ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮದುವೆ ಮೆರವಣಿಗೆ ನಡೆಯುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಜನರ ಮೇಲೆ ಹರಿದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು ಹಲವರು ಗಾಯಗೊಂಡ ಘಟನೆ ಬಿಹಾರದ ಲಖಿಸರೈನ ಹಲ್ಡಿ ಪೊಲೀಸ್ ಠಾಣೆ ಪ್ರದೇಶದ ಹಾಲ್ಸಿ ಬಜಾರ್ ನಲ್ಲಿ ನಡೆದಿದೆ. ಹಲ್ಸಿ ಬಜಾರ್ ನ ನಿವಾಸಿ ನಕ್ ಮಾಂಜಿಯ ಅವರ ಮೊಮ್ಮಗಳ ವಿವಾಹವಿತ್ತು. ಅದಕ್ಕಾಗಿ ಠಾಣಾ ಪ್ರದೇಶದ ಗಧಿವಿಸನ್ಪುರ ಗ್ರಾಮದಿಂದ ವರನ ಮೆರವಣಿಗೆ ಬಂದಿತ್ತು. ಈ ಶುಭಸಮಾರಂಭದ ನಡುವೆ ಲಾರಿಯೊಂದು ಜವರಾಯನ ರೀತಿ ಬಂದು ಸಂತೋಷದಿಂದ ಕೂಡಿದ್ದ ಮದುವೆ ಸಂಭ್ರಮದಲ್ಲಿ ಸ್ಮಶಾನ ಮೌನ ಆವರಿಸುವಂತೆ ಮಾಡಿದೆ. ಲಖಿಸರೈನಿಂದ ಬರುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮೊದಲು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಬಳಿಕ ಮದುವೆ ಸಮಾರಂಭದ ಸ್ಥಳಕ್ಕೆ ನುಗ್ಗಿದ್ದು, 8 ಮಂದಿಯನ್ನು ಬಲಿಪಡೆದಿದೆ

ತಡರಾತ್ರಿ ಈ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಮದುವೆ ಮೆರವಣಿಗೆಯಲ್ಲಿ ಭಾಗಿಯಾಗಿದ್ದ 8 ಮಂದಿ ಸಾವನ್ನಪ್ಪಿದ್ದು, 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಲಖಿಸರೈನ ಸರ್ದಾರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಅಪಘಾತದಲ್ಲಿ ಮೂವರು ವರನ ಕಡೆಯವರು ಮತ್ತು ಐವರು ವಧುವಿನ ಕಡೆಯವರು ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ.

ಮೃತಪಟ್ಟವರನ್ನು ಮಂಜೀತ್ ಕುಮಾರ್, ನಕಾತ್ ಮಾಂಜಿ, ಮುಸ್ಕನ್ ಕುಮಾರಿ, ಉಮೇಶ್ ಮಾಂಜಿ, ರಾಜೀವ್ ಮಾಂಜಿ, ಧನರಾಜ್ ಮಾಂಜಿ, ಶಂಭು ಮಾಂಜಿ ಮತ್ತು ಗೋರ್ ಮಾಂಜಿ ಎಂದು ಗುರುತಿಸಲಾಗಿದೆ. ಹಾಗೆಯೇ ಕರುಕು ಮಾಂಜಿ, ಸಾನು ಮಾಂಜಿ, ರಿತಿಕ್ ಮಾಂಜಿ, ಕಾರ್ಪುರಿ ಮಾಂಜಿ, ಮಾಟ್ರು ಮಾಂಜಿ ಸೇರಿದಂತೆ ಗಾಯಗೊಂಡವರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಎಸ್ಪಿ ಮನೀಶ್ ಕುಮಾರ್, ಎಸ್ಡಿಎಂ ಮುರ್ಲಿ ಪ್ರಸಾದ್ ಸಿಂಗ್ ಹಾಗೂ ಇತರೇ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಬಳಿಕ ಚಾಲಕ ಲಾರಿಯನ್ನು ಸ್ಥಳದಲ್ಲೇ ಬಿಟ್ಟು ಎಸ್ಕೇಪ್ ಆಗಿದ್ದಾನೆ. ಸದ್ಯ ಪೊಲೀಸರು ಲಾರಿಯನ್ನು ವಶಕ್ಕೆ ಪಡೆದಿದ್ದು, ಪ್ರಕರಣದ ಬಗ್ಗೆ ತನಿಖೆ ಕೈಗೊಂಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎರಡನೇ ಬಾರಿಗೆ, ಪ್ರಧಾನಿ ಆದ ಬಳಿಕ ಇದೇ ಮೊದಲ ಬಾರಿಗೆ ನರೇಂದ್ರ ಮೋದಿ ಇಂದು ವಿದೇಶ ಪ್ರವಾಸ ಆರಂಭಿಸಲಿದ್ದು ದ್ವೀಪರಾಷ್ಟ್ರ ಮಾಲ್ಡೀವ್ಸ್ಗೆ ಭೇಟಿ ನೀಡುತ್ತಿದ್ದಾರೆ.ಮಾಲ್ಡೀವ್ಸ್ ಸಂಸತ್ತನ್ನು ಉದ್ದೇಶಿಸಿ ಭಾಷಣ ಮಾಡಲಿರುವ ಪ್ರಧಾನಿ, ಅಲ್ಲಿನ ರಾಷ್ಟ್ರಾಧ್ಯಕ್ಷ ಇಬ್ರಾಹಿಂ ಸೊಲಿತ್ ಜೊತೆ ಮಾತುಕತೆ ನಡೆಸುತ್ತಾರೆ. ಭಾರತದ ನೆರವಿನಿಂದ ಶುರುವಾಗಿರುವ ಕಾಮಗಾರಿಗಳ ಉದ್ಘಾಟನೆಯ ಜೊತೆಗೆ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೂ ಮೋದಿ ಹಣಕಾಸು ನೆರವು ಘೋಷಿಸುವ ಸಾಧ್ಯತೆ ಇದೆ. ಮಾಲ್ಡೀವ್ಸ್ನಿಂದ ನಾಳೆ ದ್ವೀಪರಾಷ್ಟ್ರ ಶ್ರೀಲಂಕಾಕ್ಕೆ ಭೇಟಿ ನೀಡುತ್ತಾರೆ. ಈಸ್ಟರ್ ಸಂಡೆಯಂದು ನಡೆದಿದ್ದ…
ನ್ಯೂಜಿಲ್ಯಾಂಡ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ದೈತ್ಯ ಸಾಮಾಜಿಕ ಜಾಲತಾಣ ಫೇಸ್ಬುಕ್ ತನ್ನ ನಿಯಮಗಳನ್ನು ಬದಲಾಯಿಸಿಕೊಂಡಿದೆ. ಉಗ್ರನೋರ್ವ ಹಿಂಸಾತ್ಮಕ ದಾಳಿಯನ್ನು ಫೇಸ್ಬುಕ್ನಲ್ಲಿ ಲೈವ್ ಆಗಿ ವಿಡಿಯೋ ಮಾಡಿದ ನಂತರ, ಫೇಸ್ಬುಕ್ ತನ್ನ ಲೈವ್-ಸ್ಟ್ರೀಮಿಂಗ್ ಸೇವೆಯನ್ನು ಬಳಸುವುದಕ್ಕೆ ನಿಬಂಧನೆಗಳನ್ನು ಹೇರಿರುವುದಾಗಿ ಘೋಷಿಸಿದೆ. ನ್ಯೂಜಿಲ್ಯಾಂಡ್ ದಾಳಿಯಿಂದ ಭಾರೀ ವಿವಾದಕ್ಕೆ ಒಳಗಾಗಿದ್ದ ಫೇಸ್ಬುಕ್ ತನ್ನ ನೇರ ಪ್ರಸಾರ ನಿಯಮಗಳನ್ನು ಬದಲಿಸಿರುವುದಾಗಿ ತಿಳಿಸಿದ್ದು, ತಾನು ನೂತನವಾಗಿ ಜಾರಿಗೆ ತಂದಿರುವ ನಿಯಮಗಳನ್ನು ಮೀರಿ ಯಾರಾದರೂ ಹಿಂಸಾತ್ಮಕ ವೀಡಿಯೊ ಸ್ಟ್ರೀಮಿಂಗ್ ಅಥವಾ ಪೋಸ್ಟ್ಗಳನ್ನು ಅಪ್ ಲೋಡ್…
ಕೇಂದ್ರ ಸರ್ಕಾರ ಹೆಣ್ಣು ಮಕ್ಕಳ ಭವಿಷ್ಯಕ್ಕಾಗಿ ‘ಸುಕನ್ಯಾ ಸಮೃದ್ಧಿ’ ಹೆಸರಿನ ಉಳಿತಾಯ ಖಾತೆಯನ್ನು ಜಾರಿಗೆ ತಂದಿದೆ. ಹೆಣ್ಣು ಮಕ್ಕಳ ಆರ್ಥಿಕ ಸ್ವಾವಲಂಬನೆಗಾಗಿ ಒಂದು ಕುಟುಂಬ ಈ ಖಾತೆಯನ್ನು ತೆರೆಯಬಹುದಾಗಿದೆ. ಸುಕನ್ಯಾ ಸಮೃದ್ಧಿ ಖಾತೆಯನ್ನು ಅಂಚೆ ಕಚೇರಿಗಳಲ್ಲಿ ತೆರೆಯಬೇಕು.
ಸಹಕಾರಿ ಬ್ಯಾಂಕ್ ಗಳಲ್ಲಿ ರೈತರ ಸಾಲವನ್ನು ಮನ್ನಾ ಮಾಡಿದ್ದೇವೆ. ಅಂತೆಯೇ ನೀವೂ ಕೂಡ ರಾಷ್ಟ್ರೀಕೃತ ಬ್ಯಾಂಕ್ ಗಳ ಸಾಲ ಮನ್ನಾ ಮಾಡಿ ಅಂತಾ ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಸಾಮಾನ್ಯವಾಗಿ ಹಿಂದೂ ಧರ್ಮದಲ್ಲಿ ವಾರದ ಏಳೂ ದಿನವನ್ನು ಒಂದೊಂದು ದೇವತೆಗಳಿಗೆ ಅರ್ಪಣೆ ಮಾಡಲಾಗಿದೆ. ಅದ್ರಲ್ಲೂ ಶನಿವಾರಕ್ಕೆ ವಿಶೇಷ ಮಹತ್ವವಿದೆ. ಶನಿವಾರ ಶನಿದೇವನಿಗೆ ಪೂಜೆ ಮಾಡಲಾಗುತ್ತದೆ. ಕೋಪದ ದೇವರು ಶನಿ ಕೃಪೆಗೆ ಪಾತ್ರರಾಗಲು ಭಕ್ತರು ಹರಸಾಹಸ ಪಡ್ತಾರೆ. ಸಾಡೆಸಾತ್ ಶನಿ ಇದ್ದಲ್ಲಿ ಸಾಕಷ್ಟು ಸಮಸ್ಯೆಗಳು ಎದುರಾಗುತ್ತವೆ. ಅಂತವರು ಶನಿಯ ವಿಶೇಷ ಆರಾಧನೆ ಮಾಡಬೇಕಾಗುತ್ತದೆ. ಶನಿವಾರ ವಿಶೇಷ ಪೂಜೆ, ವೃತದ ಜೊತೆ ಶನಿವಾರ ಬೆಳಿಗ್ಗೆ ಕೆಲವೊಂದು ವಸ್ತುಗಳು ಕಣ್ಣಿಗೆ ಬಿದ್ರೆ ಶುಭಕರ. ಕಪ್ಪು ನಾಯಿ ಮೇಲೆ ಶನಿ ಸವಾರಿ ಮಾಡ್ತಾನೆ…
ಅನೇಕ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನರು ಜೀವನ ಅಸ್ತವ್ಯಸ್ತವಾಗಿದೆ. ಇನ್ನೊಂದೆಡೆ ಪ್ರಳಯ ಮಳೆ, ಡ್ಯಾಂಗಳಿಂದ ಮುನ್ನುಗ್ಗಿ ಬರುತ್ತಿರುವ ಜಲರಾಶಿಯ ನಡುವೆ ತೇವಾಂಶದಿಂದ ಮಣ್ಣು ಸಡಿಲುಗೊಂಡು ಬಹುತೇಕ ಕಡೆಗಳಲ್ಲಿ ಭೂಕುಸಿತವಾಗುತ್ತಿದೆ. ಅತಿಯಾದ ಮಳೆಯಿಂದಾಗಿ ಉತ್ತರ ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಫೋಷಣೆ ಮಾಡಲಾಗಿದೆ. ಮನೆ, ಕಟ್ಟಡಗಳು ನೋಡನೋಡುತ್ತಿದ್ದಂತೆ ನೆಲಕ್ಕುರುಳುತ್ತಿವೆ. ರಸ್ತೆಗಳು ಬಿರುಕು ಬಿಡುತ್ತಿದ್ದು, ಗುಡ್ಡಗಳು ಹೊರಳಿ ಬೀಳುತ್ತಿವೆ. ಕಣ್ಣ ಮುಂದೆಯೇ ಎಲ್ಲವನ್ನೂ ಕಳೆದುಕೊಂಡು ಸಂತ್ರಸ್ತರಾಗಿರುವವರ ಕಣ್ಣೀರು, ಗೋಳಾಟ ಕೇಳಿದರೆ ಹೊಟ್ಟೆ ಉರಿಯುತ್ತದೆ. ಪ್ರವಾಹದ ಎದುರು ಈಜಲಾಗದು,…