inspirational, ದೇಶ-ವಿದೇಶ, ಸುದ್ದಿ

ಗರ್ಭಿಣಿಯನ್ನು 6 ಕಿ.ಮೀ ಹೆಗಲ ಮೇಲೆಯೇ ಹೊತ್ತು ನಡೆದು ಮಾನವೀಯತೆ ಮೆರೆದ ಯೋಧರು.

45

ಚಿಕಿತ್ಸೆಗಾಗಿ ಪರದಾಡುತ್ತಿದ್ದ ಗರ್ಭಿಣಿಯನ್ನು ಸಿಆರ್ ಪಿಎಫ್ ಯೋಧರು ಸುಮಾರು 6 ಕಿ.ಮೀ. ಹೆಗಲ ಮೇಲೆ ಹೊತ್ತು ನಡೆದು, ನಂತರ ವಾಹನದ ಮೂಲಕ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ.

ಛತ್ತಿಸ್‍ಗಢದ ಬಿಜಾಪುರದ ಕಾಡಿನ ಪ್ರದೇಶ ಪಡೇಡಾದಲ್ಲಿ ಘಟನೆ ನಡೆದಿದ್ದು, ಕಾಡಿನ ಮಧ್ಯೆ ರಸ್ತೆ ಸಂಪರ್ಕವಿರದ ಗ್ರಾಮದಲ್ಲಿ ಗರ್ಭಿಣಿ ಚಿಕಿತ್ಸೆಗಾಗಿ ಪರದಾಡುತ್ತಿದ್ದಳು. ಇದನ್ನು ಕಂಡ ಸಿಆರ್ ಪಿಎಫ್ ಯೋಧರು ಆಕೆಗೆ ಸಹಾಯ ಮಾಡಿದ್ದು, ತಕ್ಷಣವೇ ಎಚ್ಚೆತ್ತುಕೊಂಡು ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯಲು ಸಹಾಯ ಮಾಡಿದ್ದಾರೆ.

ಹೊಟ್ಟೆ ನೋವಿನಿಂದಾಗಿ ಮಹಿಳೆ ಹೊರಸಿನ ಮೇಲೆಯೇ ಒದ್ದಾಡುತ್ತಿದ್ದಳು. ಇದನ್ನು ಕಂಡ ಸಿಆರ್ ಪಿಎಫ್ ಯೋಧರು, ಮಹಿಳೆಯನ್ನು ಹೊರಸಿನ ಸಮೇತ ಎತ್ತಿಕೊಂಡು, ರಸ್ತೆವರೆಗೆ ಹೆಗಲ ಮೇಲೆ ಹೊತ್ತೊಯ್ದಿದ್ದಾರೆ. ಮಹಿಳೆಯ ಮನೆಯಿದ್ದ ಕಾಡಿನ ಪ್ರದೇಶ ಪಡೇಡಾದಿಂದ ಸುಮಾರು 6ಕಿ.ಮೀ. ದೂರದಲ್ಲಿ ರಸ್ತೆ ಇದ್ದು, ಅಲ್ಲಿಯವರೆಗೂ ಯೋಧರು ಮಹಿಳೆಯನ್ನು ಹೆಗಲ ಮೇಲೆ ಹೊತ್ತುಕೊಂಡು ಹೋಗಿದ್ದಾರೆ.

ರಸ್ತೆವರೆಗೆ ಮಹಿಳೆಯನ್ನು ಹೊತ್ತುಕೊಂಡು ಹೋಗಿ, ನಂತರ ವಾಹನದ ಮೂಲಕ ಮಹಿಳೆಯನ್ನು ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಯೋಧರ ಕಾರ್ಯಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜೀವನಶೈಲಿ

    ಬೆಳಗಿನ ತಿಂಡಿ ಬಿಟ್ಟುಬಿಡಿ, ತೂಕ ಇಳಿಸಿಕೊಳ್ಳಿ ! ತಿಳಿಯಲು ಈ ಲೇಖನ ಓದಿ…

    ನಿಮ್ಮ ದೇಹ ತೂಕವನ್ನು ಬೇಗನೆ ಇಳಿಸಬೇಕೆಂದಿದ್ದರೆ ಬೆಳಗಿನ ಉಪಹಾರವನ್ನು ಬಿಟ್ಟುಬಿಡಿ. ಮಧ್ಯಾಹ್ನ ಊಟದ ವರೆಗೆ ಏನೂ ತಿನ್ನದೆ ಉಪವಾಸ ವಿದ್ದರೆ ಪ್ರತಿನಿತ್ಯ ಸುಮಾರು 350 ರಷ್ಟು ಕಡಿಮೆ ಕ್ಯಾಲೊರಿ ಆಹಾರ ಸೇವಿಸಬಹುದು ಮತ್ತು ಇದರಿಂದ ದೇಹದ ತೂಕವನ್ನು ಇಳಿಸಬಹುದು ಎಂದು ಅಧ್ಯಯನವೊಂದು ಹೇಳುತ್ತದೆ.

  • ಸಿನಿಮಾ

    ತೆರಿಗೆಯಲ್ಲಿ ಕೂಡ “ಬಾಹುಬಲಿ” ಮುಂದೆ

    ಕನ್ನಡ ಪರ ಸಂಘಟನೆಗಳ ಪ್ರತಿಭಟನೆಯ ಹಿನ್ನಲೆಯಲ್ಲಿ ಬಾಹುಬಲಿ 2 ಚಿತ್ರ ರಾಜ್ಯದಲ್ಲಿ ಬಿಡುಗಡೆಯಾಗವ ಬಗ್ಗೆಯೇ ಹಲವು ಪ್ರಶ್ನೆಗಳು ಎದ್ದಿದ್ದವು. ಕಡೆಗೂ ಕಟ್ಟಪ್ಪ ಪಾತ್ರಧಾರಿ ಸತ್ಯರಾಜ್ ತಮ್ಮ ಹೇಳಿಕೆಯ ಕುರಿತು ಕ್ಷಮೆಯಾಚಿಸಿದ ಬಳಿಕ ಚಿತ್ರ ಬಿಡುಗೆಡೆಯಾಗಿ ಚಿತ್ರಮಂದಿಗಳು ಪ್ರೇಕ್ಷಕರಿಂದ ಕಿಕ್ಕಿರಿದು ತುಂಬಿಕೊಂಡಿದ್ದವು.

  • ಸುದ್ದಿ

    ಟಿಕ್‍ಟಾಕ್ ವಿಡಿಯೋ ಮಾಡಿದ್ದಕ್ಕೆ ಪತ್ನಿಯನ್ನು ಕೊಂದ ಪತಿ…….!

    ಟಿಕ್‍ಟಾಕ್ ವಿಡಿಯೋ ಮಾಡಿದ್ದಕ್ಕೆ ಪತಿಯೇ ತನ್ನ ಪತ್ನಿಯನ್ನು ಕೊಲೆ ಮಾಡಿದ ಘಟನೆ ತಮಿಳು ನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ.ನಂದಿನಿ(28) ಕೊಲೆಯಾದ ದುರ್ದೈವಿ. ನಂದಿನಿ ಪ್ರೈವೇಟ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದಳು. ಈಕೆ ಕಟ್ಟಡ ನಿರ್ಮಾಣ ಕಾರ್ಮಿಕ ಕನಕ ರಾಜುನನ್ನು ಮದುವೆ ಆಗಿದ್ದಳು. ಈ ದಂಪತಿಗೆ ಒಬ್ಬ ಮಗ ಹಾಗೂ ಒಬ್ಬ ಮಗಳು ಕೂಡ ಇದ್ದಾರೆ. ನಂದಿನಿ ಹಾಗೂ ಕನಕ ರಾಜು ಎರಡು ವರ್ಷದಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ನಂದಿನಿ ತನ್ನ ಪತಿ ಕನಕ ರಾಜುನಿಂದ ದೂರ ಆಗಿ ಟಿಕ್‍ಟಾಕ್‍ಗೆ ಅಡಿಕ್ಟ್…

  • ಸಿನಿಮಾ, ಸುದ್ದಿ

    ತನಗಿಂತ ಚಿಕ್ಕವಯಸ್ಸಿನ ನಟರನ್ನು ಮದುವೆಯಾದ ಟಾಪ್ ಸಿನಿಮಾ ನಟಿಯರು!

    ನಿಮಗೆಲ್ಲರಿಗೂ ಗೊತ್ತಿರಬಹುದು, ಹಿಂದಿನ ಕಾಲದ ಮದುವೆಯ ನಿಯಮಗಳು ಸಂಪ್ರದಾಯಗಳು ಹೇಗಿತ್ತು ಎಂಬುದು. ಮದುವೆಯಾಗುವ ನವ ಜೋಡಿಗಳಲ್ಲಿ ವಧುಗಿಂತ ವರನು ದೊಡ್ಡವನಾಗಿರಬೇಕು, ಇಲ್ಲವಾದಲ್ಲಿ ಮದುವೆಗೆ ಒಪ್ಪಿಗೆಯನ್ನು ಕೊಡುತ್ತಲೇ ಇರುತ್ತಿರಲಿಲ್ಲ. ಆದರೆ ಈಗ ಕಾಲ ಬದಲಾಗಿದೆ, ದಿನಗಳು ಉರುಳಿದಂತೆ ಸಂಪ್ರದಾಯಗಳು ಬದಲಾಗುತ್ತಿವೆ. ಜಾತಿ, ಧರ್ಮ, ವಯಸ್ಸು ಇವ್ಯಾವುದನ್ನು ಲೆಕ್ಕಿಸದೆ ತಾನು ಪ್ರೀತಿಸಿದ ವ್ಯಕ್ತಿಯನ್ನು ವಿವಾಹವಾಗಿ ಸುಖಕರ ಜೀವನ ನಡೆಸುತ್ತಿರುತ್ತಾರೆ. ಒಂದು ಕಡೆಯಿಂದ ಯೋಚಿಸುವುದಾದರೆ ಈ ನಿರ್ಧಾರ ಸರಿ ಅನಿಸುತ್ತದೆ ಅಲ್ಲವೇ?  ಅಂತೆಯೇ ನಮ್ಮ ದಕ್ಷಿಣ ಭಾರತದ ಆಲ್ಮೋಸ್ಟ್ ಟಾಪ್ ನಟಿಯರು…

  • ಸೌಂದರ್ಯ

    ತಲೆಹೊಟ್ಟಿನ ತಲೆನೋವಿಗೆ ಇಲ್ಲಿದೆ ಮನೆಮದ್ದು….

    ತಲೆಹೊಟ್ಟು ಎಲ್ಲ ರೀತಿಯ ವಯೋಮಾನದವರನ್ನು ಕಾಡುವ ಸಮಸ್ಯೆ. ಮಾರುಕಟ್ಟೆಯಲ್ಲಿ ಸಿಗುವ ಯಾವೆಲ್ಲ ಎಣ್ಣೆ ಹಾಗೂ ಶ್ಯಾಂಪೂ ಗಳನ್ನು ಪ್ರಯೋಗ ಮಾಡಿದ್ರೂ ತಲೆಹೊಟ್ಟು ಹೋಗ್ತಾಯಿಲ್ಲ ಎನ್ನುವವರಿದ್ದಾರೆ

  • ವಿಚಿತ್ರ ಆದರೂ ಸತ್ಯ

    ಗೊಮಟೇಶ್ವರಕ್ಕೆ ಬಟ್ಟೆ ಹಾಕುವಂತೆ ಸಿ.ಎಂ ಗೆ ಪತ್ರ ಬರೆದ ಪತ್ರಕರ್ತ..!ತಿಳಿಯಲು ಈ ಲೇಖನ ಓದಿ…

    ಪ್ರಗತಿಪರ ಚಿಂತಕೆರೆನಿಸಿಕೊಂಡವರು ಐತಿಹಾಸಿಕ ಸ್ಥಳಗಳ ರಕ್ಷಣೆ, ಅವುಗಳ ನವೀಕರಣಕ್ಕಾಗಿ ಸರಕಾರಕ್ಕೆ ಪತ್ರ ಬರೆಯುವುದನ್ನು ನಾವು ನೋಡಿದ್ದೇವೆ. ಮಾನ ಮುಚ್ಚಲು ಬಾಹುಬಲಿ ಪತ್ರಿಮೆಗೆ ಬಟ್ಟೆ ಹಾಕುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರಕರ್ತರೊಬ್ಬರು ಪತ್ರದ ಮೂಲಕ ವಿಚಿತ್ರ ಮನವಿ ಸಲ್ಲಿಸಿದ್ದಾರೆ.