ಸುದ್ದಿ

ಅಂಬರೀಷ್ ಹುಟ್ಟುಹಬ್ಬಕ್ಕೆ ಅಭಿಮಾನಿಯಿಂದ 500 ಕೆ ಜಿ ಧಾರವಾಡ ಪೇಡಾ!

150

ಮಂಡ್ಯದ ಗಂಡು ರೆಬೆಲ್ ಸ್ಟಾರ್ ಅಂಬರೀಷ್ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ, ಅಂಬರೀಷ್ ಅಭಿಮಾನಿಯೊಬ್ಬರು ಧಾರವಾಡದಿಂದ ಬರೋಬ್ಬರಿ 500 ಕೆಜಿ ಪೇಡಾವನ್ನು ಮಂಡ್ಯಕ್ಕೆ ಕಳುಹಿಸುತ್ತಿದ್ದಾರೆ.ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯ ವೇಳೆ ರಾಜ್ಯದಲ್ಲಿ ಅತಿ ಹೆಚ್ಚು ಗಮನ ಸೆಳೆದಿದ್ದು ಮಂಡ್ಯ ಲೋಕಸಭಾ ಕ್ಷೇತ್ರ. ಅಲ್ಲಿ ನಡೆದ ಜಿದ್ದಾಜಿದ್ದಿಯಲ್ಲಿ ಸುಮಲತಾ ಗೆಲುವು ಸಾಧಿಸಿದ್ದರು.

ಮಂಡ್ಯದಲ್ಲಿ ಗೆದ್ದ ಬಳಿಕ ಇದೇ ಮೊದಲ ಬಾರಿಗೆ ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಸ್ವಾಭಿಮಾನ ಸಮಾವೇಶವನ್ನು ಹಮ್ಮಿಕೊಂಡಿದ್ದು, ಈ ಸಮಾವೇಶಕ್ಕೆ ಧಾರವಾಡದಿಂದ ಮಂಡ್ಯ ಜನತೆಗೆ ಪೇಡಾ ಬಂದಿದೆ.

ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಗೆಲುವು ಹಿನ್ನೆಲೆಯಲ್ಲಿ ಆಯೋಜನೆಗೊಂಡಿರುವ ಸ್ವಾಭಿಮಾನ ಸಮಾವೇಶ ಹಾಗೂ ಅಂಬರೀಶ್ ಜನ್ಮದಿನದ ಅಂಗವಾಗಿ ಐದು ಕ್ವಿಂಟಾಲ್ ಧಾರವಾಡ ಪೇಡಾವನ್ನು ಉದ್ಯಮಿ ನಾರಾಯಣ ಕಲಾಲ್ ರವಾನಿಸಿದ್ದಾರೆ. ಇದಕ್ಕಾಗಿ ಅವರು 2.10 ಲಕ್ಷ ರು ಹಣ ವ್ಯಯಿಸಿದ್ದಾರೆ.ಬಾಬುಸಿಂಗ್ ಠಾಕೂರ್ ಪೇಡಾ ಫ್ಯಾಕ್ಟರಿಯಲ್ಲಿ ತಯಾರಾಗಿರುವ ಪೇಡಾವನ್ನು ವಿಶೇಷ ಬಾಕ್ಸ್ ಗಳಲ್ಲಿ ಪ್ಯಾಕ್ ಮಾಡಿದ್ದು, ಈಗಾಗಲೇ ಮಂಡ್ಯ ತಲುಪಿವೆ.

ಈ ಹಿಂದೆ ಅಂಬರೀಶ್ ಅವರು ಯಶ್, ರಾಧಿಕಾ ದಂಪತಿಯ ಮಗುವಿಗೆ ಕಲಘಟಗಿ ತೊಟ್ಟಿಲು ನೀಡುವ ಸಂಬಂಧ ನಾರಾಯಣ ಕಲಾಲ್ ಅವರಿಗೆ ಫೋನ್ ಮಾಡಿದ್ದರು. ತನ್ನ ಬೇಡಿಕೆಗೆ ಅನುಗುಣವಾಗಿ ತೊಟ್ಟಿಲು ತಯಾರಿಸಿ ಕೊಡುವಂತೆ ಅಂಬಿ ಕಲಾಲ್ ಅವರಲ್ಲಿ ಕೇಳಿಕೊಂಡಿದ್ದರು. ಬಳಿಕ ನಾರಾಯಣ್ ಕಲಾಲ್ ಅವರು ಕಲಘಟಗಿಯ ಮೂಲದ ಶ್ರೀಧರ್ ಸಾವುಕಾರ್ ಅವರಲ್ಲಿ ತೊಟ್ಟಿಲಿಗೆ ಆರ್ಡರ್ ಮಾಡಿಸಿಕೊಟ್ಟಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರೆಸಿಪಿ

    ಮನೆಯಲ್ಲೇ ಕಾಲ್ ಸೂಪ್ ಮಾಡುವ ಸಿಂಪಲ್ ವಿಧಾನ…

    ಪ್ರತಿ ಸಂಡೇ, ಚಿಕನ್, ಮಟನ್, ಫಿಶ್ ತಿನ್ನುತ್ತೀರಾ. ಹೀಗಾಗಿ ಈ ವಾರ ಆರೋಗ್ಯಕ್ಕೆ ಉತ್ತಮವಾದ ಕಾಲ್ ಸೂಪ್ ಮಾಡಿ ಸವಿಯಿರಿ. ಮಕ್ಕಳಿಂದ ವೃದ್ಧರವೆಗೂ ಕಾಲ್ ಸೂಪನ್ನು ಕುಡಿಯುತ್ತಾರೆ. ಆದರೆ ಮಕ್ಕಳು ಕುಡಿಯಲು ಇಷ್ಟಪಡುವುದಿಲ್ಲ. ಅದಕ್ಕೆ ಮಸಲಾ ಹಾಕಿ ರುಚಿಕರವಾಗಿ ಮಾಡಿಕೊಟ್ಟರೆ ಕುಡಿಯುತ್ತಾರೆ. ಆದ್ದರಿಂದ ಎರಡು ವಿಧಾನದಲ್ಲಿ ಕಾಲ್ ಸೂಪ್ ಮಾಡುವ ವಿಧಾನ ನಿಮಗಾಗಿ… ಬೇಕಾಗುವ ಸಾಮಾಗ್ರಿಗಳು 1. ಮೇಕೆ ಕಾಲು – 2, 2. ಈರುಳ್ಳಿ – ಮೀಡಿಯಂ, 3. ಬೆಳ್ಳುಳ್ಳಿ – 2-3 ಎಸಳು4. ಶುಂಠಿ –…

  • Cinema

    ರೂಮಿಗೆ ಬಾ ಎಂದ ನಿರ್ದೇಶಕ : ನಟಿ ಮಾಡಿದ್ದೇನು ಗೊತ್ತ..?

    ಇತ್ತೀಚೆಗೆ ವಿದ್ಯಾ ಬಾಲನ್ ಅವರು ಸಂದರ್ಶನವೊಂದರಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರು ತಮ್ಮ ಕೆರಿಯರ್ ಬಗ್ಗೆ ಹಾಗೂ ತಮಗಾದ ಕಾಸ್ಟಿಂಗ್ ಕೌಚ್ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದಾರೆ. 2005ರಲ್ಲಿ ವಿದ್ಯಾ ಬಾಲಾನ್ ‘ಪರಿಣೀತಾ’ ಚಿತ್ರದ ಮೂಲಕ ಬಾಲಿವುಡ್‍ಗೆ ಎಂಟ್ರಿ ಕೊಟ್ಟಿದ್ದರು. ಇದಾದ ಬಳಿಕ ಅವರು ಬಾಲಿವುಡ್‍ನಲ್ಲಿ ಹಲವಾರು ಹಿಟ್ ಚಿತ್ರಗಳನ್ನು ನೀಡಿದ್ದರು. ಸಂದರ್ಶನದಲ್ಲಿ ವಿದ್ಯಾ ತಾವು ನಟಿಯಾಗಲು ಎಷ್ಟು ಕಷ್ಟಪಟ್ಟಿದ್ದೇನೆ ಎಂಬ ವಿಷಯವನ್ನು ಈಗ ಹಂಚಿಕೊಂಡಿದ್ದಾರೆ. ಅಲ್ಲದೆ ಒಂದೇ ಸಮಯದಲ್ಲಿ ಒಂದಲ್ಲ, ಎರಡಲ್ಲ ಒಟ್ಟು 12 ಚಿತ್ರಗಳನ್ನು ಕಳೆದುಕೊಂಡಿದ್ದರ…

  • ಸುದ್ದಿ

    ಬಹಿರಂಗವಾಹಿತು ಈ ಸಲದ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡ್ತಿರೋ ಸೆಲೆಬ್ರೆಟಿ ಸ್ಪರ್ದಿಗಳ ಪಟ್ಟಿ…!

    ಈ ಪಟ್ಟಿಯಲ್ಲಿ ಇರುವ ಎಲ್ಲ ಕಲಾವಿದರು ಮನೆ ಸೇರುತ್ತಾರಾ ಇಲ್ಲವೋ ಎನ್ನುವುದು ಅಧಿಕೃತವಾಗಿ ತಿಳಿದು ಬಂದಿಲ್ಲ. ಈ ಕಲಾವಿದರ ಬಗ್ಗೆ ಚರ್ಚೆ ನಡೆಯುತ್ತಿದೆ ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಬಿಗ್ ಬಾಸ್ ಕನ್ನಡ 7ನೇ ಆವೃತ್ತಿ ಭಾನುವಾರ ಅಧಿಕೃತವಾಗಿ ಆರಂಭವಾಗುತ್ತಿದೆ. ಈ ಸಲ ಒಟ್ಟು 17 ಜನ ಸ್ಪರ್ಧಿಗಳು ಬಿಗ್ ಮನೆಗೆ ಪ್ರವೇಶ ಮಾಡಲಿದ್ದಾರೆ ಎಂದು ಸ್ವತಃ ವಾಹಿನಿ ಅಧಿಕೃತಪಡಿಸಿದೆ. ಯಾರೆಲ್ಲ ಹೋಗಬಹುದು, ಆದರೂ, ದೊಡ್ಮನೆಯೊಳಗೆ ಹೋಗುವ ಹದಿನೇಳು ಜನರ ಸಂಭಾವ್ಯ ಪಟ್ಟಿ ಮೂಲಗಳಿಂದ ಬಹಿರಂಗವಾಗಿದೆ….

  • ಉಪಯುಕ್ತ ಮಾಹಿತಿ

    ರೇಲ್ವೆ ಹಳಿಗಳ ಜೆಲ್ಲಿಕಲ್ಲು ಹಾಕುವುದು ಏಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ರೇಲ್ವೆ ಪ್ರಯಾಣ ಎಂದರೆ ಎಂತಹವರಿಗೂ ಒಂದು ರೀತಿ ರೋಮಾಂಚನ.ಅದರಲ್ಲೂ ಬೆಟ್ಟ ಗುಡ್ಡಗಳ ನಡುವೆ,ದಟ್ಟವಾದ ಕಾಡುಗಳ ನಡುವೆ ಹೊರಟಾಗ ರೈಲಿನ ಕಿಟಕಿಯಿಂದ,ಬಾಗಿಲಿನಲ್ಲಿ ಕುಳಿತು ಆ ಪ್ರಕೃತಿ ಸೌಂದರ್ಯವನ್ನು ನೋಡುವಾಗ ಎಂತಹವರಿಗೂ ಮೈ ಮನ ರೋಮಾಂಚನಗೊಳ್ಳುವುದರಲ್ಲಿ ಸಂದೇಹವೇ ಇಲ್ಲ.

  • ಸುದ್ದಿ

    ಎರಡಕ್ಕಿಂತ ಹೆಚ್ಚು ಮದ್ವೆ ಆಗಿಲ್ಲ ಅಂದ್ರೆ, ಜೈಲಿಗೆ ಹೋಗಲು ರೆಡಿಯಾಗಿ!ಎಲ್ಲಿ ಗೊತ್ತಾ?ಮುಂದೆ ಓದಿ…

    ಒಂದು ಮದುವೆಯಾಗಿ ಸಂಸಾರ ಹೇಗಪ್ಪಾ ಮಾಡೋದು ಅನ್ನುತ್ತಿರುವ ಈ ದೇಶದ ಪುರುಷರಿಗೆ ಈ ದೇಶದ ಒಂದು ಕಾನೂನು ಬಿಸಿ ತುಪ್ಪದಂತಾಗಿದೆ.

  • ಸಂಬಂಧ

    ಈ 6 ಗುಣಗಳು ನಿಮ್ಮಲ್ಲಿದ್ರೆ, ಯಾರಾದರಾಗಿರಲಿ ನಿಮ್ಮನ್ನು ನಂಬುತ್ತಾರೆ…

    ಈಗಂತೂ ಈ ಜಗತ್ತಿನಲ್ಲಿ ಒಬ್ಬರೊನ್ನೊಬ್ಬರು ನಂಬುವುದು ತುಂಬಾ ಕಷ್ಟ. ಯಾರ ಮೇಲೂ ಯಾರಿಗೂ ನಂಬಿಕೆ ಅನ್ನುವುದೇ ಇಲ್ಲ.ಇದಕ್ಕೆ ಕಾರಣಗಳು ಬೇಕಾದಷ್ಟು ಇವೆ. ನಮ್ಮಲ್ಲಿರುವ ಅಥವಾ ಬೇರೆಯವರಲ್ಲಿರುವ ಕೆಲವೊಂದು ನ್ಯೂನತೆಗಳು ಬೇರೆಯವರನ್ನು ನಂಬದಂತೆ ಮಾಡಿರುತ್ತವೆ.