ಸುದ್ದಿ

ಫೋರ್ಜರಿ ಮಾಡಿ ಆಸ್ತಿ ಕಬಳಿಸಿ. ತಂದೆ ತಾಯಿಗೆ ಗೇಟ್ ಪಾಸ್ ಕೊಟ್ಟ ಮಕ್ಕಳು.

49

ತಂದೆ-ತಾಯಿ ಮಕ್ಕಳಿಗೋಸ್ಕರ ತಮ್ಮ ಇಡೀ ಬದುಕನ್ನೇ ಮುಡಿಪಾಗಿ ಇಡುತ್ತಾರೆ. ಕಷ್ಟಪಟ್ಟು ಮಕ್ಕಳನ್ನು ಸಾಕಿದರೂ ಕೊನೆಗೆ ತಂದೆ ತಾಯಿಗೆ ದ್ರೋಹ ಬಗೆಯುವ ಮಟ್ಟಕ್ಕೆ ಕೆಲವರು ಹೋಗುತ್ತಾರೆ. ಆದರೆ ಇಲ್ಲಿ ನೋಡಿ ಹೆಣ್ಣುಮಕ್ಕಳು ಕುಟುಂಭದ ಕಣ್ಣು ಎನ್ನುವಂತೆ ಸಾಕಿ ಸಲಹಿದರು ಅದೇ ಮಕ್ಕಳು ಆಸ್ತಿಯ ಆಸೆಗೆ ಹೆತ್ತವರಿಗೆ ದ್ರೋಹ ಬಗೆದಿದ್ದಾರೆ.

ಮಕ್ಕಳಿಗೋಸ್ಕರ, ಅವರ ಸುಖ ಸಂತೋಷಕ್ಕೋಸ್ಕರ ತಂದೆ ತಾಯಿ ತಮ್ಮ ಜೀವನವನ್ನೆ ಮುಡಿಪಾಗಿಡುತ್ತಾರೆ.  ಆದರೆ ಇಲ್ಲಿ ವೆಲ್ಲಿಯನ್, ಕಮಲಮ್ಮ ಎಂಬ ದಂಪತಿಗೆ ತಮ್ಮ ಮಕ್ಕಳೇ ಮೋಸ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.  ವೆಲ್ಲಿಯನ್ ದಂಪತಿಗೆ ಒಟ್ಟು ನಾಲ್ಕು ಜನ ಹೆಣ್ಣುಮಕ್ಕಳಿದ್ದು.  ಈ ಹೆಣ್ಣು ಮಕ್ಕಳನ್ನು ಚೆನ್ನಾಗಿ ಓದಿಸಿ,  ಅವರಿಗೊಂದು ಬದುಕು ಕಟ್ಟಿಕೊಟ್ಟಿದ್ದಾರೆ. ನಾಲ್ಕು ಜನರಿಗೂ ಸಹ ಚಾಮರಾಜಪೇಟೆಯಲ್ಲಿ ಸ್ವಂತ ಮನೆಯನ್ನು ಸಹ ಕಟ್ಟಿಕೊಟ್ಟಿದ್ದಾರೆ. ಇಷ್ಟೆಲ್ಲ ಸೌಕರ್ಯಗಳನ್ನು ಮಾಡಿದರೂ ಕೂಡ ಹೆತ್ತವರಿಗೆ ಈ ಮಕ್ಕಳು  ಭಾರವಾಗಿದ್ದಾರೆ. ನಾಲ್ವರಲ್ಲಿ ಮೂವರು ಮಕ್ಕಳು ಆಸ್ತಿಯ ಅತಿ ಆಸೆಗೆ ಆಸ್ತಿಯ ಪತ್ರಕ್ಕೆ ಫೋರ್ಜರಿ ಸಹಿ ಮಾಡುವ ಮೂಲಕ ತಮ್ಮ ಹೆಸರಿಗೆ ಮಾಡಿಕೊಂಡು. ತಂದೆ- ತಾಯಿಯನ್ನು ಮನೆಗೆ ಸೇರಿಸಿಕೊಳ್ಳುತ್ತಿಲ್ಲ.

ಆದರೆ ಒಬ್ಬಳು ಪುತ್ರಿ ಮಾತ್ರ ಹೆತ್ತವರನ್ನು ಮನೆಗೆ ಕರೆದುಕೊಂಡು ಬಂದು  ಸಾಕಲು ಮುಂದಾದಾಗ ಆಕೆಯ ಮನೆ ಮತ್ತು ಆಸ್ತಿಯನ್ನು ಕೂಡ ಲಪಟಾಯಿಸಲು ಉಳಿದ ಮೂವರು ಸ್ಕೆಚ್ ಹಾಕಿದ್ದಾರಂತೆ. ಹೆಣ್ಣು ಮಕ್ಕಳ ಈ  ವರ್ತನೆಗೆ ವೃದ್ದ ದಂಪತಿ ಕಣ್ಣೀರಿಟ್ಟಿದ್ದಾರೆ. ಮಕ್ಕಳಿಗೋಸ್ಕರ ಈ ದಂಪತಿಳು ವಿಲ್ ಸಹ ಮಾಡಿದ್ದರು.

ಅದನ್ನ ನಂಬದೇ ಮಕ್ಕಳು ಫೋರ್ಜರಿ ಮಾಡಿ ಆಸ್ತಿಯನ್ನ ಮಕ್ಕಳು ಕಬಳಿಸಿದ್ದಾರೆ. ಹೆಣ್ಣು ಮಕ್ಕಳಿಗೆ ಇರಲು ಸ್ವಂತ ಮನೆ ಮಾಡಬೇಕೆಂದು ದೊಡ್ಡ ಸೈಟುಗಳಲ್ಲಿ  ನಾಲ್ಕು ಮನೆಗಳನ್ನ ನಿರ್ಮಿಸಿ, ಎಲ್ಲರ ಹೆಸರಲ್ಲೂ ಕೂಡ ಒಂದೊಂದು ಮನೆಯನ್ನ ಬರೆದು ವಿಲ್ ಮಾಡಿದ್ದರು. ಆದರೆ ಆ ವಿಲ್ ಅನ್ನು ಹೆಣ್ಣು ಮಕ್ಕಳಿಗೆ ತೋರಿಸಿರಲಿಲ್ಲ. ಈ ಕಾರಣಕ್ಕೆ ತಂದೆ ತಾಯಿ ಮೇಲೆ ಮಕ್ಕಳು ಮುನಿಸಿಕೊಂಡು ಈ ನಿರ್ಧಾರಕ್ಕೆ ಕೈ ಹಾಕಿದ್ದಾರೆ.

ನಂತರ ಜನವರಿಯಲ್ಲಿ ಜಿಗಣಿಯಲ್ಲಿ  ರಿಜಿಸ್ಟ್ರಾರ್ ಆಫೀಸಿನಲ್ಲಿ ಸಬ್ ರಿಜಿಸ್ಟ್ರಾರ್ ಆಗಿದ್ದ ಮಂಜುನಾಥ್ ಅನ್ನೋರು ಚಿನ್ನಪ್ಪ ಎಂಬವರಿಗೆ ಜನರಲ್ ಪವರ್ ಆಫ್ ಅಟಾರ್ನಿಯ(ಜಿಪಿಎ) ಕೊಟ್ಟು ನಂತರ ಅದನ್ನ ದಾನದ ರೂಪದಲ್ಲಿ ಈ ಹೆಣ್ಣು ಮಕ್ಕಳು ಫೋರ್ಜರಿ ಮಾಡಿ ಬರೆಸಿಕೊಂಡಿದ್ದಾರೆ. ಈಗ ತಾವೇ ನಿರ್ಮಿಸಿದ ಮನೆಯಲ್ಲಿ ಇರಲೂ ಆಗದೇ ಕಣ್ಣೀರಿಡುತ್ತಿದ್ದಾರೆ. ಹೆಣ್ಣುಮಕ್ಕಳ ಬಗ್ಗೆ ತಂದೆಗೆ ಹೆಚ್ಚು ಪ್ರೀತಿ ಅಂತಾರೆ ಆದರೆ  ಈ ಹೆಣ್ಣುಮಕ್ಕಳಿಂದಲೇ ತಂದೆ ಇಷ್ಟೊಂದು ನೋವು ಅನುಭವಿಸುತ್ತಿದ್ದಾರೆ.

ತಂದೆ ತಾಯಿ ಕಣ್ಣಿಗೆ ಕಾಣೋ ದೇವರು ಅಂತಾರೆ ಆದರೆ ಕೇವಲ ತಂದೆ ತಾಯಿಯೇ ಕಷ್ಟ ಪಟ್ಟು ಸಂಪಾದಿಸಿದ ಆಸ್ತಿಗಾಗಿ ಅವರನ್ನೇ ಬೀದಿ ಪಾಲು ಮಾಡಲು ಹೊರಟಿರುವ ಇಂತಹ ಮಕ್ಕಳಿಗೆ ಕಾನೂನು ತಕ್ಕ ಶಾಸ್ತಿ ಮಾಡಬೇಕು ಅನ್ನೊದು ನೊಂದವರ ಒತ್ತಾಯವಾಗಿದೆ.

About the author / 

admin

Categories

Date wise

  • ರಾಜ್ಯದಲ್ಲಿ ಟಫ್ ರೂಲ್ಸ್ ಮತ್ತೆ ಜಾರಿ

    ರಾಜ್ಯ ಸರ್ಕಾರವು ಇಂದಿನಿಂದ ನೈಟ್ ಕರ್ಫ್ಯೂ & ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲು ನಿರ್ಧರಿಸಲಾಗಿದೆ.ಈಗಾಗಲೇ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ ಮುಂದಿನ 2ವಾರಗಳ ಕಾಲ ಮುಂದುವರಿಸಲು ನಿರ್ಧರಿಸಲಾಗಿದೆ ರಾತ್ರಿ 10ರಿಂದ ಬೆಳಿಗ್ಗೆ 5 ರವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ.ವಾರಾಂತ್ಯದ ಕರ್ಫ್ಯೂವನ್ನು ದಿನಾಂಕ 7ರಿಂದ ಶುಕ್ರವಾರ ರಾತ್ರಿ 10 ಗಂಟೆಯಿಂದ 10 ರ ಸೋಮವಾರ ಬೆಳಿಗ್ಗೆ 5 ರವರೆಗೆ ಜಾರಿ ಮಾಡಲಾಗಿದೆ   ಸರ್ಕಾರಿ ಕಚೇರಿಗಳು ಮಾಲ್​ಗಳಿಗೆ ಭಾರತ ಸರ್ಕಾರದ ಮಾರ್ಗಸೂಚಿ ಅನುಸರಿಸಲಾಗುವುದು. * ಚಿತ್ರಮಂದಿರ, ಮಾಲ್,…

     743,828 total views,  27 views today

ಏನ್ ಸಮಾಚಾರ