ಉಪಯುಕ್ತ ಮಾಹಿತಿ

ಮಕರ ಸಂಕ್ರಾಂತಿ ಹಬ್ಬಕ್ಕೆ ಸರಿಯಾದ ಕ್ರಮದಲ್ಲಿ ಎಳ್ಳು ಬೆಲ್ಲ ಮಾಡುವ ವಿಧಾನ.

47

ಎಳ್ಳು ಬೆಲ್ಲ ತಿಂದು, ಒಳ್ಳೆಯ ಮಾತನಾಡಿ’ ಎಂಬ ಗಾದೆ ಇದೆ. ಅದರಂತೆಯೇ ಸಂಕ್ರಾಂತಿ ಹಬ್ಬದಂದು ಎಲ್ಲರೂ ಎಳ್ಳು ಬೆಲ್ಲ ತಿಂದು ಹೊಸ ವರ್ಷದ ಮೊದಲ ಹಬ್ಬವನ್ನು ಸಿಹಿಯಾಗಿ ಬರಮಾಡಿಕೊಳ್ಳುತ್ತಾರೆ. ಆದ್ದರಿಂದ ಹಬ್ಬಕ್ಕಾಗಿ ಅಂಗಡಿಯಿಂದ ತಂದು ಮಾಡುವ ಬದಲು ಮನೆಯಲ್ಲಿಯೇ ಸುಲಭವಾಗಿ ತಯಾರು ಮಾಡಿ. ನಿಮಗಾಗಿ ಎಳ್ಳು-ಬೆಲ್ಲ ತಯಾರು ಮಾಡುವ ವಿಧಾನ ಇಲ್ಲಿದೆ.

ಮಾಡುವ ವಿಧಾನ
ಕಡ್ಲೆಕಾಯಿ ಬೀಜವನ್ನು ಚೆನ್ನಾಗಿ ಹುರಿದು ಸಿಪ್ಪೆ ತೆಗೆದು ಬಿಡಿ ಬಿಡಿ ಮಾಡಿಕೊಳ್ಳಿ.
ಎಳ್ಳನ್ನು ಸ್ವಲ್ಪ ಹುರಿದುಕೊಳ್ಳಿ.
ಅಚ್ಚು ಬೆಲ್ಲವನ್ನು ಚಾಕುವಿನಿಂದ ಸಣ್ಣ ಸಣ್ಣದಾಗಿ ಕಟ್ ಮಾಡಿ.
ಕೊಬ್ಬರಿ ಕಪ್ಪು ಭಾಗವನ್ನು ತೆಗೆದು ಚಿಕ್ಕದಾಗಿ ಕಟ್ ಮಾಡಿ.
ಹುರಿಗಡಲೆಯನ್ನು ಬೆಚ್ಚಗಾಗುವಷ್ಟು ಹುರಿದುಕೊಳ್ಳಿ.
ಈಗ ಒಂದು ಮಿಕ್ಸಿಂಗ್ ಬೌಲ್‍ಗೆ ಎಳ್ಳು, ಕಡ್ಲೆಕಾಯಿಬೀಜ, ಹುರಿಗಡಲೆ, ಸಣ್ಣಗೆ ತುಂಡರಿಸಿದ ಬೆಲ್ಲ, ಕೊಬ್ಬರಿ, ಜೀರಿಗೆ ಪೆಪ್ಪರ್ ಮೆಂಟ್, ಬಿಳಿ ಬತಾಸು ಸೇರಿಸಿ ಮಿಕ್ಸ್ ಮಾಡಿ.
ಒಂದು ಏರ್ ಟೈಟ್ ಜಾರ್ ಗೆ  ಶೇಖರಿಸಿಟ್ಟರೆ ತಿಂಗಳುಗಳ ಕಾಲ ತಿನ್ನಲು ಯೋಗ್ಯವಾಗಿರುತ್ತದೆ.
ಅಂಗಡಿಯಲ್ಲಿ ಸಿಗುವ ರೆಡಿ ಮಿಕ್ಸ್ ಗಿಂತ ಮನೆಯಲ್ಲೇ ಮಾಡಿ ಪ್ರೆಶ್ ಆಗಿ ತಿನ್ನಿರಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ