ಸುದ್ದಿ

ಐಎಎಸ್ ಓದಬೇಕೆಂಬ ಕನಸು ಹೊತ್ತಿರುವ ಮಗನಿಗೆ ತಾಯಿಯ ಹೆಗಲೇ ಆಸರೆ. ಈ ಸುದ್ದಿ ನೋಡಿ.

32


ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕಡುದರಹಳ್ಳಿಯಲ್ಲಿನ ವಿಶೇಷಚೇತನ ಮಗನ ವಿದ್ಯಾಭ್ಯಾಸಕ್ಕಾಗಿ ತಾಯಿಯ ಹೆಗಲೇ ಆಸರೆಯಾಗಿರುವ ದೃಶ್ಯ ಒಂದು ಕಂಡುಬಂದಿದೆ. ತಂತ್ರಜ್ಞಾನದ ಯುಗದಲ್ಲೂ ಈ ಗ್ರಾಮಕ್ಕೆ ಸಾರಿಗೆ ವ್ಯವಸ್ಥೆಯಿಲ್ಲ. ಹೀಗಾಗಿ ಆಟೋ, ಬಸ್ ಇಲ್ಲವೆಂಬ ನೆಪ ಹೇಳಿ ತನ್ನ ಮಗನ ವಿದ್ಯಾಭ್ಯಾಸ ಮೊಟಕುಗೊಳಿಸದ ವಾತ್ಸಲ್ಯಮಯಿ ತಾಯಿ ಜಯಲಕ್ಷ್ಮಿ ತಮ್ಮ ವಿಶೇಷ ಚೇತನನಾಗಿರುವ ಮಗನಾದ ರಾಜೇಶ್ ಬಾಬುನನ್ನು ನಿತ್ಯ ತನ್ನ ಹೆಗಲ ಮೇಲೆ ನಾಲ್ಕು ಕಿ.ಮೀ ಹೊತ್ತುಕೊಂಡು ಓದಿಸುತ್ತಿದ್ದಾರೆ. ಐಎಎಸ್ ಓದಬೇಕೆಂಬ ಕನಸು ಹೊತ್ತಿರುವ ರಾಜೇಶನ ಕನಸು ಈಡೇರಿಸಲು ಜಯಲಕ್ಷ್ಮಿ ತನ್ನ ಜೀವನ ಧಾರೆ ಎರೆಯುತ್ತಿದ್ದಾರೆ. ಜಯಲಕ್ಷ್ಮಿ ಅವರಿಗೆ ಮೂವರು ಮಕ್ಕಳಿದ್ದು, ಮೊದಲನೇ ಮಗ ರಾಜೇಶ್‍ಗೆ ಅಂಗವಿಕಲತೆ ಕಾಡುತ್ತಿದೆ.

ಪತಿ ಇಲ್ಲವಾದರೂ ಎದೆಗುಂದದ ಜಯಲಕ್ಷ್ಮಿ, ಸಣ್ಣಪುಟ್ಟ ಕೂಲಿ ಕೆಲಸ ಮಾಡಿ ಮೂವರು ಮಕ್ಕಳ ವಿದ್ಯಾಭ್ಯಾಸಕ್ಕೆ ಒತ್ತು ನೀಡುತ್ತಿದ್ದಾರೆ. ಏಳನೇ ತರಗತಿಯವರೆಗೆ ತಮ್ಮ ಸ್ವ-ಗ್ರಾಮವಾಗಿರುವ ಕಡುದರಹಳ್ಳಿಯಲ್ಲಿ ಓದಿದ್ದ ಬಾಬುಗೆ ಓಡಾಡಲು ಶಕ್ತಿಯಿಲ್ಲವಾದರೂ ವಿದ್ಯಾಭ್ಯಾಸದ ಚಿತ್ತ ಮಾತ್ರ ಕಡಿಮೆಯಾಗಿಲ್ಲ. ಹೀಗಾಗಿ ತನ್ನ ತಾಯಿಯ ಹೆಗಲ ಆಸರೆ ಪಡೆದು ಕಡುದರಹಳ್ಳಿಯಿಂದ ಮಿರಾಸಾಬಿಹಳ್ಳಿಯ ರಾಣಿಕೆರೆ ಹೈಸ್ಕೂಲಿಗೆ ಬಂದು ಎಂಟನೇ ತರಗತಿ ಓದುತ್ತಿದ್ದಾನೆ. ಸರ್ಕಾರದಿಂದ ರಾಜೇಶ್ ಬಾಬುಗೆ ನೀಡಿದ್ದ ತ್ರಿಚಕ್ರ ಸೈಕಲ್ ಹಾಳಾಗಿ ಮೂಲೆ ಸೇರಿದೆ. ನಿತ್ಯವೂ ತನ್ನ ತಾಯಿಯ ಹೆಗಲ ಮೇಲೆ ಶಾಲೆಗೆ ಬರುವ ರಾಜೇಶ್‍ಗೆ ಸರ್ಕಾರದಿಂದ ಅಗತ್ಯ ಸೌಲಭ್ಯ ಕಲ್ಪಿಸಬೇಕೆಂಬ ಎಂದು ಶಿಕ್ಷಕರು ಹಾಗೂ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕೇಂದ್ರ ಸಚಿವ ಬಿಜೆಪಿ ಹಿರಿಯ ನಾಯಕ ಅನಂತ್ ಕುಮಾರ್ ಅಸ್ತಂಗತ…

    ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯಕ್ಕೀಡಾಗಿದ್ದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ, ಕರ್ನಾಟಕ ಬಿಜೆಪಿಯ ಹಿರಿಯ ನಾಯಕ ಹೆಚ್ ಎನ್ ಅನಂತ್ ಕುಮಾರ್ ಸೋಮವಾರ ನಸುಕಿನ ಜಾವ ನಿಧನರಾಗಿದ್ದಾರೆ. ಅವರಿಗೆ 59 ವರ್ಷ ವಯಸ್ಸಾಗಿತ್ತು. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅನಂತಕುಮಾರ್ ಅವರು ಸೋಮವಾರ ನಸುಕಿನ ಜಾವ ಎರಡು ಗಂಟೆ ಸುಮಾರಿಗೆ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.ಅನಂತ್​ ಕುಮಾರ್​ ಅವರು ಪತ್ನಿ ತೇಜಸ್ವಿನಿ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಇತ್ತೀಚೆಗೆ ತೀವ್ರ ಅನಾರೋಗ್ಯಪೀಡಿತರಾಗಿದ್ದ ಅನಂತಕುಮಾರ್ ಅವರನ್ನು…

  • ಸಿನಿಮಾ

    ಮಂಡ್ಯ ಲೋಕಸಭಾ ಕ್ಷೇತ್ರದ ಮತದಾರರಾಗಿರುವ ರಮ್ಯಾ ಈ ಬಾರಿಯಾದ್ರೂ ತಮ್ಮ ವೋಟ್ ಹಾಕಿದ್ರಾ..?

    ಮಂಡ್ಯ ಲೋಕಸಭಾ ಕ್ಷೇತ್ರದ ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಸದ್ಯ ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಉಸ್ತುವಾರಿಯನ್ನು ನಿರ್ವಹಿಸುತ್ತಿದ್ದು, ಕೇರಳದ ವಯನಾಡಿನಲ್ಲಿ ಸ್ಪರ್ಧಿಸಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರ ಪ್ರಚಾರ ಕಾರ್ಯದಲ್ಲೂ ಪಾಲ್ಗೊಂಡಿದ್ದಾರೆ. ಮಂಡ್ಯ ಚುನಾವಣೆಯಲ್ಲಿ ಸೋತ ಬಳಿಕ ರಮ್ಯಾ ರಾಜ್ಯ ರಾಜಕಾರಣದಿಂದ ದೂರವಾಗಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲೂ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯ ಕೈಗೊಂಡಿರಲಿಲ್ಲ. ಅಷ್ಟೇ ಅಲ್ಲ, ಮಂಡ್ಯ ಕ್ಷೇತ್ರದಲ್ಲಿ ಮತದಾನ ಮಾಡುವ ಗೋಜಿಗೂ ರಮ್ಯಾ ಹೋಗಿರಲಿಲ್ಲ. ಇದೀಗ ಗುರುವಾರದಂದು ರಾಜ್ಯದಲ್ಲಿ ಮೊದಲ ಹಂತದ…

  • ಸ್ಪೂರ್ತಿ

    ಬಾಂಬ್ ಬ್ಲಾಸ್ಟ್‌ನಲ್ಲಿ ಎರಡೂ ಕೈಗಳನ್ನು ಕಳೆದುಕೊಂಡರೂ ಈಕೆ ಪಿಎಚ್‍ಡಿ ಮಾಡಿದ್ದಾರೆ..!ತಿಳಿಯಲು ಇದನ್ನು ಓದಿ..

    ಜೀವನದಲ್ಲಿ ಎಷ್ಟೇ ಕಷ್ಟಗಳು ಎದುರಾದರೂ ಮುಂದೆ ಸಾಗಬೇಕೆ ಹೊರತು ಹಿಂದಡಿ ಇಡಬಾರದು. ಅಂಗವೈಕಲ್ಯ ಇದೆ ಎಂದು ನೋವನುಭವಿಸಬಾರುದು. ಅದನ್ನು ಜಯಿಸಬೇಕು. ಯಶಸ್ಸಿನಿಂದ ಮುಂದೆ ಸಾಗಬೇಕು. ಮಾಳವಿಕಾ ಅಯ್ಯರ್‌ ಯುವತಿ ತನ್ನ 13ನೇ ವರ್ಷ ಬಾಂಬ್ ಬ್ಲಾಸ್ಟ್‌ನಲ್ಲಿ ಎರಡೂ ಕೈಗಳನ್ನು ಕಳೆದುಕೊಂಡರೂ ಈಗ ಪಿಎಚ್‍ಡಿ ಮಾಡಿದ್ದಾರೆ. ತನ್ನಂತಹ ಅದೆಷ್ಟೋ ಮಂದಿಗೆ ಪ್ರೇರಣೆಯಾಗಿದ್ದಾರೆ. ಆಕೆ ಬಿಕನೀರ್ ಮೂಲದವರು. ಮಾಳವಿಕಾ ಅಯ್ಯರ್‌ದು ತಮಿಳುನಾಡಿನ ಕುಂಭಕೋಣ ಪ್ರದೇಶ. ಅಲ್ಲೇ ಬೆಳದಳು. ಆದರೆ ತಂದೆಗೆ ಬಿಕನೀರ್‌ಗೆ ಟ್ರಾನ್ಸ್‌ಫರ್ ಆಯಿತು. ಆತ ವಾಟರ್ ವರ್ಕ್ಸ್ ಇಲಾಖೆಯಲ್ಲಿ…

  • ಆರೋಗ್ಯ, ಉಪಯುಕ್ತ ಮಾಹಿತಿ

    ನಿಮಗೆ ಗೊತ್ತಿರದ ಈ ಬೀಜಗಳಲ್ಲಿದೆ ನಿಮ್ಮ ದೇಹದ ತೂಕ ಕಡಿಮೆ ಮಾಡುವ ತಾಕತ್ತು.!ತಿಳಿಯಲು ಈ ಮಾಹಿತಿ ನೋಡಿ..

    ಹಣ್ಣು, ತರಕಾರಿ ಆರೋಗ್ಯಕ್ಕೆ ಒಳ್ಳೆಯದು. ಇವು ದೇಹಕ್ಕೆ ಬೇಕಾಗುವ ಪೋಷಕಾಂಶಗಳನ್ನು ನೀಡುತ್ತವೆ. ತರಕಾರಿ ಹಾಗೂ ಹಣ್ಣನ್ನು ತಿಂದು ಅದ್ರ ಬೀಜವನ್ನು ನಾವು ಕಸದ ಬುಟ್ಟಿಗೆ ಹಾಕ್ತೇವೆ. ನೆನಪಿರಲಿ ಈ ಬೀಜದಲ್ಲಿಯೂ ಸಾಕಷ್ಟು ಔಷಧಿ ಗುಣವಿದೆ. ಕೆಲವೊಂದು ಬೀಜಗಳು ನಮ್ಮ ತೂಕ ಕಡಿಮೆ ಮಾಡಲು ನೆರವಾಗುತ್ತವೆ. *ಸಾಮಾನ್ಯವಾಗಿ ಕಲ್ಲಂಗಡಿ ಹಣ್ಣಿನ ಬೀಜ ಕಸದ ಬುಟ್ಟಿ ಸೇರುತ್ತೆ. ಆದ್ರೆ ಕಲ್ಲಂಗಡಿ ಬೀಜ ಬಹಳ ಒಳ್ಳೆಯದು. ಹಾಲು ಅಥವಾ ನೀರಿನ ಜೊತೆ ಸೇವನೆ ಮಾಡಬಹುದು. ಇದರಿಂದ ನಿಮ್ಮ ತೂಕ ಕಡಿಮೆಯಾಗುತ್ತದೆ. *ಕಲ್ಲಂಗಡಿ…

  • ಸುದ್ದಿ

    ಆಸಿಫಾ ಅತ್ಯಾಚಾರದ ಬಗ್ಗೆ ಈಗೊಂದು ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿದೆ.!ಇದು ನಿಜವೋ, ಸುಳ್ಳೋ ನೀವೇ ಹೇಳಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮನುಕುಲವನ್ನೇ ಬೆಚ್ಚಿ ಬೀಳಿಸುವ ಹೃದಯ ವಿದ್ರಾವಕ ಘಟನೆ ಕಾಶ್ಮೀರದಲ್ಲಿ ನಡೆದಿದ್ದು, ಏನೂ ತಿಳಿಯದ ಕಂದಮ್ಮನ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವುದರಿಂದ ಇಡೀ ಭಾರತವೇ ತಲೆ ತಗ್ಗಿಸುವಂತಾಗಿದೆ.ಪಾಪ ಏನೂ ತಿಳಿಯದ ಮುಗ್ದ ಬಾಲಕಿ ಇವರಿಗೆ ಏನು ಮಾಡಿತ್ತು. ಅತ್ಯಾಚಾರ ನಡೆಸಿ, ಕೊಲೆ ಮಾಡಿದವರು ಯಾರೀ ಆಗಿರಲಿ ಅವರಿಗೆ ಕೊಡುವ ಶಿಕ್ಷೆ, ಬೇರೆಯವರಿಗೂ ಪಾಟವಾಗಬೇಕು. ಇದರಲ್ಲಿ ಯಾವುದೇ ಧರ್ಮ, ರಾಜಕೀಯ ದಯವಿಟ್ಟು ಮಾಡ ಬೇಡಿ.ನಮ್ಮ ಬೇಡಿಕೆ ಆರೋಪಿಗಳಿಗೆ ಕಠಿಣ ಶಿಕ್ಷೆ…

  • ಆರೋಗ್ಯ

    ಹಣೆಗೆ ತಿಲಕವಿಡುವುದರಿಂದ ಆಗುವ ಉಪಯೋಗಗಳ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಹಿಂದೂ ಧರ್ಮದಲ್ಲಿ ಹಣೆಗೆ ತಿಲಕವಿಟ್ಟುಕೊಳ್ಳುವ ಸಂಪ್ರದಾಯವಿದೆ. ಯಾವುದೇ ಶುಭ ಕಾರ್ಯ, ಪೂಜೆ ವೇಳೆ ತಿಲಕವಿಟ್ಟುಕೊಳ್ಳುತ್ತಾರೆ. ದೇವಸ್ಥಾನಕ್ಕೆ ಹೋದ ಭಕ್ತರು ತಿಲಕವಿಟ್ಟುಕೊಳ್ಳುವ ಪದ್ಧತಿಯಿದೆ.