nation

400 ಶಾಲಾ ಮಕ್ಕಳ ಪ್ರಾಣ ಉಳಿಸಲು,10ಕೆಜಿ ಬಾಂಬ್ ಎತ್ತುಕೊಂಡು 1ಕಿಮೀ ಓಡಿದ, ಈ ಪೇದೆ ರಿಯಲ್ ಸಿಂಗಂ!ಈ ಲೇಖನಿ ಓದಿ ಶಾಕ್ ಆಗ್ತೀರಾ..!

372

ನಾವು ಕೆಲವೊಂದು ಸಾರಿ ಪೋಲಿಸ್’ರ ಬಗ್ಗೆ ಅದರಲ್ಲೂ ಪೋಲಿಸ್ ಪೇದೆಗಳ ಬಗ್ಗೆ ಅವಹೇಳನವಾಗಿ ಮಾತನಾಡುವುದುಂಟು.

ಆದರೆ ಕೆಲವೊಂದು ಸಮಯಗಳಲ್ಲಿ ಅದೇ ಪೊಲೀಸರು ತಮ್ಮ ಪ್ರಾಣವನ್ನು ಲೆಕ್ಕಿಸದೆ, ಪ್ರಾಣವನ್ನೇ ಪಣಕ್ಕಿಟ್ಟು   ಜನರನ್ನು ರಕ್ಷಿಸುತ್ತಾರೆ. ಹೌದು, ಇದೇ ತರ ಘಟನೆಯೊಂದು ಮಧ್ಯಪ್ರದೇಶದ ಚಿತೋರ ಎಂಬ ಹಳ್ಳಿಯಲ್ಲಿ ನಡೆದಿದೆ.

ಅಭಿಷೇಕ್ ಪಟೇಲ್ ಎಂಬ ಪೇದೆಯೊಬ್ಬರು 400 ಮಂದಿ ಮಕ್ಕಳ ಪ್ರಾಣವನ್ನು ರಕ್ಷಿಸಲು, 10 ಕೆಜಿ ತೂಕದ ಬಾಂಬ್ ಅನ್ನು ಹೊತ್ತುಕೊಂಡು 1 ಕಿ.ಮೀ ಓಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಅಭಿಷೇಕ್ ಪಟೇಲ್ ಬಾಂಬ್ ಹೊತ್ತುಕೊಂಡು ಓಡಿದ ಪೊಲೀಸ್ ಪೇದೆ.ಶುಕ್ರವಾರ ಮಧ್ಯಪ್ರದೇಶದ, ಚಿತೋರ ಎಂಬ ಹಳ್ಳಿಯಲ್ಲಿ ಈ ಘಟನೆ ನಡೆದಿದೆ.

ನಡೆದ ಘಟನೆಯಾದರೂ ಏನು ಗೊತ್ತಾ..!
ಮಧ್ಯಪ್ರದೇಶದ ಚಿತೋರಾದಲ್ಲಿರುವ ಸರ್ಕಾರಿ ಶಾಲೆಯ ಬಳಿ ಶುಕ್ರವಾರ ಬಾಂಬ್ ಪತ್ತೆಯಾಗಿತ್ತು. ಶಾಲಾ ಸಿಬ್ಬಂದಿ ಕೂಡಲೇ ಪೊಲೀಸರಿಗೆ ಕರೆ ಮಾಡಿ ವಿಚಾರ ತಿಳಿಸಿದ್ದಾರೆ. ವಿಚಾರ ತಿಳಿದು ಪೊಲೀಸರ ಜೊತೆ ಕಾನ್ ಸ್ಟೇಬಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಅಭಿಷೇಕ್ ಪಟೇಲ್ ಕೂಡ ಸ್ಥಳಕ್ಕೆ ಆಗಮಿಸಿದ್ದಾರೆ.

 

ನಿಜವಾದ ಸಿಂಗಂ ಅಂದ್ರೆ ಈ ಅಭಿಷೇಕ್ ಪಟೇಲ್..!

ಬಾಂಬ್ ನೋಡಿದ ಕೂಡಲೇ ಪೊಲೀಸರು ಶಾಲೆಯನ್ನು ಮುಚ್ಚುವಂತೆ ಹೇಳಿದರು. ಈ ವೇಳೆ ಬಾಂಬ್ ನಿಷ್ಕ್ರಿಯ ದಳ ಸಹ ಸ್ಥಳಕ್ಕೆ ಆಗಮಿಸಿರಲಿಲ್ಲ. ವಿಚಾರ ತಿಳಿದು ಮಾಧ್ಯಮಗಳು ಸ್ಥಳಕ್ಕೆ ಆಗಮಿಸಿದವು. ಈ ಸಂದರ್ಭದಲ್ಲಿ ಎಲ್ಲರೂ ನೋಡುತ್ತಿದ್ದಂತೆ 40 ವರ್ಷದ ಅಭಿಷೇಕ್ ಪಟೇಲ್ 12 ಇಂಚು ಉದ್ದ ಹಾಗೂ 10ಕೆ.ಜಿ ತೂಕದ ಬಾಂಬನ್ನು ಹೊತ್ತುಕೊಂಡು ಓಡಲು ಆರಂಭಿಸಿದರು.

ಈ ಸಂದರ್ಭದಲ್ಲಿ ಮಾಧ್ಯಮದ ಪ್ರತಿನಿಧಿಯೊಬ್ಬರು ವಿಡಿಯೋ ಸೆರೆ ಹಿಡಿದಿದ್ದು, ಈಗ 12 ಸೆಕೆಂಡಿನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಮಕ್ಕಳ ಪ್ರಾಣ ಉಳಿಸಲು ಒಂದು ಕಿಲೋ ಮೀಟರ್ ಓಡಿದ ರಿಯಲ್ ಸಿಗಂ!
100 ಸಂಖ್ಯೆಗೆ ಕರೆ ಬಂದ ಹಿನ್ನೆಲೆಯಲ್ಲಿ ನಾವು ಶಾಲೆಗೆ ಬಂದೆವು. ಕೆಲ ತಿಂಗಳ ಹಿಂದೆ ನಡೆದ ಪೊಲೀಸ್ ಆಪರೇಷನ್ ತರಬೇತಿ ಸಮಯದಲ್ಲಿ ಬಾಂಬ್ ಸಿಡಿದರೆ ಸುಮಾರು 500 ಮೀಟರ್ ವ್ಯಾಪ್ತಿಯ ಪ್ರದೇಶಗಳಿಗೆ ಹಾನಿ ಆಗುತ್ತದೆ ಎಂದು ತಿಳಿಸಿದ್ದರು.

ಹೀಗಾಗಿ ಮಕ್ಕಳ ಪ್ರಾಣವನ್ನು ಉಳಿಸಲು ನಾನು ಬಾಂಬ್ ಅನ್ನು ಹಿಡಿದುಕೊಂಡು ಒಂದು ಕಿ.ಮೀ ದೂರದವರೆಗೆ ಓಡಿ ಎಸೆದು ಬಂದೆ ಎಂದು ಅಭಿಷೇಕ್ ಪಟೇಲ್ ತಿಳಿಸಿದ್ದಾರೆ.

ಕೆಲ ದಿನಗಳ ಹಿಂದೆ ಈ ಪ್ರದೇಶದ ಸಮೀಪವೇ ಬಾಂಬ್ ಪತ್ತೆಯಾಗಿತ್ತು. ಈ ಬಾಂಬ್ ಈ ಸ್ಥಳಕ್ಕೆ ಹೇಗೆ ಬಂದಿದೆ ಎನ್ನುವುದು ತಿಳಿದು ಬಂದಿಲ್ಲ. ಈ ಶಾಲೆ ಇರುವ ಗ್ರಾಮದಲ್ಲೇ ಸೇನೆ ಶೂಟಿಂಗ್ ನಡೆಸುವ ಸ್ಥಳವಿದೆ. ಈ ಪ್ರಕರಣ ಸಂಬಂಧ ತನಿಖೆ ನಡೆಸಲಾಗುವುದು ಎಂದು ಸ್ಥಳೀಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಹವಾ ಮಹಲ್

      ಇದು ಭಾರತದ ಜೈಪುರ್‌ನಲ್ಲಿರುವ ಒಂದು ಅರಮನೆ. ಇದನ್ನು 1799ರಲ್ಲಿ ಮಹಾರಾಜ ಸವಾಯಿ ಪ್ರತಾಪ್ ಸಿಂಗ್ ಅವರು ಕಟ್ಟಿಸಿದ್ದರು, ಮತ್ತು ಲಾಲ್ ಛಂದ್ ಉಸ್ತಾರವರು ಹಿಂದೂ ದೇವರಾದ ಕೃಷ್ಣ ನ ಕಿರೀಟದ ಆಕಾರದಲ್ಲಿ ಇದರ ವಿನ್ಯಾಸಗೊಳಿಸಿದ್ದರು. ಜಟಿಲ ಜಾಲರಿ ಕಾಮಗಾರಿಯಿಂದ ಅಲಂಕೃತ ಝರೊಕಾ ಎಂದು ಕರೆಯಲಾದ 953 ಚಿಕ್ಕ ಕಿಟಕಿಗಳು ಒಳಗೊಂಡಇದರ ಅದ್ವಿತೀವಾದ ಐದು-ಅಂತಸ್ತಿನ ಹೊರರೂಪ ಜೇನುಗೂಡಿನ ಜೇನುಹಟ್ಟಿಗೆ ಕೂಡ ಸದೃಶ್ಯವಾಗಿದೆ. ಈ ಜಲರಿಯ ಮುಖ್ಯ ಉದ್ದೇಶವೆಂದರೆ ರಾಜ ಮನೆತನದ ಮಹಿಳೆಯರಿಗೆ ಅವರು ಕಾಣದಂತೆ ಕೆಳಗಿನ ರಸ್ತೆಯ ದಿನನಿತ್ಯದ ಜೀವನವನ್ನು ನೋಡಲು ಸಾಧ್ಯವಾಗಬೇಕೆಂದು,…

  • Health, ಉಪಯುಕ್ತ ಮಾಹಿತಿ

    ಸೌತೆಕಾಯಿ ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು!!

    ಸೌತೆಕಾಯಿಗಳು 95% ನೀರನ್ನು ಒಳಗೊಂಡಿರುತ್ತವೆ ಮತ್ತು ಇದು ಅವರಿಗೆ ಸೂಕ್ತವಾದ ಹೈಡ್ರೇಟಿಂಗ್ ಮತ್ತು ತಂಪಾಗಿಸುವ ಆಹಾರವಾಗಿಸುತ್ತದೆ. ಸೌತೆಕಾಯಿಗಳು ಫಿಸೆಟಿನ್ ಎಂಬ ಉರಿಯೂತದ ಫ್ಲೇವನಾಲ್ ಅನ್ನು ಹೊಂದಿರುತ್ತವೆ, ಇದು ನಿಮ್ಮ ಮೆದುಳಿನ ಆರೋಗ್ಯವನ್ನು ನೋಡಿಕೊಳ್ಳುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಸೌತೆಕಾಯಿಗಳಲ್ಲಿ ಲಿಗ್ನಾನ್ಸ್ ಎಂಬ ಪಾಲಿಫಿನಾಲ್‌ಗಳಿವೆ, ಇದು ಸ್ತನ, ಗರ್ಭಾಶಯ, ಅಂಡಾಶಯ ಮತ್ತು ಪ್ರಾಸ್ಟೇಟ್ ಕ್ಯಾನ್ಸರ್ ಅಪಾಯಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಸೌತೆಕಾಯಿ ಸಾರವು ಅನಗತ್ಯ ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಉರಿಯೂತದ ಪರ ಕಿಣ್ವಗಳ ಚಟುವಟಿಕೆಯನ್ನು ತಡೆಯುವ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 11 ಜನವರಿ, 2019 ಹಣಕಾಸಿನಲ್ಲಿಸುಧಾರಣೆ ದೀರ್ಘಕಾಲದಿಂದ ಬಾಕಿಯಿರುವ ನಿಮ್ಮ ಬಾಕಿಗಳು ಮತ್ತು ಬಿಲ್ಲುಗಳನ್ನು ಪಾವತಿಸುವುದನ್ನು ಅನುಕೂಲಕರವಾಗಿಸುತ್ತದೆ….

  • ಸಿನಿಮಾ

    ರೊಬೋ-2.0 ಚಿತ್ರದ ಆ್ಯಮಿ ಜಾಕ್ಸನ್ ಫಸ್ಟ್ ಲುಕ್ ಬಿಡುಗಡೆ…! ತಿಳಿಯಲು ನೋಡಿ…

    ರಜನಿಕಾಂತ್ ಹಾಗೂ ಅಕ್ಷಯ್ ಕುಮಾರ್ ನಟಿಸುತ್ತಿರುವ 2.0 ಚಿತ್ರದಲ್ಲಿ ಆ್ಯಮಿ ಜಾಕ್ಸನ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಈಗ 2.0 ಚಿತ್ರದ ಆ್ಯಮಿ ಜಾಕ್ಸನ್ ನ ಮೊದಲ ಲುಕ್ ಬಿಡುಗಡೆಯಾಗಿದೆ

  • ಸುದ್ದಿ

    ಒಟ್ಟೊಟ್ಟಿಗೆ ಮನೆ ಮಾರಾಟಕ್ಕಿಟ್ಟ ಕಾಮಿಡಿ ನಟರು!ಇಷ್ಟಕ್ಕೂ ಇದಕ್ಕೆ ಕಾರಣವೇನು ಗೊತ್ತಾ?ತಿಳಿದರೆ ಶಾಕ್ ಆಗೋದಂತು ಗ್ಯಾರಂಟಿ,.!

    ಕನ್ನಡದ ಕಾಮಿಡಿ ನಟರಿದ್ದರೆ ಸಿನಿಮಾ ನೋಡಲು ಚೆಂದ ಹಾಗೆಯೇ  ಕನ್ನಡದ ಖ್ಯಾತ ಕಾಮಿಡಿ ಕಲಾವಿದರಾದ ಸಾಧು ಕೋಕಿಲಾ, ಚಿಕ್ಕಣ್ಣ, ಕುರಿ ಪ್ರತಾಪ್ ಮತ್ತು ರವಿಶಂಕರ್ ಗೌಡ ಎಲ್ಲರು ಒಟ್ಟಿಗೆ ಮನೆ ಮಾರಾಟಕ್ಕಿಟ್ಟಿರೋದು ಎಲ್ಲರಿಗು ಆಶ್ಚರ್ಯ  ಇಷ್ಟಕ್ಕೂ ಎಲ್ಲರೂ  ಒಟ್ಟಿಗೆ  ಮನೆ ಮಾರಾಟಕ್ಕಿಟ್ಟಿರೋದಕ್ಕೆ  ಕಾರಣವೇನು  ಗೊತ್ತಾ ಆ ಮನೆಯಲ್ಲಿ  ಭೂತ ಪ್ರೇತ ಬಾಧೆಗೀಡಾಗಿದೆ ಎಂದು ಹೇಳಿದ್ದಾರೆ ಇದು ತಮಾಷೆಯಲ್ಲಾ  ಸತ್ಯ. ಇಂಥಾದ್ದು ಸಂಭವಿಸಿರೋದು ಮಂಜು ಸ್ವರಾಜ್ ನಿರ್ದೇಶನದ ಮನೆ ಮಾರಾಟಕ್ಕಿದೆ ಎಂಬ ಚಿತ್ರದ ವಿಚಾರದಲ್ಲಿ. ಇದರಲ್ಲಿ ಈ ನಾಲ್ವರು…

  • ಸುದ್ದಿ

    ಇನ್ಮುಂದೆ ಭರಚುಕ್ಕಿಯನ್ನು ನೋಡಬಯಸುವರು ಬಯೋ ಡೈವರ್ಸಿಟಿ ಪಾರ್ಕ್‌ಗೂ ಹೋಗಿ ಬರುವ ಅವಕಾಶ,.!ಏನಿದು ಬಯೋ ಡೈವರ್ಸಿಟಿ ಪಾರ್ಕ್‌ ಗೊತ್ತಾ?

    ಭರಚುಕ್ಕಿ ಎಂದರೆ ಎಲ್ಲರಿಗು ಇಷ್ಟವಾದ ಜಾಗ ಎನ್ನಬಹುದು ಯಾಕೆಂದರೆ ಇಲ್ಲಿನ ಸೊಬಗು ನೋಡಲುತುಂಬಾ ಆಕರ್ಷಕವಾಗಿರುತ್ತದೆ ಮತ್ತು ಎತ್ತರದಿಂದ ಹರಿಯುವ ನೀರನ್ನು ನೋಡಲು ಜನರು ಸಾಕಷ್ಟು ದೂರದಿಂದ ಬರುತ್ತಾರೆ. ಈ ಸೊಬಗನ್ನು ಧಾರೆಯೆರೆಯುತ್ತಿದ್ದ ಭರಚುಕ್ಕಿ ಈಗ ಮತ್ತಷ್ಟು ರೋಮಾಂಚಕ ಅನುಭವ ನೀಡಲು ಸಜ್ಜಾಗುತ್ತಿದೆ. ಗಡಿಜಿಲ್ಲೆ ಚಾಮರಾಜನಗರದ ಕೊಳ್ಳೇಗಾಲ ತಾಲೂಕಿನಲ್ಲಿರುವ ಶಿವನಸಮುದ್ರ ಬಳಿಯ ಭರಚುಕ್ಕಿ ಜಲಪಾತವಿಶ್ವದ ಗಮನ ಸೆಳೆಯಲು ಅಣಿಯಾಗುತ್ತಿದೆ.ಶೀಘ್ರದಲ್ಲೇ ಇಲ್ಲಿ ಪ್ರವಾಸಿ ಆಕರ್ಷಣೆಯೊಂದು ಸೇರ್ಪಡೆಗೊಳ್ಳಲಿದ್ದು, ರಾಜ್ಯ ಅರಣ್ಯ ಇಲಾಖೆ ಮತ್ತು ಪ್ರವಾಸೋದ್ಯಮ ಇಲಾಖೆ ಜತೆಗೂಡಿ ಭರಚುಕ್ಕಿ ಬಯೋಡೈವರ್ಸಿಟಿ ಪಾರ್ಕ್‌…