ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಪುಟ್ಟ ಅಭಿಮಾನಿಯ ಆಸೆಯನ್ನು ಈಡೇರಿಸಲು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಭೇಟಿ ಮಾಡಿದ್ದಾರೆ.

ರತನ್, ದರ್ಶನ್ ಅವರ ಕಟ್ಟಾ ಅಭಿಮಾನಿಯಾಗಿದ್ದು, ಚಿಕ್ಕವಯಸ್ಸಿನಲ್ಲೇ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದಾನೆ. ದರ್ಶನ್ ಅವರನ್ನು ನೋಡುವುದು ರತನ್ನ ಬಹುದಿನದ ಆಸೆ ಆಗಿದ್ದು. ಒಂದೇ ಒಂದು ಬಾರಿ ದರ್ಶನ್ ಅವರನ್ನು ನೋಡಬೇಕೆಂದು ರತನ್ ತುಂಬಾ ಹಂಬಲಿಸುತ್ತಿದ್ದನು.

ಈ ವಿಷಯ ತಿಳಿದ ದರ್ಶನ್, ರತನ್ ಕುಟುಂಬವನ್ನು ಹಾಸನದಿಂದ ಬೆಂಗಳೂರಿಗೆ ಕರೆಸಿಕೊಂಡರು. ಬಳಿಕ ರತನ್ ದರ್ಶನ್ ಅವರನ್ನು ಭೇಟಿ ಆಗುತ್ತಿದ್ದಂತೆ ಸಿಕ್ಕಾಪಟ್ಟೆ ಖುಷಿಪಟ್ಟಿದ್ದಾನೆ. ತಮ್ಮ ನಿವಾಸದಲ್ಲೇ ರತನ್ ಹಾಗೂ ಅವರ ಕುಟುಂಬದವರ ಜೊತೆ ಕಾಲ ಕಳೆದಿದ್ದಾರೆ.

ರತನ್ ಅವರ ತಂದೆ ಆಟೋ ಚಾಲಕರಾಗಿದ್ದು, ತಮ್ಮ ಆಟೋ ಮೇಲೆ ದರ್ಶನ್ ಅವರ ಫೋಟೋ ಹಾಕಿಸಿಕೊಂಡಿದ್ದಾರೆ. ಸದ್ಯ ದರ್ಶನ್, ರತನ್ ಕುಟುಂಬದ ಜೊತೆ ಕಾಲ ಕಳೆದು ಆತನಿಗೆ ಹಾಗೂ ಆತನ ಕುಟುಂಬಸ್ಥರಿಗೆ ಧೈರ್ಯ ತುಂಬಿದ್ದಾರೆ.

ದರ್ಶನ್ ತಮ್ಮ ಪುಟ್ಟ ಅಭಿಮಾನಿಯ ಭೇಟಿ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಅಲ್ಲದೆ ದರ್ಶನ್, ರತನ್ನನ್ನು ಭೇಟಿ ಮಾಡಿದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಫೋಟೋ ನೋಡಿ ಕೆಲವರು ದರ್ಶನ್ ಅವರ ಸರಳತೆಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಥೈಲ್ಯಾಂಡ್ ನ ವ್ಯಕ್ತಿಯೊಬ್ಬ ತನ್ನ ಮಗಳನ್ನು ಮದುವೆಯಾಗುವ ವ್ಯಕ್ತಿಗೆ ಅನನ್ಯ ಮತ್ತು ಆಸಕ್ತಿದಾಯಕ ಷರತ್ತು ವಿಧಿಸಿದ್ದಾನೆ. ಈತನ ಮಗಳನ್ನು ಮದುವೆಯಾದ್ರೆ 2 ಕೋಟಿ ರೂಪಾಯಿ ಹಣವನ್ನು ತಂದೆ ನೀಡಲಿದ್ದಾನಂತೆ. ಥೈಲ್ಯಾಂಡ್ ನ ಶ್ರೀಮಂತ ವ್ಯಕ್ತಿ, ಮಗಳ ಸುರಕ್ಷತೆ ಜವಾಬ್ದಾರಿಯನ್ನು ಹೊತ್ತಿದ್ದಾನೆ. ಮಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಆಪರ್ ನೀಡಿದ್ದಾನೆ. ತಂದೆಯ ಪ್ರಕಟಣೆ ನಂತ್ರ ಅನೇಕ ಯುವಕರು ಮದುವೆಯಾಗಲು ಮುಂದೆ ಬಂದಿದ್ದಾರೆ. ಈವರೆಗೆ 10,000 ಹುಡುಗ್ರು ಮದುವೆಯಾಗಲು ಆಸಕ್ತಿ ತೋರಿಸಿದ್ದಾರಂತೆ. 58 ವರ್ಷದ ತಂದೆ ಮಿಸ್ಟರ್ ರಾತೊಂಗ್ ನನ್ನು…
ನಮ್ಮ ದೇಶದಲ್ಲಿ ಮಳೆ ಬರುವಂತೆ ಪ್ರಾರ್ಥಿಸಿ ಕತ್ತೆ, ಕಪ್ಪೆ ಹಾಗೂ ಇತರ ಪ್ರಾಣಿಗಳ ಜೊತೆ ಮಾಡುವೆ ಮಾಡುವುದು ಸಾಮಾನ್ಯವಾಗಿದೆ. ಈ ಪ್ರಾಣಿಗಳ ಜೊತೆ ಮದುವೆ ಮಾಡಿಕೊಂಡು ಮೆರೆವಣಿಗೆ ಮಾಡೋದು ಎಲ್ಲರಿಗು ಗೊತ್ತಿರುವ ವಿಚಾರ.ಹೀಗೆ ವಿದೇಶಗಳಲ್ಲಿ ಇಂತಹ ಸಂಪ್ರದಾಯಗಳು ಚಾಲ್ತಿಯಲ್ಲಿವೆ.
ನವೆಂಬರ್, 1954 ರಂದು ಕರ್ನಾಟಕದ ಹೊನ್ನಾವರ ತಾಲೂಕಿನ ಮಲ್ಲಾಪುರ ಎಂಬ ಪುಟ್ಟ ಹಳ್ಳಿಯಲ್ಲಿ ಶಂಕರ್ ನಾಗ್ ಅವರು ಹುಟ್ಟಿದರು. ನಕ್ಷತ್ರ ನಾಮ’ಅವಿನಾಶ’.ಹೀಗೆಂದರೆ ವಿನಾಶವಿಲ್ಲದವನು ಎಂದರ್ಥ.ತಂದೆ ಹೊನ್ನಾವರದ ನಾಗರ ಕಟ್ಟೆಯ ಸದಾನಂದ, ಬಾಲ್ಯದಲ್ಲಿ ಪ್ರೀತಿಯಿಂದ ಮಗನನ್ನು ಕರೆಯುತಿದ್ದ ಹೆಸರು ಭವಾನಿ ಶಂಕರ್. ಶಂಕರ್ ನಾಗ್ ತನ್ನ ವಿದ್ಯಾಬ್ಯಾಸದ ನಂತರ ಮುಂಬೈಗೆ ತೆರಳಿದರು. ಮುಂಬೈನ ಮರಾಠಿ ಚಿತ್ರಮಂದಿರದ ಕಡೆಗೆ ಆಕಷಿ೯ತರಾದ ಶಂಕರ್ ತಮಗರಿವಿಲ್ಲದಂತೆ ಮರಾಠಿ ರಂಗಭೂಮಿ ಹವ್ಯಾಸವನ್ನು ಬೆಳೆಸಿಕೊಳ್ಳುತ್ತಾ ಮರಾಠಿ ರಂಗಭೂಮಿಯಲ್ಲಿ ತೀವ್ರವಾಗಿ ತೊಡಗಿಕೊಂಡಿದ್ದರು. ತಮ್ಮ ಗೆಳೆಯರೊಂದಿಗೆ ಅವರು ಚಿತ್ರಕತೆ…
ಶಂಖದ ಬಗ್ಗೆ ನೀವು ಸಾಕಷ್ಟು ತಿಳಿದಿರುತ್ತೀರಿ. ಪ್ರತಿಯೊಂದು ಶುಭ ಕಾರ್ಯದಲ್ಲೂ ಇದನ್ನು ಬಳಸ್ತಾರೆ. ದೇವರ ಪೂಜೆಯಿಂದ ಹಿಡಿದು ಮದುವೆ ಸಮಾರಂಭದಲ್ಲಿಯೂ ಶಂಖವನ್ನು ಶುಭವೆಂದು ಪರಿಗಣಿಸಲಾಗಿದೆ. ಈ ಶಂಖದಿಂದ ನೀವು ಇಚ್ಛಿಸಿದಷ್ಟು ಪ್ರೀತಿ ಜೊತೆಗೆ ಹಣ ಸಿಗಲಿದೆ ಎಂಬ ವಿಷ್ಯ ನಿಮಗೆ ಗೊತ್ತಾ? ತಾಯಿ ಲಕ್ಷ್ಮಿ ಕೈನಲ್ಲಿ ಹಿಡಿದಿರುವ ಶಂಖ ದಕ್ಷಿಣಾವರ್ತಿ. ಇದನ್ನು ಲಕ್ಷ್ಮಿ ಶಂಖವೆಂದೂ ಕರೆಯುತ್ತಾರೆ. ಇದು ಬಲಮುರಿ ಶಂಖವಾಗಿದೆ. ಸಾಮಾನ್ಯವಾಗಿ ಸಿಗುವ ಶಂಖಗಳು ಎಡಮುರಿ ಶಂಖಗಳಾಗಿರುತ್ತವೆ. ದಕ್ಷಿಣಾವರ್ತಿ ಶಂಖವನ್ನು ತಾಯಿ ಲಕ್ಷ್ಮಿ ಎದುರು ಕೆಂಪು ಬಟ್ಟೆಯಲ್ಲಿಟ್ಟು…
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಪ್ರಖ್ಯಾತ ಸ್ಯಾಕ್ಸೋಫೋನ್ ವಾದಕ ಕದ್ರಿ ಗೋಪಲನಾಥ್(70) ಅವರು ಶುಕ್ರವಾರ ಕೊನೆಯುಸಿರೆಳೆದಿದ್ದಾರೆ. ಕೆಲವು ತಿಂಗಳುಗಳಿಂದ ವಯೋಸಹಜ ಹೃದಯ ಸಂಬಂಧಿ ಅನಾರೋಗ್ಯದಿಂದ ಬಳಲುತ್ತಿದ್ದರು. ನಿನ್ನೆ ಗುರುವಾರ ಅವರಿಗೆ ಹೃದಯಾಘಾತವಾಗಿತ್ತು. ಹೀಗಾಗಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ. ವಿಶ್ವವಿಖ್ಯಾತ ಸ್ಯಾಕ್ಸೊಫೋನ್ ವಾದಕರಾದ ಗೋಪಾಲನಾಥ್ರವರು ಹುಟ್ಟಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಪಾಣಿ ಮಂಗಳೂರಿನಲ್ಲಿ. ತಂದೆ ತನಿಯಪ್ಪ ನಾಗಸ್ವರ ವಿದ್ವಾಂಸರು. ಆಕಾಶವಾಣಿ ‘ಎ’ಟಾಪ್ ಶ್ರೇಣಿಯ ಕಲಾವಿದರಾಗಿದ್ದರು.ವಿದೇಶಿ ವಾದ್ಯವನ್ನು ಸಂಪೂರ್ಣವಾಗಿ ತನ್ನದಾಗಿಸಿಕೊಂಡು…
ಬಾಯಿಗೆ ರುಚಿ ನೀಡುವ ಹಣ್ಣು ಪಪ್ಪಾಯ. ಇದ್ರ ಸೇವನೆ ಆರೋಗ್ಯಕ್ಕೂ ಒಳ್ಳೆಯದು. ಕೆಲವರು ಪ್ರತಿದಿನ ಬೆಳಿಗ್ಗೆ ಉಪಹಾರದ ಜೊತೆ ಒಂದು ಬೌಲ್ ಪಪ್ಪಾಯ ಸೇವನೆ ಮಾಡ್ತಾರೆ. ಪ್ರತಿದಿನ ಬೆಳಿಗ್ಗೆ ಪಪ್ಪಾಯ ತಿನ್ನುವವರು ಪಪ್ಪಾಯ ತಿನ್ನದಿರುವವರಿಗಿಂತ ಆರೋಗ್ಯವಾಗಿರುತ್ತಾರೆ. ಖಾಯಿಲೆಗೆ ತುತ್ತಾಗುವುದು ಕಡಿಮೆ. ಹಾಗೆ ಕಚೇರಿಯಲ್ಲಿ ಉತ್ತಮ ಕೆಲಸ ಮಾಡಲು ಉತ್ಸಾಹಿತರಾಗಿರುತ್ತಾರೆ. ಪಪ್ಪಾಯಿಯಲ್ಲಿ ವಿಟಮಿನ್ ಹಾಗೂ ಖನಿಜಗಳು ಹೆಚ್ಚಿನ ಪ್ರಮಾಣದಲ್ಲಿರುತ್ತವೆ. ದೇಹಕ್ಕೆ ಕಡಿಮೆಯಾಗಿರುವ ನೀರಿನ ಅಂಶವನ್ನು ಇದು ನೀಡುವುದಲ್ಲದೆ ಅಗತ್ಯವಿರುವ ಪೋಷಕಾಂಶಗಳನ್ನು ಒದಗಿಸುತ್ತದೆ. ಪಪ್ಪಾಯಿಯಲ್ಲಿ ಕೊಬ್ಬಿನಂಶವಿರುವುದಿಲ್ಲ. ಇದು ಶಕ್ತಿಯ ಒಂದು…