ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ
20 ವರ್ಷ ಸಜೆ-30 ಸಾವಿರ ದಂಡ
ಕೋಲಾರ:- ಬಂಗಾರಪೇಟೆ ತಾಲೂಕಿನ ಬೂದಿಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯ, ಅತ್ತಿಗಿರಿಕೊಪ್ಪ ಗ್ರಾಮದ ನಾಗೇಂದ್ರ @ ಚಿನ್ನಿ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿಕೊಂಡು ಹೋಗಿ, ಅತ್ಯಾಚಾರ ಎಸಗಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ರವರು ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ.
ಸದರಿ ಆರೋಪಿಯ ವಿರುದ್ದ ಬೂದಿಕೋಟೆ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರು ಕಲಂ 6 ಪೋಕ್ಸೋ ಕಾಯ್ದೆ ಹಾಗೂ ಕಲಂ 9 ಬಾಲ್ಯ ವಿವಾಹ ನಿಷೇಧ ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಿಕೊಂಡು ತನಿಖೆ ನೆಡೆಸಿ ಆರೋಪಿತನ ವಿರುದ್ದ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದು, ಸ್ಪೇಷಲ್ ಸಿ.(ಪೋಕ್ಸೋ) 98/2022 ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪವು ರುಜುವಾತಾದ ಹಿನ್ನೆಲೆಯಲ್ಲಿ ಆರೋಪಿ ನಾಗೇಂದ್ರ @ ಚಿನ್ನಿ ಎಂಬಾತನಿಗೆ ಕಲಂ 6 ಪೋಕ್ಸೋ ಕಾಯ್ದೆ ಅಡಿಯಲ್ಲಿ 20 ವರ್ಷ ಸಜೆ ಜೊತೆಗೆ ರೂ.30 ಸಾವಿರ ರೂ ದಂಡ ವಿಧಿಸಿ ದಂಡ ತೆರಲು ವಿಫಲರಾದಲ್ಲಿ 6 ತಿಂಗಳು ಹೆಚ್ಚುವರಿ ಸಜೆ ವಿಧಿಸಿದ್ದಾರೆ.
ನೊಂದ ಬಾಲಕಿಗೆ ರೂ. 4 ಲಕ್ಷ ರೂ ಪರಿಹಾರ ನೀಡುವಂತೆ ಆದೇಶಿಸಿದ್ದಾರೆ. ಸದರಿ ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಶ್ರೀಮತಿ ಡಿ.ಲಲಿತಕುಮಾರಿ ರವರು ವಾದ ಮಂಡಿಸಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಕಿರುತೆರೆಯ ಇತಿಹಾಸದಲ್ಲಿ, ಇತಿಹಾಸವನ್ನೇ ಸೃಷ್ಟಿಸಿದ್ದ, ಸುರ್ವಣ ವಾಹಿನಿಯ ಬಹುದೊಡ್ಡ ರಿಯಾಲಿಟಿ ಶೋ ‘ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು’ ಮತ್ತೆ ಬರ್ತಿದೆ.ಈ ಕಾರ್ಯಕ್ರಮ ಮೊದಲ ಬಾರಿಗೆ, 2008ರಲ್ಲಿ ಬಿಗ್ ಬಾಸ್ ಕಿಚ್ಚ ಸುದೀಪ್ ನೇತೃತ್ವದಲ್ಲಿ ಮೂಡಿ ಬಂದಿತ್ತು. ಸುರ್ವಣ ವಾಹಿನಿಯ ಬಹುನಿರೀಕ್ಷಿತ ರಿಯಾಲಿಟಿ ಶೋ
ಕೃಷ್ಣ ಲೀಲಾ ಖ್ಯಾತಿಯ ನಟಿ ಮಯೂರಿಯವರು ಇಂದು ತನ್ನ ಬಾಲ್ಯದ ಗೆಳೆಯನ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೃಷ್ಣ ಲೀಲಾ ಸಿನಿಮಾ ಮೂಲಕ ಖ್ಯಾತ ಹೊಂದಿದ್ದ ನಟಿ ಮಯೂರಿ ಅವರು ಇಂದು ಬಾಲ್ಯದ ಗೆಳೆಯನ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬಹುದಿನದ ಗೆಳೆಯ ಅರುಣ್ ಅವರ ಜೊತೆ ಬೆಂಗಳೂರಿನ ಜೆಪಿ ನಗರದ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಬಳಿ ಇಂದು ಮದುವೆಯಾಗಿದ್ದಾರೆ. ಅರುಣ್ ಮತ್ತು ಮಯೂರಿ ಸುಮಾರು 10 ವರ್ಷಗಳಿಂದ ಪ್ರೀತಿ ಮಾಡುತ್ತಿದ್ದು, ಇಂದು ಕುಟುಂಬ ಒಪ್ಪಿಗೆಯ ಮೇರೆಗೆ…
ಹಿರಿಯ ನಟ ರೆಬಲ್ ಸ್ಟಾರ್ ಅಂಬರೀಶ್ ನಿಧನರಾದ ಸಂದರ್ಭದಲ್ಲಿ ಅನಾರೋಗ್ಯದ ನೆಪವೊಡ್ಡಿ ಅಂತಿಮ ದರ್ಶನಕ್ಕೆ ಆಗಮಿಸದೇ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಮಾಜಿ ಸಂಸದೆ ರಮ್ಯಾ ವಿರುದ್ಧ ಮತ್ತೆ ಮಂಡ್ಯ ಜಿಲ್ಲೆಯಲ್ಲಿ ಆಕ್ರೋಶ ವ್ಯಕ್ತವಾಗಿದೆ. ರಾಜಕೀಯ ಮಾಡಲು ಮಂಡ್ಯ ಬೇಕು. ಆದರೆ, ಮಂಡ್ಯ ಜನತೆಯ ಕಷ್ಟ-ಸುಖದಲ್ಲಿ ರಮ್ಯಾ ಭಾಗಿಯಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತವಾಗಿದೆ. ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮಂಡ್ಯ ಜಿಲ್ಲೆಯ ಯೋಧ ಹೆಚ್. ಗುರು ಹುತಾತ್ಮರಾಗಿದ್ದಾರೆ. ಮಂಡ್ಯದ ಮಾಜಿ ಸಂಸದರಾಗಿರುವ ರಮ್ಯಾ ಯೋಧನ ಕುಟುಂಬದವರಿಗೆ ಸಾಂತ್ವನ ಹೇಳಿಲ್ಲ…
ಭಿಕ್ಷುಕನ ಮನೆಯಲ್ಲಿ 1.70 ಕೋಟಿಗಳ ಹಣ ಸಿಕ್ಕಿದೆ. ಮುಂಬೈ ಪಟ್ಟಣದಲ್ಲಿನ ಕೊಳಗೇರಿಗೆ ಸೇರಿದ ಭಿಕ್ಷುಕನಿಗೆ ತನ್ನವರು ಎಂಬುವರು ಯಾರೂ ಇಲ್ಲ. ಪ್ರತಿದಿನ ಭಿಕ್ಷೆ ಬೇಡುವುದು, ದೊರೆತ್ತದ್ದನ್ನು ತಿನ್ನುವುದು, ಬಂದದ್ದನ್ನು ಎತ್ತಿಡುವುದು…..ಇದೇ ಆತನ ದಿನನಿತ್ಯದ ಕೆಲಸವಾಗಿತ್ತು
ಮುಂಬೈ ಆ ಮಲಬಾರ್ ಹಿಲ್ ನಲ್ಲಿ ವಾಸವಿರುವ ನಿಷಿಯ ಹರಿಶ್ಚಂತ್ರ ತ್ರಿಪಾಠಿ ತನ್ನ ಮನೆ ಮತ್ತು ಹತ್ತಾರು ಕೋಟಿ ಬೆಲೆಬಾಳುವ ತನ್ನ ಎಲ್ಲಾ ಆಸ್ತಿಯನ್ನ ತನ್ನ ನೆಚ್ಚಿನ ನಟನ ಹೆಸರಿಗೆ ವಿಲ್ ಬರೆದು ಸಾವನ್ನಪ್ಪಿದ್ದಾಳೆ. ಇನ್ನು ನಿಷಿಯ ಸಾವನ್ನಪ್ಪಿದ ಕೆಲವು ಸಮಯದ ನಂತರ ಆಸ್ತಿಯನ್ನ ವರ್ಗಾವಣೆ ಮಾಡಲು ನೋಡಿದ ನಿಷಿಯ ಕುಟುಂಬದವರಿಗೆ ಇದನ್ನ ನೋಡಿ ದೊಡ್ಡ ಶಾಕ್ ಆಗಿತ್ತು. ಇನ್ನು ಈ ಅಭಿಮಾನಿ ತಾನು ಸಾಯುವ ಮುನ್ನ ತನ್ನ ಮನೆ, ಬ್ಯಾಂಕ್ ಅಕೌಂಟ್ ಮತ್ತು ಬರೋದದಲ್ಲಿ ಇರುವ…
ಅರ್ಪಣಾ ಈಗ ಬೆಂಗಳೂರಿನ ನಿವಾಸಿಯಾಗಿದ್ದು, ನಿವೃತ್ತ ಎಸ್ಬಿಐ ಉದ್ಯೋಗಿ ಸಾವಿತ್ರಿ ಕೃಷ್ಣನ್ ಹಾಗೂ ಕಮಾಂಡರ್, ಮಾಜಿ ಭಾರತೀಯ ನೌಕಾಪಡೆ ಅಧಿಕಾರಿ ಕೆಆರ್ ಕೃಷ್ಣನ್ ಮಗಳು. ಶಾಲಾ ಶಿಕ್ಷಣವನ್ನು ಇಲ್ಲಿಯೇ ಪೂರ್ಣಗೊಳಿಸಿರುವ ಅರ್ಪಣಾ ಹೆಚ್ಚಿನ ಶಿಕ್ಷಣಕ್ಕಾಗಿ ಕೆನೆಡಾಗೆ ಹೋಗಿದ್ದರು. ಅರ್ಪಣಾ ಅಮೆರಿಕದ ಡಾರ್ಟ್ಮೌತ್ ಕಾಲೇಜಿನಲ್ಲಿ ಅರ್ಥಶಾಸ್ತ್ರವನ್ನು ಅಧ್ಯಯನ ಮಾಡಿದ್ದಾರೆ. ಮೊದಲು ಮೆಕಿನ್ಸೆ ಹಾಗೂ ಸಿಕ್ವೊಯ ಕ್ಯಾಪಿಟಲ್ನಲ್ಲಿ ಕೆಲಸ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ರೋಹನ್ ಹಾರ್ವರ್ಡ್ ವಿಶ್ವವಿದ್ಯಾಲಯದಿಂದ ಕಂಪ್ಯೂಟರ್ ಸೈನ್ಸ್ ಪಿಎಚ್ಡಿ ಪದವಿಯನ್ನು ಪಡೆದಿದ್ದಾರೆ. ರೋಹನ್ ಮೂರ್ತಿ ಕ್ಲಾಸಿಕಲ್ ಲೈಬ್ರರಿ…