ಸುದ್ದಿ

750 ಕೋಟಿ ರೂ. ವೆಚ್ಚದಲ್ಲಿ ಕಲಬುರಗಿಗೆ ಶಾಶ್ವತ ಕುಡಿಯವ ನೀರು ಯೋಜನೆ…!

38

ಕಲಬುರಗಿ ಮಹಾನಗರಕ್ಕೆ ಶಾಶ್ವತ ಕುಡಿಯವ ನೀರು ಕಲ್ಪಿಸುವ ಸಂಬಂಧ 750 ಕೋಟಿ ರೂ.ಗಳ ವೆಚ್ಚದ ಯೋಜನೆಗೆ ಮುಂದಿನ ಮೂರು ತಿಂಗಳಲ್ಲಿ ಚಾಲನೆ ನೀಡಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಅವರು ಘೋಷಿಸಿದ್ದಾರೆ. ಕಲಬುರಗಿ ಪಾಲಿಕೆಯ ಸ್ಮಾರಕ ಭವನ (ಟೌನ್‍ಹಾಲ್) ದಲ್ಲಿ ಮಂಗಳವಾರ ಜನಸ್ಪಂದನ ಕಾರ್ಯಕ್ರಮದ ಬಳಿಕ ಪತ್ರಕರ್ತರನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.

ಮುಂದಿನ 5 ವರ್ಷಗಳಲ್ಲಿ ಈ ಯೋಜನೆ ಪೂರ್ಣಗೊಳ್ಳಲಿದ್ದು, ಭೀಮಾ ನದಿ, ಬೆಣ್ಣೆತೊರಾವಲ್ಲದೆ, ನಗರದ ಕಲ್ಯಾಣಿಗಳು, ಬಾವಿಗಳು ಮುಂತಾದ ನೀರಿನ ಮೂಲಗಳನ್ನು ಪತ್ತೆ ಹಚ್ಚಿ ಯೋಜನೆ ಸಾಕಾರಗೊಳಿಸಿ, ಕಲಬುರಗಿ ನಗರಕ್ಕೆ ನಿರಂತರ 24ಘಿ7 ಕುಡಿಯುವ ನೀರು ಪೂರೈಸಲಾಗುವುದು ಎಂದು ಅವರು ಧೃಡ ವಿಶ್ವಾಸದಿಂದ ನುಡಿದರು.ನಗರ ಪ್ರತಿವರ್ಷ ಬೆಳೆಯುತ್ತಾ ಹೋಗುತ್ತಿದೆ. ಇಂದು ನಗರದ ಜನಸಂಖ್ಯೆ ಅಧಿಕವಾಗುತ್ತಿದೆ. ಆ ಕಾರಣದಿಂದಾಗಿ ನೀರು ಕೂಡ ಅದೇ ಪ್ರಮಾಣದಲ್ಲಿ ಬೇಕಾಗುತ್ತದೆ ಎಂದು ಅವರು ಪ್ರತಿಪಾದಿಸಿದರು.

ಕಲಬುರಗಿ ಮಹಾನಗರದಲ್ಲಿ ಐಎಸ್‍ಐ ಗುರುತು ಇಲ್ಲದ ನೀರಿನ ಕ್ಯಾನ್ ವಾಟರ್ ಮಾರುತ್ತಿರುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು. ಸ್ಮಾರ್ಟ್ ಸಿಟಿ ಕೇಂದ್ರ ಸರ್ಕಾರ ಮಾಡುವಂತಹದ್ದು, ಅದಕ್ಕೆ ನಾವು ಕಾಯ್ತಿಲ್ಲ. ರಾಜ್ಯ ಈಗಾಗಲೇ ಎಲ್ಲಾ ರೀತಿಯಿಂದ ಕಲಬುರಗಿಯನ್ನು ಸ್ಮಾರ್ಟ್ ಸಿಟಿ ಮಾದರಿಯಲ್ಲೇ ಅಭಿವೃದ್ಧಿ ಪಡಿಸುತ್ತಿದೆÉ. ಈ ನಿಟ್ಟಿನಲ್ಲಿ ಈಗಾಗಲೇ ಪೊಲೀಸ್ ಆಯುಕ್ತರ ಕಾರ್ಯಾಲಯ, ರಿಂಗ್ ರೋಡ್ ಸೇರಿದಂತೆ ಹಲವು ಕೆಲಸಗಳನ್ನು ರಾಜ್ಯ ಸರ್ಕಾರ ಮಾಡಿದೆ ಎಂದು ಹೆಮ್ಮೆಯಿಂದ ಹೇಳಿದರು.

ಮಾಜಿ ಸಚಿವರಾದ ಮಲ್ಲಿಕಾರ್ಜುನ ಖರ್ಗೆ ಅವರ ಪರಿಶ್ರಮದಿಂದ ಹೈದ್ರಾಬಾದ-ಕರ್ನಾಟಕಕ್ಕೆ 371ಜೆ ಬಂದ ನಂತರ 30 ಸಾವಿರ ಉದ್ಯೋಗ ಸೃಷ್ಟಿಯಾಗಿವೆ. ಖಾಲಿ ಹುದ್ದೆಗಳ ತುಂಬುವ ನಿಟ್ಟಿನಲ್ಲಿ ಹೈದ್ರಾಬಾದ್ ಕರ್ನಾಟಕ ಬಿಟ್ಟು ಬೇರೆ ಜಿಲ್ಲೆಗಳಲ್ಲಿ ಹೆಚ್ಚು ಸೇವೆ ಸಲ್ಲಿಸಿರುವ ಅಧಿಕಾರಿಗಳನ್ನು ಈ ಭಾಗಕ್ಕೆ ವರ್ಗಾಯಿಸುವಂತಹ ಕೆಲಸ ನಡೆದಿದೆ ಎಂದು ಅವರು ಹೇಳಿದರು.
ರಾಜ್ಯದ ಎಲ್ಲಾ ಮಹಾನಗರಗಳ ವ್ಯಾಪ್ತಿಯಲ್ಲಿ ಎಲ್ಲಿ ದೊಡ್ಡ ಕಾಲುವೆಗಳು ಇವೆಯೋ ಅವುಗಳನ್ನು ಸಂಪೂರ್ಣವಾಗಿ ದುರಸ್ತಿ ಮಾಡುವುದಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಈ ಕಾಮಗಾರಿಯನ್ನು ಅದಷ್ಟು ಬೇಗ ಕೈಗೊಳ್ಳಲಾಗುವುದು. ರಸ್ತೆ ಅಭಿವೃದ್ಧಿ ಸೇರಿದಂತೆ ನಗರ ಅಭಿವೃದ್ಧಿಗೆ 8 ಲಕ್ಷಕ್ಕಿಂತ ಜನಸಂಖ್ಯೆ ಕಡಿಮೆ ಇರುವ ರಾಜ್ಯದ ಮಹಾನಗರ ಪಾಲಿಕೆಯಲ್ಲಿ ಈ ವರ್ಷ 125 ಕೋಟಿ ರೂ.ಗಳು ಬಿಡುಗಡೆ ಮಾಡಿದ್ದೇವೆ. 10 ಲಕ್ಷ ಜನಸಂಖ್ಯೆ ಇರುವ ಮಹಾನಗರಗಳಿಗೆ 150 ಕೋಟಿ ರೂ.ಗಳು ಬಿಡುಗಡೆ ಮಾಡಿದ್ದೇವೆ ಎಂದು ವಿವರಿಸಿದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • India, Sports

    ಕಪಿಲ್ ದೇವ್ ಹುಟ್ಟುಹಬ್ಬದ ಸಂಭ್ರಮ ಇಂದು

    ಭಾರತದ ಮಾಜಿ ನಾಯಕ ಮತ್ತು ಕ್ರಿಕೆಟ್‌ನ ಶ್ರೇಷ್ಠ ಆಲ್‌ರೌಂಡರ್‌ಗಳಲ್ಲಿ ಒಬ್ಬರಾದ ಕಪಿಲ್ ದೇವ್ ಇಂದು ಜನವರಿ 6, 2022 ರಂದು ತಮ್ಮ 63 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಬಹುಶಃ ಭಾರತವು ನಿರ್ಮಿಸಿದ ಶ್ರೇಷ್ಠ ಆಲ್‌ರೌಂಡರ್ ಮತ್ತು ಭಾರತ ಪ್ರಸ್ತುತಪಡಿಸಿದ ಮೊದಲ ನಿಜವಾದ ವೇಗಿಗಳಲ್ಲಿ ಒಬ್ಬರು ಜಗತ್ತಿಗೆ, ಕಪಿಲ್ ದೇವ್ 1978 ರಲ್ಲಿ ಪ್ರಾರಂಭವಾದ ಅಂತಸ್ತಿನ ವೃತ್ತಿಜೀವನವನ್ನು ಹೊಂದಿದ್ದರು. ಭಾರತದ ಮಾಜಿ ನಾಯಕ ಮತ್ತು ಕ್ರಿಕೆಟ್‌ನ ಶ್ರೇಷ್ಠ ಆಲ್‌ರೌಂಡರ್‌ಗಳಲ್ಲಿ ಒಬ್ಬರಾದ ಕಪಿಲ್ ದೇವ್ ಇಂದು ಜನವರಿ 6, 2022…

    Loading

  • ಸುದ್ದಿ

    ಭಾರತೀಯ ಸೇನೆಗಾಗಿ ವಿಶೇಷವಾಗಿ ತಯಾರಾದ ಈ ಬೈಕ್ ವಿಶೇಷತೆ ಏನು ಗೊತ್ತಾ?

    ಭಾರತೀಯ ಸೇನಗಾಗಿ ಟಾಟಾ ಮೋಟಾರ್ಸ್ ತಮ್ಮ ಸಫಾರಿ ಸ್ಟೋರ್ಮ್ ಕಾರನ್ನು ತಯಾರಿಸಿ ನೀಡುತ್ತಿರುವ ಬಗ್ಗೆ ನಾವು ಈಗಾಗಲೇ ತಿಳಿದಿದ್ದೇವೆ. ಆದ್ರೆ ಸೇನೆಯಲ್ಲಿ ಬಳಸಲಾಗುತ್ತಿರವ ದ್ವಿಚಕ್ರ ವಾಹನಗಳು ಕಡಿಮೆ ಶಕ್ತಿಶಾಲಿಯಾದ ಕಾರಣ ಚತ್ತೀಸ್‍ಗಢ್‍ನ ಯುವಕನೊಬ್ಬ 800ಸಿಸಿ ಸಾಮರ್ಥ್ಯವಿರುವ ವಿಶೇಷ ಬೈಕ್ ಒಂದನ್ನ ತಯಾರು ಮಾಡಿದ್ದಾನೆ.ಪ್ರಸ್ತುತ ಭಾರತೀಯ ಸೇನೆಯಲ್ಲಿ ರಾಯಲ್ ಎನ್‍ಫೀಲ್ಡ್ ಸಂಸ್ಥೆಯ 350ಸಿಸಿ ಮತ್ತು 500ಸಿಸಿ ಬೈಕ್‍ಗಳನ್ನು ಬಳಸಲಾಗುತ್ತಿದ್ದು, ಅಮೆರಿಕನ್ ಸೇನೆಯು ಹೆಚ್ಚು ಸಾಮರ್ಥ್ಯವಿರುವ ಯುನೈಟೆಡ್ ಮೋಟಾರ್ಸ್‍ನ ಮತ್ತು ಹಾರ್ಲೇ ಡೇವಿಡ್ಸನ್ ಸಂಸ್ಥೆಯ ಅಧಿಕ ಸಾಮರ್ಥ್ಯವಿರುವ ಬೈಕ್‍ಗಳನ್ನು ಬಳಸುತ್ತಿದ್ದಾರೆ….

  • ಸರ್ಕಾರದ ಯೋಜನೆಗಳು

    ನಿಮ್ಮ ಮನೆಯಲ್ಲಿ ಕಾರಿದ್ದು ‘ಎಲ್ ಪಿ ಜಿ ಗ್ಯಾಸ್’ ಉಪಯೋಗಿಸುತ್ತಿದಿರಾ..?ಹಾಗಾದ್ರೆ ಈ ಲೇಖನ ಓದಿ ..

    ನಿಮ್ಮ ಬಳಿ ಕಾರಿದ್ದು ಎಲ್ ಪಿ ಜಿ ಸಬ್ಸಿಡಿಯನ್ನೂ ಪಡೆಯುತ್ತಿದ್ದರೆ ನಿಮಗೊಂದು ಶಾಕಿಂಗ್ ನ್ಯೂಸ್ ನೀಡಲು ಕೇಂದ್ರ ಸರ್ಕಾರ ಸಜ್ಜಾಗ್ತಿದೆ. ದೇಶದಲ್ಲಿ ಎಷ್ಟು ಮಂದಿ ಬಳಿ ಕಾರಿದೆಯೋ ಅವರಿಗೆ ಸಬ್ಸಿಡಿಯಲ್ಲಿ ಅಡುಗೆ ಅನಿಲ ನೀಡುವುದನ್ನು ಕೇಂದ್ರ ಸರ್ಕಾರ ನಿಲ್ಲಿಸಲಿದೆ. ಈ ಬಗ್ಗೆ ಮೋದಿ ಸರ್ಕಾರ ಯೋಜನೆ ರೂಪಿಸುತ್ತಿದ್ದು, ಸದ್ಯದಲ್ಲಿಯೇ ಘೋಷಣೆಯಾಗುವ ಸಾಧ್ಯತೆಯಿದೆ.

  • ಸ್ಪೂರ್ತಿ

    ಎಸ್ಸೆಸ್ಸೆಲ್ಸಿ ಓದಿದ್ದ ಭೂಪ… 7 ಸರಕಾರಿ ಹುದ್ದೆಗಳ ಕೆಲಸಕ್ಕೆ ಸೇರಿದ್ದು ಹೇಗೆ ಗೊತ್ತಾ…?ತಿಳಿಯಲು ಈ ಲೇಖನ ಓದಿ….

    ಓದಿದ್ದು ಎಸ್ಸೆಸ್ಸೆಲ್ಸಿವರೆಗೆ. ಆದರೂ ಒಂದೇ ವರ್ಷದಲ್ಲಿ 7 ನೌಕರಿಗೆ ಅರ್ಹತೆ ಲಭಿಸಿತು. ಆಯ್ಕೆ ಮಾಡಿಕೊಂಡಿದ್ದು ಮಾತ್ರ ಪಿಎಸ್‌ಐ ಹುದ್ದೆ! ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಮುದೂರ ಗ್ರಾಮದ ಕಾನ ಗೌಡ ಪಾಟೀಲ ಎಂಬುವರ ಪುತ್ರ ಪ್ರಶಾಂತ ಪಾಟೀಲ (38) ಎಂಬುವರು 15 ದಿನಗಳ ಹಿಂದಷ್ಟೇ ಪ್ರೊಬೇಷನರಿ ಅವಧಿ ಪೂರೈಸಿ ಬೆಂಗಳೂರಿನ ನಂದಿನಿ ಲೇಔಟ್‌ನಲ್ಲಿ ಎಸ್‌ಐ ಆಗಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದಾರೆ.

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಕೆಲಸಗಳನ್ನು ಸುಲಭವಾಗಿ ಮಾಡಿ ಮುಗಿಸಲು ಹಿರಿಯರೊಬ್ಬರ ಸಹಾಯ ಮತ್ತು ಸಹಕಾರ ದೊರೆಯುವುದು. ಪ್ರಯಾಣದಲ್ಲಿ ಎಚ್ಚರಿಕ ಅಗತ್ಯ. ಹಣಕಾಸಿನ ವಿಷಯದಲ್ಲಿ ತೊಂದರೆಯನ್ನು ಎದುರಿಸುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…