ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹಾಸನಕ್ಕೆ ಮೊದಲ ಸ್ಥಾನ ಬಂದಿದೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾರಣ ಯಾರೆಂಬುವುದಕ್ಕೆ ಸಚಿವ ರೇವಣ್ಣ ಪತ್ನಿ ಭವಾನಿ ರೇವಣ್ಣ ಅವರು ಪ್ರತಿಕ್ರಿಯಿಸಿದ್ದಾರೆ.
ಇತ್ತಿಚೆಗಷ್ಟೇ ಬಂದ sslc ಫಲಿತಾಂಶದಲ್ಲಿ ಹಾಸನ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿತ್ತು. ಇದಕ್ಕೆ ಸರ್ಕಾರದ ನೀತಿಗಳೇ ಕಾರಣವಾಗಿದ್ದು, ನನ್ನ ಪತ್ನಿ ಜಿಲ್ಲಾ ಪಂಚಾಯಿತಿ ಶಿಕ್ಷಣಸ್ಥಾಯಿ ಸಮಿತಿ ಅಧ್ಯಕ್ಷೆ ಭವಾನಿ ಪ್ರಯತ್ನ ಕೂಡ ಸಫಲವಾಗಿದೆ. ಇದರಲ್ಲಿ ಜಿಲಾಧಿಕಾರಿಯಾಗಿದ್ದ ರೋಹಿಣಿ ಸಿಂಧುರಿಯವರ ಪಾತ್ರ ಏನಿಲ್ಲ ಎಂದು ಲೋಕೋಪಯೋಗಿ ಸಚಿವ ಎಚ್ ಡಿ ರೇವಣ್ಣ ಇತ್ತೀಚೆಗೆ ಹೇಳಿದ್ದರು.
ಹಾಸನ ಮೊದಲ ಸ್ಥಾನ ಬರಲು ನಾನೇ ಕಾರಣ ಎಂದು ಸ್ವತಃ ಭವಾನಿ ರೇವಣ್ಣ ಅವರೇ ಹೇಳಿಕೊಂಡಿದ್ದು, ಈ ಮೂಲಕ ಪತಿ ಮಾತು ನಿಜ ಎಂದು ಸಮರ್ಥಿಸಿಕೊಂಡಿದ್ದಾರೆ. ಸಾಧನೆಗೆ ಪತಿಯೇ ಸ್ಫೂರ್ತಿ, ರೋಹಿಣಿ ಸಿಂಧೂರಿ ಸಾಧನೆ ಏನೂ ಇಲ್ಲ. ರೇವಣ್ಣ ಹೇಳಿದ್ದರಲ್ಲಿ ಸತ್ಯ ಇದೆ.
ನಾನು ಜಿಲ್ಲಾ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಆಗಿದ್ದಾಗ ಹಾಸನ 31ನೇ ಸ್ಥಾನದಲ್ಲಿತ್ತು. ಪ್ರತಿ ತಿಂಗಳು ಸಭೆ ನಡೆಸಿ ಫಲಿತಾಂಶ ಸುಧಾರಣೆಗೆ ಕಾರ್ಯಕ್ರಮ ರೂಪಿಸಿದ್ದೆನು. ಶಿಕ್ಷಣಕ್ಕೆ ಒತ್ತು ನೀಡುತ್ತಿದ್ದ ರೇವಣ್ಣ ಅವರೇ ಸಾಧನೆಗೆ ಸ್ಫೂರ್ತಿ ಎಂದು ಭವಾನಿ ರೇವಣ್ಣ ಹೇಳಿದ್ದಾರೆ.
ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಸಾಧನೆ ಏನೂ ಇಲ್ಲ. ಒಂದೂವರೆ ವರ್ಷದಲ್ಲಿ ಡಿಸಿ ಮೇಡಂ ಯಾವುದೇ ಮೀಟಿಂಗ್ ಮಾಡಿಲ್ಲ. ಸುಮ್ಮನೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ ಎಂಬ ಪತಿ ರೇವಣ್ಣ ವಾದವನ್ನ ಭವಾನಿ ರೇವಣ್ಣ ಅವರು ಸಮರ್ಥನೆ ಮಾಡಿಕೊಂಡಿದ್ದಾರೆ.
ಹಣ್ಣುಗಳನ್ನು ನಾವು ತಿಂದಷ್ಟು ನಮಗೆ ಆರೋಗ್ಯ ನಿರಂತರವಾಗಿರುತ್ತದೆ. ಅದರಲ್ಲಿಯೂ ಕೆಲವೊಂದು ನಿರ್ದಿಷ್ಟ ಹಣ್ಣುಗಳು ಆರೋಗ್ಯಕ್ಕೆ ಹಿತಕಾರಿಯಾಗಿದೆ. ಸಿಹಿಯಾದ ರುಚಿಯಿಂದ ಕೂಡಿದ ಹಲಸು ಆರೋಗ್ಯಕ್ಕೆ ನೀಡುವ ಕೊಡುಗೆ ಅಪಾರವಾದುದು.ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು ರಕ್ತದ ಒತ್ತಡವನ್ನು ಸಮತೋಲನವಾಗಿಸುತ್ತದೆಹಲಸಿನ ಹಣ್ಣಿನ ತೊಳೆಗಳಲ್ಲಿ ಪೊಟ್ಯಾಶಿಯಂ ಅಂಶ ಹೆಚ್ಚಾಗಿದ್ದು, ಅಧಿಕ ರಕ್ತದ ಒತ್ತಡ ಸಮಸ್ಯೆಯಿಂದ ಬಳಲುತ್ತಿರುವ ಮಂದಿಗೆ ಇದು ಬಹಳ ಸಹಕಾರಿ ಎಂದು ಹೇಳುತ್ತಾರೆ. ಏಕೆಂದರೆ ಪೊಟ್ಯಾಶಿಯಂ ಅಂಶ ಹೊಂದಿರುವ ಯಾವುದೇ ಆಹಾರ ಸೇವನೆ ಮಾಡುವುದರಿಂದ ದೇಹದಲ್ಲಿ ಸೋಡಿಯಂ ಅಂಶ…
ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕೇಂದ್ರ ಸರ್ಕಾರದ ಕೊನೆ ಬಡ್ಜೆಟ್ ಮಂಡಿಸಿರುವ ಕೇಂದ್ರ ಹಣಕಾಸು ಸಚಿವರ ಪಿಯೂಶ್ ಗೋಯಲ್ ಮಧ್ಯಮ ವರ್ಗಕ್ಕೆ ಭರಪೂರ ಕೊಡುಗೆಗಳನ್ನು ನೀಡಿದ್ದಾರೆ. ಹೊಸ ಪಿಂಚಣಿ ಯೋಜನೆಯ ಅನುದಾನವನ್ನು ಸರ್ಕಾರ ಶೇ. 4ರಿಂದ 14ಕ್ಕೆ ಹೆಚ್ಚಳ ಮಾಡಿದೆ. ಹಾಲಿ ಇರುವ ಆದಾಯ ತೆರಿಗೆ ಮಿತಿಯನ್ನು 2.50 ಲಕ್ಷ ರೂ. ನಿಂದ 5 ಲಕ್ಷ ರೂ.ಗಳಿಗೆ ಏರಿಕೆ ಮಾಡಿದೆ. ಒಟ್ಟು 5 ಲಕ್ಷ ರೂ. ವರೆಗಿನ ಮಿತಿಯನ್ನು ಏರಿಸಿದೆ. ಇದರ ಜೊತೆಯಲ್ಲಿ ಹೂಡಿಕೆ ಮಾಡಿದರೆ 6.5 ಲಕ್ಷ…
ವೀಳ್ಯದೆಲೆ ಎಂದರೆ ನೆನಪಾಗುವುದು ತಾಂಬೂಲ. ಎಲ್ಲಾ ಶುಭ ಸಮಾರಂಭದಲ್ಲಿ ಹೆಚ್ಚು ಬಳಸುವ ಎಲೆ.ತಾಂಬೂಲದಲ್ಲಿ ಪ್ರಮುಖ ಸ್ಥಾನ ಹೊಂದಿರುವ ವೀಳ್ಯದೆಲೆಗೆ ಸದಾ ಬೇಡಿಕೆ ಇದೆ. ನಿಶ್ಚಿತಾರ್ಥ, ಮದುವೆ, ಮುಂಜಿ, ವ್ರತ ಹೀಗೆ ಏನೇ ಮಂಗಳ ಕಾರ್ಯಗಳಿದ್ದರೂ ವೀಳ್ಯದೆಲೆ ಬೇಕೇ ಬೇಕು. ಊಟದ ನಂತರ ತಾಂಬೂಲ ಹಾಕಿಕೊಳ್ಳಲಂತೂ ಈ ಎಲೆ ಅತ್ಯಗತ್ಯ.ಆದರೆ ಸಾಂಪ್ರದಾಯಕವಾಗಷ್ಟೆ ಅಲ್ಲ, ಇದರ ಔಷಧೀಯ ಗುಣಗಳು ಕೂಡ ಹಲವು. ಆದರೆ ರಕ್ತಸ್ರಾವ, ಪಿತ್ತದಿಂದ ತಲೆ ಸುತ್ತು ಹಾಗೂ ತಿವಿದ ಗಾಯವಾಗಿದ್ದರೆ ವೀಳ್ಯದೆಲೆಯನ್ನು ಸೇವಿಸಬಾರದು. ವೀಳ್ಯೆದೆಲೆಯನ್ನು ಹೆಚ್ಚಾಗಿ ಬಳಸಿದಲ್ಲಿ…
ಸರ್ವರ್ ಸಮಸ್ಯೆಯಿಂದಾಗಿ ಜಗತ್ತಿನಾದ್ಯಂತ ಮೊಬೈಲ್ ಗ್ರಾಹಕರು ವಾಟ್ಸಪ್ ಕ್ರ್ಯಾಶ್ ಆದ ಹಿನ್ನೆಲೆಯಲ್ಲಿ ಸಂದೇಶ ಕಳುಹಿಸಲು ಮತ್ತು ಸ್ವೀಕರಿಸಲು ಸಾಧ್ಯವಾಗದೆ ಇರುವ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಇಂಗ್ಲೆಂಡ್, ವೈದ್ಯ ಲೋಕ ಅದೆಷ್ಟು ಮುಂದುವರೆದಿದೆ ಎಂದರೆ ಮಾನವನ ರೋಗಗಳಿಗೇನು? ಪ್ರಾಣಿ, ಜಲಚರಗಳ ರೋಗಗಳಿಗೂ ಇದೀಗ ವೈದ್ಯರು ಚಿಕಿತ್ಸೆ ನೀಡುತ್ತಾರೆ. 1 ಗ್ರಾಂ ಮೀನಿನ ಯಶಸ್ವಿ ಶಸ್ತ್ರ ಚಿಕಿತ್ಸೆ ಮೌಲಿ ಪ್ರಜಾತಿಯ ಗೋಲ್ಡ್ ಫಿಶ್’ಗೆ ಯಶಸ್ವಿ ಶಸ್ತ್ರಚಿಕಿತ್ಸೆ, ಗೋಲ್ಡ್ ಫಿಶ್ ಹೊಟ್ಟೆಯಲ್ಲಿದ್ದ ಟ್ಯೂಮರ್ ಹೊರ ತೆಗೆದ ವೈದ್ಯೆ ಸೋನ್ಯಾ ಮೈಲ್ಸ್ ಶಸ್ತ್ರಚಿಕಿತ್ಸೆಗೆ 8,800 ರೂ ಖರ್ಚು. ಅದರಂತೆ ಇಂಗ್ಲೆಂಡ್’ನ ಬ್ರಿಸ್ಟಸ್’ನ ವೈದ್ಯೆ ಸೋನ್ಯಾ ಮೈಲ್ಸ್ ಕೇವಲ 1 ಗ್ರಾಂ ತೂಕದ ಮೌಲಿ ಪ್ರಜಾತಿಯ ಗೋಲ್ಡ್ ಫಿಶ್’ಗೆ ಶಸ್ತ್ರ…
ಚಿನ್ನ ಎಂದರೆ ಯಾರು ತಾನೆ ಇಷ್ಟಪಡುವುದಿಲ್ಲ ಹೇಳಿ?. ಗಂಡಸರಿಗಿಂತ ಹೆಂಗಸರಿಗೇ ಚಿನ್ನದ ಮೇಲೆ ಹೆಚ್ಚಿನ ಆಸೆ ಇರುತ್ತದೆ. ಸಾಮಾನ್ಯ ದಿನಗಳಲ್ಲೇ ಅಪಾರ ಆಸಕ್ತಿ ತೋರುವ ಹೆಂಗಸರು ಮದುವೆಯಂತಹ ಶುಭಕಾರ್ಯಗಳಲ್ಲಿ ಇನ್ನೂ ಹೆಚ್ಚಿನ ಆಸಕ್ತಿ ತೋರುತ್ತಾರೆ.
ಭಾರತದ ಅತೀ ದೊಡ್ಡ ಹನುಮಂತನಿಗೆ ಭರ್ಜರಿ ಸ್ವಾಗತ ಮಾಡಿ, ಬೀಳ್ಕೊಟ್ಟ ಸೂಲಿಬೆಲೆ ಗ್ರಾಮಸ್ತರು. ಹೌದು, ಭಾರತದ ಅತೀ ಎತ್ತರದ, 62 ಅಡೀ ಇರುವ ಹನುಮನ ಏಕಶಿಲಾವಿಗ್ರಹವನ್ನು ಕೋಲಾರದಿಂದ ಬೆಂಗಳೂರಿಗೆ ಸಾಗಿಸುತ್ತಿರುವ ವಿಚಾರ ಎಲ್ಲರಿಗೂ ಗೊತ್ತಿರುವಂತದ್ದೆ. ಹನುಮನಿಗೆ ಅಭೂತಪೂರ್ವ ಸ್ವಾಗತ ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಯ ಶ್ರೀ ಕೋದಂಡರಾಮಸ್ವಾಮಿ ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪನೆಗಾಗಿ ಸಿದ್ದವಾಗಿದ್ದ 62 ಅಡಿ ಎತ್ತರದ, 750 ಟನ್ ತೂಕದ ವೀರಾಂಜನೇಯ ಸ್ವಾಮಿಯ ವಿಗ್ರಹವನ್ನು, 300 ಚಕ್ರಗಳ ಬೃಹತ್ ವಾಹನದಲ್ಲಿ ಸಾಗಿಸಲಾಗುತ್ತಿದೆ. ಮಾರ್ಗ ಮಧ್ಯ ತೊಂದರೆಯಾದರೂ, ಆ…