ಸುದ್ದಿ

ನಿವೃತ್ತಿ ವಯಸ್ಸಿನ ಗೊಂದಲಗಳಿಗೊಂದು ತೆರೆ : ಸರ್ಕಾರಿ ನೌಕರರಿಗೊಂದು ಸಂತಸದ ಸುದ್ದಿ…..!

36

ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು ಇಳಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. 33 ವರ್ಷ ಸೇವೆ ಸಲ್ಲಿಸಿದವರ ಅಥವಾ 60 ವರ್ಷ ತುಂಬಿದವರನ್ನು ಸೇವೆಯಿಂದ ನಿವೃತ್ತಿಗೊಳಿಸುವ ಕುರಿತು ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಪ್ರಸ್ತಾವನೆ ಸಲ್ಲಿಸಿದೆ ಎಂದು ಹೇಳಲಾಗಿತ್ತು.

ಆದರೆ, ಈ ಕುರಿತ ಗೊಂದಲಗಳಿಗೆ ತೆರೆ ಬಿದ್ದಿದೆ. ನಿವೃತ್ತಿ ವಯಸ್ಸನ್ನು ಕಡಿಮೆ ಮಾಡುವ ಯಾವುದೇ ಪ್ರಸ್ತಾಪ ಸರಕಾರದ ಮುಂದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಊಹಾಪೋಹ ಮತ್ತು ವದಂತಿಗಳು ಹರಡಿದ ಬಗ್ಗೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದ್ದು, ನಿವೃತ್ತಿ ವಯಸ್ಸನ್ನು ಇಳಿಕೆ ಮಾಡುವ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಹೇಳಿದೆ.

ಕೇಂದ್ರ ಸರ್ಕಾರದ ಹೆಚ್ಚಿನ ಸೇವೆಗಳಲ್ಲಿ 60 ವರ್ಷ ನಿವೃತ್ತಿ ವಯಸ್ಸು ಇದೆ. ಪ್ರಾಧ್ಯಾಪಕರು ಮತ್ತು ವೈದ್ಯರಿಗೆ 65 ವರ್ಷ ನಿವೃತ್ತಿ ವಯಸ್ಸು ನಿಗದಿಪಡಿಸಲಾಗಿದೆ. ಸಿಬ್ಬಂದಿ ಮತ್ತು ತರಬೇತಿ ಇಲಾಖೆ ನಿಯಮದಲ್ಲಿ ಬದಲಾವಣೆ ಮಾಡಿದ್ದು 33 ವರ್ಷ ಸೇವೆ ಪೂರ್ಣಗೊಳಿಸಿದವರು ಅಥವಾ 60 ವರ್ಷದ ನೌಕರರನ್ನು ನಿವೃತ್ತಿಗೊಳಿಸುತ್ತದೆ. ಇದರಲ್ಲಿ ಯಾವುದು ಮೊದಲು ಅದನ್ನು ಕಾರ್ಯಗತಗೊಳಿಸಲಿದೆ ಎಂದು ಹೇಳಲಾಗಿತ್ತು.

ಆದರೆ,ವರದಿಯ ಪ್ರಕಾರ ಅಂತಹ ಯಾವುದೇ ಪ್ರಸ್ತಾಪ ಸಲ್ಲಿಕೆ,ಯಾಗಿಲ್ಲ. ಈ ಕುರಿತಾಗಿ ಎಂದಿಗೂಚರ್ಚೆಯಾಗಿಲ್ಲ. ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. ನಿವೃತ್ತಿ ಕುರಿತಾದ ವಿಚಾರದಲ್ಲಿ ಯಾವುದೇಬದಲಾವಣೆ ತರುವ ಅಗತ್ಯವಿಲ್ಲ. ಕೇಂದ್ರ ಸರ್ಕಾರಿ ನೌಕರರ ಸೇವೆಯನ್ನು ಯಥಾ ರೀತಿಮುಂದುವರೆಸಲಾಗುತ್ತದೆ ಎಂದು ಹೇಳಲಾಗಿದೆ. ಸೆಪ್ಟೆಂಬರ್ 30 ರೊಳಗೆ ಕೇಡರ್ ಮತ್ತು ಅಧಿಕಾರಿಗಳಖಾಲಿ ಹುದ್ದೆಗಳ ಪಟ್ಟಿ ನೀಡುವಂತೆ ಎಲ್ಲಾ ಸಚಿವಾಲಯಗಳನ್ನು ಕೇಂದ್ರ ಸರ್ಕಾರ ಕೇಳಿದ್ದುನಿವೃತ್ತಿಯ ಬಗ್ಗೆ ಯಾವುದೇ ಪ್ರಸ್ತಾಪವಿಲ್ಲ ಎನ್ನಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ