ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತೀವ್ರ ಕುತೂಹಲ ಕೆರಳಿಸಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮತದಾನಕ್ಕೆ ಇನ್ನೆರಡು ದಿನ ಬಾಕಿ ಇರುವಂತೆಯೇ ಜೆಡಿಎಸ್ ಮುಖಂಡ ಸಿಎಸ್ ಪುಟ್ಟರಾಜು ಹೊಸ ಬಾಂಬ್ ಸಿಡಿಸಿದ್ದು, ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಬಿಜೆಪಿ ಪಕ್ಷಕ್ಕೆ ಸೇರಲು ತಯಾರಿ ನಡೆಸಿದ್ದಾರೆ. ಈ ಕುರಿತ ವಿಡಿಯೋ ಸಿಡಿ ತಮ್ಮ ಬಳಿ ಇದ್ದು ಶೀಘ್ರ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಪುಟ್ಟರಾಜು ಅವರು, ‘ಖಾಸಗಿ ಹೋಟೆಲ್ವೊಂದರಲ್ಲಿ ಸುಮಲತಾ ಈಗಾಗಲೇ ಬಿಜೆಪಿ ಜತೆಗೆ ಚರ್ಚೆ ನಡೆಸಿದ್ದಾರೆ. ಅಲ್ಲದೇ ಬಿಜೆಪಿ ಸೇರಲು ಕೇಂದ್ರ ಸಚಿವ ಸ್ಥಾನವೂ ಬೇಡಿಕೆ ಇಟ್ಟಿದ್ದಾರೆ. ಈ ವಿಡಿಯೋ ಸಿಡಿ ಕೆಲವೇ ದಿನಗಳಲ್ಲಿ ಬಿಡುಗಡೆ ಮಾಡಲಿದ್ದೇನೆ. ಸುಮಲತಾ ಅವರು ಬಿಜೆಪಿ ಸೇರಲಿದ್ದಾರೆ. ಈ ಬಗ್ಗೆ ಖಾಸಗಿ ಹೋಟೆಲ್ ನಲ್ಲಿ ಮಾತುಕತೆ ನಡೆಸಿರುವ ವಿಡಿಯೋ ನನ್ನ ಬಳಿಯಿದೆ. ಶೀಘ್ರದಲ್ಲಿಯೇ ಅದನ್ನು ಬಿಡುಗಡೆ ಮಾಡಲಿದ್ದೇನೆ ಎಂದು ಹೇಳಿದ್ದಾರೆ.
ಇನ್ನು ಈ ಹಿಂದೆ ಕರ್ನಾಟಕದಲ್ಲಿ ಬಿಜೆಪಿ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಸುಮಲತಾರನ್ನು ಬೆಂಬಲಿಸಿ ಎಂದು ಹೇಳಿದ್ದರು. ಈ ಹೇಳಿಕೆ ಬಳಿಕವೂ ಸುಮಲತಾ ಅವರು ಬಿಜೆಪಿ ಸೇರುವ ಕುರಿತು ಊಹಾಪೋಹಗಳು ಹರಿದಾಡಿದ್ದವು.
ಆದರೆ ಇದ್ಯಾವುದಕ್ಕೂ ಕ್ಯಾರೇ ಎನ್ನದ ಬಂಡಾಯ ಕಾಂಗ್ರೆಸ್ ನಾಯಕರು ಸುಮಲತಾ ಪರ ಕೆಲಸ ಮಾಡುತ್ತಲೇ ಇದ್ದಾರೆ. ಇದರಿಂದ ಬೇಸತ್ತ ದಿನೇಶ್ ಗುಂಡೂರಾವ್ ಅವರೇ ಖುದ್ದು, ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಐವರನ್ನು ಕಾಂಗ್ರೆಸ್ನಿಂದ ಉಚ್ಚಾಟಿಸಿದ್ದಾರೆ ಎನ್ನಲಾಗಿದೆ. ಈ ಮಧ್ಯೆ ಸುಮಲತಾ ಅಂಬರೀಶ್ ಗೆದ್ದ ಮೇಲೆ ಬಿಜೆಪಿ ಸೇರುತ್ತಾರೆ ಎಂಬ ವದಂತಿಗೆ ಸ್ವತಃ ಅವರೇ ಸ್ಪಷ್ಟನೆ ಕೊಟ್ಟಿದ್ದಾರೆ.
ಈ ಹಿಂದೆಯೇ ಮಂಡ್ಯದ ಶಂಕರನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ್ದ ಅವರು, ನಾನು ಈ ಮೊದಲೇ ಸ್ಪಷ್ಟಪಡಿಸಿದ್ದೀನಿ. ಯಾವುದೇ ಪಕ್ಷಕ್ಕೆ ಹೋಗಲ್ಲ. ವಿರೋಧಿಗಳು ದಿನಾ ಒಂದೊಂದು ಸುದ್ದಿ ಹಬ್ಬಿಸುತ್ತಿದ್ದಾರೆ. ಒಂದು ದಿನ ಬಿಜೆಪಿ ಅಭ್ಯರ್ಥಿ, ನಿನ್ನೆ ಕಾಂಗ್ರೆಸ್ ಅಭ್ಯರ್ಥಿ ಅಂದರು. ಬೇಕಾದರೆ ಜೆಡಿಎಸ್ ಅಭ್ಯರ್ಥಿ ಎಂದೂ ಹೇಳುತ್ತಾರೆ. ನಾನು ಪಕ್ಷೇತರ ಅಭ್ಯರ್ಥಿಯಾಗಿದ್ದೇನೆ. ನನಗೆ ಯಾರು ಸಪೋರ್ಟ್ ಮಾಡುತ್ತಾರೋ ಅವರು ಯಾವುದೇ ಷರತ್ತು ಹಾಕದೆ ಬೆಂಬಲ ನೀಡುತ್ತಿದ್ದಾರೆ. ಗೆದ್ದರೆ ನನ್ನ ಕ್ಷೇತ್ರದ ಜನ ಯಾವ ಪಕ್ಷಕ್ಕೆ ಬೆಂಬಲ ನೀಡಿ ಎಂದು ಹೇಳುತ್ತಾರೆಯೋ ಅವರಿಗೆ ನಾನು ಬೆಂಬಲ ನೀಡುತ್ತೇನೆ ಎಂದು ಹೇಳಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಉಂಡೆಗಳನ್ನು ತಿನ್ನುವುದರಿಂದ ಕೆಮ್ಮು ಕಫ ಶೀತದಂತಹ ಹಲವಾರು ಕಾಯಿಲೆಗಳು ದೂರವಾಗುತ್ತವೆ. ಸಣ್ಣ ಪುಟ್ಟ ಕಾಯಿಲೆಗಳಿಗೆ ಆಸ್ಪತ್ರೆಗೆ ಹೋಗುವ ಬದಲು ಈ ಉಂಡೆ ಮೂಲಕ ನಿವಾರಿಸಬಹುದು ಸಿಹಿಯಾದ ಉಂಡೆ ಮಾಡಿಕೊಡುವ ಮೂಲಕ ನೀವು ನಿಮ್ಮ ಮಕ್ಕಳಲ್ಲಿ ಇರುವ ಅನಾರೋಗ್ಯವನ್ನು ನಿಯಂತ್ರಿಸಬಹುದು . ಒಣ ಪಧಾರ್ಥಗಳ ಅಥವಾ ಒಣ ಹಣ್ಣುಗಳ ಲಡ್ಡು ಇದನ್ನು ಮಾಡಲು ಈಗ ಎಂಟು ಒಣ ಖರ್ಜುರ ಅಥವಾ ಉತ್ತತ್ತಿ ನಂತರ 10 ರಿಂದ 12 ಒಣದ್ರಾಕ್ಷಿ ಇದರ ಜೊತೆಗೆ ಎಂಟು ಬಾದಾಮಿ ತೆಗೆದುಕೊಂಡಿದ್ದೇವೆ ಮೊದಲು…
ಕೋಲಾರ: ನಂದಮೂರಿ ಬಾಲಕೃಷ್ಣ ಅಭಿನಯದ ವೀರಸಿಂಹಾರೆಡ್ಡಿ ಚಲನಚಿತ್ರದ ಪ್ರಚಾರಕ್ಕಾಗಿ ಭಾನುವಾರ ಕೋಲಾರ ನಗರಕ್ಕೆ ಆಗಮಿಸಿದ ದುನಿಯಾ ವಿಜಿ ಮತ್ತು ಚಿತ್ರದ ನಿರ್ದೇಶದ ಗೋಪಿಚಂದ್ ಮಲಿನೇನಿ ಅವರಿಗೆ ಎನ್ಬಿಕೆ ಹೆಲ್ಪಿಂಗ್ ಹ್ಯಾಂಡ್ಸ್ ಮತ್ತು ಅಭಿಮಾನಿಗಳು ಭರ್ಜರಿ ಸ್ವಾಗತ ನೀಡಿದರು. ವೀರಸಿಂಹಾರೆಡ್ಡಿ ಚಿತ್ರದ ನಿರ್ದೇಶಕ ಗೋಪಿಚಂದ್ ಮಲಿನೇನಿ ಮತ್ತು ಜಗನ್ ಶನಿವಾರ ರಾತ್ರಿಯೇ ಕೋಲಾರಕ್ಕೆ ಆಗಮಿಸಿ ನಗರದ ಹೊರವಲಯದ ನಾಗಾರ್ಜುನ ಹೋಟೆಲ್ನಲ್ಲಿ ವಾಸ್ತವ್ಯಹೂಡಿದ್ದರು. ಭಾನುವಾರ ಬೆಳಿಗ್ಗೆ ಬೆಂಗಳೂರಿನಿಂದ ಆಗಮಿಸಿದ್ದ ದುನಿಯಾ ವಿಜಿ ಅವರನ್ನು ಸೇರಿಕೊಂಡರು. ಉಪಹಾರದ ನಂತರ ಇವರನ್ನು ಕೋಲಾರದ…
2016 ರಲ್ಲಿ ಚಿತ್ರದುರ್ಗದ ಈ ಗಣಪತಿ ಅತಿ ಹೆಚ್ಚು ಜನ ಸೇರಿದರಿಂದ ಕರ್ನಾಟಕದ ಹೆಚ್ಚು ಜನ ಆಕರ್ಷಿಸಿದ ಗಣಪ ಎಂದು ತಿಳಿದು ಬಂದಿದೆ.
ಎಳ್ಳು ಬೆಲ್ಲ ತಿಂದು, ಒಳ್ಳೆಯ ಮಾತನಾಡಿ’ ಎಂಬ ಗಾದೆ ಇದೆ. ಅದರಂತೆಯೇ ಸಂಕ್ರಾಂತಿ ಹಬ್ಬದಂದು ಎಲ್ಲರೂ ಎಳ್ಳು ಬೆಲ್ಲ ತಿಂದು ಹೊಸ ವರ್ಷದ ಮೊದಲ ಹಬ್ಬವನ್ನು ಸಿಹಿಯಾಗಿ ಬರಮಾಡಿಕೊಳ್ಳುತ್ತಾರೆ. ಆದ್ದರಿಂದ ಹಬ್ಬಕ್ಕಾಗಿ ಅಂಗಡಿಯಿಂದ ತಂದು ಮಾಡುವ ಬದಲು ಮನೆಯಲ್ಲಿಯೇ ಸುಲಭವಾಗಿ ತಯಾರು ಮಾಡಿ. ನಿಮಗಾಗಿ ಎಳ್ಳು-ಬೆಲ್ಲ ತಯಾರು ಮಾಡುವ ವಿಧಾನ ಇಲ್ಲಿದೆ. ಮಾಡುವ ವಿಧಾನಕಡ್ಲೆಕಾಯಿ ಬೀಜವನ್ನು ಚೆನ್ನಾಗಿ ಹುರಿದು ಸಿಪ್ಪೆ ತೆಗೆದು ಬಿಡಿ ಬಿಡಿ ಮಾಡಿಕೊಳ್ಳಿ.ಎಳ್ಳನ್ನು ಸ್ವಲ್ಪ ಹುರಿದುಕೊಳ್ಳಿ.ಅಚ್ಚು ಬೆಲ್ಲವನ್ನು ಚಾಕುವಿನಿಂದ ಸಣ್ಣ ಸಣ್ಣದಾಗಿ ಕಟ್ ಮಾಡಿ.ಕೊಬ್ಬರಿ ಕಪ್ಪು ಭಾಗವನ್ನು…
ತುಂಬಾ ಸರ್ತಿ ಜೀವನದಲ್ಲಿ ನಮ್ಮನ್ನ ನಾವೇ ಕಡೆಗಾಣಿಸ್ಕೊತೀವಿ. ನಮ್ಮ ಮನೆಯೋರು ಕೂಡ ನಮ್ಮನ್ನ ಎಷ್ಟೋ ಸರ್ತಿ ನೀನು ಸೋಮಾರಿ, ಒಂದು ಕೆಲಸ ಕೂಡ ಗಮನ ಇಟ್ಟು ಮಾಡಲ್ಲಾ ಅಂತೆಲ್ಲಾ ಬೈತಿರ್ತರೆ.
ಹುಟ್ಟುಹಬ್ಬ ಆಚರಿಸುವಾಗ ಕೇಕ್ ಮೇಲೆ ಕ್ಯಾಂಡಲ್ ಗಳನ್ನು ಉರಿಸಿ ಅದನ್ನು ಆರಿಸೋದು ಕಾಮನ್. ಎಲ್ಲರೂ ಖುಷಿ ಖುಷಿಯಾಗಿ ಮೋಂಬತ್ತಿಗಳನ್ನು ಆರಿಸಿ ನಂತರ ಆ ಕೇಕ್ ಅನ್ನು ಕತ್ತರಿಸ್ತಾರೆ. ಆದ್ರೆ ಹೀಗೆ ಮಾಡೋದ್ರಿಂದ ಕೇಕ್ ನಲ್ಲಿ ಬ್ಯಾಕ್ಟೀರಿಯಾಗಳು ತುಂಬಿಕೊಳ್ಳುತ್ತವೆ. ದಕ್ಷಿಣ ಕೆರೊಲಿನಾದ ಕ್ಲೆಮ್ಸನ್ ಯೂನಿವರ್ಸಿಟಿ ವಿಜ್ಞಾನಿಗಳು ನಡೆಸಿದ ಸಂಶೋಧನೆಯಲ್ಲಿ ಈ ವಿಷಯ ಬಹಿರಂಗವಾಗಿದೆ. ಮೋಂಬತ್ತಿ ಆರಿಸುವ ವೇಳೆ ಉಗುಳು ಕೂಡ ಕೇಕ್ ಮೇಲೆ ಬೀಳುತ್ತದೆ. ಇದರಿಂದಾಗಿ ಕೇಕ್ ನಲ್ಲಿ ಬ್ಯಾಕ್ಟೀರಿಯಾಗಳ ಸಂಖ್ಯೆ ಶೇ. 1400 ರಷ್ಟು ಜಾಸ್ತಿಯಾಗುತ್ತದೆ. ಕ್ಯಾಂಡಲ್…