆಗಿನ ಬಡ್ಡಿ ರಹಿತ ಸಾಲ

– ಕಿಸಾನ್ ಕಾರ್ಡ್ ಹೊಂದಿರುವ ರೈತರಿಗೆ ಭೂಸಿರಿ ಯೋಜನೆ

– ಸಣ್ಣ ಮತ್ತು ಅತಿಸಣ್ಣ ರೈತ ಕುಟುಂಬಗಳಿಗೆ 150 ಕೋಟಿ ವೆಚ್ಚದಲ್ಲಿ ಜೀವನ್ ಜ್ಯೋತಿ ವಿಮಾ ಯೋಜನೆ

– ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್

ಅಡಿಕೆ ಬೆಳೆಯ ರೋಗ ನಿರ್ವಹಣೆಗೆ ನೂತನ ತಂತ್ರಜ್ಞಾನ ಅಭಿವೃದ್ಧಿಗೆ 10 ಲಕ್ಷ ಕೋಟಿ ರೂ ಅನುದಾನ

– 30 ಕಸ್ತೂರ್ ಬಾ ಶಾಲೆಗಳಲ್ಲಿ ವಸತಿ ವ್ಯವಸ್ಥೆ

– ಧಾರ್ಮಿಕ ದತ್ತಿ ಇಲಾಖೆಯ ಜಮೀನುಗಳ ವರ್ಷಾಶನ 6000 ರೂ. ಹೆಚ್ಚಳ.

– ರಾಮನಗರದಲ್ಲಿ ಬೃಹತ್‌ ರಾಮಂದಿರ ನಿರ್ಮಾಣ

– ತೀರ್ಥಹಳ್ಳಿ ಕೃಷಿ ಸಂಶೋಧನಾ ಕೇಂದ್ರಕ್ಕೆ 10 ಕೋ.ರೂ.

– ಆರ್ಥಿಕವಾಗಿ ಹಿಂದುಳಿದವರಿಗೆ ಹೊಸ ಗೃಹ ಯೋಜನೆ

-ನೇಕಾರರು, ಮೀನುಗಾರರಿಗೂ ರೈತ ವಿದ್ಯಾನಿಧಿ ವಿಸ್ತರಣೆ

 

ಮೀನಗಾರರ ಸುರಕ್ಷತೆಗಾಗಿ  17 ಕೋಟಿ ರೂ. ಅನುದಾನದಲ್ಲಿ ಬೋಟ್‌ಗಳಲ್ಲಿ ಜಿಪಿಎಸ್‌ ಅಳವಡಿಕೆ

– ರಾಜ್ಯದಲ್ಲಿ ಹೊಸದಾಗಿ ಆರು ESI ಆಸ್ಪತ್ರೆಗಳ ನಿರ್ಮಾಣ

– ಬಳ್ಳಾರಿಯಲ್ಲಿ ಮೆಘಾ ಡೈರಿ ಸ್ಥಾಪನೆಗೆ  100 ಕೋಟಿ ರೂ. ಅನುದಾನ

ಅರೆ ಮಲೆನಾಡು ಪ್ರದೇಶಗಳಲ್ಲಿ  ನರೇಗಾ ಯೋಜನೆ ಅಡಿಯಲ್ಲಿ ಕೃಷಿ ಹೊಂಡಗಳನ್ನು ನಿರ್ಮಿಸಲು ರೈತರಿಗೆ ಪ್ರೋತ್ಸಾಹ ಧನ

– 18 ಕೋ.ರೂ. ವೆಚ್ಚದಲ್ಲಿ ನಾರಾಯಣ ಗುರು ವಸತಿ ಶಾಲೆ

– ಆಶಾಕಾರ್ಯಕರ್ತೆಯ ಗೌರವ ಧನ 1000 ರೂ. ಹೆಚ್ಚಳ

– 2 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ‘ಮಕ್ಕಳ ಬಸ್ಸು’ ಯೋಜನೆಗಾಗಿ 100 ರೂ. ಕೋಟಿ ಅನುದಾನ

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಟೊಮೇಟೋ ಅಂಚೆ ಲಕೋಟೆ ಬಿಡುಗಡೆ

    ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…

ಏನ್ ಸಮಾಚಾರ