ಸುದ್ದಿ

ಸರ್ಕಾರದ 100 ದಿನದ ಸಾಧನೆಯ ಪುಸ್ತಕ ನಾಳೆ ಬಿಡುಗಡೆಯಾಗಲಿದೆ,.!

25

 ಬಿ. ಎಸ್. ಯಡಿಯೂರಪ್ಪ ನೇತೃತ್ವದ ಕರ್ನಾಟಕದ ಬಿಜೆಪಿ ಸರ್ಕಾರ 100 ದಿನಗಳನ್ನು ಪೂರೈಸಿದೆ. ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಲು ನೂರು ಪುಟಗಳ ಪುಸ್ತಕವನ್ನು ನವೆಂಬರ್ 5ರಂದು ಬಿಡುಗಡೆ ಮಾಡಲಾಗುತ್ತದೆ. ಮಂಗಳವಾರ ಯಡಿಯೂರಪ್ಪ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ಕಾರದ ನೂರು ದಿನಗಳ ಸಾಧನೆ ಕುರಿತ ‘100 ದಿನ 100 ಸಾಧನೆ’ ಎಂಬ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಬಳಿಕ ಪತ್ರಿಕಾಗೋಷ್ಠಿಯನ್ನು ನಡೆಸಲಿದ್ದಾರೆ.

ನವೆಂಬರ್ 2ರಂದು ಯಡಿಯೂರಪ್ಪ ಸರ್ಕಾರ ನೂರು ದಿನಗಳನ್ನು ಪೂರೈಸಿದೆ. ನವೆಂಬರ್ 11ರಂದು 15ಕ್ಷೇತ್ರಗಳ ಉಪ ಚುನಾವಣೆ ನೀತಿ ಸಂಹಿತೆ ಜಾರಿಗೆ ಬರಲಿದೆ. ಅದಕ್ಕೂ ಮೊದಲು ಪುಸ್ತಕವನ್ನು ಬಿಡುಗಡೆ ಮಾಡಿ, ಇದನ್ನು ಮುಂದಿಟ್ಟುಕೊಂಡು ಪ್ರಚಾರ ನಡೆಸಲಾಗುತ್ತದೆ.

ಪ್ರತಿ ಜಿಲ್ಲೆಗಳ ಉಸ್ತುವಾರಿ ಸಚಿವರು ಅವರ ಜಿಲ್ಲೆಗಳಲ್ಲಿ ಸರ್ಕಾರದ ಸಾಧನೆಯ ಪುಸ್ತಕವನ್ನು ಬಿಡುಗಡೆ ಮಾಡಲಿದ್ದಾರೆ. ಎಲ್ಲಾ ಇಲಾಖೆಯಲ್ಲಿ ಕೈಗೊಂಡ ಕಾರ್ಯಕ್ರಮಗಳನ್ನು ಸೇರಿಸಿ100 ಪುಟದ ಪುಸ್ತಕವನ್ನು ಸಿದ್ಧಪಡಿಸಲಾಗಿದೆ.

ರಾಜ್ಯದಲ್ಲಿನ ಪ್ರವಾಹ ಮತ್ತು ಬರ ಪರಿಸ್ಥಿತಿ ಹಿನ್ನಲೆಯಲ್ಲಿ ನೂರು ದಿನ ತುಂಬಿದ ಕಾರ್ಯಕ್ರಮವನ್ನು ಸರಳವಾಗಿ ಮಾಡಲಾಗುತ್ತಿದೆ. ಸರ್ಕಾರ ಏನೂ ಮಾಡುತ್ತಿಲ್ಲ ಎಂದು ಟೀಕಿಸುವ ವಿರೋಧ ಪಕ್ಷಗಳಿಗೆ ಪುಸ್ತಕದ ಮೂಲಕವೇ ಉತ್ತರ ಕೊಡಲು ಬಿಜೆಪಿ ಸರ್ಕಾರ ಮುಂದಾಗಿದೆ. ಪ್ರವಾಹ ಸಂದರ್ಭದಲ್ಲಿ ಸರ್ಕಾರ ಕೈಗೊಂಡ ಕ್ರಮಗಳು, ಬರ ಪರಿಹಾರ, ರೈತರಿಗಾಗಿ ಘೋಷಿಸಿದ ಯೋಜನೆಗಳು, ನೇಕರರ ಸಾಲಮನ್ನಾ, ಬೆಂಗಳೂರು ನಗರದ ಅಭಿವೃದ್ಧಿಗೆ ಕೈಗೊಂಡ ಕ್ರಮಗಳು ಮುಂತಾದ ವಿವರಗಳನ್ನು100 ಪುಟಗಳ ಪುಸ್ತಕ ಒಳಗೊಂಡಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ