ಮದುವೆ ಮೆರವಣಿಗೆ ನಡೆಯುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಜನರ ಮೇಲೆ ಹರಿದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು ಹಲವರು ಗಾಯಗೊಂಡ ಘಟನೆ ಬಿಹಾರದ ಲಖಿಸರೈನ ಹಲ್ಡಿ ಪೊಲೀಸ್ ಠಾಣೆ ಪ್ರದೇಶದ ಹಾಲ್ಸಿ ಬಜಾರ್ ನಲ್ಲಿ ನಡೆದಿದೆ. ಹಲ್ಸಿ ಬಜಾರ್ ನ ನಿವಾಸಿ ನಕ್ ಮಾಂಜಿಯ ಅವರ ಮೊಮ್ಮಗಳ ವಿವಾಹವಿತ್ತು. ಅದಕ್ಕಾಗಿ ಠಾಣಾ ಪ್ರದೇಶದ ಗಧಿವಿಸನ್‍ಪುರ ಗ್ರಾಮದಿಂದ ವರನ ಮೆರವಣಿಗೆ ಬಂದಿತ್ತು. ಈ ಶುಭಸಮಾರಂಭದ ನಡುವೆ ಲಾರಿಯೊಂದು ಜವರಾಯನ ರೀತಿ ಬಂದು ಸಂತೋಷದಿಂದ ಕೂಡಿದ್ದ ಮದುವೆ ಸಂಭ್ರಮದಲ್ಲಿ ಸ್ಮಶಾನ ಮೌನ ಆವರಿಸುವಂತೆ ಮಾಡಿದೆ. ಲಖಿಸರೈನಿಂದ ಬರುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮೊದಲು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಬಳಿಕ ಮದುವೆ ಸಮಾರಂಭದ ಸ್ಥಳಕ್ಕೆ ನುಗ್ಗಿದ್ದು, 8 ಮಂದಿಯನ್ನು ಬಲಿಪಡೆದಿದೆ
Jayanth & Victoria, Wedding Ceremony 4/22/12
ತಡರಾತ್ರಿ ಈ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಮದುವೆ ಮೆರವಣಿಗೆಯಲ್ಲಿ ಭಾಗಿಯಾಗಿದ್ದ 8 ಮಂದಿ ಸಾವನ್ನಪ್ಪಿದ್ದು, 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಲಖಿಸರೈನ ಸರ್ದಾರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಅಪಘಾತದಲ್ಲಿ ಮೂವರು ವರನ ಕಡೆಯವರು ಮತ್ತು ಐವರು ವಧುವಿನ ಕಡೆಯವರು ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ.
ಮೃತಪಟ್ಟವರನ್ನು ಮಂಜೀತ್ ಕುಮಾರ್, ನಕಾತ್ ಮಾಂಜಿ, ಮುಸ್ಕನ್ ಕುಮಾರಿ, ಉಮೇಶ್ ಮಾಂಜಿ, ರಾಜೀವ್ ಮಾಂಜಿ, ಧನರಾಜ್ ಮಾಂಜಿ, ಶಂಭು ಮಾಂಜಿ ಮತ್ತು ಗೋರ್ ಮಾಂಜಿ ಎಂದು ಗುರುತಿಸಲಾಗಿದೆ. ಹಾಗೆಯೇ ಕರುಕು ಮಾಂಜಿ, ಸಾನು ಮಾಂಜಿ, ರಿತಿಕ್ ಮಾಂಜಿ, ಕಾರ್ಪುರಿ ಮಾಂಜಿ, ಮಾಟ್ರು ಮಾಂಜಿ ಸೇರಿದಂತೆ ಗಾಯಗೊಂಡವರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಎಸ್‍ಪಿ ಮನೀಶ್ ಕುಮಾರ್, ಎಸ್‍ಡಿಎಂ ಮುರ್ಲಿ ಪ್ರಸಾದ್ ಸಿಂಗ್ ಹಾಗೂ ಇತರೇ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಬಳಿಕ ಚಾಲಕ ಲಾರಿಯನ್ನು ಸ್ಥಳದಲ್ಲೇ ಬಿಟ್ಟು ಎಸ್ಕೇಪ್ ಆಗಿದ್ದಾನೆ. ಸದ್ಯ ಪೊಲೀಸರು ಲಾರಿಯನ್ನು ವಶಕ್ಕೆ ಪಡೆದಿದ್ದು, ಪ್ರಕರಣದ ಬಗ್ಗೆ ತನಿಖೆ ಕೈಗೊಂಡಿದ್ದಾರೆ.
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ಸೂಪರ್ ಸ್ಟಾರ್ ರಜನಿಕಾಂತ್ ಅವರ ಪುತ್ರಿ ಸೌಂದರ್ಯ ರಜನಿಕಾಂತ್ 2 ನೇ ಮದುವೆಗೆ ದಿನಾಂಕ ನಿಗದಿಯಾಗಿದೆ. ಫೆಬ್ರವರಿ 11 ರಂದು ಸೌಂದರ್ಯ ರಜನಿಕಾಂತ್ ವಿವಾಹ, ನಟ ಹಾಗೂ ಉದ್ಯಮಿಯಾಗಿರುವ ವಿಶಾಗನ್ ವನಂಗಮುಡಿ ಅವರೊಂದಿಗೆ ನೆರವೇರಲಿದೆ. ಈಗಾಗಲೆ ಮದುವೆ ಸಿದ್ಧತೆ ಆರಂಭವಾಗಿವೆ. ಸೌಂದರ್ಯ ರಜನಿಕಾಂತ್ ಮತ್ತು ವಿಶಾಗನ್ ವನಂಗಮುಡಿ ಅವರ ಮದುವೆಯ ಆಮಂತ್ರಣ ಪತ್ರಿಕೆಯನ್ನು ರಜನಿಕಾಂತ್ ದಂಪತಿ ಇತ್ತಿಚೆಗೆ ತಿರುಪತಿ ವೆಂಕಟೇಶ್ವರ ದೇವಾಲಯಕ್ಕೆ ತೆಗೆದುಕೊಂಡು ಹೋಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಮೊದಲು ಅಶ್ವಿನ್ ರಾಮ್ ಕುಮಾರ್ ಜೊತೆ…
ಭಾರತದ ಸ್ಪೈಡರ್ ಮ್ಯಾನ್ ಎಂದೇ ಹೆಸರುಗಳಿಸಿರುವ ಚಿತ್ರದುರ್ಗದ ಕೋತಿರಾಜು ಅಲಿಯಾಸ್ ಜೋತಿರಾಜು ಬಗ್ಗೆ ನಿಮಗೆ ಗೊತ್ತೇ? ನೀವು ಚಿತ್ರದುರ್ಗದ ಕೋಟೆಗೆ ಭೇಟಿ ನೀಡಿದ್ದರೆ ನೀವು ಇವರ ಸಾಹಸಮಯ ಆಟಗಳನ್ನು ನೋಡಿರಬಹುದು, ಇವರು ನೂರಾರು ಅಡಿ ಎತ್ತರದ ಗೋಡೆಗಳನ್ನು ಯಾವ ಸಹಾಯವಿಲ್ಲದೆಯೇ ಮೇಲೇರುತ್ತಾರೆ!
ವಿಶ್ವದಾದ್ಯಂತ ಪಬ್ಜಿ ಕ್ರೇಜ್ ಎಷ್ಟಿದೆ ಅನ್ನೋದನ್ನ ಮತ್ತೆ ಮತ್ತೆ ಹೇಳಬೇಕಿಲ್ಲ. ಊಟ, ನಿದ್ದೆ ಬಿಟ್ಟು ಪಬ್ಜಿ ಆಡೋರು ಇದ್ದಾರೆ. ಹಾಗೇ ಇಲ್ಲೊಬ್ಬ ವರ ತನ್ನ ಮದುವೆಯಲ್ಲಿ ಪಬ್ಜಿ ಆಡ್ತಾ ಕುಳಿತಿರೋ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋವನ್ನ ಎಲ್ಲಿ ಚಿತ್ರೀಕರಿಸಲಾಗಿದೆ ಅನ್ನೋದು ಸ್ಪಷ್ಟವಾಗಿಲ್ಲ. ಮೊದಲಿಗೆ ಟಿಕ್ಟಾಕ್ನಲ್ಲಿ ಇದನ್ನು ಹಂಚಿಕೊಳ್ಳಲಾಗಿದ್ದು, ನಂತರ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡ್ತಿದೆ. ವರ ವಧುವಿನ ಪಕ್ಕ ಕುಳಿತಿದ್ದರೂ ಆತನ ಸಂಪೂರ್ಣ ಗಮನ ಗೇಮ್ ಆಡುವುದರ ಮೇಲಿದೆ. ಗಿಫ್ಟ್ ಕೊಟ್ಟರೂ…
ಜಗತ್ತಿನಾದ್ಯಂತ ಅನೇಕ ಧರ್ಮಗಳಿಗೆ ಸೇರಿದವರು ತಮ್ಮ ಆಚಾರ ಸಂಪ್ರದಾಯ ಪಾಲಿಸುತ್ತಾ ಜೀವನ ಸಾಗಿಸುತ್ತಿದ್ದಾರೆ. ಆದರೆ ಯಾವುದೇ ಧರ್ಮವನ್ನು ತೆಗೆದುಕೊಂಡರೂ ಅದರಲ್ಲಿ ತಮ್ಮ ಧರ್ಮದವರು ತೀರಿಕೊಂಡರೆ ಹೂಳುವುದೋ, ಸುಡುವುದನ್ನೋ ಮಾಡುತ್ತಾರೆ.
ನಾನು ಒಬ್ಬ ರೈತ ಎಂದು ಹೇಳಿಕೊಳ್ಳಲು ತುಂಬಾ ಜನ ಹಿಂದೆ ಮುಂದೆ ನೋಡುತ್ತಾರೆ ಮತ್ತು ಇದಕ್ಕೆ ಕಾರಣ ನಮ್ಮ ಸಮಾಜ ಎಂದು ಹೇಳಬಹುದು, ರೈತ ಅಂದರೆ ಆತನ ಬಳಿ ಹಣ ಇರುವುದಿಲ್ಲ ಅನ್ನುವ ಭಾವನೆ ಎಲ್ಲರ ಮನದಲ್ಲಿ ಇದೆ ಮತ್ತು ಇಷ್ಟೇ ಅಲ್ಲದೆ ನಾನು ರೈತ ಅಂದರೆ ಹೆಣ್ಣು ಮಗಳನ್ನ ಕೊಟ್ಟು ಮದುವೆ ಮಾಡಿಕೊಡಲು ಕೂಡ ಹಿಂದೆ ಮುಂದೆ ನೋಡುತ್ತಾರೆ ಜನರು. ಇನ್ನು ನಮ್ಮ ಸಮಾಜಕ್ಕೆ ತಿಳಿಯದ ಇನ್ನೊಂದು ವಿಚಾರ ಏನು ಅಂದರೆ ಪ್ರತಿಯೊಬ್ಬ ರೈತ ಕೂಡ…