ಸುದ್ದಿ

ಮದುವೆಯಾಗೋಲ್ಲ ಎಂದ ಪ್ರಿಯತಮನ ವಿರುದ್ಧ ಕ್ರೂರವಾಗಿ ಸೇಡು ತೀರಿಸಿಕೊಂಡ ಯುವತಿ…!

62

ನವದೆಹಲಿ: ಈ ಯುವಕ-ಯುವತಿ ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ ಅದೇನಾಯಿಯೋ ಯುವಕ ಮದುವೆಯಾಗಲು ನಿರಾಕರಿಸಿದ. ನಮ್ಮ ಸಂಬಂಧವನ್ನು ಮುರಿದುಕೊಳ್ಳೋಣ ಎಂದು ಯುವತಿ ಬಳಿ ಹೇಳಿದ. ಅದನ್ನು ಕೇಳಿದ ಯುವತಿ ಅಳಲಿಲ್ಲ, ಆತ್ಮಹತ್ಯೆ ಮಾಡಿಕೊಳ್ಳಲಿಲ್ಲ ಬದಲಿಗೆ ಕ್ರೂರವಾಗಿ ಸೇಡು ತೀರಿಸಿಕೊಂಡಳು.

ಘಟನೆ ನಡೆದಿದ್ದು ದೆಹಲಿಯ ವಿಕಾಸಪುರಿಯಲ್ಲಿ. ಜೂನ್​ 11ರಂದು ಬೈಕ್​ನಲ್ಲಿ ಹೋಗುತ್ತಿದ್ದರು. ಯುವಕ ಅದಾಗಲೇ ಮದುವೆ ಬೇಡ ಎಂದಿದ್ದ. ಬೈಕ್​ನಲ್ಲಿ ಹಿಂಬದಿಯಲ್ಲಿ ಕುಳಿತಿದ್ದ ಯುವತಿ ಆತನ ಬಳಿ ಹೆಲ್ಮೆಟ್​ ತೆಗೆಯುವಂತೆ ಕೇಳಿದ್ದಾಳೆ. ಆತ ತೆಗೆದಕೂಡಲೇ ಮುಖಕ್ಕೆ ಆ್ಯಸಿಡ್​ ಎರಚಿದ್ದಾಳೆ. ಯುವಕನ ಮುಖ ಪೂರ್ತಿಯಾಗಿ ಸುಟ್ಟುಹೋಗಿದೆ. ಅಲ್ಲದೆ ಈ ಹುಡುಗಿಯ ಕೈಯ್ಯಿಗೂ ಸುಟ್ಟಗಾಯಗಳಾಗಿವೆ.

ಅದಾದ ಬಳಿಕ ಸ್ಥಳದಲ್ಲಿ ಇದ್ದವರು ಯಾರೋ ಪೊಲೀಸರಿಗೆ ಕರೆ ಮಾಡಿ, ಬೈಕ್​ನಲ್ಲಿ ಹೋಗುತ್ತಿದ್ದವರ ಮೇಲೆ ಆ್ಯಸಿಡ್​ ದಾಳಿಯಾಗಿದೆ ಎಂದು ವಿಷಯ ತಿಳಿಸಿದ್ದಾರೆ. ಪೊಲೀಸರು ಕೂಡ ಮೊದಲು ಬೇರೆ ಯಾರೋ ಇವರಿಬ್ಬರ ಮೇಲೆ ಆ್ಯಸಿಡ್​ ಹಾಕಿದ್ದಾರೆ ಎಂದುಕೊಂಡಿದ್ದರು.

ಆದರೆ ಆ ಯುವಕ ತನ್ನ ಬಳಿ ಯುವತಿ ಹೆಲ್ಮೆಟ್​ ತೆಗೆಯುವಂತೆ ಹೇಳಿದ್ದಳು ಎಂದು ಹೇಳಿಕೆ ನೀಡಿದ ಬಳಿಕ ಅನುಮಾನಗೊಂಡ ಪೊಲೀಸರು ವಿಚಾರಣೆ ನಡೆಸಿದ್ದಾರೆ. ನಂತರ ಆ ಯುವತಿ ತಾನೇ ಮಾಡಿದ್ದಾಗಿ ಒಪ್ಪಿಕೊಂಡಿದ್ದಾಳೆ. ಪರ್ಸ್​ನಲ್ಲಿ ಆ್ಯಸಿಡ್​ ಬಾಟಲಿಯನ್ನು ಅಡಗಿಸಿ ಇಟ್ಟುಕೊಂಡು ಯುವಕನ ಮುಖಕ್ಕೆ ಎರಚಿದ್ದಾಳೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವ್ಯಕ್ತಿ ವಿಶೇಷಣ

    ಸ್ವತಂತ್ರ ಭಾರತದ ಪ್ರಪ್ರಥಮ ಮತದಾರನ ಬಗ್ಗೆ ನಿಮಗೆಷ್ಟು ಗೊತ್ತು..?ಇಲ್ಲಿಯವರೆಗೂ ತಪ್ಪದೆ ಮತದಾನ ಮಾಡಿರುವ ಇವರ ಬಗ್ಗೆ ತಿಳಿಯಲು ಈ ಲೇಖನ ಓದಿ…

    ಪ್ರಸ್ತುತ ದಿನಗಳಲ್ಲಿ ಮತದಾನ ಮಾಡಲು ಹಿಂದೆ ಮುಂದೆ ನೋಡುವ ಜನರ ಮುಂದೆ ಇವರು ಎಲ್ಲರಿಗಿಂತ ಮೊದಲೇ ಮತ ಹಾಕಲು ಬಯಸುತ್ತಾರೆ.ಆದರೆ ಶಿಮ್ಲಾದ ಶ್ಯಾಮ್‌ ಶರಣ್‌ ನೇಗಿ ಯವರು ಸ್ವತಂತ್ರ ಭಾರತದ ಮೊದಲ ಮತದಾರ ಎಂದು ಪ್ರಸಿದ್ಧರಾಗಿದ್ದಾರೆ.

  • inspirational, ಸುದ್ದಿ

    ಬಿಗ್ ಶಾಕ್..!ಅಡುಗೆ ಅನಿಲ ಬಳಕೆದಾರರ ಜೇಬಿಗೆ ಬೀಳಲಿದೆ ಕತ್ತರಿ…ತಿಳಿಯಲು ಈ ಲೇಖನ ಓದಿ…

    ಏಪ್ರಿಲ್ 1ರಿಂದ ವಾಹನ ಚಲಾಯಿಸಲು ನೈಸರ್ಗಿಕ ಅನಿಲ ಬಳಸುತ್ತಿರುವವರು ಹಾಗೂ ಅಡುಗೆ ಅನಿಲ ಬಳಕೆದಾರರ ಜೇಬಿಗೆ ಕತ್ತರಿ ಬೀಳಲಿದೆ. ಏಪ್ರಿಲ್ 1ರಂದು ಸ್ಥಳೀಯವಾಗಿ ಉತ್ಪಾದನೆಯಾಗುವ ನೈಸರ್ಗಿಕ ಅನಿಲದ ದರ ಪರಿಷ್ಕರಣೆಯಾಗಲಿದೆ. 2 ವರ್ಷಗಳಲ್ಲೇ ಅತಿ ಹೆಚ್ಚಿನ ಪ್ರಮಾಣದ ಏರಿಕೆ ಮಾಡುವ ಸಾಧ್ಯತೆ ಇದೆ. ಬೆಲೆ ಏರಿಕೆ ಕಾರಣ:- ಬೆಲೆ ಏರಿಕೆಯಿಂದ ಗ್ರಾಹಕರಿಗೆ ಹೊಡೆತ ಬೀಳಲಿದೆ. ಆದ್ರೆ ಅನಿಲ ಕ್ಷೇತ್ರಗಳಲ್ಲಿ 10 ಬಿಲಿಯನ್ ಡಾಲರ್ ನಷ್ಟು ಭಾರೀ ಮೊತ್ತ ಹೂಡಿಕೆ ಮಾಡಲು ಮುಂದಾಗಿರುವ ಖಾಸಗಿ ಕಂಪನಿ ರಿಲಯೆನ್ಸ್ ಇಂಡಸ್ಟ್ರೀಸ್…

  • ಸುದ್ದಿ

    ಬಿಎಂಟಿಸಿ, ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ಒಂದು ಬ್ರೇಕಿಂಗ್ ನ್ಯೂಸ್…!

    ಬೆಂಗಳೂರು: ಬಿಎಂಟಿಸಿ ಕಿರಿಯ ಸಹಾಯಕ ಕಂ ಡಾಟಾ ಎಂಟ್ರಿ ಆಪರೇಟರ್ ಗಳ ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸಲಾಗಿದೆ. 2018 ರ ಮಾರ್ಚ್ 23 ರಂದು 100 ಕಿರಿಯ ಸಹಾಯಕರ ನೇರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಲ್ಲಿ 6 ತಿಂಗಳ ಕಂಪ್ಯೂಟರ್ ತರಬೇತಿ ಪಡೆದಿರಬೇಕು. ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು ಎಂದು ತಿಳಿಸಲಾಗಿತ್ತು. 26 ಸಾವಿರಕ್ಕೂ ಹೆಚ್ಚು ಮಂದಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಜೂನ್ 10 ರಂದು ಪರೀಕ್ಷೆ ಬರೆದಿದ್ದರು. ಮೂಲ ದಾಖಲಾತಿಗಳ ಪರಿಶೀಲನೆಗೆ 1:5 ಅನುಪಾತದಲ್ಲಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಏಪ್ರಿಲ್, 2019) ನೀವು ಬಹಳ ವಿಚಿತ್ರವಾದ ಪರಿಸ್ಥಿತಿಯಲ್ಲಿ ಸಿಲುಕಿದರೂ ಅದನ್ನು ಎದುರಿಸಲು ನಿಮ್ಮ ಇಚ್ಛಾಶಕ್ತಿ ಇಂದು…

  • ಸುದ್ದಿ

    ಶ್ರೀರಾಮನ ಬಂಟ ಹನುಮನನ್ನು ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಿ ಭಕ್ತಿ ಮೆರೆದ ಅಯೋಧ್ಯೆಯ ಮುಸ್ಲಿಂ ಕುಟುಂಬ.

    ಹಿಂದೂ, ಮುಸ್ಲಿಂ ಎಂಬ ಭೇದವಿಲ್ಲದೆ ಅಯೋಧ್ಯೆಯಲ್ಲಿ ಶ್ರೀರಾಮನನ್ನು ಆರಾಧಿಸಲಾಗುತ್ತಿದೆ. ಇದಕ್ಕೆ ಅಯೋಧ್ಯೆಯ ಮುಸ್ಲಿಂ ಕುಟುಂಬವೊಂದು ಸಾಕ್ಷಿಯಾಗಿದೆ. ತಮ್ಮ ಮಗ, ಮಗಳ ಮದುವೆ ಆಮಂತ್ರಣ ಪ್ರತಿಕೆಯಲ್ಲಿ ರಾಮನ ಭಂಟ ಹನುಮನ ಚಿತ್ರವನ್ನು ಮುದ್ರಿಸಿ ಕುಟುಂಬ ಭಕ್ತಿ ಮೆರೆದಿದೆ. ಹೌದು. ಉತ್ತರ ಪ್ರದೇಶ ಚಾರೇರ ಗ್ರಾಮದ ಮುಸ್ಲಿಂ ಕುಟುಂಬ ಶ್ರೀರಾಮನ ಬಂಟ ಹನುಮನ ಚಿತ್ರವುಳ್ಳ ಕ್ಯಾಲೆಂಡರ್ ಒಂದನ್ನು ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಿದೆ. ಅಷ್ಟೇ ಅಲ್ಲದೆ ಈ ಪತ್ರಿಕೆಯಲ್ಲಿ ಬ್ರಹ್ಮ, ವಿಷ್ಣು, ಶಿವ ಹಾಗೂ ನಾರದರ ಚಿತ್ರವನ್ನೂ ಕೂಡ ಕುಟುಂಬ…

  • ಸುದ್ದಿ

    ಬರದಿಂದ ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್ ಮೊರೆ ಹೋದ ರೈತರು…..!

    ಜಿಲ್ಲೆಯ ನವಲಗುಂದದಲ್ಲಿ ಮುಂಗಾರು ಮಳೆ ನಂಬಿ ಬಿತ್ತನೆ ಮಾಡಿದ್ದ ರೈತರು ಈಗ ತಮ್ಮ ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್‌ಗಳು ಮೊರೆ ಹೋಗಿದ್ದಾರೆ. ಹೌದು. ಸಾವಿರಾರು ರೂಪಾಯಿ ಖರ್ಚು ಮಾಡಿ ರೈತರು ಬಾಡಿಗೆ ನೀರು ತರಿಸಿ ತಮ್ಮ ಬೆಳೆಗಳು ಉಸಿರಾಡುವಂತೆ ಮಾಡುತ್ತಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ನವಲಗುಂದ ತಾಲೂಕಿನಲ್ಲಿ ಭೀಕರ ಬರ ಇದೆ. ಈ ಸಲ ಮೇ ಅಂತ್ಯದಲ್ಲಿ ಸ್ವಲ್ಪ ಮಳೆಯಾಗಿತ್ತು. ಇದನ್ನು ನಂಬಿದ ರೈತರು, ಬಿ.ಟಿ. ಹತ್ತಿ ಮತ್ತು ಹೆಸರು ಬಿತ್ತನೆ ಮಾಡಿದ್ದರು. ಬೆಳೆ ಮೊಳಕೆಯೊಡೆದು ಈಗ ನೆಲ…