ಸುದ್ದಿ

ಬಹುಅಂತಸ್ತಿನ ಕಟ್ಟಡದಲ್ಲಿ ಆಕಸ್ಮಿಕ ಅಗ್ನಿ ಅವಘಡ,7 ಮಂದಿ ಸಾವು..!

39

ರಾಜಧಾನಿ ದೆಹಲಿಯ ಜನನಿಬಿಡ ಝಾಕಿರ್ ನಗರದ ಬಹು ಅಂತಸ್ತುಗಳ ಕಟ್ಟಡವೊಂದರಲ್ಲಿ ಇಂದು ನಸುಕಿನಲ್ಲಿ ಸಂಭವಿಸಿದ ಅಗ್ನಿ ಆಕಸ್ಮಿಕದಲ್ಲಿ ಇಬ್ಬರು ಮಕ್ಕಳೂ ಸೇರಿದಂತೆ ಏಳು ಮಂದಿ ಮೃತಪಟ್ಟು, ಇತರ 16 ಮಂದಿ ತೀವ್ರ ಗಾಯಗೊಂಡಿದ್ದಾರೆ.ಗಾಯಾಳುಗಳಲ್ಲಿ ಏಳು ಮಂದಿಯ ಸ್ಥಿತಿ ಶೋಚನೀಯವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ.

ಈ ದುರ್ಘಟನೆಯಲ್ಲಿ ಇಬ್ಬರು ಸುಟ್ಟು ಕರಕಲಾಗಿದ್ದರೆ, ಐವರು ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ದೆಹಲಿ ಅಗ್ನಿಶಾಮಕ ಸೇನೆಗಳು ಮುಖ್ಯ ಅಧಿಕಾರಿ ಅತುಲ್ ಗರ್ಗ್ ಹೇಳಿದ್ದಾರೆ.ಬೆಂಕಿವ್ಯಾಪಿಸಿದಸಂದರ್ಭದಲ್ಲಿಕಟ್ಟಡದಲ್ಲಿದ್ದಕೆಲವರುಅಪಾಯದಿಂದಪಾರಾಗಲುಮಹಡಿಗಳಿಂದಕೆಳಕ್ಕೆಜಿಗಿದರು.

ಇವರಲ್ಲಿಕೆಲವರಿಗೆಗಾಯಗಳಾಗಿವೆ. ಅಗ್ನಿಶಾಮಕ ದಳದ ಇಬ್ಬರು ಸಿಬ್ಬಂದಿಗೂ ಗಾಯಗಳಾಗಿವೆ.16 ಮಂದಿ ಗಾಯಾಳುಗಳಲ್ಲಿ ವಿಷಮ ಸ್ಥಿತಿಯಲ್ಲಿರುವ ಏಳು ಮಂದಿ ಹೋಲಿ ಫ್ಯಾಮಿಲಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಕಟ್ಟಡದಲ್ಲಿ ಒಟ್ಟು ಐದು ಅಂತಸ್ತುಗಳಿದ್ದು, ಬೆಂಕಿ ದುರಂತ ಸಂಭವಿಸಿದಾಗ ಸುಮಾರು 30ಕ್ಕೂ ಹೆಚ್ಚು ಮಂದಿ ಅದರಲ್ಲಿದ್ದರು. ಕಟ್ಟಡದಲ್ಲಿದ್ದ ವಿದ್ಯುತ್ ಮೀಟರ್ ಬೋರ್ಡ್‍ನಲ್ಲಿ ಕಾಣಿಸಿಕೊಂಡ ಬೆಂಕಿ ನಂತರ ಕಟ್ಟಡವನ್ನು ವ್ಯಾಪಿಸಿ ಈ ದುರ್ಘಟನೆ ಸಂಭವಿಸಿದೆ.ಮುಂಜಾನೆ 2.21ರಲ್ಲಿ ಅಗ್ನಿಶಾಮಕ ದಳಕ್ಕೆ ಬೆಂಕಿ ಆಕಸ್ಮಿಕದ ಬಗ್ಗೆ ದೂರವಾಣಿ ಕರೆ ಬಂದಿತ್ತು. ತಕ್ಷಣ ಕಾರ್ಯ ಪ್ರವೃತ್ತರಾದ ಸಿಬ್ಬಂದಿ ಗಾಯಾಳುಗಳು ಸೇರಿದಂತೆ 20 ಮಂದಿಯನ್ನು ರಕ್ಷಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ