Health, karnataka, Lifestyle, ಆರೋಗ್ಯ

ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು!!

87

ಹಣ್ಣುಗಳನ್ನು ನಾವು ತಿಂದಷ್ಟು ನಮಗೆ ಆರೋಗ್ಯ ನಿರಂತರವಾಗಿರುತ್ತದೆ. ಅದರಲ್ಲಿಯೂ ಕೆಲವೊಂದು ನಿರ್ದಿಷ್ಟ ಹಣ್ಣುಗಳು ಆರೋಗ್ಯಕ್ಕೆ ಹಿತಕಾರಿಯಾಗಿದೆ. ಸಿಹಿಯಾದ ರುಚಿಯಿಂದ ಕೂಡಿದ ಹಲಸು ಆರೋಗ್ಯಕ್ಕೆ ನೀಡುವ ಕೊಡುಗೆ ಅಪಾರವಾದುದು.
ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು

ರಕ್ತದ ಒತ್ತಡವನ್ನು ಸಮತೋಲನವಾಗಿಸುತ್ತದೆ
ಹಲಸಿನ ಹಣ್ಣಿನ ತೊಳೆಗಳಲ್ಲಿ ಪೊಟ್ಯಾಶಿಯಂ ಅಂಶ ಹೆಚ್ಚಾಗಿದ್ದು, ಅಧಿಕ ರಕ್ತದ ಒತ್ತಡ ಸಮಸ್ಯೆಯಿಂದ ಬಳಲುತ್ತಿರುವ ಮಂದಿಗೆ ಇದು ಬಹಳ ಸಹಕಾರಿ ಎಂದು ಹೇಳುತ್ತಾರೆ. ಏಕೆಂದರೆ ಪೊಟ್ಯಾಶಿಯಂ ಅಂಶ ಹೊಂದಿರುವ ಯಾವುದೇ ಆಹಾರ ಸೇವನೆ ಮಾಡುವುದರಿಂದ ದೇಹದಲ್ಲಿ ಸೋಡಿಯಂ ಅಂಶ ಕಡಿಮೆಯಾಗಿ ದೇಹದ ತುಂಬಾ ಹಬ್ಬಿರುವ ರಕ್ತ ನಾಳಗಳ ಮೇಲೆ ಒತ್ತಡ ಕಡಿಮೆಯಾಗಿ ರಕ್ತ ಸಂಚಾರ ಸುಗಮಗೊಳ್ಳುತ್ತದೆ. ಇದರಿಂದ ಹೃದಯದ ಮೇಲೆ ಒತ್ತಡ ಕಡಿಮೆಯಾಗಿ ರಕ್ತದ ಒತ್ತಡ ಸಮಸ್ಯೆ ಸಾಮಾನ್ಯ ಸ್ಥಿತಿಗೆ ಮರಳುತ್ತದೆ.

ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ – ವಿಟಮಿನ್ ಸಿ ಯನ್ನು ಒಳಗೊಂಡಿರುವ ಹಲಸಿನ ಹಣ್ಣು, ವೈರಲ್ ಮತ್ತು ಬ್ಯಾಕ್ಟೀರಿಯಾ ಸೋಂಕಿನಿಂದ ನಮ್ಮನ್ನು ಸಂರಕ್ಷಿಸುತ್ತದೆ. ಬಿಳಿ ರಕ್ತ ಕೋಶಗಳ ರಚನೆಯನ್ನು ಬೆಂಬಲಿಸುತ್ತಾ ನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ವಿಟಮಿನ್ ಸಿ ಪ್ರಮುಖ ಪಾತ್ರ ವಹಿಸುತ್ತದೆ. ಒಂದು ಕಪ್ ಹಲಸಿನಹಣ್ಣು ಈ ಶಕ್ತಿಯುತ ಉತ್ಕರ್ಷಣ ನಿರೋಧಕವನ್ನು ದೇಹಕ್ಕೆ ಒದಗಿಸುತ್ತದೆ
​ಹಲಸಿನ ಹಣ್ಣಿನಲ್ಲಿವೆ ಊಹೆಗೂ ಮೀರಿದ ಪೌಷ್ಟಿಕ ಸತ್ವಗಳು

ಹಲಸಿನ ಹಣ್ಣಿನ ತೊಳೆಗಳಲ್ಲಿ ಕೇವಲ ಪ್ರೋಟಿನ್ ಅಂಶ ಮಾತ್ರವಲ್ಲದೆ ನಾರಿನ ಅಂಶ ವಿಟಮಿನ್ ‘ ಎ ‘, ವಿಟಮಿನ್ ‘ ಸಿ ‘, ರಿಬಾಫ್ಲವಿನ್, ಮೆಗ್ನೀಷಿಯಂ, ಪೊಟ್ಯಾಶಿಯಂ, ತಾಮ್ರ ಮತ್ತು ಮ್ಯಾಂಗನೀಸ್ ಅಂಶಗಳು ಇತರ ಹಣ್ಣುಗಳಿಗೆ ಹೋಲಿಸಿದರೆ ದುಪ್ಪಟ್ಟಾಗಿವೆ. ನಮ್ಮ ದೇಹಕ್ಕೆ ಅಗತ್ಯವಿರುವ ಆರೋಗ್ಯಕರ ಮತ್ತು ಬಹಳ ಪ್ರಯೋಜನಕಾರಿಯಾದ ಆಂಟಿ – ಆಕ್ಸಿಡೆಂಟ್ ಅಂಶಗಳು ಇದರಲ್ಲಿ ಲಭ್ಯವಿವೆ

ಅಸ್ತಮಾವನ್ನು ನಿಯಂತ್ರಿಸುತ್ತದೆ – ಹಲಸಿನ ಹಣ್ಣಿನ ಬೇರುಗಳು ಅಸ್ತಮಾದಿಂದ ಬಳಲುತ್ತಿರುವವರಿಗೆ ರಾಮಬಾಣವಾಗಿದೆ. ಇದರ ಬೇರನ್ನು ಮತ್ತು ಉಳಿದ ಭಾಗಗಳನ್ನು ಕುದಿಸಿ ಕಷಾಯದಂತೆ ಸೇವಿಸುವುದು ಅಸ್ತಮಾದಿಂದ ಮುಕ್ತಿ ದೊರಕುವಂತೆ ಮಾಡುತ್ತದೆ.

ಮೂಳೆಯನ್ನು ಬಲಪಡಿಸುತ್ತದೆ -ಹಲಸಿನಲ್ಲಿರುವ ಮೆಗ್ನೇಷಿಯಂ, ಕ್ಯಾಲ್ಶಿಯಂನೊಂದಿಗೆ ಕಾರ್ಯನಿರ್ವಹಿಸಿ ಮೂಳೆಯನ್ನು ಬಲಪಡಿಸುತ್ತದೆ. ಮೂಳೆ ಸಂಬಂಧಿತ ಹಲವಾರು ಕಾಯಿಲೆಯನ್ನು ದೂರಮಾಡುವಲ್ಲಿ ಹಲಸಿನ ಹಣ್ಣು ಉಪಕಾರಿಯಾಗಿದೆ.
ಅನೀಮಿಯಾವನ್ನು ದೂರಮಾಡುತ್ತದೆ – ಹಲಸಿನ ಹಣ್ಣಿನಲ್ಲಿರುವ ಕಬ್ಬಿಣದ ಅಂಶ ಅನೀಮಿಯಾವನ್ನು ದೂರ ಮಾಡಿ ದೇಹದ ಸೂಕ್ತ ರಕ್ತ ಸಂಚಲನೆಗೆ ಫಲಪ್ರದವಾಗಿದೆ.

ಆರೋಗ್ಯಕರ ಥೈರೋಯ್ಡ್‌ಗೆ ಉಪಕಾರಿ -ಥೈರೊಯ್ಡ್ ಮೆಟಾಬಾಲಿಸಂಗೆ ಕೋಪರ್‌ ಉಪಕಾರಿಯಾಗಿದೆ, ಹಾರ್ಮೋನ್ ಉತ್ಪಾದನೆಯಲ್ಲಿ ಕೋಪರ್ ಪ್ರಮುಖ ಪಾತ್ರ ವಹಿಸಿದೆ. ಹಲಸಿನ ಹಣ್ಣು ಕೋಪರ್‌ನಿಂದ ಯಥೇಚ್ಛಿತಗೊಂಡಿದ್ದು ಥೈರೊಯ್ಡ್ ಅನ್ನು ಆರೋಗ್ಯಕರವಾಗಿಸುತ್ತದೆ.
ಹೋರಾಡುತ್ತದೆ.


ಉತ್ತಮ ಜೀರ್ಣಕ್ರಿಯೆಗೆ ಸಹಕಾರಿ – ಅಲ್ಸರ್ ವಿರುದ್ಧ ಹೋರಾಡುವ ವಿಶಿಷ್ಟ ಗುಣವನ್ನು ಹೊಂದಿರುವ ಹಲಸಿನ ಹಣ್ಣು ಅಲ್ಸರ್ ಮತ್ತು ಜೀರ್ಣಕ್ರಿಯೆ ಸಮಸ್ಯೆಗಳನ್ನು ದೂರಮಾಡುತ್ತದೆ. ಇದರಲ್ಲಿರುವ ಅತ್ಯಧಿಕ ಫೈಬರ್ ಅಂಶವು ಮೃದುವಾದ ಕರುಳಿನ ಚಲನೆಗೆ ಸಹಕಾರಿ.

About the author / 

Chethan Mardalu

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಸದ್ಯದಲ್ಲೇ “ಗೋವು ” ಆನ್ಲೈನ್ ಮಾರುಕಟ್ಟೆ ..!ತಿಳಿಯಲು ಈ ಲೇಖನ ಓದಿ ..

    ಹಳೆಯ ವಸ್ತುಗಳು ಇದ್ದರೆ “ಮಾರಿ ಬಿಡಿ’ ಎನ್ನುವುದು ವೆಬ್ ಸೈಟ್ ಒಂದರ ಜಾಹೀರಾತು. ಅದೇ ರೀತಿ ಗೋವುಗಳ ಮಾರಾಟಕ್ಕೆ ಪ್ರತ್ಯೇಕವಾದ ವೆಬ್ಸೈಟ್ ಇದ್ದರೆ ಹೇಗಿರುತ್ತದೆ. ಇನ್ನು ಆರು ತಿಂಗಳು ಕಾದು ಕುಳಿತರೆ ಅದೂ ಸಿದ್ಧವಾಗಿ ಬಿಡುತ್ತದೆ. ಅದೂ ಓಎಲ್‌ಎಕ್ಸ್, ಕ್ವಿಕರ್ ಮಾದರಿಯಲ್ಲಿಯೇ.

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

  • ದೇಶ-ವಿದೇಶ

    ಭಾರತ ಚೀನಾ ನಡುವೆ ಯುದ್ದ ನಡೆದ್ರೆ,ಯಾವ ದೇಶಗಳು ಭಾರತಕ್ಕೆ ಸಹಾಯ ಮಾಡುತ್ತವೆ ಗೊತ್ತಾ???

    ಭಾರತ ಮತ್ತು ಚೀನಾಗಳ ನಡುವಿನ ರಾಜಕೀಯ ಪರಿಸ್ತಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದ್ದು ಯುದ್ದದ ಕಾರ್ಮೋಡದ ಛಾಯೆ ಉಭಯ ದೇಶಗಳ ಮೇಲೆ ಕಾಡುತ್ತಿದೆ.

  • ಸಿನಿಮಾ

    ಕನ್ನಡಕ್ಕೆ ಬಾಹುಬಲಿಯ “ಬಲ್ಲಾಳದೇವ”

    ಜಗತ್ತಿನಾದ್ಯಂತ ದಾಖಲೆ ಕಲೆಕ್ಷನ್ ಮಾಡುತ್ತಿರುವ ಬಾಹುಬಲಿ ಚಿತ್ರದ ಖಳನಟ ಬಲ್ಲಾಳದೇವ ಪಾತ್ರದಲ್ಲಿ ಮಿಂಚಿದ ರಾಣಾ ದಗ್ಗುಬಾಟಿ ಕನ್ನಡ ಚಿತ್ರದಲ್ಲಿ ಅಭಿನಯಿಸಲಿದ್ದು, ಈ ಬಗ್ಗೆ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(16 ಫೆಬ್ರವರಿ, 2019) ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ನಿಮ್ಮ ಮನೆಯಲ್ಲಿ ಸಾಮರಸ್ಯ ತರಲು…

  • Health

    ಬೊಜ್ಜನ್ನು ಕರಗಿಸಿ ತೂಕವನ್ನು ಕಡಿಮೆ ಮಾಡುವ ರುಚಿಕರ ಹಣ್ಣುಗಳು.

    ದಿನನಿತ್ಯ ವ್ಯಾಯಾಮ, ಡಯಟ್, ಕಟ್ಟುನಿಟ್ಟಾದ ಆಹಾರ ಮಾಡಿದರೂ ಸಹ ಬೊಜ್ಜು ಕರಗುವುದಿಲ್ಲ. ಹಲವು ಪ್ರಯತ್ನ ಮಾಡಿದರು ಕೆಲವರಿಗೆ ಬೊಜ್ಜು ಕರಗಿಸಲು ಹಾಗುವುದಿಲ್ಲ. ಆದರೆ ಕೆಲವು ಹಣ್ಣುಗಳನ್ನು ಸೇವಿಸಿದರೆ ತೂಕ ಕಡಿಮೆ ಮಾಡಬಹುದು ಎಂದು ಇತ್ತೀಚಿನ ಅಧ್ಯಯನಗಳು ತಿಳಿಸಿದೆ. ಹೌದು ನಿಮಗೆ ಇಷ್ಟವಾದ ರುಚಿಕರವಾದ ಕೆಲವು ಹಣ್ಣುಗಳಿಂದ ಬೊಜ್ಜನ್ನು ಕರಗಿಸಿ ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದರ ಜೊತೆಗೆ ಈ ಹಣ್ಣುಗಳಲ್ಲಿ ನಮ್ಮ ದೇಹಕ್ಕೆ ಬೇಕಾದ ಆರೋಗ್ಯಕರ ಫೈಬರ್ ಮತ್ತು ಪೋಷಕಾಂಶಗಳಿರುತ್ತವೆ. ಈಗ ನಾವು ದಿನನಿತ್ಯ ಸೇವನೆ…