ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿನಿಮಾ ಸೆಲೆಬ್ರಿಟಿಗಳು ಬೇರೆಯವರ ಚಿತ್ರ ನೋಡದಿದ್ದರೂ ತಾವು ಬಣ್ಣ ಹಚ್ಚಿದ ಸಿನಿಮಾವನ್ನು ತಪ್ಪದೇ ಫರ್ಸ್ಟ್ ಡೇ ಫರ್ಸ್ಟ್ ಶೋ ನೋಡುತ್ತಾರೆ. ಆದರೆ ಇಲ್ಲೊಬ್ಬ ಕಲಾವಿದ ನಟಿಸಿದ್ದು ಸಾವಿರಕ್ಕೂ ಅಧಿಕ ಚಿತ್ರಗಳಾದರೂ, ಕಳೆದ 25 ವರ್ಷಗಳಿಂದ ಒಂದು ಬಾರಿಯೂ ಥಿಯೇಟರ್ಗೆ ಕಾಲಿಟ್ಟಿಲ್ಲವಂತೆ! ಯಾರವರು? ಕಾಮಿಡಿ ಕಿಂಗ್ ಬ್ರಹ್ಮಾನಂದಮ್..

ಕಳೆದ 32 ವರ್ಷಗಳಿಂದ ಸಿನಿಮಾ ಇಂಡಸ್ಟ್ರಿಯಲ್ಲಿ ಕೆಲಸ ಮಾಡುತ್ತಿರುವ ಅವರು, ಈವರೆಗೆ ಸಾವಿರಕ್ಕೂ ಅಧಿಕ ಚಿತ್ರಗಳಲ್ಲಿ ಹಾಸ್ಯನಟನಾಗಿ ಎಲ್ಲರನ್ನೂ ನಗಿಸುತ್ತಿದ್ದಾರೆ. ಅವರ ಕಾಮಿಡಿ ನೋಡಲೆಂದೇ ಪ್ರೇಕ್ಷಕರು ಮುಗಿ ಬೀಳುತ್ತಾರೆ. ಆದರೆ ಅವರಿಗೆ ಸಿನಿಮಾ ನೋಡಬೇಕು ಎಂದು ಅನ್ನಿಸುವುದೇ ಇಲ್ಲವಂತೆ.

ಇದಕ್ಕೆ ಕಾರಣ ನೀಡುವ ಅವರು, ‘ನಟನೆ ನನ್ನ ವೃತ್ತಿ. ಹೀಗಾಗಿ ನಾನು ಅದನ್ನು ಪ್ರೀತಿಸುತ್ತೇನೆ. ಆದರೆ 3 ಗಂಟೆ ಕೂತು ಚಿತ್ರ ನೋಡುವುದು ತುಂಬ ಕಷ್ಟದ ವಿಚಾರ.

ಸಿನಿಮಾಗಳು ನನಗೆ ಅಸ್ವಾಭಾವಿಕವಾಗಿ ಕಾಣುತ್ತವೆ. ಹೀಗಾಗಿ ನಾನು ಥಿಯೇಟರ್ಗೆ ಹೋಗುವುದೇ ಇಲ್ಲ. ಈ ವಿಚಾರ ಹೇಳಿಕೊಂಡರೆ ಜನ ನಂಬುವುದಿಲ್ಲ’ ಎಂದಿದ್ದಾರೆ. ಅವರಿಗೆ ನಾಟಕ ಎಂದರೆ ತುಂಬ ಇಷ್ಟವಂತೆ. ಬಿಡುವು ಸಿಕ್ಕಾಗೆಲ್ಲ ನಾಟಕಗಳನ್ನು ನೋಡುತ್ತಾರಂತೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನ್ಯಾಯಾಲಯಗಳು ಸಾಮಾನ್ಯ ಜನರಿಗೆ ಸುಲಭವಾಗಿ ಅರ್ಥವಾಗುವ ನಿಟ್ಟಿನಲ್ಲಿ ಆಯಾ ರಾಜ್ಯಗಳ ಸ್ಥಳೀಯ ಭಾಷೆಯಲ್ಲೇ ಪ್ರಕರಣಗಳ ತೀರ್ಪು ನೀಡಬೇಕು ಎಂದು ಇತ್ತೀಚೆಗಷ್ಟೇ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಹೇಳಿದ್ದರು.
ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…
ದೇವಸ್ಥಾನದ ಮುಂದೆ ಭಿಕ್ಷಾಟನೆ ನಡೆಸುತ್ತಿರುವ ಓರ್ವ ಮಹಿಳೆ ದೇವಸ್ಥಾನದ ನವೀಕರಣಕ್ಕಾಗಿ ಎರಡು ಲಕ್ಷ ರೂ. ದೇಣಿಗೆ ನೀಡಿ ನಿಬ್ಬೆರಗಾಗುವಂತೆ ಮಾಡಿದ್ದಾಳೆ. ಮೈಸೂರು ಅರಮನೆಯ
ಮುಂಭಾಗದಲ್ಲಿರುವ ಪ್ರಸಿದ್ದ ಪ್ರಸನ್ನ ಅಂಜನೇಯ ದೇವಾಲಯದ ಮುಂದೆ ಭಿಕ್ಷೆ ಬೇಡುತ್ತಿರುವ ಎಂ.ವಿ.ಸೀತಾ, ದೇವಸ್ಥಾನದ ನವೀಕರಣಕ್ಕೆ ದೇಣಿಗೆ ನೀಡಿದ ಮಹಾನ್ ಭಕ್ತೆ.
ಹಾರ ಹಾಕುವ ವಧುವಿಗೆ ಸಹಾಯ ಮಾಡಲು ಹೋಗಿ ವಧುವಿನ ಕೈಯಿಂದ ಕಪಾಳಕ್ಕೆ ಮೋಕ್ಷ ಮಾಡಿಸಿಕೊಂಡ ಬಾವ..!
ಬೆಂಗಳೂರು, ಜುಲೈ 29 ಅಧಿಕಾರಕ್ಕೆ ಬಂದ ದಿನವೇ ನೇಕಾರರ ಸಾಲಮನ್ನಾ ಮಾಡುವ ಮೂಲಕ ಮಹತ್ವದ ಘೋಷಣೆ ಮಾಡಿದ್ದ ನೂತನ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಕರಾವಳಿ ಭಾಗದ ಮೀನುಗಾರರಿಗೆ ಸಂತಸದ ಸುದ್ದಿ ನೀಡಿದ್ದಾರೆ. ಕರಾವಳಿ ಭಾಗದ ಮೂರು ಜಿಲ್ಲೆಗಳ ಮೀನುಗಾರರಿಗೆ ಯಡಿಯೂರಪ್ಪ ಅವರು ಸಾಲಮನ್ನಾದ ಸಿಹಿ ಸುದ್ದಿ ನೀಡಿದ್ದಾರೆ. 2017-18, 2018-19 ಸಾಲಿನಲ್ಲಿ ಕರಾವಳಿಯ 3 ಜಿಲ್ಲೆಗಳಲ್ಲಿ ಒಟ್ಟು 23507 ಮೀನುಗಾರರು ವಾಣಿಜ್ಯ ಮತ್ತು ಪ್ರಾದೇಶಿಕ ಬ್ಯಾಂಕುಗಳಲ್ಲಿ ಮಾಡಿರುವ ಒಂದು ಹಂತದವರೆಗಿನ ಸಾಲವನ್ನು ಮನ್ನಾ ಮಾಡುವ ಕುರಿತು ಬಿ.ಎಸ್…
ಮಂಡ್ಯದ ಹುಡುಗಿ ವರಲಕ್ಷ್ಮಿ ಆಟ-ಪಾಠ ಎಲ್ಲದರಲ್ಲೂ ಸದಾ ಮುಂದು. ಆಶುಭಾಷಣ ಮಾಡುವುದರಲ್ಲಿ ಈಕೆ ಎತ್ತಿದ ಕೈ. ಕಬಡ್ಡಿ ಕೂಡ ಆಡುವ ವರಲಕ್ಷ್ಮಿಗೆ ಮುಂದೆ ಟೀಚರ್ ಆಗಿ ಬಡ ಮಕ್ಕಳಿಗೆ ಪಾಠ ಹೇಳಿಕೊಡುವ ಆಸೆ ಇದೆ. ಜೊತೆಗೆ ಸಿ.ಎ (ಚಾರ್ಟರ್ಡ್ ಅಕೌಂಟೆಂಟ್) ಆಗುವ ಕನಸಿದೆ. ಬೆಟ್ಟದಷ್ಟು ಆಸೆ ಹೊತ್ತು ‘ಕನ್ನಡದ ಕೋಟ್ಯಧಿಪತಿ’ ವೇದಿಕೆಗೆ ಬಂದಿದ್ದ ಈ ಪುಟ್ಟ ಹುಡುಗಿಯ ಕನಸು ಒಂದೇ ಕ್ಷಣದಲ್ಲಿ ನುಚ್ಚು ನೂರಾಗಿದ್ದು ಮಾತ್ರ ದುರಾದೃಷ್ಟಕರ. ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ಕೋಟಿ ರೂಪಾಯಿ ಗೆಲ್ಲಲೇಬೇಕು ಎಂಬ ಛಲ…