ಸುದ್ದಿ

ಪ್ರಧಾನಿ ನರೇಂದ್ರ ಮೋದಿಗೋಸ್ಕರ ಸಮೋಸ, ಮಾವಿನ ಚಟ್ನಿ ಮಾಡಿದ ಆಸ್ಟ್ರೇಲಿಯಾ ಪ್ರಧಾನಿ.

106

ಪ್ರಧಾನಿ ನರೇಂದ್ರ ಮೋದಿ ಜಾಗತಿಕ ಮಟ್ಟದಲ್ಲಿ ದಿನೇ ದಿನೇ ತಮ್ಮ ಪ್ರಭಾವವನ್ನು ವಿಸ್ತರಿಸಿಕೊಳ್ಳುತ್ತಿದ್ದಾರೆ. ಈಗ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್‌ ಮಾರಿಸನ್‌ ಪ್ರಧಾನಿ ನರೇಂದ್ರ ಮೋದಿಗಾಗಿ ಸಮೋಸ ಮತ್ತು ಮಾವಿನ ಕಾಯಿ ಚಟ್ನಿಯನ್ನು ತಯಾರಿಸಿದ್ದಾರೆ. ಜೂನ್‌ 4ರಂದು ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್‌ ನಡೆಯಲಿದ್ದು, ಅದರಲ್ಲಿ ಭಾಗವಹಿಸಲು ಮಾರಿಸನ್‌ ಉತ್ಸುಕರಾಗಿದ್ದಾರೆ.

ಜೂನ್‌ 4ರಂದು ಪ್ರಧಾನಿ ನರೇಂದ್ರ ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಭಾಗವಹಿಸಲು ಉತ್ಸುಕರಾಗಿರಾಗುವ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್‌ ಮಾರಿಸನ್‌, ಪ್ರಧಾನಿ ಮೋದಿಗಾಗಿ ಸಮೋಸ ಮತ್ತು ಮಾವಿನ ಕಾಯಿ ಚಟ್ನಿಯನ್ನು ತಯಾರಿಸಿ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ಸಮೋಸ ಚಿತ್ರಗಳನ್ನು ಟ್ವೀಟ್‌ ಮಾಡಿರುವ ಪ್ರಧಾನಿ ಮಾರಿಸನ್‌, ಮಾವಿನ ಕಾಯಿ ಚಟ್ನಿ ಜೊತೆ ಭಾನುವಾರದ ಸಮೋಸ ತಯಾರಿಸಿದ್ದು, ಈ ವಾರ ಭಾರತದ ಪ್ರಧಾನಿ ನರೇಂದ್ರ ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್‌ ಇದೆ. ಅವರು ಸಸ್ಯಾಹಾರಿಯಾಗಿದ್ದು, ನಾನು ಅವರ ಜೊತೆ ಇದನ್ನು ಹಂಚಿಕೊಳ್ಳಲು ಇಷ್ಟಪಡುತ್ತೇನೆ ಎಂದಿದ್ದಾರೆ.

ಆಸ್ಟ್ರೇಲಿಯಾ ಪ್ರಧಾನಿ ಮಾರಿಷನ್‌ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಪ್ರಧಾನಿ ನರೇಂದ್ರ ಮೋದಿ, ಎರಡು ರಾಷ್ಟ್ರಗಳು ಹಿಂದೂ ಮಹಾಸಾಗರದ ಜೊತೆ ಸಂಪರ್ಕ ಸಾಧಿಸಿದ್ದು, ಭಾರತದ ಸಮೋಸ ಜೊತೆ ಒಂದಾಗಿದ್ದೇವೆ ಎಂದು ಹೇಳಿದ್ದಾರೆ. ಸಮೋಸ ರುಚಿಕರವಾಗಿರುವಂತೆ ಕಾಣುತ್ತಿದೆ ಎಂದಿದ್ದಾರೆ.

ಇನ್ನು, ಕೊರೊನಾ ಯುದ್ಧದಲ್ಲಿ ಜಯ ಸಾಧಿಸಿದ ಮೇಲೆ ಜೊತೆಗೂಡಿ ಸಮೋಸ ಸವಿಯೋಣ. ನಾನು ಕೂಡ ಜೂನ್‌ 4ನೇ ತಾರೀಕಿನ ವಿಡಿಯೋ ಕಾನ್ಫರೆನ್ಸ್‌ಗಾಗಿ ಕಾಯುತ್ತಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್‌ ಮಾಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ