ಹಿಂದೂ ದೇವರುಗಳ ಭಾವಚಿತ್ರಗಳನ್ನು ಬಳಸಿಕೊಂಡು ಇತ್ತೀಚೆಗೆ ಇ – ಕಾಮರ್ಸ್ ಜಾಲತಾಣದ ಪ್ರಮುಖ ಅಮೆಜಾನ್ನಲ್ಲಿ ಶೂ, ರಗ್ಗಳು ಹಾಗೂ ಟಾಯ್ಲೆಟ್ ಸೀಟ್ ಕವರ್ಗಳನ್ನು ಮಾರಾಟ ಮಾಡಲಾಗುತ್ತಿದೆ. ಈ ಹಿನ್ನೆಲೆ ಅಮೆಜಾನ್ ವಿರುದ್ಧ ಹಲವು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇ – ಕಾಮರ್ಸ್ ಜಾಲತಾಣದ ಪ್ರಮುಖ ಅಮೆಜಾನ್ ಮತ್ತೆ ಟೀಕೆಗೆ ಗುರಿಯಾಗಿದೆ. ಈ ಬಾರಿ ಹಿಂದೂ ದೇವರ ಭಾವಚಿತ್ರಗಳುಳ್ಳ ಟಾಯ್ಲೆಟ್ ಸೀಟ್ ಕವರ್ಗಳನ್ನು, ಶೂಗಳನ್ನು ಹಾಗೂ ರಗ್ಗಳನ್ನು ಆನ್ಲೈನ್ನಲ್ಲಿ ಮಾರಾಟ ಮಾಡಲಾಗುತ್ತಿದೆ. ಹಿಂದೂ ದೇವರುಗಳ ಭಾವಚಿತ್ರಗಳನ್ನು ಬಳಸಿಕೊಂಡು ಇತ್ತೀಚೆಗೆ ಇ – ಕಾಮರ್ಸ್ ಜಾಲತಾಣದ ಪ್ರಮುಖ ಅಮೆಜಾನ್ನಲ್ಲಿ ಶೂ, ರಗ್ಗಳು ಹಾಗೂ ಟಾಯ್ಲೆಟ್ ಸೀಟ್ ಕವರ್ಗಳನ್ನು ಮಾರಾಟ ಮಾಡಲಾಗುತ್ತಿದೆ. ಈ ಹಿನ್ನೆಲೆ ಅಮೆಜಾನ್ ವಿರುದ್ಧ ಹಲವು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಟ್ವಿಟರ್ನಲ್ಲಿ #BoycottAmazon ಎಂಬ ಹ್ಯಾಶ್ಟ್ಯಾಗ್ ಟ್ರೆಂಡಿಂಗ್ ಆಗುತ್ತಿದೆ.
ಈ ಸಂಬಂಧ ಟ್ವೀಟ್ ಮಾಡಿದ ಸುಶೀಲ್ ದೀಕ್ಷಿತ್ ಎಂಬಾತ ”ತಪ್ಪು ಒಂದು ಬಾರಿ ಮಾಡಿದರೂ ತಪ್ಪೇ, ಎರಡು ಬಾರಿ ಮಾಡಿದರೂ ತಪ್ಪೇ. ಆದರೆ, ಅಮೆಜಾನ್ ಮಾತ್ರ ಪ್ರತಿ ಬಾರಿಯೂ ತಪ್ಪು ಮಾಡುತ್ತಿರುತ್ತದೆ. ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವುದರಿಂದ ಅದಕ್ಕೆ ಖುಷಿ ಎಂದು ಕಾಣುತ್ತೆ. ಇಸ್ಲಾಂ ಅಥವಾ ಕ್ರೈಸ್ತ ಧರ್ಮಕ್ಕೂ ಇದೇ ರೀತಿ ಮಾಡುತ್ತೀರಾ? ಹಿಂದೂಗಳು ಸಾಫ್ಟ್ ಟಾರ್ಗೆಟ್ಗಳಾ ? ಎಂದು ಆಕ್ರೋಶ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದರು. ಅಲ್ಲದೆ, #BoycottAmazon ಎಂಬ ಹ್ಯಾಶ್ಟ್ಯಾಗ್ ಅನ್ನು ಸಹ ಬಳಸಿದ್ದ.
ಬಳಿಕ, ಹಲವು ನೆಟ್ಟಿಗರು ಸುಶೀಲ್ ದೀಕ್ಷಿತ್ ಟ್ವೀಟ್ಗೆ ಪ್ರತಿಕ್ರಿಯೆ ನೀಡಿದ್ದು, ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆ ಸುಶೀಲ್ ಟ್ವೀಟ್ ವೈರಲ್ ಆಗಿದೆ. ಅಲ್ಲದೆ, ಅಮೆಜಾನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸುವ ಜತೆಗೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅನ್ನು ಸಾವಿರಾರು ನೆಟ್ಟಿಗರು ಟ್ಯಾಗ್ ಮಾಡಿದ್ದು, ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ಭಾರತದಲ್ಲಿ ಅತಿ ಹೆಚ್ಚು ಸಂಬಳ ಗಳಿಸಬಹುದಾದ ಪ್ರಮುಖ 1೦ ಉದ್ಯೋಗಗಳ ಪಟ್ಟಿ ಇಲ್ಲಿದ್ದು, ಮುಂದಿನ ದಿನಗಳಲ್ಲಿ ಲಕ್ಷಾಧೀಶರಾಗ ಬಯಸುವವರಿಗೆ ಇದು ಮಾರ್ಗದರ್ಶಿ ಯಾಗ ಬಹುದು. ಅಮೂಲ್ಯವೆನಿಸುವ ಯಾವುದೇ ವಸ್ತು ಸುಲಭವಾಗಿ ದಕ್ಕುವುದಿಲ್ಲ. ಹಣವೂ ಅಷ್ಟೇ ! ಯಾರೇ ಆಗಲಿ, ಎಷ್ಟೇ ಹಣವಂತರಿರಲಿ, ಬಾಯಲ್ಲಿ ಬೆಳ್ಳಿ ಚಮಚವನ್ನಿರಿಸಿಕೊಂಡು ಹುಟ್ಟಿರುವುದಿಲ್ಲ.
ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಮಾನಸಿಕ ಸಮತೋಲನ ಕಳೆದುಕೊಂಡು ಓಡಾಡುತ್ತಿದ್ದಾರೆ. ಇವರ ಸ್ಥಿತಿಯನ್ನು ನೋಡಿ ಕೆಲವರು ವಿಡಿಯೋ ಮಾಡಿ ಲೇವಡಿ ಮಾಡುತ್ತಿದ್ದಾರೆ. ಇನ್ನೂ ಕೆಲವರು ವೆಂಕಟ್ ಸ್ಥಿತಿಗೆ ಮರುಗುತ್ತಿದ್ದಾರೆ. ಸದ್ಯ ಊಟ ಇಲ್ಲದೆ ಕೆಲವರಿಂದ ಹಲ್ಲೆಗೊಳಗಾಗಿರುವ ವೆಂಕಟ್ಗೆ ಸುದೀಪ್ ಚಿಕಿತ್ಸೆಗೆ ನೆರವಾಗಲು ಮುಂದಾಗಿದ್ದಾರೆ. ಕಿಚ್ಚ ಚಾರಿಟೇಬಲ್ ಸೊಸೈಟಿ ಈ ಬಗ್ಗೆ ಮಾಹಿತಿ ನೀಡಿದ್ದು, ಜನರು ಸ್ವಲ್ಪ ಸಂಯಮದಿಂದ ವರ್ತಿಸಬೇಕೆಂದು ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ವತಿಯಿಂದ ಮನವಿ ಮಾಡಿದ್ದಾರೆ. ಆತ್ಮೀಯರೆ ಕಳೆದ ಕೆಲ ದಿನಗಳಿಂದ ಮಾನಸಿಕವಾಗಿ ಜರ್ಜಿರಿತರಾಗಿ…
ಉತ್ತರ ಕನ್ನಡ ಜಿಲ್ಲೆಯ ಯೆಲ್ಲಾಪುರ ಗ್ರಾಮದ ಸಹಕಾರ ಸೊಸೈಟಿ ಶಾದಿಭಾಗ್ಯ ಯೋಜನೆಯಡಿ ಬಂಪರ್ ಬಹುಮಾನ ಘೋಷಿಸಿದೆ.ಆನಗೋಡು ಗ್ರಾಮದ ರೈತನನ್ನು ವಿವಾಹವಾದ ಯಾವುದೇ ಯುವತಿಯ ಅಕೌಂಟ್ ಗೆ 1 ಲಕ್ಷ ರು ಹಣ ಡೆಪಾಸಿಟ್ ಮಾಡಲಾಗುವುದು. ಈ ಆಫರ್ ಆನಗೋಡು ಗ್ರಾಮಸ್ಥರಿಗೆ ಹಾಗೂ ಆನಗೋಡು ಸೇವಾ ಸಹಕಾರಿ ಸಂಘದ ಸದಸ್ಯರಿಗೆ ಮಾತ್ರ ಅನ್ವಯಿಸುತ್ತಿದೆ.ಈ ಯೋಜನೆ 2019ರ ಏಪ್ರಿಲ್ 1 ರಿಂದ ಜಾರಿಗೆ ಬರಲಿದೆ, ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಅಸಹಾಯಕರಾಗಿರುವ ಕುಟುಂಬಗಳಿಗೆ ಧನ ಸಹಾಯವಾಗಲಿದೆ, ಭವಿಷ್ಯದಲ್ಲಿ ಅವರಿಗೆ ಸಹಾಯವಾಗಲಿ ಎಂಬ…
ಆ ಮುದ್ದಿನ ಶ್ವಾನ ಆರು ಮಂದಿಯ ಜೀವ ಉಳಿಸಿದೆ…! ಅಚ್ಚರಿಯಾದರೂ ಇದು ನಿಜ. ಈ ಘಟನೆ ನಡೆದಿದ್ದು ಒಡಿಸ್ಸಾದ ಕೊರಪುತ್ ಜಿಲ್ಲೆಯಲ್ಲಿ. ಶಂಕರ್ ಪ್ರಸಾದ್ ತ್ರಿಪಾಠಿ ಎಂಬವರ ಮನೆಗೆ ಭಾನುವಾರ ಬೃಹತ್ ಸರ್ಪ ಎಂಟ್ರಿ ಕೊಟ್ಟಿತ್ತು. ಮನೆಯವರು ತಮ್ಮ ಕೆಲಸದಲ್ಲಿ ನಿರತರಾಗಿದ್ದ ಕಾರಣ ಈ ಹಾವನ್ನು ಯಾರೂ ಗಮನಿಸಿರಲಿಲ್ಲ. ಇದು ನೇರವಾಗಿ ಮನೆಯೊಳಗೆ ಹೋಗಿ ಬಚ್ಚಿಟ್ಟುಕೊಳ್ಳಲು ಯತ್ನಿಸಿತ್ತು. ಆದರೆ, ಅದೃಷ್ಟ ಚೆನ್ನಾಗಿತ್ತು. ಶಂಕರ್ ಪ್ರಸಾದ್ ಅವರ ಸಾಕು ನಾಯಿ `ಡಾಗಿ’ ಈ ಸರ್ಪವನ್ನು ಕಂಡಿತ್ತು. ಇದನ್ನು ನೋಡಿದ…
ಸೋಮವಾರ, 2/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಬ್ಯಾಂಕಿಂಗ್ ಹಾಗೂ ಹಣಕಾಸು ವ್ಯವಹಾರಗಳಲ್ಲಿ ತೊಡಗಿಕೊಂಡವರಿಗೆ ನಿರೀಕ್ಷಿತವಾದ ಕಾರ್ಯ ಸಿದ್ಧಿ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಫಲ. ದೇಹಾರೋಗ್ಯದ ಬಗ್ಗೆ ಗಮನ ಹರಿಸಬೇಕು. ಸಣ್ಣ ಸಣ್ಣ ವಿಚಾರಗಳಲ್ಲಿ ಕೋಪತಾಪಗಳಿಂದ ಉದ್ವೇಗಗೊಳ್ಳುವಿರಿ. ಶುಭಮಂಗಲ ಕಾರ್ಯಗಳಿಗೆ ಆಗಾಗ ಖರ್ಚುವೆಚ್ಚಗಳಿರುತ್ತವೆ. ಹಿಡಿತ ಬಲವಿರಬೇಕು. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು. ವೃಷಭ:- ಆರೋಗ್ಯ ಸುಧಾರಿಸುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು. ರಾಜಕೀಯ ಕ್ಷೇತ್ರದಲ್ಲಿರುವವರಿಗೆ ನಿರೀಕ್ಷಿತ ಕೆಲಸಗಳು ಉತ್ತಮ ಫಲ ನೀಡುವುದರೊಂದಿಗೆ ಹಣಕಾಸಿನ ಅನುಕೂಲತೆಗಳು…