ನೂತನ ಸಂಸತ್ ಭವನದ ಉದ್ಘಾಟನೆ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯ ಬಿಡುಗಡೆ..!!
ನವದೆಹಲಿ: ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ. ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ ₹ 75ರ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ. ಈ ವಿಶೇಷ ನಾಣ್ಯವು 75 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುತ್ತಿರುವ ಭಾರತಕ್ಕೆ ಗೌರವ ಸೂಚಕವಾಗಿರಲಿದೆ. ವಿಶೇಷ ನಾಣ್ಯದ ವಿಶೇಷತೆ ಹೀಗಿದೆ: ನಾಣ್ಯದ ಒಂದು ಬದಿಯಲ್ಲಿ ಅಶೋಕ ಸ್ತಂಭದ ಸಿಂಹದ ಲಾಂಛನ…