News

ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ
ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !
ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು
ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ!
ರೇಷನ್ ಹಣದ Status Check ಮಾಡಲು ಈ ಲಿಂಕ್ ಮೂಲಕ ಪರೀಕ್ಷಿಸಿಕೊಳ್ಳಿ
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-30 ಸಾವಿರ ದಂಡ
ಈ ಲಿಂಕ್‌ ಕ್ಲಿಕ್‌ ಮಾಡಿದರೆ ಗೃಹಲಕ್ಷ್ಮೀ ಯೋಜನೆಯ ಅರ್ಜಿ
ಗೃಹಜ್ಯೋತಿ ಯೋಜನೆಗೆ ಅರ್ಜಿಸಲ್ಲಿಕೆ ಹೇಗೆ? ಜೂನ್‌ 15 ರಿಂದ ಅರ್ಜಿ ಆಹ್ವಾನ
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-35 ಸಾವಿರ ದಂಡ
ನೂತನ ಸಂಸತ್ ಭವನದ ಉದ್ಘಾಟನೆ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯ ಬಿಡುಗಡೆ..!!
ಸಿನಿಮಾ

ಬಿಗ್ ಬಾಸ್ ಹೊಸ ಸಂಚಿಕೆಗೆ ಬಾಹುಬಲಿ ನಾಯಕಿ ಅನುಷ್ಕಾ ಶೆಟ್ಟಿ ನಿರೂಪಣೆ..!

60

ದಕ್ಷಿಣ ಭಾರತದ ಸ್ಟಾರ್ ನಟಿ ಅನುಷ್ಕಾ ಶೆಟ್ಟಿ ತೆಲುಗಿನ ಬಿಗ್ ಬಾಸ್ ಸೀಸನ್ -3 ರಿಯಾಲಿಟಿ ಶೋಗೆ ನಿರೂಪಣೆ ಮಾಡುತ್ತಾರೆ ಎಂಬ ಮಾತು ಟಿ-ಟೌನ್‍ನಲ್ಲಿ ಕೇಳಿಬರುತ್ತಿದೆ.

ಬಿಗ್ ಬಾಸ್ ಮೊದಲ ಸೀಸನ್ ನಟ ಜೂ. ಎನ್‍ಟಿಆರ್ ಯಶಸ್ವಿಯಾಗಿ ನಡೆಸಿಕೊಟ್ಟಿದ್ದರು. ನಂತರ ಎರಡನೇ ಸೀಸನ್ ನಟ ನಾನಿ ನಿರೂಪಣೆ ಮಾಡಿದ್ದರು. ಈಗ ಮೂರನೇ ಸೀಸನ್‍ಗೆ ಜೂ. ಎನ್‍ಟಿಆರ್ ಅವರ ಜೊತೆ ಮಾತುಕತೆ ನಡೆಸಲಾಗಿತ್ತು. ಆದರೆ ಅವರು ರಾಜಮೌಳಿ ನಿರ್ದೇಶನದ ‘ಆರ್‍ಆರ್‍ಆರ್’ ಚಿತ್ರದಲ್ಲಿ ಬ್ಯುಸಿ ಇರುವ ಕಾರಣ ಈ ಶೋ ನಿರೂಪಣೆ ಮಾಡಲು ನಿರಾಕರಿಸಿದ್ದಾರೆ. 

ಜೂ. ಎನ್‍ಟಿಆರ್ ಅಲ್ಲದೆ ನಾಗಾರ್ಜುನ, ವೆಂಕಟೇಶ್, ರಾಣಾ ದಗ್ಗುಬಾಟಿ ಹಾಗೂ ವಿಜಯ್ ದೇವರಕೊಂಡ ಅವರನ್ನು ಬಿಗ್ ಬಾಸ್ ಸೀಸನ್ -3 ನಿರೂಪಣೆ ಮಾಡಲು ಅಪ್ರೋಚ್ ಮಾಡಲಾಗಿದೆ. ಆದರೆ ಕಾರಣಾಂತರದಿಂದ ನಟರು ಈ ಅವಕಾಶವನ್ನು ತಿರಸ್ಕರಿಸಿದ್ದಾರೆ.

ನಟರು ನಿರೂಪಣೆ ಮಾಡಲು ಒಪ್ಪದ ಕಾರಣ ಖಾಸಗಿ ವಾಹಿನಿ ನಿರೂಪಕಿಯಿಂದ ಕಾರ್ಯಕ್ರಮವನ್ನು ನಡೆಸಿಕೊಡಲು ಪ್ಲಾನ್ ಮಾಡಿದೆ. ಹಾಗಾಗಿ ರಿಯಾಲಿಟಿ ಶೋ ತಂಡ ನಟಿ ಅನುಷ್ಕಾ ಶೆಟ್ಟಿ ಅವರಿಗೆ ನಿರೂಪಣೆ ಮಾಡಲು ಅಪ್ರೋಚ್ ಮಾಡಿದೆ ಎನ್ನಲಾಗಿದೆ. ಆದರೆ ಇದರ ಬಗ್ಗೆ ಅನುಷ್ಕಾ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.

ಮೊದಲ ಸೀಸನ್ ನಿರೂಪಣೆ ಮಾಡಿದ ಜೂ. ಎನ್‍ಟಿಆರ್ ಅವರು ಒಂದು ಸಂಚಿಕೆಗೆ 50 ಲಕ್ಷ ರೂ. ಸಂಭಾವನೆ ನೀಡಲಾಗುತ್ತಿತ್ತು ಎಂದು ಹೇಳಲಾಗಿದೆ. ಎರಡನೇ ಸೀಸನ್ ನಟ ನಾನಿ ಅವರಿಗೆ ಒಂದು ಸಂಚಿಕೆಗೆ 10 ಲಕ್ಷ ರೂ. ಸಂಭಾವನೆ ನೀಡಲಾಗುತ್ತಿತ್ತು ಎನ್ನಲಾಗಿದೆ.

About the author / 

admin

Categories

Date wise

  • ಟೊಮೇಟೋ ಅಂಚೆ ಲಕೋಟೆ ಬಿಡುಗಡೆ

    ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…

ಏನ್ ಸಮಾಚಾರ