ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜನವರಿ 8 ಮತ್ತು 9 ಭಾರತ ಬಂದ್ ನಡೆಯಲಿದೆ. ಕೇಂದ್ರ ಸರ್ಕಾರದ ವಿರದ್ಧ ಕಾರ್ಮಿಕ ಸಂಘಟನೆಗಳು ಬಂದ್ ಗೆ ಕರೆ ನೀಡಿವೆ. ಕೇಂದ್ರ ಸರ್ಕಾರವು ಜನ ವಿರೋಧಿ, ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೆ ತರುತ್ತಿದೆ ಎಂದು ಕಾರ್ಮಿಕ ಸಂಘಟೆಗಳು ಅಪಾದಿಸಿವೆ.

ಇದಕ್ಕೆ ಇಂಡಿಯನ್ ಬ್ಯಾಂಕ್ ಅಸೋಸಿಯೇಷನ್ ಸಹ ಬೆಂಬಲ ನೀಡಿದೆ ಎಂದು ತಿಳಿದುಬಂದಿದೆ.
ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘಟನೆ (ಎಐಬಿಇಎ) ಮತ್ತು ಬ್ಯಾಂಕ್ ಎಂಫ್ಲಾಯಿಸ್ ಫೆಡರೇಷನ್ ಆಫ್ ಇಂಡಿಯಾ ಅಸೋಸಿಯೇಷನ್ (ಬಿಇಎಫ್ಐಎ) ಸಂಘಟನೆಗಳು ಬ್ಯಾಂಕ್ ಆಫ್ ಇಂಡಿಯಾ ಅಸೋಸಿಯೇಷನ್ ಬಂದ್ಗೆ ಬೆಂಬಲ ನೀಡುತ್ತಿರುವ ಕುರಿತು ಮಾಹಿತಿ ನೀಡಿವೆ.

ಈ ನಡುವೆ ಬಿಎಸ್ಸಿಗೆ ಮಾಹಿತಿ ಒದಗಿಸಿರುವ ಅಸೋಸಿಯೇಷನ್ ಜನವರಿ 8 ಮತ್ತು 9 ರಂದು ಬ್ಯಾಂಕ್ ಸೇವೆ ನಿರ್ವಹಿಸುತ್ತವೆ, ಆದರೆ ಕೆಲವೆಡೆ ಬ್ಯಾಂಕ್ ಸೇವೆಗೆ ಅಡಚಣೆ ಆಗಬಹುದು ಎಂದು ತಿಳಿದು ಬಂದಿದೆ.
ಎಐಬಿಇಎ ಹಾಗೂ ಬಿಇಎಫ್ಐಎ ಮುಷ್ಕರಕ್ಕೆ ಬೆಂಬಲ ನೀಡುತ್ತಿರುವುದರಿಂದ ದೇಶದ ಕೆಲವು ಭಾಗದ ಬ್ಯಾಂಕಿಂಗ್ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಕೇಂದ್ರ ಸರ್ಕಾರ ಜನ ವಿರೋಧಿ ನೀತಿಗಳನ್ನು ಕೈಬಿಟ್ಟು ಇತರೆ 12 ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆಗೆ ಮುಂದಾಗಿವೆ ಎಂದು ಬ್ಯಾಂಕ್ ಆಫ್ ಬರೋಡಾ ತಿಳಿಸಿದೆ.

ಎರಡು ದಿನಗಳ ಮುಷ್ಕರದ ಬಳಿಕ ಜನವರಿ 12 ಎರಡನೇ ಶನಿವಾರದ ರಜೆ, 13ರಂದು ಭಾನುವಾರ ವಾರದ ಬಿಡುವು ಹಾಗೂ 14ರಂದು ಮಕರ ಸಂಕ್ರಾಂತಿ/ ಪೊಂಗಲ್ ಹಬ್ಬ ಇರುವುದರಿಂದ ಸರಣಿ ರಜೆಗಳು ಬರಲಿವೆ. ಆದ್ದರಿಂದ ಮುಂದಿನವಾರ ಪೂರಾ ಬ್ಯಾಂಕ್ ಬಂದ್ ಆಗಲಿದ್ದು ಜನರು ಏನಾದರೂ ವ್ಯವಹಾರವಿದ್ದರೆ ಈಗಲೇ ಮುಗಿಸಿಕೊಳ್ಳುವುದು ಒಳ್ಳೆಯದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅರವತ್ತರ ವಯಸ್ಸಿನಲ್ಲೂ ಕಟ್ಟುಮಸ್ತಾಗಿದ್ದು ಸೂಪರ್ ಮಾಡೆಲ್ನಂತಿರುವ ದಿನೇಶ್ ಮೋಹನ್ ಈಗ ಹಲವರ ಗಮನ ಸೆಳೆಯುತ್ತಿದ್ದಾರೆ. ಹರ್ಯಾಣ ಸರ್ಕಾರದ ಶಿಕ್ಷಣ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ದಿನೇಶ್ ಮೋಹನ್ ಅತಿಯಾದ ತೂಕದಿಂದ ಬಳಲಿ ಹಾಸಿಗೆ ಹಿಡಿದಿದ್ದರು. ಅಲ್ಲಿಂದ ಚೇತರಿಸಿಕೊಂಡರೂ ದಢೂತಿ ದೇಹ ಇಳಿಸಿಕೊಳ್ಳಲು 50 ಕೆ.ಜಿ. ತೂಕ ಕಡಿಮೆ ಮಾಡಿಕೊಂಡ ಅವರು 2016ರಲ್ಲಿ ಫೋಟೋಶೂಟ್ ಮಾಡಿದ ಬಳಿಕ ಅಂಗಸೌಷ್ಠವ ರಕ್ಷಣೆ ನಿರಂತರವಾಗಿಸಿಕೊಂಡರು. ಈಗ ಅವರಿಂದ ಯುವಕರು ಮಾತ್ರವಲ್ಲ ವಯಸ್ಸಾದವರೂ ಸೆಳೆಯಲ್ಪಡುತ್ತಿದ್ದಾರೆ. ಯಾವ ವಯಸ್ಸಿನಲ್ಲಿ ಬೇಕಿದ್ದರೂ ಫಿಟ್ನೆಸ್ ಕಾಪಾಡಿಕೊಳ್ಳಬಹುದು ಎಂಬುದಕ್ಕೆ ಅವರು…
ಉತ್ತರ ಪ್ರದೇಶದ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಗುಡುಗು, ಸಿಡಿಲು ಸಹಿತ ವರುಣ ದೇವ ವಿಜೃಂಭಿಸಿದ ಕಾರಣ ಆಗ್ರಾದಲ್ಲಿರುವ ಐತಿಹಾಸಿಕ ಕಟ್ಟಡ ತಾಜ್ಮಹಲ್ಗೆ ಹಾನಿಯಾಗಿರುವ ಕುರಿತು ವರದಿಯಾಗಿದೆ. ಕಟ್ಟಡದ ಮುಖ್ಯಗೇಟ್ ಮತ್ತು ಎತ್ತರದ ಗುಮ್ಮಟದ ಕೆಳ ಭಾಗದ ಅಮೃತ ಶಿಲೆಯ ರೇಲಿಂಗ್ಗೆ ಹಾನಿಯಾಗಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸಮಾಧಿಯ ಮೇಲ್ಭಾಗಕ್ಕೆ ಹಾನಿಯಾಗಿದ್ದು, ತಾಜ್ಮಹಲ್ ಆವರಣದಲ್ಲಿದ್ದ ಕೆಲ ಮರಗಳು ಬುಡದ ಸಮೇತ ಕಿತ್ತು ಬಂದಿರುವುದಾಗಿ ಎಎಸ್ಐ ಅಧೀಕ್ಷಕ ಪುರಾತತ್ವ ಶಾಸ್ತ್ರಜ್ಞ ಬಸಂತ್ ಕುಮಾರ್ ಮಾಹಿತಿ ನೀಡಿದ್ದಾರೆ. ಈ ಹಿಂದೆಯೂ…
ನಾವು ದಿನಾಲು ಬೆಳಿಗ್ಗೆ ಎದ್ದ ತಕ್ಷಣ ನಮಗೆ ಏನಿಲ್ಲಾ ಅಂದ್ರು ಬಿಸಿ ಬಿಸಿ ಚಹಾ(ಟೀ) ಬೇಕೇ ಬೇಕು. ಒಂದು ಸಮೀಕ್ಷೆಯ ಪ್ರಕಾರ ಶೇ. ತೊಂಬತ್ತಕ್ಕೂ ಹೆಚ್ಚು ಭಾರತೀಯರು ನಿತ್ಯವೂ ಕನಿಷ್ಠ ಮೂರು ಕಪ್ ಚಹಾ ಕುಡಿಯುತ್ತಾರೆ. ಆದರೆ ಚಹಾ ಕುಡಿಯುವವರಲ್ಲಿ ಹೆಚ್ಚಿನವರು ದಿನದ ಪ್ರಥಮ ಆಹಾರವಾಗಿ ಒಂದು ಟೀ ಸೇವಿಸುತ್ತಾರೆ. ಕೆಲವರಂತೂ ಹಾಸಿಗೆಯಿಂದ ಏಳುವ ಮುನ್ನವೇ ಬೆಡ್ ಟೀ ಎಂದು ಕುಡಿಯುತ್ತಾರೆ.
ಈ ರೀತಿ ತಿನ್ನುವ ವ್ಯಕ್ತಿಯನ್ನು ಅನುಪ್ ಓಜಾ ಎಂದು ಗುರುತಿಸಲಾಗಿದೆ. ಈತ ದಿನದಲ್ಲಿ ತಿಂಡಿಗೆ ಬರೋಬ್ಬರಿ 40 ಚಪಾತಿಗಳನ್ನು ತಿಂದಿದ್ದಾನೆ. ಜೊತೆಗೆ ಊಟದ ಸಮಯದಲ್ಲಿ ಹತ್ತು ಪ್ಲೇಟ್ ಅನ್ನವನ್ನು ತಿಂದಿದ್ದಾನೆ. ಈ ಅಧುನಿಕ ಬಕಾಸುರನನ್ನು ನೋಡಿದ ಅಲ್ಲಿ ಅಧಿಕಾರಿಗಳು ಗೊಂದಲಕ್ಕೊಳಗಾಗಿದ್ದಾರೆ. ಈ ಘಟನೆ ಬಿಹಾರದ ಬಕ್ಸಾರ್ ನಲ್ಲಿರುವ ಕ್ವಾರಂಟೈನ್ ಕೇಂದ್ರದಲ್ಲಿ ನಡೆದಿದೆ. ಅನುಪ್ ರಾಜಸ್ಥಾನದಿಂದ ಬಿಹಾರಕ್ಕೆ ಮರಳಿದ್ದ, ಆದ್ದರಿಂದ ಸರ್ಕಾರದ ನಿಮಯದಂತೆ ಆತನನ್ನು ಕ್ವಾರಂಟೈನ್ ಕೇಂದ್ರದಲ್ಲಿ ಇರಿಸಲಾಗಿದೆ. ಈ ವೇಳೆ ಈತ ದಿನಕ್ಕೆ ತಿಂಡಿಯ ವೇಳೆಗೆ 40…
ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್.ಸಿ.ಬಿ.) ತಂಡ 5 ರನ್ ನಿಂದ ಸೋಲು ಕಂಡಿದೆ. 1 ನೋಬಾಲ್ ನಿಂದಾಗಿ ಆರ್.ಸಿ.ಬಿ. ಪಂದ್ಯ ಕಳೆದುಕೊಳ್ಳುವಂತಾಗಿದ್ದು, ತಂಡದ ನಾಯಕ ವಿರಾಟ್ ಕೊಹ್ಲಿ ಆಕ್ರೋಶ ಹೊರಹಾಕಿದ್ದಾರೆ. ಮುಂಬೈ ತಂಡ ನೀಡಿದ 187 ರನ್ ಗೆಲುವಿನ ಗುರಿ ಬೆನ್ನತ್ತಿದ್ದ ಆರ್.ಸಿ.ಬಿ.ಗೆ ಕೊನೆಯ ಓವರಿನಲ್ಲಿ 17 ರನ್ ಗಳಿಸುವ ಅವಶ್ಯಕತೆ ಇತ್ತು. ಲಸಿತ್ ಮಾಲಿಂಗ ಎಸೆದ ಕೊನೆಯ ಓವರ್ ನ ಮೊದಲ ಎಸೆತದಲ್ಲಿ…
ಹಿಂದೂ ಧರ್ಮ ಹಾಗೂ ಹಿಂದೂ ಪೂಜಾ ವಿಧಾನದ ಪ್ರಕಾರ ಬಾಳೆ ಎಲೆಗೆ ಮಹತ್ವದ ಸ್ಥಾನವಿದೆ. ಬಾಳೆ ಎಲೆ ಇಲ್ಲದೆ ಸತ್ಯನಾರಾಯಣನ ಪೂಜೆ ನಡೆಯೋದಿಲ್ಲ. ಹಾಗೂ ಹಲವು ಪೂಜೆ ವಿಧಾನಗಳಲ್ಲಿ ಬಾಳೆ ಎಳೆಯನ್ನೇ ಬಳಸುತ್ತಾರೆ. ಬಾಳೆ ಎಲೆಗೆ ಎಷ್ಟು ಧಾರ್ಮಿಕ ಮಹತ್ವವಿದೆಯೋ ಅಷ್ಟೇ ಆಯುರ್ವೇದದಲ್ಲಿಯೂ ಮಹತ್ವ ಪಡೆದಿದೆ. ಸರ್ವ ರೋಗಗಳನ್ನ ಗುಣಪಡಿಸುವ ಶಕ್ತಿ ಬಾಳೆ ಎಲೆಗಿದೆ.