ಗೃಹಜ್ಯೋತಿ ಯೋಜನೆಗೆ ಅರ್ಜಿಸಲ್ಲಿಕೆ ಹೇಗೆ? ಜೂನ್ 15 ರಿಂದ ಅರ್ಜಿ ಆಹ್ವಾನ
ಬೆಂಗಳೂರು:ಗೃಹಜ್ಯೋತಿ ಯೋಜನೆ ಜಾರಿಗೆ ಎಲ್ಲಾ ಸಿದ್ದತೆ ಕೈಗೊಳ್ಳಲಾಗಿದ್ದು, ಒಟ್ಟು ಅಂದಾಜು ಸರಾಸರಿ 13ಸಾವಿರ ಕೋಟಿ ವೆಚ್ಚವಾಗಲಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು. ಬೆಸ್ಕಾಂ ಕಚೇರಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಗೃಹಬಳಕೆದಾರರ ಸರಾಸರಿ ಒಂದು ವರ್ಷದ ವಿದ್ಯುತ್ ಬಳಕೆಯ ಪ್ರಮಾಣವನ್ನು ಪಡೆದುಕೊಂಡ ಬಳಿಕ ಉಚಿತವಾಗಿ ವಿದ್ಯುತ್ ಪ್ರಮಾಣವನ್ನು ನಿಗದಿಪಡಿಸಲಾಗುವುದು ಎಂದು ತಿಳಿಸಿದರು. ರಾಜ್ಯದಲ್ಲಿಒಟ್ಟು 2.16 ಕೋಟಿ ಗ್ರಾಹಕರಿದ್ದು, ಈ ಪೈಕಿ 200 ಯೂನಿಟ್…