ಸುದ್ದಿ

‘ಮಿಸೈಲ್ ಮ್ಯಾನ್’,ಡಾ. ಎ.ಪಿ.ಜೆ. ಅಬ್ದುಲ್ ಕಲಾಂರ 88ನೇ ಹುಟ್ಟುಹಬ್ಬದಂದು ಅವರಿಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ…!

119

ಇಂದು ಭಾರತ ಕಂಡ ಅದ್ಭುತ ವಿಜ್ಞಾನಿ, ಪೀಪಲ್ಸ್ ಪ್ರೆಸಿಡೆಂಟ್, ಮಿಸೈಲ್ ಮ್ಯಾನ್ ಎಪಿಜೆ ಅಬ್ದುಲ್ ಕಲಾಂ ಅವರ 88 ವರ್ಷದ ಹುಟ್ಟುಹಬ್ಬ. ಈ ದಿನವನ್ನು ವಿಶ್ವ ವಿದ್ಯಾರ್ಥಿಗಳ ದಿನವೆಂದು ಆಚರಿಸಲಾಗುತ್ತದೆ.ದೇಶ ಕಂಡ ಪ್ರೀತಿಯ ಮಾಜಿ ರಾಷ್ಟ್ರಪತಿಗಳಿಗೆ ಪ್ರಧಾನಿ ಮೋದಿ ನಮಿಸಿದ್ದಾರೆ. ಕಲಾಂರನ್ನು ನೆನೆದು ವಿಡಿಯೋ ಶೇರ್ ಮಾಡಿ, ನೀವು ಎಂದಿಗೂ ನಮಗೆ ಪ್ರೇರಣೆ ಎಂದು ಗೌರವ ಸಲ್ಲಿಸಿದ್ದಾರೆ.

ಡಾ.ಎಪಿಜೆ ಅಬ್ದುಲ್ ಕಲಾಂ ಅವರ ಜನ್ಮದಿನದಂದು ಅವರಿಗೆ ವಿನಮ್ರ ಶೃದ್ಧಾಂಜಲಿ ಮಾಡಿದದ್ದರೆ. ಅವರು  ಸಮರ್ಥ ಮತ್ತು ಸಮೃದ್ಧ ಭಾರತದ ಕನಸು ಕಂಡು, ದೇಶಕ್ಕೆ ಅದ್ಭುತ ಕೊಡುಗೆಗಳನ್ನು ನೀಡಿ ಎಲ್ಲರ ಪ್ರೀತಿ ಗಳಿಸಿದ್ದರು. ಅವರ ಆದರ್ಶ ಜೀವನ ಸದಾ ದೇಶವಾಸಿಗಳಿಗೆ ಸ್ಪೂರ್ತಿದಾಯಕ. ಕಲಾಂ ಅವರ ಜಯಂತೋತ್ಸವದಂದು ಇಡೀ ಭಾರತವೇ ಅವರಿಗೆ ನಮಿಸುತ್ತಿದೆ ಎಂದು ಮೋದಿ ಹಾಡಿ ಹೊಗಳಿದ್ದಾರೆ.

ಕಲಾಂ ಅವರಿಗೆ ವಿದ್ಯಾರ್ಥಿಗಳೆಂದರೆ ವಿಶೇಷ ಕಾಳಜಿ, ಅಕ್ಕರೆ. ಹೀಗಾಗಿ ಭವ್ಯ ಭಾರತದ ಭವಿಷ್ಯವಾದ ವಿದ್ಯಾರ್ಥಿಗಳೊಂದಿಗೆ ಅವರು ಹೆಚ್ಚಿನ ಸಮಯ ಕಳೆಯುತ್ತಿದ್ದರು. 2015ರ ಜುಲೈ 27 ರಂದು ಶಿಲ್ಲಾಂಗ್ ಐಐಎಂನಲ್ಲಿ ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡುತ್ತಿದ್ದಾಗಲೇ ಹೃದಯಾಘಾತದಿಂದ ಕಲಾಂ ಎಲ್ಲರನ್ನು ಅಗಲಿದರು.

ವಿದ್ಯಾರ್ಥಿಗಳ ಮೇಲಿನ ಕಲಾಂ ಅವರ ಪ್ರೀತಿ, ಕಾಳಾಜಿ ಇಡೀ ವಿಶ್ವದ ಗಮನ ಸೆಳೆದಿತ್ತು. ದೇಶ ಕಂಡ ಒಂದೊಳ್ಳೆ ವಿಜ್ಞಾನಿಯಾಗಿ, ರಾಷ್ಟ್ರಪತಿಯಾಗಿ ಉನ್ನತ ಜವಾಬ್ದಾರಿಯನ್ನು ನಿಭಾಯಿಸಿ ಮೆಚ್ಚುಗೆ ಪಡೆದಿದ್ದರೂ, ತಮ್ಮನ್ನು ತಾವು ಮೊದಲು ಶಿಕ್ಷಕನಾಗಿ ಗುರುತಿಸಿಕೊಳ್ಳಲು ಅವರು ಬಯಸುತ್ತಿದ್ದರು. ಆದ್ದರಿಂದ ಅವರ ಜನ್ಮದಿನವನ್ನು ವಿಶ್ವ ವಿದ್ಯಾರ್ಥಿಗಳ ದಿನವನ್ನಾಗಿ ಆಚರಿಸಬೇಕೆಂದು 2015ರಲ್ಲಿ ವಿಶ್ವಸಂಸ್ಥೆ ಕರೆ ನೀಡಿತ್ತು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಜಾನ್ಸನ್ ಬೇಬಿ ಪೌಡರ್ ನಿಂದಾಗಿ ಮಹಿಳೆಗೆ ಸಿಕ್ತು 286 ಕೋಟಿ ರೂ. ಹೇಗೆ ಗೊತ್ತಾ,.!!

    ಲಾಸ್ ಏಂಜಲೀಸ್ ನ ನ್ಯಾಯಾಲಯವೊಂದರಲ್ಲಿ 71 ವರ್ಷದ ಮಹಿಳೆ, ನ್ಯಾನ್ಸಿ ಕ್ಯಾಬಿಬಿ ಎಂಬಾಕೆಗೆ ಬಹುದೊಡ್ಡ ಜಯ ಲಭಿಸಿದೆ. ಕಳೆದೆರಡು ವರ್ಷಗಳಿಂದ ನ್ಯಾಯಕ್ಕಾಗಿ ಹೋರಾಡುತ್ತಿದ್ದನ್ಯಾನ್ಸಿ ವಿರುದ್ಧ ಪ್ರಸಿದ್ಧ ಫಾರ್ಮಾಸ್ಯುಟಿಕಲ್ ಹಾಗೂ ಗ್ರಾಹಕರ ಫೇವರಿಟ್ ಪ್ರಾಡಕ್ಸ್ ಜಾನ್ಸನ್ ಆ್ಯಂಡ್ ಜಾನ್ಸನ್. ಕಂಪೆನಿಗೆ ಹಿನ್ನಡೆಯಾಗಿದೆ. ಪ್ರಕರಣದ ವಿಚಾರಣೆ ನಡೆಸಿರುವ ನ್ಯಾಯಾಲಯ 40.3 ಮಿಲಿಯನ್ ಡಾಲರ್ ಅಂದರೆ ಸುಮಾರು . 2,86,00,00,000[286 ಕೋಟಿ]ರೂಪಾಯಿ ಮೊತ್ತವನ್ನು ನ್ಯಾನ್ಸಿಗೆ ಪರಿಹಾರವಾಗಿ ನೀಡಬೇಕೆಂದು ಕಂಪೆನಿಗೆ ಅದೇಶಿಸಿದೆ…. 2017ರಲ್ಲಿ ಕಂಪೆನಿ ವಿರುದ್ಧ ಕೇಸ್ ದಾಖಲು… ನ್ಯಾನ್ಸಿ ಕಂಪೆನಿ ವಿರುದ್ಧ…

  • ಉಪಯುಕ್ತ ಮಾಹಿತಿ

    ಬೆಳ್ಳುಳ್ಳಿ ಒಳ್ಳೆಯ ಔಷಧೀಯ ಗುಣವನ್ನು ಹೊಂದಿದೆ

    ಬೆಳ್ಳುಳ್ಳಿ ಮುಖ್ಯ ತರಕಾರಿಗಳಲ್ಲಿ ಒಂದು. ಕೆಲವರಿಗೆ ಬೆಳ್ಳುಳ್ಳಿ ಇಲ್ಲದ ಆಹಾರ ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಬೆಳ್ಳುಳ್ಳಿ ಆಹಾರವಲ್ಲದೆ ಒಳ್ಳೆಯ ಔಷಧೀಯ ಗುಣವನ್ನು ಹೊಂದಿದೆ. 1) ಒಂದೆರಡು ಬೆಳ್ಳುಳ್ಳಿಯನ್ನು ಹಾಲಿನೊಂದಿಗೆ ಸೇವಿಸುವುದರಿಂದ ಹೊಟ್ಟೆ ಹುಳು ಮಾಯವಾಗುತ್ತದೆ. 2) ತುಪ್ಪದೊಂದಿಗೆ ಉರಿದು ಸೇವಿಸುವುದರಿಂದ ಅಗ್ನಿ ಮಾಧ್ಯ ಅಥವಾ ಉದರ ಶೂಲೆ ಗುಣವಾಗುತ್ತದೆ. 3) ಅರ್ಧಗಂಟೆಗೆ ಒಮ್ಮೆ ಬೆಳ್ಳುಳ್ಳಿಯ ರಸವನ್ನು ಸೇವಿಸುತ್ತಿದ್ದರೆ ಕಾಲರ ಗುಣವಾಗುತ್ತದೆ ಮತ್ತು ಊರಲ್ಲಿ ಕಾಲರ ಬಂದಾಗ ಮುನ್ನೆಚ್ಚರಿಕೆಗೆ ತೆಗೆದುಕೊಳ್ಳಬಹುದು. 4) ಇದರ ರಸವನ್ನು ಸೇವಿಸುವುದರಿಂದ ಕ್ಯಾನ್ಸರ್ ಕಣಗಳನ್ನು ಸಾಯಿಸಬಹುದು…

  • ಸುದ್ದಿ

    ನಿಮ್ಮ ಬಳಿ ಪಾನ್ ಕಾರ್ಡ್ ಇದೆಯಾ ಅಗಾದರೆ ಸೆಪ್ಟೆಂಬರ್ 30ರ ಒಳಗೆ ಈ ಕೆಲಸ ಮಾಡಿ..,!

    ಪಾನ್ ಕಾರ್ಡ್‌ಗೆ ಆಧಾರ ನಂಬರ್ ಲಿಂಕ್ ಮಾಡುವುದು ಕಡ್ಡಾಯವಾಗಿದ್ದು, 30 ಸೆಪ್ಟೆಂಬರ್ 2019 ಇದಕ್ಕೆ ಕೊನೆಯ ದಿನವಾಗಿದೆ. ಆಧಾರ್‌ ಜೊತೆ ಪಾನ್‌ ಕಾರ್ಡ್‌ ಅನ್ನು ನೀವೇ ಲಿಂಕ್ ಮಾಡಿಕೊಳ್ಳಲು ಇಲ್ಲಿದೆ ಎರಡು ಸುಲಭದ ಉಪಾಯ. ಮೊದಲು ಆದಾಯ ತೆರಿಗೆ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಲಾಗಿನ್ ಆಗಿ, ‘ಲಿಂಕಿಂಗ್ ಆಧಾರ್’ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ವಿಂಡೋ ಓಪನ್ ಆಗುತ್ತದೆ. ಅಲ್ಲಿ ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಹೆಸರು, ಜನ್ಮ ದಿನಾಂಕ ಇತ್ಯಾದಿ ಮಾಹಿತಿ…

  • ಆರೋಗ್ಯ, ಉಪಯುಕ್ತ ಮಾಹಿತಿ

    ತುಂಬಾ ಜನಕ್ಕೆ ಮಧ್ಯಾಹ್ನದ ಲಂಚ್ ಮಾಡಿದ ತಕ್ಷಣ ನಿದ್ರೆ ಬರುತ್ತದೆ ಏಕೆ ಗೊತ್ತಾ..? ತಿಳಿಯಲು ಈ ಲೇಖನ ಓದಿ ..

    ಮನುಷ್ಯನಿಗೆ ಉಸಿರಾಡುವುದು, ನೀರು ಕುಡಿಯುವುದು, ಆಹಾರ ತಿನ್ನುವುದು ಎಷ್ಟು ಮುಖ್ಯವೋ ನಿದ್ರೆ ಮಾಡುವುದು ಸಹ ಅಷ್ಟೇ ಮುಖ್ಯ…ಆದರೆ ತುಂಬಾ ಜನರಿಗೆ ಆ ನಿದ್ರೆಯೇ ದೊಡ್ಡ ಸಮಸ್ಯೆಯಾಗಿದೆ, ರಾತ್ರಿಯೆಲ್ಲಾ ನಿದ್ರೆ ಬರುವುದಿಲ್ಲ ಹಗಲೆಲ್ಲಾ ಕಣ್ಣು ಮುಚ್ಚುತ್ತಲೇ ಇರುತ್ತಾರೆ, ಎಷ್ಟು ಪ್ರಯತ್ನಿಸಿದರು ರಾತ್ರಿ ಸಮಯ ಬಾರದ ನಿದ್ರೆ ಮಧ್ಯಾಹ್ನದ ಲಂಚ್ ಮಾಡಿದ ತಕ್ಷಣ ಅದು ಬಂದು ಬಿಡುತ್ತದೆ.

  • ರಾಜಕೀಯ

    ರಾಜ್ಯದಲ್ಲಿ ಲೋಕಸಭಾ ಫಲಿತಾಂಶ 4 ಗಂಟೆ ವಿಳಂಬ!

    ಪ್ರತಿ ಲೋಕಸಭಾ ಕ್ಷೇತ್ರಗಳಲ್ಲಿ 40 ವಿವಿ ಪ್ಯಾಟ್ ಮತ ಯಂತ್ರಗಳ ಎಣಿಕೆ ಮಾಡಬೇಕು. ಈ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣಾ ಫಲಿತಾಂಶ 4 ಗಂಟೆ ತಡವಾಗಿ ಪ್ರಕಟವಾಗಬಹುದು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ.ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೇ 23(ನಾಳೆ)ರಂದು ಬೆಳಗ್ಗೆ 8 ಗಂಟೆಗೆ ಮೊದಲು ರಿಟರ್ನಿಂಗ್ ಅಧಿಕಾರಿಯ ಕಚೇರಿಯಲ್ಲಿ ಅಂಚೆ ಮತಪತ್ರಗಳ ಎಣಿಕೆ ಆರಂಭಿಸಲಾಗುತ್ತದೆ. ಬಳಿಕ ಇವಿಎಂಗಳಲ್ಲಿನ 28 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭವಾಗುತ್ತದೆ ಎಂದು ತಿಳಿಸಿದರು. ಹಿಂದೆ…

  • ವಿಸ್ಮಯ ಜಗತ್ತು

    ಗಂಡು ಮೀನಾಗಿ ಹುಟ್ಟಿ ಬಳಿಕ ಹೆಣ್ಣು ಮೀನಾಗಿ ಬದಲಾಗುವ ಈ ಮೀನಿನ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಮೀನು ಹುಟ್ಟಿನಿಂದ ಗಂಡು ಮೀನಾಗಿ ಹುಟ್ಟಿ ಎರಡು ವರ್ಷಗಳ ಬಳಿಕ ಹೆಣ್ಣು ಮೀನಾಗಿ ಬದಲಾಗುತ್ತದೆ. ಇದು ಕೇಳಲು ನಿಮ್ಗೆ ಅಚ್ಚರಿ ಅನ್ನಿಸಿದರೂ ನಿಜ. ಬರ್ರಮುಂಡಿ ಎಂಬ ಮೀನು ಈ ವಿಧವಾಗಿ ಗಂಡಿನಿಂದ ಹೆಣ್ಣಾಗಿ ರೂಪಾಂತರ ಹೊಂದುತ್ತದೆ.