ಸುದ್ದಿ

ದರ್ಶನ್ ಸ್ನೇಹಿತ ಸಿನಿಮಾ ಹಾಗೂ ಕಿರುತೆರೆ ಖ್ಯಾತ ನಟ ನಿಧನ…

116

ರಂಗಭೂಮಿ, ಕಿರುತೆರೆ ಹಾಗೂ ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದ ಖ್ಯಾತ ನಟ ೪೮ ವರ್ಷದ ಅನಿಲ್ ಕುಮಾರ್ ವಿಧಿವಶರಾಗಿದ್ದಾರೆ.

ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಅವರು ನಗರದ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ.

ಹೆಗ್ಗೋಡಿನ ನೀನಾಸಂನಲ್ಲಿ ಅನಿಲ್‍ಕುಮಾರ್ ತರಬೇತಿ ಪಡೆದಿದ್ದರು. ಆಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅನಿಲ್ ಅವರ ಸಹಪಾಠಿಯಾಗಿದ್ದರು. ಮೂಡಲ ಮನೆ ಧಾರಾವಾಹಿ ಮೂಲಕ ಕಿರುತೆರೆಗೆ ಕಾಲಿಟ್ಟ ಅನಿಲ್ ಅವರು, ಅನೇಕ ಸೀರಿಯಲ್, ರಂಗಭೂಮಿ ಹಾಗೂ ಸಿನಿಮಾದಲ್ಲಿ ನಟಿಸಿದ್ದಾರೆ.

ಅನಿಲ್ ಕುಮಾರ್ ಅವರು ಮೂಡಲ ಮನೆ, ಲಕ್ಷ್ಮೀ ಬಾರಮ್ಮ, ಚಿ ಸೌ ಸಾವಿತ್ರಿ, ಪ್ರೀತಿ ಪ್ರೇಮ, ಅಳಗುಳಿ ಮನೆ, ಮದರಂಗಿ, ಜನುಮದ ಜೋಡಿ ಧಾರಾವಾಹಿಯಲ್ಲಿ ನಟನೆ ಮಾಡಿದ್ದಾರೆ. ಈಗ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಬ್ರಹ್ಮಗಂಟು ಧಾರಾವಾಹಿಯಲ್ಲಿ ನಟಿಸುತ್ತಿದ್ದರು.

ರಾಜ್ಯ ಪ್ರಶಸ್ತಿ ವಿಜೇತ ಪಲ್ಲಟ ಸಿನಿಮಾದಲ್ಲಿ ಅನಿಲ್‍ಕುಮಾರ್ ಅವರು ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಹೇಮಂತರಾವ್ ನಿರ್ದೇಶನದ ಕವಲುದಾರಿ ಸಿನಿಮಾದಲ್ಲಿ ನಟಿಸಿದ್ದಾರೆ. ಬಹು ಅಂಗಾಗ ವೈಫಲ್ಯದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಗೆಳೆಯ ಅನಿಲ್‍ಕುಮಾರ್ ಅವರನ್ನು ಕಂಡು ದರ್ಶನ್ ಮರುಗಿ, ಸಹಾಯ ಮಾಡಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    ನಾಯಿಗಳು ಕಾಲನ್ನು ಮೇಲೆತ್ತಿ ವಾಹನಗಳ ಟೈರುಗಳ ಮೇಲೆ ಮೂತ್ರವಿಸರ್ಜನೆ ಮಾಡುತ್ತದೆ ಏಕೆ ಗೊತ್ತಾ..? ತಿಳಿಯಲು ಈ ಲೇಖನ ಓದಿ …

    ಮನುಷ್ಯರು ಟಾಯ್ಲೆಟ್ ನಲ್ಲಿ ಮೂತ್ರ ಮಾಡುತ್ತಾರೆ. ಆದರೆ ಪ್ರಾಣಿಗಳು ಎಲ್ಲೆಂದರಲ್ಲಿ ಮಲಮೂತ್ರ ವಿಸರ್ಜನೆ ಮಾಡುತ್ತದೆ. ಅದರಲ್ಲೂ ನಾಯಿಗಳು ವಾಹನಗಳ ಚಕ್ರಕ್ಕೆ ಅಥವಾ ಮರಕ್ಕೆ ತಾಗಿ ಮೂತ್ರ ಮಾಡುತ್ತದೆ. ಆದರೆ ಅದ್ಯಾಕೆ ಅನ್ನುವುದು ಹೆಚ್ಚಿನವರಿಗೆ ಗೊತ್ತಿಲ್ಲ.

  • ಸ್ಪೂರ್ತಿ

    ಉಚಿತ ಚಿಕಿತ್ಸೆ ಕೊಟ್ಟು ಬಡವರ ಪಾಲಿಗೆ ದೇವರಂತಾಗಿರುವ ಡಾ.ರಮಣರಾವ್..!ತಿಳಿಯಲು ಈ ಲೇಖನ ಓದಿ..

    ಸುತ್ತಮುತ್ತಲ ಪ್ರದೇಶದಲ್ಲಿ 7000 ಶೌಚಾಲಯ ನಿರ್ಮಿಸಿದ್ದಾರೆ. 60 ಹಳ್ಳಿಗಳಿಗೆ ಸಹಾಯವಾಗುವಂತೆ ನಾಲ್ಕು ಬೋರ್ ವೆಲ್ ಗಳನ್ನು ಕೊರೆಸಿದ್ದಾರೆ. ನಗರದಲ್ಲಿ 50 ಶಾಲೆಗಳನ್ನು ದತ್ತು ಪಡೆದಿದ್ದು, ಮಕ್ಕಳಿಗೆ ಯೂನಿಫಾರ್ಮ್, ಬುಕ್ಸ್ ಅನ್ನು ನೀಡುತ್ತಿದ್ದಾರೆ. ಡಾ.ರಮಣರಾವ್ ಅವರ ವೈದ್ಯಕೀಯ ಸೇವೆಗೆ ಮೆಚ್ಚಿ 2010ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(2 ಜನವರಿ, 2019) ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ…

  • ಉಪಯುಕ್ತ ಮಾಹಿತಿ

    ವಸತಿ ಯೋಜನೆಗಳಿಗೆ ನೀಡುವ ಸಹಾಯಧನದ ಮೊತ್ತ ಹೆಚ್ಚಳ!

    ಬೆಂಗಳೂರು(05-01-2023): ವಸತಿ ಯೋಜನೆಗಳ ಫ‌ಲಾನುಭವಿಗಳಿಗೆ ಗ್ರಾಮೀಣ ಭಾಗದಲ್ಲಿ ನೀಡುತ್ತಿದ್ದ ಸಹಾಯಧನ ಮೊತ್ತವನ್ನು 1.20 ಲಕ್ಷ ರೂ.ನಿಂದ 3 ಲಕ್ಷ ರೂ.ಗೆ ಹಾಗೂ ನಗರ ಮತ್ತು ಪಟ್ಟಣ ಪ್ರದೇಶದಲ್ಲಿ ನೀಡುತ್ತಿದ್ದ 2.70 ಲಕ್ಷ ರೂ.ನಿಂದ 4 ಲಕ್ಷ ರೂ.ಗೆ ಹೆಚ್ಚಳ ಮಾಡುವ ಮಹತ್ವದ ತರ‍್ಮಾನಕ್ಕೆ ಸರ್ಕಾರ ಮುಂದಾಗಿದೆ. ಬಡತನರೇಖೆಗಿಂತ ಕೆಳಗಿನ ಕುಟುಂಬಗಳಿಗೆ ಸೂರು ಕಲ್ಪಿಸುವ ಬಸವ, ಅಂಬೇಡ್ಕರ್‌ ಸೇರಿ ರಾಜ್ಯದಲ್ಲಿ ಜಾರಿಯಲ್ಲಿರುವ ವಸತಿ ಯೋಜನೆಗಳಿಗೆ ನೀಡುವ ಸಹಾಯಧನದ ಮೊತ್ತ ಹೆಚ್ಚಳವಾಗಲಿದೆ. ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲ ಮಾಡಿಕೊಡುವ ಹಾಗೂ…

  • ಆಧ್ಯಾತ್ಮ

    ಭಗವಾನ್ ಶಿವನ ಈ ವಸ್ತುಗಳು ಕನಸಿನಲ್ಲಿ ಬಂದ್ರೆ ಏನಾಗುತ್ತೆ ಗೊತ್ತಾ ???

    ಪ್ರತಿಯೊಬ್ಬರಿಗೂ ಕನಸು ಬೀಳುವುದು ಸಾಮಾನ್ಯ. ಅದರಲ್ಲಿ ಬೆಳಗ್ಗೆ ನಾಲ್ಕು ಗಂಟೆಯಿಂದ 5 ಗಂಟೆಯ ಒಳಗೆ ಬೀಳುವ ಕನಸುಗಳು ನಿಜವಾಗುತ್ತವೆ ಎಂಬ ನಂಬಿಕೆ ಇದೆ.ಕನಸಿನಲ್ಲಿ ಅನೇಕ ವ್ಯಕ್ತಿಗಳು ಹಾಗೂ ವಸ್ತುಗಳು ಬಂದು ಹೋಗುತ್ತವೆ.ಆದ್ರೆ ಕನಸಿನಲ್ಲಿ ಬರೋದೆಲ್ಲಾ ಒಳ್ಳೆಯದೋ ಅಥವಾ ಕೆಟ್ಟದ್ದೋ ಅಂತ ಅನೇಕರಿಗೆ ಗೊತ್ತಿರುವುದಿಲ್ಲ.ಅದರಲ್ಲಿ ದೇವರ ದೇವ ಮಹಾದೇವ ಸಂಭಂದಿಸಿದ ವಸ್ತುಗಳು ಕನಸಿನಲ್ಲಿ ಬಂದ್ರೆ ಅದೃಷ್ಟ ಬಾಗಿಲು ತೆರೆದಿದೆ ಎಂದೇ ಅರ್ಥ

  • ಸುದ್ದಿ

    ಅಳಿಯ ಚಿರು ಸರ್ಜಾ ಕುರಿತು ಅರ್ಜುನ್ ಸರ್ಜಾ ಅವರ ನೋವಿನ ಮಾತು.

    ನಟ ಚಿರಂಜೀವಿ ಸರ್ಜಾ ಅವರ ಹಠಾತ್‌ ನಿಧನದಿಂದ ಇಡೀ ಚಿತ್ರರಂಗವೇ ಕಂಬನಿಗರೆದಿದೆ. ಚಿಕ್ಕ ವಯಸ್ಸಿನಲ್ಲೇ ಅವರು ನಿಧನರಾಗಿದ್ದು ನಿಜಕ್ಕೂ ದುರದೃಷ್ಟಕರ. ಸರ್ಜಾ ಕುಟುಂಬದ ಮುದ್ದಿನ ಮಗನಾಗಿದ್ದ ಚಿರು ಅವರನ್ನು ಕಂಡರೆ ಅವರ ಮಾವ, ನಟ ಅರ್ಜುನ್ ಸರ್ಜಾ ಅವರಿಗೆ ಅಪಾರ ಪ್ರೀತಿ. ಇದೀಗ ತಮ್ಮ ಪ್ರೀತಿಯ ಅಳಿಯನ ಕುರಿತು ನೋವಿನ ಮಾತೊಂದನ್ನು ಹೇಳಿಕೊಂಡಿದ್ದಾರೆ ಅರ್ಜುನ್. ಜೂನ್‌ 7ರ ಭಾನುವಾರ ಮಧ್ಯಾಹ್ನ ಚಿರು ನಿಧನರಾದಾಗ ಅರ್ಜುನ್‌ ಚೆನ್ನೈನಲ್ಲಿದ್ದರು. ವಿಷಯ ತಿಳಿಯುತ್ತಿದ್ದಂತೆಯೇ ಅವರು, ಕುಟುಂಬದೊಂದಿಗೆ ಹೊರಟು ಬಂದಿದ್ದರು. ತಮ್ಮ ಕಣ್ಣ ಮುಂದೆ ಬೆಳೆದಿದ್ದ…