ಸರ್ಕಾರದ ಯೋಜನೆಗಳು

ಸರ್ಕಾರದಿಂದ ಪ್ರತಿ ಕುಟುಂಬದ ಸದಸ್ಯರಿಗೆ 6 ಕೆಜಿ ಅಕ್ಕಿ

59

ಬೆಂಗಳೂರು: ರಾಜ್ಯ ಸರ್ಕಾರದಿಂದ ಪ್ರತಿ ಕುಟುಂಬದ ಸದಸ್ಯರಿಗೆ ಐದು ಕೆಜಿ ಅಕ್ಕಿಯನ್ನು ವಿತರಿಸಲಾಗುತ್ತಿತ್ತು. ಇದೀಗ ಈ ತಿಂಗಳಿನಿಂದಲೇ ಜಾರಿಗೆ ಬರುವಂತೆ ಐದು ಕೆ.ಜಿ ಅಕ್ಕಿಯ ಜೊತೆಗೆ ಹೆಚ್ಚುವರಿಯಾಗಿ 1 ಕೆಜಿ ಅಕ್ಕಿಯನ್ನು ವಿತರಿಸಲಿದೆ. 5+1= 6 KG

ಈ ಸಂಬಂಧ ಆಹಾರ, ನಾಗರೀಕ ಸರಬರಾಜು, ಗ್ರಾಹಕರ ವ್ಯವಹಾರಗಳ ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಆ ಆದೇಶದಲ್ಲಿ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯನ್ನು ಡಿಸೆಂಬರ್ 2022ಕ್ಕೆ ಅಂತ್ಯಗೊಂಡ ಹಿನ್ನಲೆಯಲ್ಲಿ, ರಾಜ್ಯದಲ್ಲಿರುವ ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗಳಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ವಯ ಸಾರ್ವಜನಿಕ ವಿತರಣಾ ಪದ್ಧತಿಯಡಿ ವಿತರಿಸಲಾಗುತ್ತಿರುವ ಐದು ಕೆಜಿ ಆಹಾರ ಧಾನ್ಯದೊಂದಿಗೆ ಪ್ರತಿ ತಿಂಗಳು 1 ಕೆಜಿ ಅಕ್ಕಿಯನ್ನು ಹೆಚ್ಚುವರಿಯಾಗಿ ವಿತರಿಸಲು ಉದ್ದೇಶಿಸಿದೆ ಎಂದಿದ್ದಾರೆ.

ಈ ಹಿನ್ನಲೆಯಲ್ಲಿ ಜನವರಿ 2023ರಿಂದ ಜಾರಿಗೆ ಬರುವಂತೆ ರಾಜ್ಯದಲ್ಲಿರುವ ಆದ್ಯತಾ ಪಡಿತರ ಚೀಟಿಗಳ ( Ration Card ) ಪ್ರತಿ ಫಲಾನುಭವಿಗಳಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ವಯ ಸಾರ್ವಜನಿಕ ವಿತರಣಾ ಪದ್ಧತಿಯಡಿ ವಿತರಿಸಲಾಗುತ್ತಿರುವ ಐದು ಕೆಜಿ ಆಹಾರ ಧಾನ್ಯದೊಂದಿಗೆ ಹೆಚ್ಚುವರಿಯಾಗಿ ಪ್ರತಿ ತಿಂಗಳು 1 ಕೆಜಿ ಅಕ್ಕಿಯನ್ನು ಹೆಚ್ಚುವರಿಯಾಗಿ ವಿತರಿಸಲು ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

ಆಹಾರ ಇಲಾಖೆಯ ಈ ಆದೇಶದ ಹಿನ್ನಲೆಯಲ್ಲಿ, ಈ ತಿಂಗಳಿನಿಂದಲೇ ಪಡಿತರ ಚೀಟಿದಾರರ ಪ್ರತಿ ವ್ಯಕ್ತಿಗೆ ಐದು ಕೆಜಿ ಅಕ್ಕಿಯ ಜೊತೆಗೆ ಹೆಚ್ಚುವರಿಯಾಗಿ 1 ಕೆಜಿ ಅಕ್ಕಿಯನ್ನು ವಿತರಣೆ ಆರಂಭವಾಗಲಿದೆ.

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ