ಸುದ್ದಿ

ಕನ್ನಡಿಗರಿಗೆ ಹೆಚ್ಚು ಉದ್ಯೋಗ ಆದ್ಯತೆ ಸಿಎಂ ಯಡಿಯೂರಪ್ಪ ಭರವಸೆ…!

30

ಇಂಗ್ಲಿಷ್ ಸಂಬಳಕ್ಕಾದರೆ, ಕನ್ನಡ ಉಂಬಳಕ್ಕೆ ಎಂಬ ಮಾತು ನಾಡಿನಲ್ಲಿ ಪ್ರಚಲಿತದಲ್ಲಿದೆ. ಆದರೆ, ಕನ್ನಡ ನಮ್ಮ ಸಂಬಳ ಹಾಗೂ ಉಂಬಳ ಎರಡಕ್ಕೂ ಆಗಬೇಕು. ಈ ದಿಸೆಯಲ್ಲಿ ಸರ್ಕಾರ ಕಾರ್ಯೋನ್ಮುಖವಾಗಿದ್ದು, ಕನ್ನಡಿಗರಿಗೆ ಹೆಚ್ಚಿನ ಉದ್ಯೋಗ ದೊರಕಿಸಿಕೊಡುವ ದಿಸೆಯಲ್ಲಿ ಪ್ರಯತ್ನ ನಡೆಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಶುಕ್ರವಾರ ಆಯೋಜಿಸಿದ್ದ ಸಮಾರಂಭದಲ್ಲಿ ಎರಡು ಸಂಸ್ಥೆಗಳು ಸೇರಿ ವಿವಿಧ ಕ್ಷೇತ್ರಗಳ ಸಾಧಕರಿಗೆ ೨೦೧೯ನೇ ಸಾಲಿನ ‘ರಾಜ್ಯೋತ್ಸವ ಪ್ರಶಸ್ತಿ’ ಪ್ರದಾನ ಮಾಡಿ. ಮಾತನಾಡಿದ ಅವರು, ಖಾಸಗಿ ಕ್ಷೇತ್ರವು ಸೇರಿದಂತೆ ಎಲ್ಲಾ ರಂಗ ಗಳಲ್ಲೂ ಕನ್ನಡಿಗರಿಗೆ ಉದ್ಯೋಗಾವಕಾಶ ಹೆಚ್ಚಾಗ ಬೇಕು. ಈ ದಿಸೆಯಲ್ಲಿ ರಾಜ್ಯ ಸರ್ಕಾರ ಕಾರ್ಯೋನ್ಮುಖವಾಗಿದ್ದು, ಈಗಾಗಲೇ ಖಾಸಗಿ ಸಂಸ್ಥೆಗಳಲ್ಲಿನ ಡಿ ಹಾಗೂ ಸಿ ವರ್ಗದ ಉದ್ಯೋಗಗಳಿಗೆ ಕನ್ನಡಿಗರ ನೇಮಕಾತಿ ಕಡ್ಡಾಯಗೊಳಿಸಲಾಗಿದೆ ಎಂದರು.

ನಾಡು, ನುಡಿ, ನೆಲ, ಜಲ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ. ಈ ವಿಚಾರದಲ್ಲಿ ಯಾರಿಗೂ ಬಿಜೆಪಿ ಸರ್ಕಾರದ ಬಗ್ಗೆ ಅನುಮಾನ ಬೇಡ ಎಂದರು. ಭಾಷೆ-ಸಂಸ್ಕೃತಿಗೆ ಸಂಬಂಧ : ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ. ರವಿ ಮಾತನಾಡಿ, ಸಂಸ್ಕೃತಿ ಹಾಗೂ ಭಾಷೆ ಒಂದನ್ನೊಂದು ಬಿಟ್ಟು ಇರಲಾರವು. ನಾವು ಭಾಷೆ ಕಳೆದುಕೊಂಡರೆ ಸಂಸ್ಕೃತಿಯನ್ನೂ ಕಳೆದುಕೊಳ್ಳು ತ್ತೇವೆ.

ಎರಡನ್ನೂ ಉಳಿಸಿಕೊಳ್ಳುವುದು ವರ್ತಮಾನದ ಸವಾಲು. ಈ ಸವಾಲನ್ನು ನಾವೆಲ್ಲ ಸ್ವೀಕರಿಸಬೇಕು. ನಾವು ಎಷ್ಟೇ ಚೆನ್ನಾಗಿ ಇಂಗ್ಲಿಷ್ ಕಲಿತರೂ ಮಾತೃಭಾಷೆ ಕನ್ನಡವೇ ಆಗಿರುತ್ತದೆ. ಹಾಗಾಗಿ ಇಂಗ್ಲಿಷ್ ಸೇರಿ ಇತರೆ ನೂರು ಭಾಷೆಗಳನ್ನು ಕಲಿಯೋಣ ಎಂದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ನಿಮಗೆ ಕೂದಲು ಉದುರುವ ಸಮಸ್ಯಯೇ?ಹಾಗಾದ್ರೆ ಇಲ್ಲಿದೆ ನೋಡಿ ಮನೆಮದ್ದು ಪರಿಹಾರ……

    ಹಿಂದಿನ ಕಾಲದ ದಿನಗಳಲ್ಲಿ ವಯಸ್ಸಾಗುತ್ತಿದ್ದಂತೆ ಕೂದಲು ಉದುರುತ್ತಿತ್ತು. ಆದರೆ ಈಗಿನ ಕಾಲದ ಜೀವನ ಪದ್ಧತಿ, ಆಹಾರ ಪದ್ಧತಿ ಇಂದಾಗಿ, ಹದಿಹರೆಯದವರಲ್ಲಿ ಕೂಡ ಕೂದಲು ಉದುರುವ ಸಮಸ್ಯೆ ದಿನೇ ದಿನೇ ಹೆಚ್ಚಾಗಿ ಕಾಡುತ್ತಿದೆ.

  • ಸಿನಿಮಾ

    ಅಂಜನಿಪುತ್ರನಿಗೆ ಕೋರ್ಟ್ ಶಾಕ್..!

    ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ ‘ಅಂಜನಿಪುತ್ರ’ ಚಿತ್ರ ಪ್ರದರ್ಶನಕ್ಕೆ ಸೆಷೆನ್ಸ್ ಕೋರ್ಟ್ ಶನಿವಾರ ತಡೆಯಾಜ್ಞೆ ನೀಡಿದೆ.ಅಂಜನಿಪುತ್ರ ಚಿತ್ರದಲ್ಲಿ ವಕೀಲರ ಬಗ್ಗೆ ಅವಹೇಳನಕಾರಿ ಸಂಭಾಷಣೆ ಇರುವ ಹಿನ್ನೆಲೆಯಲ್ಲಿ ಸಿನಿಮಾ ಪ್ರದರ್ಶನಕ್ಕೆ ಸಿವಿಲ್ ಕೋರ್ಟ್ ತಡೆ ನೀಡಿದೆ.

  • ಸುದ್ದಿ

    ಕೊಳವೆಬಾವಿಗೆ ಬಿದ್ದಿದ್ದ ಮಗುವನ್ನು 109 ಗಂಟೆಗಳ ನಂತರ ರಕ್ಷಣೆ…!

    ಚಂಡೀಗಢ: 150 ಅಡಿ ಆಳದ ಕೊಳವೆಬಾವಿಗೆ ಬಿದ್ದ 2 ವರ್ಷದ ಬಾಲಕನನ್ನು ಸುಮಾರು 109 ಗಂಟೆಗಳ ಕಾಲ ಕಾರ್ಯಾಚರಣೆ ಮಾಡಿ ರಕ್ಷಿಸುವ ಪ್ರಯತ್ನ ನಡೆಸಿದರೂ ಆತ ಮೃತಪಟ್ಟ ಘಟನೆ ಇಂದು ನಡೆದಿದೆ. ಫಥೇವೀರ್ ಸಿಂಗ್ ಬಳಕೆ ಮಾಡದ ಕೊಳವೆ ಬಾವಿಗೆ ¸ಬಿದ್ದ ಬಾಲಕ. ಈತ ಸಂಗೂರ್ ಜಿಲ್ಲೆಯ ಭಗವಾನ್ ಪುರ ಗ್ರಾಮದಲ್ಲಿ ತಮ್ಮ ಮನೆಯ ಹತ್ತಿರವೇ ಗುರುವಾರ ಸಂಜೆ 4 ಗಂಟೆ ಸುಮಾರಿಗೆ ಆಟವಾಡುತ್ತಿದ್ದನು. ಈ ವೇಳೆ ಬಳಕೆ ಮಾಡದೇ ಇರುವ ಬೋರ್ ವೆಲ್ ಒಳಗೆ ಆಯತಪ್ಪಿ…

  • Uncategorized, ರಾಜಕೀಯ

    ತಾಜ್‌ ಮಹಲ್‌ ನಿರ್ಮಿಸಿದವರು ದ್ರೋಹಿಗಳು ಎಂದು ಹೇಳಿದ ಶಾಸಕ..!ತಿಳಿಯಲು ಈ ಲೇಖನ ಓದಿ..

    ಅತ್ಯುನ್ನತ ಪ್ರೇಮದ ಐತಿಹಾಸಿಕ ಸ್ಮಾರಕವಾಗಿರುವ ಆಗ್ರಾದ ವಿಶ್ವ ಪ್ರಸಿದ್ಧ ತಾಜ್ ಮಹಲ್ ಈಚಿನ ದಿನಗಳಲ್ಲಿ ಒಳ್ಳೆಯ ಮತ್ತು ಕೆಟ್ಟ ಸುದ್ದಿಗಳಿಗಾಗಿ ಮುಖ್ಯ ಶೀರ್ಷಿಕೆಯಲ್ಲಿ ರಾರಾಜಿಸುವಂತಾಗಿದೆ.

  • ಸಾಧನೆ, ಸುದ್ದಿ, ಸ್ಪೂರ್ತಿ

    ಆಟೋ ಓಡಿಸುತ್ತಿರುವ ಈ ಮಹಿಳೆ ನಿಜಾಂಶ ಹೊರಬರುತ್ತಿದ್ದಂತೆ ಎಲ್ಲರೂ ಶಾಕ್. ಅಸಲಿಗೆ ಈ ಮಹಿಳೆ ಯಾರು?

    ಈ ಮಹಿಳೆ ಈ ಕೆಲಸ ಮಾಡಲು ಕಾರಣ ತಿಳಿದು ಪ್ರತಿಯೊಬ್ಬರು ಕೂಡ ಶಾಕ್ ಆದರು. ಇಷ್ಟೊಂದು ಈಕೆ ಫೇಮಸ್ ಆಗಲು ಕಾರಣವಾದರೂ ಏನು? ಈ ಸುದ್ದಿ ಬಂದಿದ್ದು ಅಹಮದಾಬಾದ್ನಿಂದ. 35 ವರ್ಷದ ಅಂಕಿತ ಆಟೋ ಓಡಿಸುತ್ತಾ ಇದ್ದಾಳೆ. ಈಕೆ ಆಟೋ ಓಡಿಸಲು ಕಾರಣ ಅವರ ತಂದೆ. ಅವರ ತಂದೆ ಮನೆಯ ಎಲ್ಲಾ ಜವಾಬ್ದಾರಿಗಳನ್ನು ನೋಡಿಕೊಳ್ಳುತ್ತಿದ್ದರು. ಆದರೆ ಅವರಿಗೆ ಕೆಲವು ವರ್ಷಗಳ ಹಿಂದೆ ಕ್ಯಾನ್ಸರ್ ಕಾಯಿಲೆ ಬಂದ ಕಾರಣ ಅಂಕಿತಾಳೇ ಮನೆಯ ಎಲ್ಲಾ ಜವಾಬ್ದಾರಿಯನ್ನು ತನ್ನ ಹೆಗಲ ಮೇಲೆ…

  • ಸುದ್ದಿ

    ಗಂಡು ಹೆಣ್ಣು ಹಾರ ಬದ್ಲಾಯಿಸಿಕೊಂಡ ನಂತರ ವರನ ದುರ್ಮರಣ……?ಯಾಕೆ

    ವಧುವಿನೊಂದಿಗೆ ಹಾರ ಬದಲಾಯಿಸಿಕೊಂಡ ನಂತರ ಸಂಭ್ರಮಾಚರಣೆಯಲ್ಲಿ ಸ್ನೇಹಿತ ಗುಂಡು ಹಾರಿಸಿದ್ದ ಪರಿಣಾಮ ಬುಲೆಟ್ ವರನಿಗೆ ಬಿದ್ದು ಮೃತಪಟ್ಟಿರುವ ಘಟನೆ ಬಿಹಾರದಲ್ಲಿ ನಡೆದಿದೆ.ಸತ್ಯೇಂದ್ರ ಕುಮಾರ್ ಮೃತ ವರ. ಈ ಘಟನೆ ಭಾನುವಾರ ರಾತ್ರಿ ಶಹಾಪೂರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗುಂಡು ಬಿದ್ದ ತಕ್ಷಣ ವರನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕುಮಾರ್ ಮೃತಪಟ್ಟಿದ್ದಾನೆ. ಈ ಘಟನೆಯಲ್ಲಿ ವರನ ಸಹೋದರನಿಗೂ ಗಾಯಗಳಾಗಿದ್ದು, ಆತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಏನಿದು ಪ್ರಕರಣ? ಮೃತ ಕುಮಾರ್ ಮದುವೆ ಭಾನುವಾರ ನಿಗದಿಯಾಗಿತ್ತು….