ಸುದ್ದಿ

ಝೊಮ್ಯಾಟೋ ಮೇಲೆ 55 ಸಾವಿರ ದಂಡ ವಿಧಿಸಿದ ಕೋರ್ಟ್…ಸಸ್ಯಾಹಾರಿ ಕೇಳಿದಕ್ಕೆ ಮಾಂಸಹಾರಿ ಡೆಲಿವರಿ

61

ಸಸ್ಯಾಹಾರಿ ಖಾದ್ಯವನ್ನು ಆರ್ಡರ್ ಮಾಡಿದ್ದ ವಕೀಲರೊಬ್ಬರಿಗೆ ಮಾಂಸಾಹಾರಿ ಖಾದ್ಯವನ್ನು ಡೆಲಿವರಿ ಮಾಡಿದ್ದಕ್ಕಾಗಿ ಆಹಾರ ಸರಬರಾಜು ಮಾಡುವ ಝೊಮ್ಯಾಟೋ ಹಾಗೂ ಆ ಮಾಂಸಾಹಾರಿ ಖಾದ್ಯವನ್ನು ನೀಡಿದ ಹೋಟೆಲ್ ಗೆ ಪುಣೆಯ ಗ್ರಾಹಕ ನ್ಯಾಯಾಲಯವು 55 ಸಾವಿರ ರುಪಾಯಿ ದಂಡ ವಿಧಿಸಿದೆ. ಮಾಧ್ಯಮದ ವರದಿ ಪ್ರಕಾರ, ಇನ್ನು ನಲವತ್ತೈದು ದಿನದೊಳಗೆ ವಕೀಲ ಷಣ್ಮುಖ್ ದೇಶ್ ಮುಖ್ ಗೆ ದಂಡದ ಮೊತ್ತ ಪಾವತಿಸುವಂತೆ ಕೋರ್ಟ್ ಸೂಚನೆ ನೀಡಿದೆ.

ಪ್ರಕರಣದ ವಿಚಾರಣೆ ನಡೆಸಿದ ಶುಭಾಂಗಿ ದುನಾಖೆ ಮತ್ತು ಅನಿಲ್ ಜವಲೇಕರ್ ಅವರಿದ್ದ ಪೀಠ, ಪುಣೆಯ ಕೇಂದ್ರ ಕಚೇರಿ, ಗುರ್ಗಾಂವ್ ಕೇಂದ್ರ ಕಚೇರಿ ಹಾಗೂ ಪುಣೆಯ ಹೋಟೆಲ್ ಪ್ರೀತ್ ಪಂಜಾಬಿ ಸ್ವಾದ್ ಹೋಟೆಲ್‍ಗೆ 55 ಸಾವಿರ ರೂ. ದಂಡ ವಿಧಿಸಿದ್ದು, 45 ದಿನಗಳಲ್ಲಿ ದಂಡವನ್ನು ಗ್ರಾಹಕರಿಗೆ ಪಾವತಿಸವಂತೆ ಸೂಚಿಸಿದೆ. ತಡವಾದರೆ ಅದಕ್ಕೆ ಅನ್ವಯವಾಗುವ ಬಡ್ಡಿಯನ್ನು ಸೇರಿಸಿ ಹಣ ನಿಡುವಂತೆ ಸೂಚಿಸಿದೆ.

ಪನ್ನೀರ್ ಬಟರ್ ಮಸಾಲವನ್ನು ಆರ್ಡರ್ ಮಾಡಿದ್ದ ವಕೀಲರಿಗೆ ಅದರ ಬದಲಿಗೆ ಬಟರ್ ಚಿಕನ್ ಡೆಲಿವರಿ ಮಾಡಲಾಗಿದೆ. ಎರಡಕ್ಕೂ ಬಳಸುವ ಸಂಬಾರು ಪದಾರ್ಥಗಳು ಬಹುತೇಕ ಒಂದೇ ಥರ ಇರುವುದರಿಂದ ವಕೀಲರಿಗೆ ವ್ಯತ್ಯಾಸ ಗೊತ್ತಾಗದೆ ಚಿಕನ್ ಅನ್ನೇ ತಿಂದಿದ್ದರು.ಅಂದ ಹಾಗೆ ಅವರಿಗೆ ಹೀಗೆ ಸಸ್ಯಾಹಾರದ ಬದಲಿಗೆ ಮಾಂಸಾಹಾರ ಖಾದ್ಯವನ್ನು ಡೆಲಿವರಿ ಮಾಡಿದ್ದು ಎರಡು ಬಾರಿಯಂತೆ.

ಈ ಕುರಿತು ಝೊಮ್ಯಾಟೊ ಸ್ಪಷ್ಟಪಡಿಸಿದ್ದು, ವಕೀಲರು ಆಪ್‍ನಲ್ಲಿಯೇ ದೂರು ನೀಡಿದ್ದರು. ಈಗಾಗಲೇ ಅವರ ಹಣವನ್ನು ಮರುಪಾವತಿ ಮಾಡಲಾಗಿದೆ ಎಂದು ತಿಳಿಸಿದೆ. ಅಲ್ಲದೆ ಬೇರೆ ಪದಾರ್ಥ ಡೆಲಿವರಿ ಮಾಡಿರುವುದು ಹೋಟೆಲ್ ತಪ್ಪು ಎಂದು ಝೊಮ್ಯಾಟೊ ವಾದಿಸಿದೆ. ಹೋಟೆಲ್‍ನಷ್ಟೇ ತಪ್ಪು ಸಂಸ್ಥೆಯದ್ದೂ ಇದೆ ಎಂದು ಗ್ರಾಹಕರ ನ್ಯಾಯಾಲಯ ತಿಳಿಸಿದೆ. ಹೋಟೆಲ್ ಸಹ ತನ್ನ ತಪ್ಪನ್ನು ಒಪ್ಪಿಕೊಂಡಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ, ಸುದ್ದಿ

    ಶ್ರೀಲಂಕಾದಲ್ಲಿ ಆದ ಬಾಂಬ್ ಸ್ಪೋಟದಲ್ಲಿ ಸ್ವಲ್ಪದರಲ್ಲೇ ಪಾರಾದ್ಲು ಈ ನಟಿ..!

    ಶ್ರೀಲಂಕಾ ರಾಜಧಾನಿ ಕೊಲಂಬೊದಲ್ಲಿ ಸಂಭವಿಸಿದ ಸರಣಿ ಬಾಂಬ್ ಸ್ಫೋಟದಲ್ಲಿ 290ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. 500 ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಚ್ಚಿ ಬೀಳಿಸಿದ ಸರಣಿ ಬಾಂಬ್ ಸ್ಫೋಟದ ಅವಘಡದಲ್ಲಿ ಬಹುಭಾಷಾ ನಟಿ ರಾಧಿಕಾ ಶರತ್ ಕುಮಾರ್ ಸ್ವಲ್ಪದರಲ್ಲೇ ಪಾರಾಗಿ ಬಂದಿದ್ದಾರೆ. ಕೊಲಂಬೋಕ್ಕೆ ತೆರಳಿದ್ದ ರಾಧಿಕಾ ಶರತ್ ಕುಮಾರ್, ಭಾನುವಾರ ಬೆಳಿಗ್ಗೆ ಸಿನ್ನಾಮನ್ ಗ್ರ್ಯಾಂಡ್ ಹೋಟೆಲ್ ನಲ್ಲಿ ಕೆಲಸ ಮುಗಿಸಿಕೊಂಡು ಹೊರ ಬಂದ ಕೆಲವೇ ನಿಮಿಷಗಳಲ್ಲಿ ಸ್ಪೋಟ ಸಂಭವಿಸಿದೆ. ಈ ಸಂಗತಿಯನ್ನು ರಾಧಿಕಾ ಶರತ್ ಕುಮಾರ್…

  • ಜ್ಯೋತಿಷ್ಯ

    ನರಸಿಂಹ ಸ್ವಾಮಿಯನ್ನು ಭಕ್ತಿಯಿಂದ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸ್ವಾಮಿಗಳು 9901077772 ಕೊಲ್ಲೂರು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ7 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ ಮೇಷ :ಬಿಕ್ಕಟ್ಟಿನಂತಹ ಸಮಯದಲ್ಲಿ ಸಂಬಂಧಿಗಳೂ ಕೂಡ ಸಹಾಯವನ್ನು ಮಾಡುತ್ತಾರೆ. ಕೆಲವುಪ್ರಮುಖವಾದ ಯೋಜನೆಗಳನ್ನು ಕಾರ್ಯಗತಗೊಳಿಸಲಾಗುತ್ತದೆ…

  • ಸುದ್ದಿ

    ಎಸ್ಒಎಸ್ ಸಂಕೇತದಿಂದ ಪ್ರಾಣಾಪಾಯದಿಂದ ಪಾರಾದ ಮಹಿಳೆ,. ಹೇಗೆ ಗೊತ್ತಾ.?

    ಅದು ಆಸ್ಟ್ರೇಲಿಯಾದ ಅರಣ್ಯ. ಅದೆಷ್ಟೋ ವನ್ಯಸಂಕುಲಕ್ಕೆ ಈ ಕಾಡೇ ಆಶ್ರಯ ತಾಣ. ಇಂತಹ ಕಾನನದಲ್ಲಿ 55 ವರ್ಷದ ಮಹಿಳೆಯೊಬ್ಬರು  ಗೊತ್ತಾಗದೇ ದಾರಿ  ತಪ್ಪಿದ್ದರು…! ಬರೋಬ್ಬರಿ ಮೂರು ದಿನಗಳ ಕಾಲ  ಇವರು ಕಾಡಿನಲ್ಲಿ ದಾರಿ ತಪ್ಪಿ ಭಯದಲ್ಲೇ ಅಲೆದಾಡುತ್ತಿದ್ದರು. ಅಂತಹ ಸಮಯದಲ್ಲಿ  ಮಹಿಳೆ ಪತ್ತೆಯಾಗಿದ್ದು        ಇದೊಂದು ಸಂಕೇತದಿಂದ ಆ ಸಂಕೇತವಾದರೂ ಏನು ಗೊತ್ತಾ,… ಈಕೆ ಡೆಬೊರಾ ಪಿಲ್ಗ್ರಿಮ್. ಕಾಡಂಚಿನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆಂದು ಇವರು ಸಾಗುತ್ತಿದ್ದರು. ಒಬ್ಬರೇ ಇದ್ದರು. ಹೀಗೆ ಸಾಗುವಾಗ ಅಕಸ್ಮಾತ್  ದಾರಿ ತಪ್ಪಿದ್ದರು. ಹೀಗಾಗಿ,…

  • ಉಪಯುಕ್ತ ಮಾಹಿತಿ

    ಕೇಂದ್ರ ಸರ್ಕಾರದಿಂದ ದಿಟ್ಟ ನಿರ್ಧಾರ, ವೋಟರ್ ಕಾರ್ಡ್ ಇದ್ದವರಿಗೂ ಇಲ್ಲದವರಿಗೂ ಸಿಹಿಸುದ್ದಿ.

    ಸ್ನೇಹಿತರೆ ನಿಮಗೆಲ್ಲ ತಿಳಿರುವ ಹಾಗೆ ಪ್ರಸ್ತುತ ದಿನಗಳಲ್ಲಿ ನಮ್ಮ ಪ್ರಪಂಚ ತಂತ್ರಜ್ಞಾನದಿಂದ ಎಷ್ಟೋ ಮುಂದಕ್ಕೆ ಸಾಗುತ್ತಿದೆ. ಇನ್ನು ಇದಕ್ಕೆ ತಂಜ್ರಜ್ಞಾನಕ್ಕೆ ಅನುಗುಣವಾಗಿ ನಮ್ಮ ಕೇಂದ್ರ ಸರ್ಕಾರ ಅದೆಷ್ಟೋ ಬದಲಾವಣೆಗಳನ್ನ ಜಾರಿಗೆ ತರುತ್ತಲೇ ಇದೆ, ಇನ್ನು ಈಗ ವೋಟರ್ ಕಾರ್ಡ್ ಗಳಲ್ಲಿ ಭಾರಿ ಪ್ರಮಾಣದ ಬದಲಾವಣೆಯನ್ನ ಜಾರಿಗೆ ತರಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದ್ದು ಇದರಿಂದ ಜನರಿಗೆ ತುಂಬಾ ಸಂತಸವಾಗಿದೆ, ಹಾಗಾದರೆ ವೋಟರ್ ಕಾರ್ಡ್ ನಲ್ಲಿ ಆಗುತ್ತಿರುವ ಬದಲಾವಣೆಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ…

  • ಸಿನಿಮಾ

    ಕನ್ನಡದ ಈ ಸಿನಿಮಾ ಇದೇ ಮೊದಲ ಬಾರಿಗೆ ದಾಖಲೆ ಮಟ್ಟದಲ್ಲಿ ಪರಭಾಷೆಗೆ ಡಬ್ಬಿಂಗ್ ಮಾರಾಟ..!ಶಾಕ್ ಆಗ್ತೀರಾ…ಮುಂದೆ ಓದಿ…

    ಕನ್ನಡದಲ್ಲಿ ಇದೇ ಮೊದಲ ಬಾರಿಗೆ ದಾಖಲೆಯ ಬೆಲೆಗೆ ಡಬ್ಬಿಂಗ್ ಹಕ್ಕು ಮಾರಾಟವಾಗಿದೆ. ಕುರುಕ್ಷೇತ್ರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 50ನೇ ಸಿನಿಮಾ ವಾಗಿದ್ದು, ದರ್ಶನ್ ದುರ್ಯೋಧನನ ಪಾತ್ರದಲ್ಲಿ ನಟಿಸಿದ್ದಾರೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(6 ಮಾರ್ಚ್, 2019) ನಿಮ್ಮ ಪತ್ನಿಯೊಂದಿಗಿನ ಸಂಬಂಧಗಳನ್ನು ಉತ್ತಮಗೊಳಿಸುವ ಒಂದು ದಿನ. ಕುಟುಂಬದಲ್ಲಿರುವ ಇಬ್ಬರೂ ಅವರ ಸಂಬಂಧದಲ್ಲಿ…