ಕುರಿಗಾಯಿ ಹನುಮಂತ ಅವರು ಜೀ ಕನ್ನಡ ವಾಹಿನಿಯ ‘ಸರಿಗಮಪ’ ಕಾರ್ಯಕ್ರಮದಲ್ಲಿ ಹಾಡುವ ಮೂಲಕ ವೀಕ್ಷಕರ ಮನಗೆದ್ದಿದ್ದಾರೆ.
ತಮ್ಮದೇ ಶೈಲಿಯಲ್ಲಿ ಹಾಡುವ ಮೂಲಕ ಹನುಮಂತ ಅವರು ಮನೆ ಮಾತಾಗಿದ್ದಾರೆ. ಅವರಿಗೆ ಸಿನಿಮಾದಲ್ಲಿ ಹಾಡುವ ಅವಕಾಶ ಕೊಡುವುದಾಗಿ ನಿರ್ದೇಶಕ ಯೋಗರಾಜ ಭಟ್ ಈಗಾಗಲೇ ಭರವಸೆ ನೀಡಿದ್ದಾರೆ.
‘ಸರಿಗಮಪ’ ಕಾರ್ಯಕ್ರಮದ ನಿರೂಪಕಿ ಅನುಶ್ರೀ ಲಂಬಾಣಿ ಉಡುಗೆ ತಂದುಕೊಡುವಂತೆ ಕೇಳಿಕೊಂಡಿದ್ದರಂತೆ. ಹನುಮಂತ ಅವರ ತಾಯಿ ಲಂಬಾಣಿ ಉಡುಗೆ ತಂದುಕೊಟ್ಟಿದ್ದು, ಅದನ್ನು ಧರಿಸಿ ಸಂತಸ ಹಂಚಿಕೊಂಡ ಅನುಶ್ರೀ ಕ್ಷಮೆ ಕೂಡ ಕೇಳಿದ್ದಾರೆ.
‘ತಮ್ಮ ಹನುಮಂತ ಕೊಟ್ಟ ಕೊಡಿಗೆ ಅವರ ತಾಯಿಯ ಉಡುಗೆ’ ಎಂದು ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದ ಅನುಶ್ರೀ ಅವರು, ಕಾರ್ಯಕ್ರಮದ ನಿರೂಪಣೆ ಸಂದರ್ಭದಲ್ಲಿ ಈ ಉಡುಗೆ ತೊಟ್ಟಿದ್ದರಿಂದ ನನ್ನಿಂದ ಏನಾದರೂ ತಪ್ಪಾಗಿದ್ದರೆ ಕ್ಷಮಿಸಿ ಎಂದು ಹೇಳಿದ್ದಾರೆ.
‘ನಾನು ಈ ಬಟ್ಟೆಯನ್ನು ಧರಿಸಿರುವುದಕ್ಕೆ ಸಂತೋಷವಾಗುತ್ತಿದೆ. ಅವರು ನನಗೆ ಕೊಟ್ಟ ಗೌರವ ಇದು ಎಂದು ಭಾವಿಸುತ್ತೇನೆ. ಯಾರ ಭಾವನೆಗೂ ಧಕ್ಕೆ ತರುವ, ಯಾರ ಮನಸ್ಸಿಗೂ ನೋವು ಮಾಡುವ ಉದ್ದೇಶವಿಲ್ಲ. ನನ್ನಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮಿಸಿ ಎಂದು ಅನುಶ್ರೀ ವೇದಿಕೆಯಲ್ಲಿ ಹೇಳಿದ್ದಾರೆ.
ಈ ಹಿಂದೆ ವಾಹಿನಿಯ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಶೀಲವ್ವರನ್ನು ನೋಡಿದ್ದ ಅನುಶ್ರೀ ನನಗೂ ಇದೇ ರೀತಿ ಬಟ್ಟೆ ಮತ್ತು ಆಭರಣಗಳು ಬೇಕೆಂದು ಕೇಳಿಕೊಂಡಿದ್ದರು. ರಿಯಾಲಿಟಿ ಶೋದಲ್ಲಿಯೂ ಹನುಮಂತನಿಗೆ ನಿಮ್ಮ ತಾಯಿ ಬಟ್ಟೆ ಬೇಕು ಅಂತ ಹೇಳಿದ್ದರು.
ಹೀಗಾಗಿ ರಿಯಾಲಿಟಿ ಶೋಗೆ ಆಗಮಿಸಿದ್ದ ಶೀಲವ್ವ ಅವರು ಕೊಟ್ಟ ಮಾತಿನಂತೆ ತಾವೇ ಕೈಯಿಂದ ಕಸೂತಿ ಮಾಡಿದ ಬಣ್ಣ ಬಣ್ಣದ ಉಡುಪನ್ನು ಅನುಶ್ರೀ ಅವರಿಗೆ ನೀಡಿದ್ದರು.
ಹಣ್ಣುಗಳನ್ನು ನಾವು ತಿಂದಷ್ಟು ನಮಗೆ ಆರೋಗ್ಯ ನಿರಂತರವಾಗಿರುತ್ತದೆ. ಅದರಲ್ಲಿಯೂ ಕೆಲವೊಂದು ನಿರ್ದಿಷ್ಟ ಹಣ್ಣುಗಳು ಆರೋಗ್ಯಕ್ಕೆ ಹಿತಕಾರಿಯಾಗಿದೆ. ಸಿಹಿಯಾದ ರುಚಿಯಿಂದ ಕೂಡಿದ ಹಲಸು ಆರೋಗ್ಯಕ್ಕೆ ನೀಡುವ ಕೊಡುಗೆ ಅಪಾರವಾದುದು.ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು ರಕ್ತದ ಒತ್ತಡವನ್ನು ಸಮತೋಲನವಾಗಿಸುತ್ತದೆಹಲಸಿನ ಹಣ್ಣಿನ ತೊಳೆಗಳಲ್ಲಿ ಪೊಟ್ಯಾಶಿಯಂ ಅಂಶ ಹೆಚ್ಚಾಗಿದ್ದು, ಅಧಿಕ ರಕ್ತದ ಒತ್ತಡ ಸಮಸ್ಯೆಯಿಂದ ಬಳಲುತ್ತಿರುವ ಮಂದಿಗೆ ಇದು ಬಹಳ ಸಹಕಾರಿ ಎಂದು ಹೇಳುತ್ತಾರೆ. ಏಕೆಂದರೆ ಪೊಟ್ಯಾಶಿಯಂ ಅಂಶ ಹೊಂದಿರುವ ಯಾವುದೇ ಆಹಾರ ಸೇವನೆ ಮಾಡುವುದರಿಂದ ದೇಹದಲ್ಲಿ ಸೋಡಿಯಂ ಅಂಶ…
ಪ್ರಸ್ತುತ ದಿನಗಳಲ್ಲಿ ಕೃಷಿ ಕ್ಷೇತ್ರದ ಕಡೆ ಮುಖ ಮಾಡಿ ನೋಡದ ಜನರನಡುವೆ ಹಾಗು ಸರ್ಕಾರೀ ಕೆಲಸ ಬೇಕು, ಎಂಬುದಾಗಿ ಬಯಸೋ ಜನರು ಇದ್ದಾರೆ ಆದರೆ. ಅವೆಲ್ಲವನ್ನು ಬಿಟ್ಟು ನಾನು ಕೃಷಿ ಕ್ಷೇತ್ರದಲ್ಲಿ ಏನೋ ಒಂದು ಸಾಧನೆ ಮಾಡಬೇಕು ಅಂದುಕೊಂಡು ತಾನು ಮಾಡುತ್ತಿದ್ದ ಚಾರ್ಟೆಡ್ ಅಕೌಂಟೆಡ್ ಕೆಲಸವನ್ನು ಬಿಟ್ಟು ಕೃಷಿ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿ ಕೊಂಡಿದ್ದಕ್ಕೆ ಇಂದು 40 -45 ಲಕ್ಷ ಅಧಾಯವನ್ನು ಪಡೆಯುತ್ತಿದಾರೆ. ರಾಂಚಿ ಮೂಲದ ರಾಜೀವ್ ಎನ್ನುವವರು 10 ಎಕರೆ ಭೂಮಿಯನ್ನು ಗುತ್ತಿಗೆಗೆ ಪಡೆದು…
ಮಹಾಮಾರಿ ಕೊರೋನಾ ಇರುವ ಸಮಯದಲ್ಲಿ ಎಸ್ಎಸ್ಎಲ್ಸಿ ಹಾಗೂ ಇನ್ನಿತರೇ ಪರೀಕ್ಷೆಗಳು ಮಾಡಲೇಬೇಕೆಂದರೆ ಪ್ರತಿ ವಿದ್ಯಾರ್ಥಿಗಳ ಹೆಸರಿನಲ್ಲಿ 50 ಲಕ್ಷ ಹಾಗೂ ಪ್ರತಿ ಶಿಕ್ಷಕರಿಗೂ 25 ಲಕ್ಷ ಹಣವನ್ನು ಅವರ ಅಕೌಂಟ್ ಗೆ ಡೆಪಾಸಿಟ್ ಮಾಡಿ ಎಂದು ಕನ್ನಡ ಹೊರಾಟಗಾರ ವಾಟಾಳ್ ನಾಗರಾಜ್ ಅವರು ಹೇಳಿಕೆಯನ್ನು ನೀಡಿದ್ದಾರೆ. ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸುವುದರ ವಿರುಧ್ದ ಪ್ರತಿಭಟಿಸಿ, ನಂತರ ಸುದ್ದಿಗಾರರರೊಂದಿಗೆ ಮಾತನಾಡಿದ ವಾಟಾಳ್ ನಾಗರಾಜ್ ಕೊರೊನ ಜೊತೆ ಸರಸ ಸರಿಯಿಲ್ಲ. ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವರಾದ…
ಬೊಜ್ಜು ಕರಗಲು ಸರಳ ಯೋಗಾಸನವಾದ ಊರ್ಧ್ವ ಪ್ರಸಾರಿತ ಪಾದಾಸನದ ಅಭ್ಯಾಸ ಮಾಡಬಹುದು. ಊರ್ಧ್ವ ಎಂದರೆ ಮೇಲ್ಮುಖ, ಪ್ರಸಾರಿತ ಎಂದರೆ ವಿಸ್ತ್ರತ. ಪಾದ ಎಂದು ಕಾಲು ಮತ್ತು ಆಸನ ಎಂದರೆ ಯೋಗಭಂಗಿ. ಸಾಮಾನ್ಯ ಎಲ್ಲ ವಯಸ್ಸಿನವರು ಅಭ್ಯಾಸ ಮಾಡಬಹುದು. ಆರಂಭದಲ್ಲಿ ಹೊಸಬರು ಗೋಡೆಯ ಸಹಾಯ ತೆಗೆದುಕೊಳ್ಳಬಹುದು. ವಿಧಾನ: ನೆಲದ ಮೇಲೆ ಆರಾಮವಾಗಿ ವಿಶ್ರಾಂತಿ ಮಾಡಿ. ಆಮೇಲೆ ಕಾಲುಗಳು ಜೋಡಣೆ, ಕೈಗಳನ್ನು ತೊಡೆಯ ಪಕ್ಕದಲ್ಲಿ ಇರಿಸಿ. ಸ್ವಲ್ಪ ಹೊತ್ತು ಈ ಸ್ಥಿತಿಯಲ್ಲಿದ್ದು, ಉಸಿರನ್ನು ತೆಗೆದುಕೊಳ್ಳುತ್ತ ನಿಧಾನವಾಗಿ ಎರಡೂ ಕಾಲುಗಳನ್ನು 30ರಿಂದ…
ಇಂಗ್ಲಿಷ್ ನಲ್ಲಿ ಬಿಟರ್ ಗೌರ್ಡ್ ಎಂದು ಕರೆಯಲಾಗುವ ಇದು,ಸೌತೆಕಾಯಿಯಂತಹ ಕ್ಯುಕರ್ಬಿಟೇಸಿಯೆ ಜಾತಿಗೆ ಸೇರಿದ ಉಷ್ಣವಲಯ ಹಾಗು ಉಪೋಷ್ಣವಲಯದ ಬಳ್ಳಿಯಾಗಿದೆ. ಇದು ತಿನ್ನಲು ಯೋಗ್ಯವಾದ ಹಣ್ಣನ್ನು ಹೊಂದಿರುವ ಕಾರಣಕ್ಕೆ ಏಷಿಯಾ , ಆಫ್ರಿಕಾ ಹಾಗು ಕ್ಯಾರೆಬಿಯನ್ ಅಂದರೆ ವೆಸ್ಟ್ ಇಂಡೀಸ್ ದ್ವೀಪ ಪ್ರದೇಶಗಳಲ್ಲಿ ವ್ಯಾಪಕವಾಗಿ ಬೆಳೆಯಲಾಗುತ್ತದೆ. ಇದರ ಹಣ್ಣು ಇತರ ಎಲ್ಲ ಹಣ್ಣು ಗಳಿಗಿಂತ ಅತ್ಯಧಿಕ ಕಹಿಯಾಗಿರುತ್ತದೆ. ಇದರಲ್ಲಿಯೂ ಮೂಲಭೂತವಾಗಿ ಹಣ್ಣಿನ ಆಕಾರ ಹಾಗು ಕಹಿಯಲ್ಲಿ ವ್ಯತ್ಯಾಸ ಹೊಂದಿರುವ ಹಲವು ಪ್ರಭೇದಗಳಿವೆ. ಹಾಗಲಕಾಯಿಯ ಉಪಯೋಗಗಳು ಕೊಲೆಸ್ಟ್ರಾಲ್ ಕಡಿಮೆ ಮಾಡುತ್ತದೆ: ಹಾಗಲಕಾಯಿಯಲ್ಲಿ ಪೈಟೋನ್ಯೂಟ್ರಿಯೆಂಟ್ಗಳೆಂಬ ಆಂಟಿ ಆಕ್ಸಿಡೆಂಟಗಳಿರುತ್ತದೆ. ಇವು ಕೆಟ್ಟ…
ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಅವರನ್ನು ಆಂಧ್ರಪ್ರದೇಶ ಸರ್ಕಾರ ಡೆಪ್ಯೂಟಿ ಕಲೆಕ್ಟರ್ ಆಗಿ ನೇಮಕ ಮಾಡಿತ್ತು. ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ಅಪಾಯಿಂಟ್ಮೆಂಟ್ ಲೆಟರ್ ಅನ್ನು ಸಿಂಧುಗೆ ಹಸ್ತಾಂತರಿಸಿದ್ದರು. 30 ದಿನಗಳೊಳಗೆ ಡೆಪ್ಯೂಟಿ ಕಲೆಕ್ಟರ್ ಆಗಿ ಅಧಿಕಾರ ಸ್ವೀಕರಿಸುವಂತೆ ಆಂಧ್ರ ಸರ್ಕಾರ ಸಿಂಧುಗೆ ಸೂಚಿಸಿತ್ತು.