ಸುದ್ದಿ

ಕೇಂದ್ರ ಸಚಿವ ಬಿಜೆಪಿ ಹಿರಿಯ ನಾಯಕ ಅನಂತ್ ಕುಮಾರ್ ಅಸ್ತಂಗತ…

By admin

November 12, 2018

ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯಕ್ಕೀಡಾಗಿದ್ದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ, ಕರ್ನಾಟಕ ಬಿಜೆಪಿಯ ಹಿರಿಯ ನಾಯಕ ಹೆಚ್ ಎನ್ ಅನಂತ್ ಕುಮಾರ್ ಸೋಮವಾರ ನಸುಕಿನ ಜಾವ ನಿಧನರಾಗಿದ್ದಾರೆ. ಅವರಿಗೆ 59 ವರ್ಷ ವಯಸ್ಸಾಗಿತ್ತು.

ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅನಂತಕುಮಾರ್ ಅವರು ಸೋಮವಾರ ನಸುಕಿನ ಜಾವ ಎರಡು ಗಂಟೆ ಸುಮಾರಿಗೆ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.ಅನಂತ್​ ಕುಮಾರ್​ ಅವರು ಪತ್ನಿ ತೇಜಸ್ವಿನಿ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

ಇತ್ತೀಚೆಗೆ ತೀವ್ರ ಅನಾರೋಗ್ಯಪೀಡಿತರಾಗಿದ್ದ ಅನಂತಕುಮಾರ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲಿ ಕಳೆದ ಎರಡು ದಿನಗಳಿಂದ ವೆಂಟಿಲೇಟರ್‍ನಲ್ಲಿ ಇಡಲಾಗಿತ್ತು.ಅನಂತ್ ಕುಮಾರ್ ಅವರ ಪಾರ್ಥಿವ ಶರೀರವನ್ನು ಖಾಸಗಿ ಆಸ್ಪತ್ರೆಯಿಂದ ಇದೀಗ ಅವರ ನಿವಾಸ ಬಸವನಗುಡಿಯಲ್ಲಿರುವ ಸುಮೇರ ನಿವಾಸದಲ್ಲಿರಿಸಲಾಗಿದೆ.

ಬೆಳಗ್ಗೆ 9 ಗಂಟೆ ನಂತರ ಪಾರ್ಥೀವ ಶರೀರದ ದರ್ಶನಕ್ಕೆ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ವ್ಯವಸ್ಥೆ ಮಾಡಲಾಗಿದೆ.