ಆರೋಗ್ಯ, ಉಪಯುಕ್ತ ಮಾಹಿತಿ

ಮೆಂತ್ಯ ತಿನ್ನೋದ್ರಿಂದ ನಿಮ್ಮ ಆರೋಗ್ಯದ ಮೇಲೆ ಏನೆಲ್ಲಾ ಅದ್ಭುತ ಪ್ರಯೋಜನಗಳಾಗುತ್ತೆ ಗೊತ್ತಾ..!

1741

ಹಲವಾರು ರೋಗಗಳಿಗೆ ಮನೆಯಲ್ಲೇ ಮದ್ದಿದೆ ಎಂಬುದು ಎಷ್ಟೋ ಜನಕ್ಕೆ ಗೊತ್ತಿದ್ದರೂ ಅದನ್ನು ಉಪಯೋಗ ಮಾಡಿಕೊಳ್ಳದಿರುವವರೇ ಹೆಚ್ಚು. ಇದಕ್ಕೆ ಕಾರಣವೂ ಇದೆ. ಆಧುನಿಕ ಯುಗದಲ್ಲಿ ತಂತ್ರಜ್ಞಾನಗಳೊಂದಿಗೆ ಸಾಗುತ್ತಿರುವ ನಾವು ನಮ್ಮಲ್ಲೇ ಇರುವ ನೈಸರ್ಗಿಕವಾದ ಔಷಧಿಗಳನ್ನು ಅರಿಯದೆ ಸಾಕಷ್ಟು ಸಮಸ್ಯೆಗಳನ್ನು ಸೃಷ್ಟಿಸಿಕೊಳ್ಳುತ್ತಿದ್ದೇವೆ.

*ನೆನೆ ಹಾಕಿದ ಮೆಂತ್ಯವನ್ನು ನುಣ್ಣಗೆ ರುಬ್ಬಿ ಕುದಿಯುವ ಹಾಲಿನೊಂದಿಗೆ ಬೆರೆಸಿ ರಾತ್ರಿ ಮಲಗುವಾಗ ಹಚ್ಚಿ, ಬೆಳಿಗ್ಗೆ ಎದ್ದೊಡನೆ ಮುಖ ತೊಳೆದುಕೊಳ್ಳಬೇಕು. ಇದರಿಂದ ಚರ್ಮ ಸುಕ್ಕುಗಟ್ಟುವುದಿಲ್ಲ.

*ಇದನ್ನು ಸೇವಿಸಿದರೆ ತಾಯಂದಿರಲ್ಲಿ ಎದೆ ಹಾಲು ಹೆಚ್ಚಿಸಲು ಸಹಾಯ ಮಾಡುತ್ತದೆ.

*ಬೆಳಿಗ್ಗೆ ಎದ್ದೊಡನೆ ಮೆಂತ್ಯದ ಸೇವನೆ ಮಾಡುವುದರಿಂದ ಹೆಚ್ಚುವರಿ ಕ್ಯಾಲೊರಿ ಕಳೆದುಕೊಳ್ಳಬಹುದು.

*ಮೆಂತ್ಯ, ಜೀರಿಗೆ, ಬೆಳ್ಳುಳ್ಳಿಯನ್ನು ಒಗ್ಗರಣೆಗೆ ಹಾಕಿ ಅನ್ನದೊಂದಿಗೆ ಕಲಸಿ ತಿಂದರೆ ಒಳ್ಳೆಯದು.

*ಕೊಬ್ಬರಿ ಎಣ್ಣೆಗೆ ಮೆಂತ್ಯದ ಕಾಳನ್ನು ಹಾಕಿ ತಲೆಗೆ ಹಚ್ಚಿಕೊಂಡರೆ ನೆರೆ ಕೂದಲಾಗುವುದು ನಿಲ್ಲುತ್ತದೆ.

*ಮೆಂತ್ಯ ಕಾಳನ್ನು ಪುಡಿ ಮಾಡಿ ಒಂದು ಚಹಾ ಚಮಚ ನಿಂಬೆ ರಸ ಮತ್ತು ಜೇನಿನಲ್ಲಿ ಮಿಶ್ರಣ ಮಾಡಿ ಸೇವಿಸಿದರೆ ಜ್ವರ ಕಡಿಮೆಯಾಗುತ್ತದೆ. ಗಂಟಲು ಕೆರೆತ ಮತ್ತು ಕೆಮ್ಮನ್ನೂ ಇದು ಗುಣಪಡಿಸುತ್ತದೆ.

*ಮೆಂತ್ಯದ ದೋಸೆ ತಯಾರಿಸಿ ಹಬೆಯಲ್ಲಿ ಬೇಯಿಸಿದ ಮೆಂತ್ಯದ ಸೊಪ್ಪಿನ ಪಲ್ಯದೊಂದಿಗೆ ತಿನ್ನುವುದರಿಂದ ಶಾರೀರಿಕ ನೋವು ಕಡಿಮೆಯಾಗುತ್ತದೆ.

*ಒಂದು ಟೀ ಚಮಚ ಮೆಂತ್ಯದ ಪುಡಿಯನ್ನು ಗಟ್ಟಿ ಮೊಸರಿನಲ್ಲಿ ಕಲಸಿ ಬಾಯಿಗೆ ಹಾಕಿಕೊಂಡು ನುಂಗುವುದರಿಂದ ಆಮಶಂಕೆ ಗುಣವಾಗುತ್ತದೆ.

*ಮೆಂತ್ಯ, ದೊಡ್ಡಪತ್ರೆ, ಹಾಗಲಕಾಯಿ, ಅರಿಶಿಣ, ಸೀಬೆ ಚಿಗುರು ಕೊತ್ತಂಬರಿಯನ್ನು ಸಮ ಪ್ರಮಾಣದಲ್ಲಿ ತೆಗೆದುಕೊಂಡು ಮೊಸರಿನಲ್ಲಿ ನುಣ್ಣಗೆ ಅರೆದು ಮೈಗೆ ಹಚ್ಚಿಕೊಳ್ಳಬೇಕು. ಇದರಿಂದ ತದ್ದು, ಪಿತ್ತದ ಗಂಧೆಗಳು ದೂರವಾಗುವುದು.

*ಮೆಂತ್ಯದ ಸೊಪ್ಪಿನ ಕಷಾಯಕ್ಕೆ ಒಂದು ಚಮಚ ಹಸಿಶುಂಠಿ, ಜೇನುತುಪ್ಪ ಬೆರೆಸಿ ಕುಡಿದರೆ ಕಫ ಕರಗುತ್ತದೆ.

*ಹುರಿದ ಮೆಂತ್ಯದಿಂದ ಗಂಜಿ ತಯಾರಿಸಿ ಹಾಲು, ಸಕ್ಕರೆ ಬೆರೆಸಿ ಸೇವಿಸುವುದರಿಂದ ಎದೆಹಾಲಿನ ಉತ್ಪತ್ತಿ ಹೆಚ್ಚುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ