ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಹಾರ ರಾಜ್ಯದಲ್ಲಿ ರೌದ್ರಾವತಾರ ತೋರುತ್ತಿರುವ ರಣಬಿಸಿಲ ತಾಪಕ್ಕೆ ಬಲಿಯಾದವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಲೇ ಇದ್ದು, ಈವರೆಗೆ ಬಿಸಿಲ ಝಳಕ್ಕೆ 117 ಮಂದಿ ಮೃತಪಟ್ಟಿದ್ದಾರೆ.ಕಳೆದ 48 ಗಂಟೆಗಳಲ್ಲಿ ಮುಂಗರ್‍ನಲ್ಲಿ ಕನಿಷ್ಠ 5 ಮಂದಿ ಸಾವನ್ನಪ್ಪಿದ್ದು, ಔರಂಗಾಬಾದ್ ನಲ್ಲಿ 60, ಗಯಾದಲ್ಲಿ 35, ನವಾಡಾದಲ್ಲಿ 7, ಕೈಮುರ್ ನಲ್ಲಿ 2, ಅರ್ರಾ, ಸಮಸ್ತಿಪುರ್ ನಲ್ಲಿ ತಲಾ 1 ಮತ್ತು ನಳಂದದಲ್ಲಿ 6 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ರಣ ಬಿಸಿಲಿಗೆ ಸಾರ್ವಜನಿಕರು ಮೃತಪಡುತ್ತಿರುವ ಹಿನ್ನೆಲೆಯಲ್ಲಿ ಗಯಾ ಜಿಲ್ಲಾಧಿಕಾರಿ ಅಭಿಷೇಕ್ ಸಿಂಗ್ ಅವರು ಸೋಮವಾರ ಜಿಲ್ಲಾದ್ಯಂತ ಸೆಕ್ಷನ್ 144 ಜಾರಿ ಮಾಡಿದ್ದರು. ಬೆಳಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಯಾರೂ ಮನೆಯಿಂದ ಹೊರಗೆ ಬರಬಾರದು ಎಂದು ಪ್ರಕಟಣೆ ಹೊರಡಿಸಿದ್ದರು.ಅಲ್ಲದೆ ಪ್ರಕಟಣೆಯಲ್ಲಿ ತಿಳಿಸಿರುವ ಸಮಯದಲ್ಲಿ ಜಿಲ್ಲೆಯಲ್ಲಿ ಯಾವುದೇ ನಿರ್ಮಾಣ ಕಾರ್ಯಗಳನ್ನು ಕೈಗೊಳ್ಳುವಂತಿಲ್ಲ.
ಎಂಎನ್‍ಆರ್‍ಇಜಿಎ ಕಾರ್ಯಕ್ರಮಗಳ ಅಡಿಯಲ್ಲಿ ಬೆಳಗ್ಗೆ 10.30ರ ಬಳಿಕ ಯಾವುದೇ ತೆರೆದ ಸ್ಥಳಗಳಲ್ಲಿ ಕಾರ್ಮಿಕರು ಕೆಲಸ ಮಾಡಿಸುವಂತಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದೆ. ಅಷ್ಟೇ ಅಲ್ಲದೆ, ಜೂನ್ 22ರವರೆಗೆ ಬಿಹಾರದ ಎಲ್ಲಾ ಸರ್ಕಾರಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ಮೂಲಕ ಬಿಸಿಲ ಝಳಕ್ಕೆ ಮೃತಪಡುವವರ ಸಂಖ್ಯೆ ತಗ್ಗಿಸಲು ಸರ್ಕಾರ ಕ್ರಮ ತೆಗೆದುಕೊಂಡಿದೆ.ಹಾಗೆಯೇ ಬಿಹಾರದ ಆರೋಗ್ಯ ಸಚಿವ ಮಂಗಲ್ ಪಾಂಡೆ ಅವರು ಗಯಾದ ಅನುಗ್ರಹ ನಾರಾಯಣ ಮಗಧ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದ್ದಾರೆ. ಅಲ್ಲದೆ ಅವರಿಗೆ ಸರ್ಕಾರದಿಂದ ಅಗತ್ಯ ನೆರವನ್ನು ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ.
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಬಿಸಿಲ ತಾಪಕ್ಕೆ ಬಲಿಯಾದ ಮೃತರ ಕುಟುಂಬಗಳಿಗೆ ತಲಾ ನಾಲ್ಕು ಲಕ್ಷ ರೂ.ಗಳ ಪರಿಹಾರ ಧನವನ್ನು ಘೋಷಿಸಿದ್ದಾರೆ. ಅಲ್ಲದೆ ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರು ಪ್ರತಿಕ್ರಿಯಿಸಿ, ಜನರು ಬಿಸಿಲಿಗೆ ಹೋಗುವುದಕ್ಕಿಂತ ನೆರಳು ಇರುವ ಪ್ರದೇಶದಲ್ಲಿ ಇರುವುದು ಸೂಕ್ತ. ಅತಿಯಾದ ಬಿಸಿಲ ತಾಪಕ್ಕೆ ಮನುಷ್ಯನ ಆರೋಗ್ಯದಲ್ಲಿ ಏರುಪೇರು ಆಗುತ್ತದೆ. ಮೆದುಳು ಸಂಬಂಧಿ ರೋಗಗಳು ಬರುತ್ತವೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆಚ್ಚಿನವರ ಮನೆಯಲ್ಲಿ ಪ್ಲಾಸ್ಟಿಕ್ ಪಾತ್ರೆಗಳನ್ನು ಬಳಸದೇ ಇರುವುದಿಲ್ಲ. ಆದರೆ ಉಳಿದ ತಿಂಡಿಗಳನ್ನು ಪ್ಲಾಸ್ಟಿಕ್ ವಸ್ತುಗಳಲ್ಲಿ ಹಾಕುವ ಮುನ್ನ ಯೋಚಿಸಿ.
ನಾವು ಮಧ್ಯಾಹ್ನ ಅಥವಾ ರಾತ್ರಿ ಮಲಗುವಾಗ ನಮ್ಮ ಕೈ ಮೇಲೆ ತಲೆನ ಹಾಕಿಕೊಂಡು ಮಲಗುತ್ತೇವೆ ಅದು ನಿಮಗೂ ಗೊತ್ತು, ನಿದ್ದೆ ಮನುಷ್ಯನಿಗೆ ವರದಾನವಾಗಿದೆ, ಇತ್ತೀಚಿನ ದಿನಗಳಲ್ಲಿ ಅತಿ ಹೆಚ್ಚು ಕೆಲಸ ಮಾಡುವವರು ನಿದ್ರೆ ಕಡೆ ಗಮನ ಕೊಡುತ್ತಿಲ್ಲ ತುಂಬಾ ಕೆಲಸದ ಕಡೆ ಗಮನ ಕೊಡುತ್ತಿದ್ದಾರೆ ಇದರಿಂದ ನಮ್ಮ ಆರೋಗ್ಯದ ಮೇಲೆ ತುಂಬಾನೇ ಪರಿಣಾಮ ಬೀರುತ್ತದೆ. ಇದರಿಂದ ರಾತ್ರಿ ಮಲಗುವ ನಿದ್ದೆ ಸಾಕಾಗುವುದಿಲ್ಲ ಹಾಗಾಗಿ ಮಧ್ಯಾಹ್ನವೂ ಕೂಡ ಮಲಗುತ್ತಾರೆ, ಮತ್ತು ಹೆಚ್ಚಾಗಿ ನಿದ್ರೆ ಮಾಡುವವರನ್ನು ಸೋಂಬೇರಿಗಳು ಅಂತಾನೂ ಕರೆಯುತ್ತಾರೆ….
ಯಾವುದೇ ತರಹದ ಗುಂಪಿನ ದಾಖಲೆಗಳನ್ನು ಹೊಂದಿರದ ಅಕ್ರಮ ವಲಸಿಗರಿಗೆ ಬಾಡಿಗೆ ಮನೆ ಕೊಡಬಾರದು, ಕೊಟ್ಟರೆ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಎಚ್ಚರಿಕೆ ನೀಡಿದ್ದಾರೆ. ಮನೆ ಮಾಲೀಕರು ಬಾಡಿಗೆ ಮನೆಯನ್ನು ಕೊಡುವ ಮೊದಲು ಅವರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಂಡ ಬಳಿಕ ಮನೆ ಬಾಡಿಗೆಗೆ ಕೊಡಿ ,ಬಾಡಿಗೆದಾರ ಅಕ್ರಮವಾಗಿ ನೆಲೆಸಿರುವುದು ಕಂಡುಬಂದರೆ ಸಂಬಂಧಪಟ್ಟ ಮನೆ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಮತ್ತು…
ದೇಶದ ಮಹತ್ವದ ಚಂದ್ರಯಾನ-2 ದ ವಿಕ್ರಂ ಲ್ಯಾಂಡರ್ ಸಂಪರ್ಕ ಕಡಿತಗೊಂಡಿದ್ದರೂ ನೀರಿಕ್ಷೆಗಳು ಮುಗಿದಿಲ್ಲ. ಹೌದು ಇಸ್ರೋ ಚಂದ್ರಾನ್ವೇಷಣೆ ಯತ್ನದಲ್ಲಿ ಇನ್ನೂ ಕೊನೆಯ ನಿರೀಕ್ಷೆಗಳು ಇದ್ದೇ ಇವೆ. ಕೊನೆ ಹಂತದಲ್ಲಿ ಸಂಪರ್ಕ ಕಡಿದುಕೊಂಡ ವಿಕ್ರಮ್ ಲ್ಯಾಂಡರ್ ಬಗ್ಗೆ ಇಸ್ರೋ ಅಧ್ಯಯನ ಮುಂದುವರೆಸಿದ್ದು, ಯಾವುದೇ ಕ್ಷಣದಲ್ಲಾದರೂ ವಿಕ್ರಮ್ ಲ್ಯಾಂಡರ್ ಮಾಹಿತಿ ರವಾನಿಸಬಹುದೆಂಬ ನೀರಿಕ್ಷೆಯಲ್ಲಿದೆ ಇಸ್ರೋ. ಚಂದ್ರನ ದಕ್ಷಿಣ ಧ್ರುವಕ್ಕೆ ಸ್ಪರ್ಶ ಮಾಡುವ ಹಂತದಲ್ಲಿ ವಿಕ್ರಂ ಲ್ಯಾಂಡರ್ ಸಂಪರ್ಕ ಕಡಿತಕೊಂಡಿತ್ತು. 2.1 ಕಿಲೋ ಮೀಟರ್ ದೂರದಲ್ಲಿ ಇಸ್ರೋ ಹಿಡಿತಕ್ಕೆ ಸಿಗದೇ ಮುಂಜಾನೆ 1.55ರ…
‘ಸಾಯಿಪಲ್ಲವಿ’ಯನ್ನ ಸ್ಯಾಂಡಲ್ ವುಡ್ ಸಿನಿಮಾಗಾಗಿ ಕರೆತರಲು ಸಿನಿಮಾ ತಂಡವೊಂದು ಸಜ್ಜಾಗಿದೆ. ಚಿತ್ರತಂಡ ‘ಪ್ರಜ್ವಲ್ ದೇವರಾಜ್’ ಜೊತೆಯಲ್ಲಿ ‘ಪ್ರೇಮಂ’ ಬೆಡಗಿಯನ್ನ ಜೋಡಿ ಮಾಡಲು ಸಿದ್ದತೆ ನಡೆಸಿದೆ.
ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸಿ.ಆರ್.ಪಿ.ಎಫ್. ಯೋಧರಿದ್ದ ವಾಹನದ ಮೇಲೆ ಉಗ್ರರ ಆತ್ಮಾಹುತಿ ದಾಳಿ ನಡೆದು 42 ಮಂದಿ ವೀರ ಯೋಧರು ಹುತಾತ್ಮರಾದ ಘಟನೆ ಬಳಿಕ ಉಗ್ರಗಾಮಿಗಳು ಹಾಗೂ ಅವರಿಗೆ ಕುಮ್ಮಕ್ಕು ನೀಡುತ್ತಿರುವ ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಕೂಗು ಭಾರತದಾದ್ಯಂತ ಕೇಳಿ ಬರುತ್ತಿದೆ. ಕೇಂದ್ರ ಸರ್ಕಾರವು ಕೂಡ ಈಗಾಗಲೇ ಇದಕ್ಕೆ ಪೂರಕ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಪಾಕಿಸ್ತಾನವನ್ನು ಅತ್ಯಾಪ್ತ ರಾಷ್ಟ್ರಗಳ ಪಟ್ಟಿಯಿಂದ ಕೈಬಿಟ್ಟಿದೆಯಲ್ಲದೆ ಅಲ್ಲಿಂದ ಆಮದಾಗುವ ವಸ್ತುಗಳ ಮೇಲೆ ಶೇಕಡ 200 ರಷ್ಟು ಸುಂಕ ವಿಧಿಸುವ…