ಗ್ಯಾಜೆಟ್

ಹಣದ ಬದಲು ಎಟಿಎಂನಲ್ಲಿ ಬಂತು ಪೇಪರ್…! ತಿಳಿಯಲು ಈ ಲೇಖನವನ್ನು ಓದಿ …

545

ಬಳ್ಳಾರಿ ಜಿಲ್ಲೆಯ ಎಸ್‍ಬಿಐ ಬ್ಯಾಂಕ್ ಎಟಿಎಂನಲ್ಲಿ ಹಣದ ಬದಲು ಪೇಪರ್ ಬಂದ ಪ್ರಕರಣಕ್ಕೆ ಸಂಭಂದಿಸಿದಂತೆ ಬ್ಯಾಂಕ್ ಅಧಿಕಾರಿಗಳು ತಪ್ಪೊಪ್ಪಿಕೊಂಡಿದ್ದಾರೆ.

ಇಲ್ಲಿನ ಟ್ಯಾಂಕ್‌ 1 ರಸ್ತೆಯಲ್ಲಿರುವ ಎಸ್‌ಬಿಐ ಎಟಿಎಂನಲ್ಲಿ ನೋಟಿನ ಬದಲು ಪೇಪರ್‌ ಬಂದ ಘಟನೆ ನಡೆದಿದೆ.

ರಮೇಶ್‌ ಎನ್ನುವವರು 8000 ರೂಪಾಯಿ ಡ್ರಾ ಮಾಡಿದ್ದು 500 ರೂಪಾಯಿ ಮುಖಬೆಲೆಯ 15 ನೋಟುಗಳ ನಡುವೆ ಅದೇ ಗಾತ್ರದ ಚಲನ್‌ ಮಾದರಿಯ ಪೇಪರ್‌ವೊಂದು ಬಂದಿದೆ.

ಹಣವನ್ನು ಎಣಿಸಿ ನೋಡುವಾಗ ಪೇಪರ್‌ ಕಂಡಿದ್ದು  ಬ್ಯಾಂಕ್‌ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಒಂದೋ ಹಣದ ಕಟ್ಟಿನಲ್ಲಿ ಪೇಪರ್‌ ಇದ್ದ ಕಾರಣ ಹೀಗಾಗಿರಬಹುದು ಎಂದು ಹೇಳಲಾಗಿದೆ.

ಬ್ಯಾಂಕ್‌ ವತಿಯಿಂದ ಇದುವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ಗ್ರಾಹಕ ರಮೇಶ್‍ಗೆ 500 ರೂಪಾಯಿ ಹಣ ವಾಪಸ್ ಮಾಡುವ ಭರವಸೆ ನೀಡಿರೋ ಬ್ಯಾಂಕ್ ಸಿಬ್ಬಂದಿ, ಇನ್ನೆಂದೂ ಈ ರೀತಿ ತಪ್ಪಾಗದಂತೆ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಭಾನುವಾರದಂದು ರಮೇಶ್ ಅವರು ಬಳ್ಳಾರಿಯ ಎಸ್‍ಬಿಐ ಎಟಿಎಂ ನಲ್ಲಿ ಹಣ ಡ್ರಾ ಮಾಡಿದಾಗ 500 ರೂ. ಬದಲಾಗಿ ಪೇಪರ್ ಬಂದಿತ್ತು.

ಗ್ರಾಹಕ ರಮೇಶ್ ಎಟಿಎಂನಲ್ಲಿ ಹಣ ಡ್ರಾ ಮಾಡಿದ ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ಮಾಡಿ ಹಣವನ್ನು ಮರಳಿ ನೀಡುವ ತೀರ್ಮಾನ ಕೈಗೊಂಡಿದ್ದಾರೆ. ಅಲ್ಲದೇ ಗ್ರಾಹಕ ರಮೇಶ್ ಮುಂದೆ ಬ್ಯಾಂಕ್ ಅಧಿಕಾರಿಗಳು ತಪ್ಪೊಪ್ಪಿಕೊಂಡು ಗ್ರಾಹಕನ ಕ್ಷಮೆ ಕೋರಿದ್ದಾರೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ದೇಹದ ಕೆಟ್ಟ ಕೊಬ್ಬು ಕರಗಬೇಕೆಂದರೆ ದಿನ ನಿತ್ಯ ಈ ಹಣ್ಣನ್ನು ತಿಂದರೆ ಸಾಕು,.!

    ಹಣ್ಣುಗಳು ನಮ್ಮ ದೇಹದ ಆರೋಗ್ಯವನ್ನು ಕಾಪಾಡುವಲ್ಲಿ ಮುಖ್ಯ  ಪಾತ್ರ ವಹಿಸುತ್ತದೆ ಹಾಗೆಯೇ ಕೊಬ್ಬನ್ನು ಕರಗಿಸುವಲ್ಲಿಯೂ ಸಹ ಸಹಾಯ ಮಾಡುತ್ತದೆ, ಒಂದೊಂದು ಹಣ್ಣಿನಲ್ಲಿ ಒಂದೊಂದು ರೀತಿಯ  ಪೋಷಕಾಂಶಗಳು ಹಾಗೂ ವಿಟಮಿನ್ ಗಳು ನಮಗೆ ಸಿಗುತ್ತದೆ . ಹೀಗಾಗಿ ಎಲ್ಲಾ ರೀತಿಯ ಹಣ್ಣುಗಳನ್ನು ತಿನ್ನುವುದರಿಂದ  ಅದರ ಲಾಭಗಳು ನಮಗೆ ಸಿಗುತ್ತದೆ. ಕೆಲವು ಹಣ್ಣುಗಳು ರುಚಿಯಲ್ಲಿ ತುಂಬಾ ಸಿಹಿಯಲ್ಲದೆ ಇದ್ದರೂ ಅದರಲ್ಲಿ ದೇಹಕ್ಕೆ ಬೇಕಾಗುವಂತಹ ಪ್ರಮುಖ ಪೋಷಕಾಂಶಗಳು ಇರುತ್ತದೆ. ಹಾಗೆಯೆ ಅದರಲ್ಲಿ ಅವಕಾಡೊ(ಬೆಣ್ಣೆ ಹಣ್ಣು) ಹಣ್ಣು ಕೂಡ ಒಂದಾಗಿದೆ. ಅವಕಾಡೊ ಹಣ್ಣು…

  • ಜ್ಯೋತಿಷ್ಯ

    ದೇವರಿಗೆ ಪೂಜೆ ಮಾಡುವ ಸಮಯದಲ್ಲಿ ಒಡೆದ ತೆಂಗಿನಕಾಯಿ ಕೆಟ್ಟಿದ್ರೆ ಏನರ್ಥ ಗೊತ್ತಾ..?

    ಹಿಂದೂ ಧರ್ಮದಲ್ಲಿ ದೇವರ ಪೂಜೆ ವೇಳೆ ತೆಂಗಿನ ಕಾಯಿ ಒಡೆಯುವ ಪದ್ಧತಿಯಿದೆ. ಅನೇಕ ಬಾರಿ ಒಡೆದ ತೆಂಗಿನಕಾಯಿ ಹಾಳಾಗಿರುತ್ತದೆ. ಪೂಜೆ ನಂತ್ರ ಹಾಳಾದ ತೆಂಗಿನಕಾಯಿ ನೀಡಿದ ಅಂಗಡಿ ಮಾಲೀಕನಿಗೆ ಕೆಲವರು ಬೈದ್ರೆ ಮತ್ತೆ ಕೆಲವರು ಭಯಪಟ್ಟುಕೊಳ್ತಾರೆ. ತೆಂಗಿನಕಾಯಿ ಹಾಳಾಗಲು ಕಾರಣವೇನು? ಇದು ಅಶುಭ ಫಲ ನೀಡುತ್ತಾ? ಇದು ಮುಂದೆ ಬರಲಿರುವ ಕಷ್ಟದ ಮುನ್ಸೂಚನೆಯಾ? ಹೀಗೆ ಅನೇಕ ಪ್ರಶ್ನೆಗಳು ಏಳುತ್ತವೆ. ನಿಮಗೂ ಈ ಸಮಸ್ಯೆ ಕಾಡಿದ್ದರೆ ಅವಶ್ಯವಾಗಿ ಈ ಸುದ್ದಿ ಓದಿ. ಪೂಜೆ ವೇಳೆ ಒಡೆದ ತೆಂಗಿನಕಾಯಿ ಹಾಳಾಗಿದ್ರೆ…

  • ಸಾಧನೆ

    ಸಿವಿಲ್ ಕೋರ್ಟ್‌ನ ನ್ಯಾಯಾಧೀಶೆಯಾಗಿ ಕೋಲಾರ ಗಾಯಿತ್ರಿ ಆಯ್ಕೆ

    ಕರ್ನಾಟಕ ಹೈ ಕೋರ್ಟ್‌ನ ಸಿವಿಲ್ ನ್ಯಾಯಾಧೀಶೆಯಾಗಿ ಬಂಗಾರಪೇಟೆಯ ಎನ್.ಗಾಯಿತ್ರಿ ರವರು ಆಯ್ಕೆಯಾಗಿ ಕೋಲಾರ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. 2021ರಲ್ಲಿ ಕಾನೂನು ಪದವಿ ಪಡೆದುಕೊಂಡಿರುವ ಗಾಯತ್ರಿರವರು ತಾವು ಕಂಡ ಕನಸನ್ನು ನನಸು ಮಾಡಿಕೊಳ್ಳುವ ನಿಟ್ಟಿನಲ್ಲಿ ಸತತ ಮತ್ತು ಸರಿಯಾದ ಪ್ರಯತ್ನದ ಮೂಲಕ 25ನೇ ವಯಸ್ಸಿಗೆ ಕರ್ನಾಟಕ ಸಿವಿಲ್ ಕೋರ್ಟ್‌ನ  ನ್ಯಾಯಾಧೀಶರಾಗಿ ಆಯ್ಕೆಯಾಗುವಲ್ಲಿ ಯಶಸ್ವಿಯಾಗಿದ್ದಾರೆ. ಕರ್ನಾಟಕ ಉಚ್ಛ ನ್ಯಾಯಾಲಯವು ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿತ್ತು.  ಇದೀಗ ಫಲಿತಾಂಶ ಪ್ರಕಟಗೊಂಡಿದ್ದು ಗಾಯತ್ರಿ ಅವರು ಆಯ್ಕೆಯಾಗಿದ್ದಾರೆ….

  • ಸಿನಿಮಾ

    CBSE ಪರೀಕ್ಷೆಯಲ್ಲಿ ಅತ್ತ್ಯುತ್ತಮ ಸಾಧನೆ ಮಾಡಿದ ನಟಿ ಸುಧಾರಾಣಿ ಮಗಳು…

    ಇತ್ತೀಚಿಗಷ್ಟೇ ಪಿಯುಸಿ ಮತ್ತು ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟವಾಗಿದ್ದು, ಇದರ ಬೆನ್ನಲ್ಲೆ ಈಗ ಸಿಬಿಎಸ್‍ಇ 12ನೇ ತರಗತಿಯ ಫಲಿತಾಂಶ ಕೂಡ ಹೊರಬಿದ್ದಿದೆ. ಈ ಪರೀಕ್ಷೆಯಲ್ಲಿ ನಟಿ ಸುಧಾರಾಣಿ ಪುತ್ರಿ ಅತಿಹೆಚ್ಚು ಅಂಕ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ. ಸುಧಾರಾಣಿ ಮಗಳು ನಿಧಿ ಸಿಬಿಎಸ್‍ಇ ಪರೀಕ್ಷೆಯಲ್ಲಿ 96.4% ಮಾರ್ಕ್ಸ್ ಪಡೆದಿದ್ದು, ಈ ಮೂಲಕ ಪೋಷಕರಿಗೆ ಹೆಮ್ಮೆ ತಂದಿದ್ದಾರೆ. ಈ ಸಂತೋಷವನ್ನು ನಟಿ ಸುಧಾರಾಣಿ ಅವರು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. “ಇದು ನಮ್ಮ ಜೀವನದಲ್ಲಿ ತುಂಬಾ ಸಂತೋಷದ ಸಮಯವಾಗಿದೆ. ನಮ್ಮ ಸುಬ್ಬಿಕುಟ್ಟಿ…

  • Uncategorized

    ಬಿಸಿಲು ಬಿಸಿಲು ಬಿಸಿಲು…!!!

    ಬಿಸಿಲು,ಬಿಸಿಲು, ಎಲ್ಲಿ ನೋಡಿದರೂ ಬಿಸಿಲ ಬೇಗೆ, ಧಗೆ. ಇಷ್ಟು ದಿನ ಕಣ್ಣಿಗೆ, ಮನಸಿಗೆ ತಂಪಾಗಿದ್ದ ಬೆಂಗಳೂರು, ಈಗ ಬಿರು ಬಸಿಲಿನ ನಾಡಾಗಿದೆ. ಜನರಿಗೆ ಕುಳಿತಲ್ಲಿ ಕೂರಲಾಗದೆ, ನಿಂತಲ್ಲಿ ನಿಲ್ಲಲಾಗದ ಹಾಗೆ ಮಾಡಿದೆ ಈ ಬಿಸಿಲು. ಬೇಸಿಗೆಯು ಶುಭಾರಂಭವಾಗಿ 4 ದಿನ ಆಗಿಲ್ಲ ಆಗಲೇ ಜನರ ಮೈನೀರಿಳಿಸುತ್ತಿದೆ ಈ ಬೇಸಿಗೆ. ತಂಪು ತಂಪಾದ ತಂಪು ಪಾನೀಯಗಳ ಬಳಕೆ ಹೆಚ್ಚಾಗಿದೆ. ಹಾಗೆ ಕಲ್ಲಂಗಡಿ, ಕಿತ್ತಳೆ ಮತ್ತು ಎಳೆನೀರಿನ ಉಪಯೋಗ ಆಗಲೇ ಶುರುವಾಗಿದೆ. ನೀರಿನ ಕಷ್ಟ ಎದುರಾಗಿದೆ. ಪ್ರಾಣಿಗಳು ಪಕ್ಷಿಗಳಿಗೂ ಈ…

  • ಸುದ್ದಿ

    ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ ನಗರ ಸಭೆ ಸಂಸ್ಥೆಗಳಿಗೆ 40 ಕೋಟಿ ರೂ. ಬಿಡುಗಡೆ…!

    ರಾಜ್ಯದ ಬರಪೀಡಿತ ತಾಲೂಕುಗಳ ವ್ಯಾಪ್ತಿಯಲ್ಲಿ ಬರುವ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ 40 ಕೋಟಿ ರೂ. ಅನುದಾನ ಬಿಡುಗಡೆ ಮಾಡಲು ನಗರಾಭಿವೃದ್ಧಿ ಇಲಾಖೆ ಆದೇಶಿಸಿದೆ. ನಗರ ಸ್ಥಳೀಯ ಸಂಸ್ಥೆಗಳು, ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಟಾಸ್ಕ್ ಪೋರ್ಸ್ ರಚಿಸಲಾಗಿದ್ದು, ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಅವಶ್ಯವಿರುವ ಕಾಮಗಾರಿಗಳ ಕ್ರಿಯಾ ಯೋಜನೆಯನ್ನು ತಯಾರಿಸಿ, ಜಿಲ್ಲಾಧಿಕಾರಿಗಳಿಂದ ಅನುಮೋದನೆ ಪಡೆದು ತುರ್ತಾಗಿ ಅನುಷ್ಠಾನಗೊಳಿಸಬೇಕು. ಬಿಡುಗಡೆ ಮಾಡಿರುವ ಅನುದಾನದಡಿ ಕೊಳವೆ ಬಾವಿಗಳನ್ನು ಆಳಗೊಳಿಸುವ, ಸ್ವಚ್ಛಗೊಳಿಸುವುದು ಹಾಗೂ ಹೈಡ್ರೋಫ್ರಾಕ್ಚರಿಂಗ್ ಕೈಗೊಳ್ಳುವುದು. ನೀರು…