ಸುದ್ದಿ

ಸ್ನೇಹಿತರು ಕೊಟ್ಟ ಬರ್ತ್ ಡೇ ಬಂಪ್ಸ್ ನಿಂದಾಗಿ ಹುಟ್ಟುಹಬ್ಬದ ದಿನವೇ ಸಾವನಪ್ಪಿದ ವಿಧ್ಯಾರ್ಥಿ…

529

ಹುಟ್ಟುಹಬ್ಬದಂದು ಸ್ನೇಹಿತರು ಎಲ್ಲ ಸೇರಿ ಯುವಕನಿಗೆ ಬರ್ತ್ ಡೇ ಬಂಪ್ಸ್ ಕೊಟ್ಟಿದ್ದು, ಇದರಿಂದ ವಿದ್ಯಾರ್ಥಿ ಮೃತಪಟ್ಟ ಘಟನೆ ತಮಿಳುನಾಡಿದ ಚೆನ್ನೈನಲ್ಲಿ ನಡೆದಿದೆ.

ಕಳೆದ ಎರಡು ತಿಂಗಳ ಹಿಂದೆ ಈ ಘಟನೆ ನಡೆದಿದ್ದು, ಈಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಮೃತಪಟ್ಟ ಯುವಕ ಬೆಂಗಳೂರಿನ ಐಐಎಂ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ಯುವಕ ಎರಡು ತಿಂಗಳ ಹಿಂದೆ ತನ್ನ ಹುಟ್ಟುಹಬ್ಬವನ್ನು ಸ್ನೇಹಿತರ ಜೊತೆ ಆಚರಿಸಿಕೊಂಡಿದ್ದನು. ಈ ವೇಳೆ ಸ್ನೇಹಿತರು ಎಲ್ಲರು ಸೇರಿ ಆತನಿಗೆ ಬರ್ತ್ ಡೇ ಬಂಪ್ಸ್ ಕೊಟ್ಟಿದ್ದಾರೆ.

ಬರ್ತ್ ಡೇ ಬಂಪ್ಸ್ ಪಡೆದ ನಂತರ ಯುವಕ ಕ್ಷೇಮವಾಗಿದ್ದನು. ಆದರೆ ಮನೆಗೆ ಹೋದ ನಂತರ ಆತನಿಗೆ ತೀವ್ರವಾಗಿ ಹೊಟ್ಟೆ ನೋವು ಬಂದಿದೆ. ಬಳಿಕ ಆತನ ಪೋಷಕರು ಆತನಿಗೆ ಆಸ್ಪತ್ರೆಗೆ ಸೇರಿಸಿದ್ದರು.

ಸ್ನೇಹಿತರು ಬರ್ತ್‍ಡೇ ಬಂಪ್ಸ್ ಕೊಟ್ಟಿದ್ದರಿಂದ ಯುವಕನ ಮೆದೋಜೀರಕ ಗ್ರಂಥಿ(ಪ್ಯಾಂಕ್ರಿಯಾಸ್)ಗೆ ಗಂಭೀರವಾಗಿ ಗಾಯಗೊಂಡಿತ್ತು. ಇದರಿಂದ ಯುವಕ ತನ್ನ ಹುಟ್ಟುಹಬ್ಬದಿಂದಲೇ ಮೃತಪಟ್ಟಿದ್ದಾನೆ.

ಹುಟ್ಟುಹಬ್ಬದ ಹೆಸರಲ್ಲಿ ಸ್ನೇಹಿತರು ಮನಬಂದಂತೆ ಯುವಕನಿಗೆ ಥಳಿಸಿದ್ದಾರೆ. ಈ ವಿಡಿಯೋ ಈಗ ವೈರಲ್ ಆಗಿದ್ದು, ವಿಡಿಯೋ ನೋಡಿದ ಜನರು ತಮ್ಮ ಆಕ್ರೋಶವನ್ನು ಹೊರ ಹಾಕಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹಾಸನದ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಲು ಪಕ್ಷದವರಿಂದಲೇ ಷಡ್ಯಂತ್ರ ನಡೆದಿದೆಯಾ? ವೈರಲ್ ಆಗಿರುವ ಆಡಿಯೋನಲ್ಲಿ ಏನಿದೆ ಗೊತ್ತಾ?

    ಬಿಜೆಪಿ ಅಭ್ಯರ್ಥಿ ಸೋಲಿಗೆ ಕಮಲ ನಾಯಕರೇ ಸ್ಕೆಚ್ ಹಾಕುತ್ತಿದ್ದಾರಾ ಎಂಬ ಪ್ರಶ್ನೆಯೊಂದು ಮೂಡಿದೆ. ಯಾಕಂದ್ರೆ ಶಾಸಕ ಪ್ರೀತಂಗೌಡ ಹಾಗೂ ಬಿಜೆಪಿ ಕಾರ್ಯಕರ್ತ ಮಾತಾಡಿದ್ದಾರೆ ಎನ್ನಲಾದ ಆಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಬಿಜೆಪಿ ಶಾಸಕ ಪ್ರೀತಂಗೌಡ ಅವರದ್ದು ಎನ್ನಲಾದ ಆಡಿಯೋ ವೈರಲ್ ಆಗಿದೆ. ಬಿಜೆಪಿಯಲ್ಲಿ ಪುಕ್ಸಟ್ಟೆ ನಾಯಕನಾಗಲು ಮಂಜು ಹೊರಟಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಎ. ಮಂಜು ಬಗ್ಗೆ ಕಾರ್ಯಕರ್ತನ ಬಳಿ ಪ್ರೀತಂ ಗೌಡ ಮಾತನಾಡಿದ್ದಾರೆನ್ನಲಾಗಿದೆ. ಹಾಸನದಲ್ಲಿ ಬಳ್ಳಾರಿ ಚುನಾವಣೆಯ ಫಲಿತಾಂಶ ಮರುಕಳಿಸುತ್ತದೆ. 10…

  • ಸುದ್ದಿ

    ಮೈಸೂರಿನ ರೈತ ಸಮುದಾಯಕ್ಕೆ ಮತ್ತೊಂದು ಸಿಹಿ ಸುದ್ದಿ….!

    ಮೈಸೂರು ಜಿಲ್ಲೆಯಲ್ಲಿ ಪ್ರವಾಹದಿಂದ ಸಂತ್ರಸ್ತರಾದ ರೈತರ ಬ್ಯಾಂಕಿನ ಸಾಲ ಮರುಪಾವತಿ ಅವಧಿಯನ್ನು ಒಂದು ವರ್ಷ ವಿಸ್ತರಿಸಲಾಗಿದೆ. ಪ್ರವಾಹದಿಂದ ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ, ಟಿ. ನರಸೀಪುರ, ಪಿರಿಯಾಪಟ್ಟಣ, ನಂಜನಗೂಡು, ಹುಣಸೂರು ತಾಲ್ಲೂಕಿನ ರೈತರು ಬೆಳೆ ನಷ್ಟ ಅನುಭವಿಸಿದ್ದಾರೆ. ಇದರಿಂದ ಸಕಾಲಕ್ಕೆ ಬ್ಯಾಂಕ್ ಸಾಲವನ್ನು ಮರುಪಾವತಿಸಲು ಸಾಧ್ಯವಾಗಿಲ್ಲ. ಭಾರತೀಯ ರಿಸರ್ವ್ ಬ್ಯಾಂಕಿಗೆ ರಾಜ್ಯ ಸರ್ಕಾರ ಈ ಕುರಿತಾಗಿ ಮನವಿ ಸಲ್ಲಿಸಿದ್ದು‌, ಸರ್ಕಾರದ ಮನವಿ ಮೇರೆಗೆ ಭಾರತೀಯ ರಿಸರ್ವ್ ಬ್ಯಾಂಕ್ ರೈತರು ಪಡೆದ ಸಾಲ ಮರುಪಾವತಿ ಅವಧಿಯನ್ನು ಒಂದು ವರ್ಷದ…

  • govt

    ಮೇ 23 ರಂದು ಫಲಿತಾಂಶ, ಮೇ 24 ರಿಂದ ಹೊಸ ಸರ್ಕಾರ…..

    ನವದೆಹಲಿ: ಸುದೀರ್ಘವಾಗಿ ನಡೆದ ಲೋಕಸಭೆ ಚುನಾವಣೆ ಫಲಿತಾಂಶ ಮೇ 23 ರಂದು ಪ್ರಕಟವಾಗಲಿದೆ. ಕೊನೆ ಹಂತದ ಮತದಾನ ಮುಗಿದ ಬೆನ್ನಲ್ಲೇ ಮತಗಟ್ಟೆ ಸಮೀಕ್ಷೆಗಳು ಪ್ರಕಟವಾಗಿದ್ದು, ಎನ್.ಡಿ.ಎ. ಬಹುಮತ ಗಳಿಸಲಿದೆ ಎಂದು ಬಹುತೇಕ ಸಮೀಕ್ಷೆಗಳಲ್ಲಿ ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಮೇ 24 ರಂದು ಹೊಸ ಸರ್ಕಾರ ರಚನೆಗೆ ನಾಯಕರು ತಯಾರಿ ನಡೆಸಿದ್ದಾರೆ. ಬಿಜೆಪಿ ನೇತೃತ್ವದ ಎನ್.ಡಿ.ಎ. ಪಕ್ಷಗಳ ನಾಯಕರು ನಾಳೆ ದೆಹಲಿಗೆ ತೆರಳಿ ಸಭೆ ನಡೆಸಲಿದ್ದಾರೆ.ಪ್ರ ಧಾನಿ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹಾಗೂ ಬಿಜೆಪಿಯ ಹಿರಿಯ…

  • ಸುದ್ದಿ

    ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಬಂದ ಅಭಿಮಾನಿಗೆ ‘ಡೋಂಟ್ ಟಚ್ ಮಿ’ ಎಂದ ರಾನು: ವಿಡಿಯೋ..!

    ಇಂಟರ್‌ನೆಟ್ ಸ್ಟಾರ್ ರಾನು ಮೊಂಡಲ್ ಸೆಲ್ಫಿ ಕೇಳಲು ಬಂದ ಅಭಿಮಾನಿಗೆ ‘ಡೋಂಟ್ ಟಚ್ ಮಿ’ ಎಂದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇತ್ತೀಚೆಗೆ ರಾನು ಮೊಂಡಲ್ ಅವರು ಮಾರ್ಕೆಟ್‌ಗೆ ಹೋಗಿದ್ದರು. ಈ ವೇಳೆ ಮಹಿಳಾ ಅಭಿಮಾನಿಯೊಬ್ಬರು ರಾನು ಅವರನ್ನು ನೋಡಿ ಖುಷಿಯಾಗುತ್ತಾರೆ. ಅಲ್ಲದೆ ಅವರ ಕೈ ಹಿಡಿದು ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಂದಾಗುತ್ತಾರೆ. ಅಭಿಮಾನಿಯ ವರ್ತನೆ ನೋಡಿ ರಾನು ಅವರ ಮೇಲೆ ರೇಗಾಡುತ್ತಾರೆ. ಅಭಿಮಾನಿ ಕೈ ಹಿಡಿದು ಎಳೆಯುತ್ತಿದ್ದಂತೆ ರೊಚ್ಚಿಗೆದ್ದ ರಾನು, ನನ್ನ ಕೈಯನ್ನು ಏಕೆ ಹೀಗೆ…

  • ಸುದ್ದಿ

    ಮಾರಕ ಕಾಯಿಲೆಯಾದ ಏಡ್ಸ್ ಮತ್ತು ಕ್ಯಾನ್ಸರ್‌ಗೆ ಔಷಧಿಯನ್ನು ಕಂಡುಹಿಡಿದು ಎಲ್ಲರ ಮೆಚ್ಚುಗೆ ಪಡೆದ ರೈತ…!

    ಕ್ಯಾನ್ಸರ್ ಕಾಯಿಲೆ ಜೊತೆಗೆ ಮಾರಕ ಕಾಯಿಲೆಯಾದ ಎಚ್ಐವಿ ಏಡ್ಸ್‌ಗೂ ಕೂಡ ರಾಮಬಾಣವೊಂದನ್ನು ಗಡಿಜಿಲ್ಲೆಯ ರೈತನೊಬ್ಬ ಕಂಡುಹಿಡಿದಿದ್ದು ಸಾವಿನ ಅಂತಿಮ ಕ್ಷಣಗಳ ಎಣಿಸುವ ಎಚ್ಐವಿ ಸೋಂಕಿತರಿಗೆ ಆಶಾಕಿರಣವಾಗಿದ್ದಾರೆ. ಮಹೇಶ್ ಕುಮಾರ್ ಎಂಬ ರೈತ ಹಲವಾರು ವರ್ಷಗಳಿಂದ ತಮ್ಮ ಮನೆಯ ಮುಂದೆ ಬೆಳೆದ ಒಂದು ಮರದ ಎಲೆಗಳಿಂದ ಕ್ಯಾನ್ಸರ್ ಪೀಡಿತರಿಗೆ ಚಿಕಿತ್ಸೆ ಕೊಡುತ್ತಾ ಬಂದಿದ್ದಾರೆ. ಸದ್ಯ ಈಗ ಅದೇ ಎಲೆಯಗಳಲ್ಲೇ ಎಚ್.ಐ.ವಿ ಏಡ್ಸ್ ಸೋಂಕಿತರಿಗೂ ಕೂಡ ಚಿಕಿತ್ಸೆ ನೀಡುತ್ತಿದ್ದು, ಸೋಂಕಿತರಿಂದ ಉತ್ತಮ ಪ್ರತಿಕ್ರಿಯೆ ಕೂಡ ವ್ಯಕ್ತವಾಗತೊಡಗಿದೆ. ಎಷ್ಟೋ ಮಂದಿ ಮಾರಣಾಂತಿಕ…

  • ಸುದ್ದಿ

    ಮೈತ್ರಿ ಸರ್ಕಾರ ಆದ ನಂತರ ಮೊದಲ ಬಾರಿಗೆ ಜೆಡಿಎಸ್ ವಿರುದ್ದ ಗುಡುಗಿದ ಸಿದ್ದರಾಮಯ್ಯನವರು ಹೇಳಿದ್ದೇನು ಗೊತ್ತಾ..?

    ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿ ಧರ್ಮ ನನ್ನ ಬಾಯಿ ಕಟ್ಟಿಹಾಕಿದೆ. ಇದರಿಂದಾಗಿ ಹೆಚ್. ವಿಶ್ವನಾಥ್ ಅವರ ಬೇಜವಾಬ್ದಾರಿಯುತ ಹೇಳಿಕೆಗಳಿಗೆ ಪ್ರತಿಕ್ರಿಯಿಸಲಾರೆ. ಹೀಗೆಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಲಿ ಎಂದು ಅವರ ಬೆಂಬಲಿಗರು ಚಮಚಾಗಿರಿ ಮಾಡುತ್ತಿದ್ದಾರೆ. ಅಧಿಕಾರದಲ್ಲಿದ್ದಾಗ ಸಿದ್ದರಾಮಯ್ಯ ಉತ್ತಮ ಆಡಳಿತ ನೀಡಿದ್ದರೆ 130 ಸ್ಥಾನಗಳಿಂದ 78 ಸ್ಥಾನಗಳಿಗೆ ಕುಸಿದಿದ್ದು ಏಕೆ ಎಂದು ವಿಶ್ವನಾಥ್ ಹೇಳಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಖಾರವಾಗಿಯೇ ಪ್ರತಿಕ್ರಿಯೆ ನೀಡಿದ್ದಾರೆ. ಟ್ವಿಟರ್ ನಲ್ಲಿ ಅನಿಸಿಕೆ ಹಂಚಿಕೊಂಡ ಸಿದ್ದರಾಮಯ್ಯ, ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ…