ರಾಜಕೀಯ

ಬಿಜೆಪಿ ಪಕ್ಷ ದಿಂದ ಅಭ್ಯರ್ಥಿಗಳ ಪಟ್ಟಿ ಪ್ರಕಟ

By KOLAR NEWS CHANDRU

April 11, 2023

ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ 189 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ನವದೆಹಲಿಯ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ ಸಿಂಗ್‌, ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ ಮಾತನಾಡಿ, ರಾಜ್ಯದಲ್ಲಿ ಹೊಸ ಮುಖಗಳಿಗೆ ಹೆಚ್ಚು ಅವಕಾಶ ಕಲ್ಪಿಸಲಾಗಿದೆ. ಎಲ್ಲ ಕ್ಷೇತ್ರಗಳಲ್ಲೂ ಪ್ರಧಾನಿ ಮೋದಿ ಪ್ರಚಾರ ಮಾಡಲಿದ್ದಾರೆ ಎಂದರು. 189 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ 52 ಹೊಸ ಮುಖಗಳಿಗೆ ಅವಕಾಶ, 16 ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳು, 32 ಒಬಿಸಿ, 9 ವೈದ್ಯರು, 1 ಐಪಿಎಸ್, 1 ಐಎಎಸ್, 31 ಪದವೀಧರರು, 8 ಮಹಿಳೆಯರು 5, ವಕೀಲರು, 3 ನಿವೃತ್ತ ಸರ್ಕಾರಿ ನೌಕರರಿಗೆ ಟಿಕೆಟ್‌ ನೀಡಲಾಗಿದೆ.