ಸುದ್ದಿ

ಬರ್ಗರ್ ತಿಂದ ತಕ್ಷಣವೇ ಆಟೋ ಚಾಲಕನ ಬಾಯಿಂದ ರಕ್ತ ಹೊರಬಂತು…ಕಾರಣ?

80

ಮುಂಬೈ: ಆಟೋ ಚಾಲಕರೊಬ್ಬರು ಬರ್ಗರ್ ಕಿಂಗ್‍ನಲ್ಲಿ ಬರ್ಗರ್ ತಿಂದ ತಕ್ಷಣವೇ ಬಾಯಿಂದ ರಕ್ತ ಹೊರಬಂದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.ಸಾಜಿತ್ ಪಠಾಣ್(31) ಬರ್ಗರ್ ತಿಂದ ಆಟೋ ಚಾಲಕ. ಇವರು ಕಳೆದ ಬುಧವಾರ ತನ್ನ ಸ್ನೇಹಿತರ ಜೊತೆ ಬರ್ಗರ್ ಕಿಂಗ್‍ಗೆ ಬಂದಿದ್ದರು. ಅಲ್ಲಿ ಅವರು ಬರ್ಗರ್, ಫ್ರೈಂಚ್ ಫ್ರಯಿಸ್ ಹಾಗೂ ಸಾಫ್ಟ್ ಡ್ರಿಂಕ್ ಆರ್ಡರ್ ಮಾಡಿದ್ದರು.

ಸಾಜಿತ್ ಬರ್ಗರ್ ತಿಂದ ತಕ್ಷಣವೇ ಗಂಟಲಿನಲ್ಲಿ ನೋವುಂಟಾಗಿ ರಕ್ತ ಹೊರ ಬಂದಿದೆ. ಸಾಜಿತ್ ಗಂಟಲಿನಲ್ಲಿ ಏನೋ ಸಿಲುಕಿಕೊಂಡಿದೆ ಎಂದು ಹೇಳಿದ್ದಾರೆ. ಹೀಗಾಗಿ ಸಾಜಿತ್ ಸ್ನೇಹಿತರು ಬರ್ಗರ್ ಪರಿಶೀಲಿಸಿದಾಗ ಅದರಲ್ಲಿ ಗಾಜಿನ ಪೀಸ್ ಇತ್ತು. ತಕ್ಷಣ ಸ್ನೇಹಿತರು ಸಾಜಿತ್‍ನನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರು.

ಸಾಜಿತ್ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೆಂದು ಸ್ನೇಹಿತರು 15,000 ರೂ. ನೀಡಿದ್ದರು. ಬಳಿಕ ಮರುದಿನ ಚಿಕಿತ್ಸೆಗೆಂದು ದುಪ್ಪಟ್ಟು ಹಣವನ್ನು ಖರ್ಚು ಮಾಡಿದ್ದಾರೆ. ಈ ಬಗ್ಗೆ ಬರ್ಗರ್ ಕಿಂಗ್ ಮ್ಯಾನೇಜರ್ ಸಿದ್ಧಾರ್ಥ್ ಅವರನ್ನು ಸಂಪರ್ಕಿಸಿದಾಗ, “ಈ ಘಟನೆ ಬಗ್ಗೆ ನನಗೆ ಏನೂ ಗೊತ್ತಿಲ್ಲ” ಎಂದು ಹಾರಿಕೆ ಉತ್ತರ ನೀಡಿದ್ದಾರೆ.

ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ಗ್ರಾಹಕರ ದೂರಿನ ಮೇರೆಗೆ ಮೇ 18ರಂದು ಬರ್ಗರ್ ಕಿಂಗ್ ವಿರುದ್ಧ ಎಫ್‍ಐಆರ್ ದಾಖಲಿಸಿದ್ದೇವೆ. ಆಸ್ಪತ್ರೆಯಲ್ಲಿ ಮೆಡಿಕಲ್ ರಿಪೋರ್ಟ್ ಬಂದ ನಂತರ ವಿಚಾರಣೆ ಮುಂದುವರಿಸುತ್ತೇವೆ ಎಂದು ಇನ್ಸ್ ಪೆಕ್ಟರ್ ದೀಪಕ್ ಲಾಗಡ್ ಹೇಳಿದ್ದಾರೆ.

About the author / 

sullu suddi

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಆ್ಯಕ್ಷನ್ ಪ್ರಿನ್ಸ್ ವಾಸ್ತು ದೋಷಕ್ಕೆ ಹೆದರಿ ಮನೆ ಶಿಫ್ಟ್ ಮಾಡುತ್ತಿರುವುದೇಕೆ ಗೊತ್ತಾ?ಆ ಬಂಗಲೆಯ ಬಾಡಿಗೆ ಎಷ್ಟು ಗೊತ್ತಾ!

    ಇನ್ನೇನು ಸ್ವಲ್ಪ ದಿನಗಳಲ್ಲೇ ತನ್ನ ಬಹುಕಾಲದ ಗೆಳತಿಯ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳಲಿರುವ ಆ್ಯಕ್ಷನ್ ಪ್ರಿನ್ಸ್, ಸಿನಿಮಾದಲ್ಲಿ ವಿಲನ್ ಗಳ ಎದುರು ಖಡಕ್ ಆಗಿಯೇ ಡೈಲಾಗ್ ಹೇಳುವ ನಟ ಈಗ ವಾಸ್ತು ದೋಷಕ್ಕೆ ಹೆದರಿ ಮನೆ ಶಿಫ್ಟ್ ಮಾಡಲು ಮುಂದಾಗಿದ್ದಾರೆ ಎನ್ನುವ ಸುದ್ದಿ ಈಗ ಸ್ಯಾಂಡಲ್‍ವುಡ್‍ನಲ್ಲಿ ಹರಿದಾಡುತ್ತಿದೆ. ಡಿಸೆಂಬರ್ 9ರ ನಿಶ್ಚಿತಾರ್ಥದ ನಂತರ ಧ್ರುವ ತಮ್ಮ ಮನೆ ಶಿಫ್ಟ್ ಮಾಡಲಿದ್ದಾರೆ ಎನ್ನಲಾಗಿದ್ದು, ಈಗ ನಟ ಧ್ರುವ ಸರ್ಜಾ ಬನಶಂಕರಿಯ ಕೆ.ಆರ್ ರಸ್ತೆಯಲ್ಲಿ ವಾಸಿಸುತ್ತಿದ್ದರು. ಈಗ ವಾಸ್ತು ದೋಷದಿಂದ ಬನಶಂಕರಿಯ…

  • ಉಪಯುಕ್ತ ಮಾಹಿತಿ, ಜ್ಯೋತಿಷ್ಯ

    ಹರಿದ ಬಟ್ಟೆ, ಜೀನ್ಸ್ ತೊಡೋದರಿಂದ ಏನಾಗುತ್ತೆ ಗೊತ್ತಾ?

    ಈವರೆಗೆ ವಾಸ್ತುವಿಗೆ ಸಂಬಂಧಿಸಿದಂತೆ ಅನೇಕ ವಿಷಯಗಳನ್ನು ಹೇಳಿದ್ದೇವೆ. ಫೆಂಗ್ ಶೂಯಿಯಲ್ಲಿ ಯಾವ ವಸ್ತು ಮನೆಯಲ್ಲಿದ್ದರೆ ಶುಭ ಹಾಗೆ ಯಾವ ಜಾಗದಲ್ಲಿ ಯಾವ ವಸ್ತು ಇರಬೇಕು ಎಂಬೆಲ್ಲ ವಿಷಯಗಳನ್ನು ಹೇಳಲಾಗಿದೆ. ಇದ್ರ ಜೊತೆಗೆ ಫೆಂಗ್ ಶೂಯಿಯಲ್ಲಿ ಬಟ್ಟೆಗೂ ಮಹತ್ವ ನೀಡಲಾಗಿದೆ.  ಯಾವ ಬಟ್ಟೆ ಧರಿಸ್ತೇವೆ ಹಾಗೆ ಬಟ್ಟೆಯನ್ನು ಹೇಗೆ ಬಳಸ್ತೇವೆ ಎಂಬುದು ಫೆಂಗ್ ಶೂಯಿಯಲ್ಲಿ ಮಹತ್ವ ಪಡೆದಿದೆ. ನೀವು ಧರಿಸುವ ಬಟ್ಟೆ ನಿಮ್ಮ ಸೌಂದರ್ಯವನ್ನು ಹೆಚ್ಚಿಸಬಹುದು. ಆದ್ರೆ ಇದೇ ಬಟ್ಟೆ ನಿಮ್ಮ ದುರಾದೃಷ್ಟಕ್ಕೆ ಕಾರಣವಾಗಬಹುದು. ಮನೆಯಿಂದ ಹೊರ ಹೋಗುವಾಗಲ್ಲ…

  • ಆಧ್ಯಾತ್ಮ, ಉಪಯುಕ್ತ ಮಾಹಿತಿ

    ದೇವರಿಗೆ ಅಗರಬತ್ತಿ ಹಚ್ಚಿ ಪೂಜೆ ಮಾಡುವುದು ಏಕೆ ಗೊತ್ತಾ?ಇದರ ಹಿಂದೆ ಕಾರಣ…

    ಭಗವಂತನ ಸಾನಿಧ್ಯದಲ್ಲಿ ಅಗರ್ಬತ್ತಿ ಹಚ್ಚುವುದು ಪೂಜೆ ಮತ್ತು ಪ್ರಾರ್ಥನೆಯ ಮಹತ್ವದ ಅಂಶ. ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಧ್ಯಾನದ ವೇಳೆ ಊದಿನಕಡ್ಡಿ ಹಚ್ಚುವ ಸಂಪ್ರದಾಯವಿದೆ. ಇದೊಂದು ಪುರಾತನ ಆಚರಣೆ. ಊದಿನಕಡ್ಡಿ ಮನೆ ತುಂಬ ಸುಗಂಧ ಪಸರಿಸುವುದು ಮಾತ್ರವಲ್ಲ, ಇದನ್ನು ಹಚ್ಚುವುದಕ್ಕೆ ವೈಜ್ಞಾನಿಕ ಕಾರಣವೂ ಇದೆ. ಪುರಾತನ ಕಾಲದಲ್ಲಿ ಹಲವು ಔಷಧೀಯ ವಸ್ತುಗಳನ್ನು ಊದಿನಕಡ್ಡಿಯಲ್ಲಿ ಅಳವಡಿಸಲಾಗುತ್ತಿತ್ತು. ಲೋಬಾನ ಹಾಗೂ ಗುಗ್ಗಲ್ ಅತ್ಯಂತ ಜನಪ್ರಿಯವಾಗಿದ್ದವು. ಅದನ್ನು ಇಂದಿಗೂ ಬಳಸಲಾಗುತ್ತದೆ. ಲೋಬಾನವನ್ನು ಬಾಸ್ವೆಲ್ಲಿಯಾ ಎಂಬ ಮರದ ಅಂಟಿನಿಂದ ತಯಾರಿಸಲಾಗುತ್ತದೆ. ನಾವು ಅದರ ಸುಗಂಧವನ್ನು…

  • ಸಾಧನೆ, ಸುದ್ದಿ, ಸ್ಪೂರ್ತಿ

    500 ರೂ ಸಾಲ ಪಡೆದು ಬಿಸಿನೆಸ್ ಆರಂಭಿಸಿದ ಈಕೆ ಈಗ ಕೋಟಿ ಕೋಟಿ ಒಡತಿ, ಕಣ್ಣೀರಿನ ಕಥೆ.

    ನಾವು ಹುಟ್ಟುವಾಗ ಒಬ್ಬರಾಗಿ ಈ ಪ್ರಪಂಚಕ್ಕೆ ಬರುತ್ತೇವೆ ಮತ್ತು ಸಾಯುವಾಗ ಒಬ್ಬರಾಗಿ ಸಾಯುತ್ತೇವೆ ಮತ್ತು ನಮ್ಮ ಸಾವನ್ನ ಯಾರಿಂದಲೂ ಕೂಡ ತಪ್ಪಿಸಲು ಸಾಧ್ಯವಿಲ್ಲ ಹಾಗೆ ನಮ್ಮ ನೋವನ್ನ ಯಾರು ಭರಿಸಲು ಕೂಡ ಸಾಧ್ಯವಿಲ್ಲ. ನಾವು ಕಷ್ಟದಲ್ಲಿ ಇದ್ದಾಗ ಒಂದು ಹಂತದ ತನಕ ಮಾತ್ರ ಯಾರಾದರೂ ಸಹಾಯ ಮಾಡಬಲ್ಲರು ಆದರೆ ಅದರಿಂದ ಆಚೆ ನಾವೇ ಹೋರಾಡಬೇಕು ಮತ್ತು ನಾವೇ ಬದುಕುವ ದಾರಿಯನ್ನ ಹುಡುಕಾಡಬೇಕು ಯಾಕೆ ಅಂದರೆ ಜೀವನ ಅನ್ನುವುದು ಪ್ರತಿ ಕ್ಷಣದ ಹೋರಾಟ. ಎಲ್ಲಾ ದಾರಿಗಳು ಮುಚ್ಚಿ ಹೋದಾಗ…

  • ದೇಶ-ವಿದೇಶ

    ಇದು ಜಗತ್ತಿನ ಅತ್ಯಂತ ಸೋಮಾರಿ ರಾಷ್ಟ್ರ..! ಆ ರಾಷ್ಟ್ರ ಯಾವುದು ಗೊತ್ತಾ?

    ನಾವು ಮನೆಗಳಲ್ಲಿ ಕೆಲಸ ಮಾಡದ, ಉದ್ಯೋಗ ಮಾಡದೆ ತಿಂದು ಕೆಲಸವಿಲ್ಲದೇ ತಿರುಗುವವರನ್ನು, ಸೋಮಾರಿ ಎಂದು ಮನೆಗಳಲ್ಲಿ ಹಾಸ್ಯ ಮಾಡುವುದುಂಟು. ಹೀಗೆ ಸೋಮಾರಿತನದಿಂದ ಇರುವವರು ಎಲ್ಲಾ ಕಡೆ ಸಿಗುತ್ತಾರೆ. ಅದಕ್ಕಾಗಿಯೇ ವಿಶ್ವವಿದ್ಯಾನಿಲಯವೊಂದು ವಿಶ್ವದ ಸೋಮಾರಿಗಳ ಬಗ್ಗೆ ಅಧ್ಯಯನ ನಡೆಸಿದ್ದು ಅದರ ವಿವರಣೆಯನ್ನು ಕೊಟ್ಟಿದೆ.