ಸುದ್ದಿ

ದಾಖಲೆಯ ಬೆಲೆಗೆ ಸೇಲಾಯ್ತು ಮೆಗಾಸ್ಟಾರ್ ಚಿರಂಜೀವಿ ಸಿನಿಮಾ ವಿತರಣೆ ಹಕ್ಕು…!

32

ಮೆಗಾಸ್ಟಾರ್ ಚಿರಂಜೀವಿ ಅಭಿನಯದ ಬಹುನಿರೀಕ್ಷೆಯ ತೆಲುಗು ಚಿತ್ರ ‘ಸೈರಾ ನರಸಿಂಹ ರೆಡ್ಡಿ’ ಆರಂಭದಿಂದಲೂ ಭಾರೀ ಕುತೂಹಲ ಮೂಡಿಸಿದೆ.

ಭಾರತೀಯ ಚಿತ್ರರಂಗದ ಗಮನ ಸೆಳೆದಿರುವ ‘ಸೈರಾ ನರಸಿಂಹ ರೆಡ್ಡಿ’ ಚಿತ್ರದಲ್ಲಿ ಘಟಾನುಘಟಿ ಕಲಾವಿದರು ಅಭಿನಯಿಸಿದ್ದಾರೆ. ಬಿಗ್ ಬಿ ಅಮಿತಾಬ್ ಬಚ್ಚನ್, ಕಿಚ್ಚ ಸುದೀಪ್, ವಿಜಯ್ ಸೇತುಪತಿ, ಜಗಪತಿಬಾಬು, ಅನುಷ್ಕಾ ಶೆಟ್ಟಿ, ನಯನ ತಾರಾ, ತಮನ್ನಾ ಸೇರಿದಂತೆ ಹಲವು ಕಲಾವಿದರು ಅಭಿನಯಿಸಿದ್ದಾರೆ.

ರಾಮ್ ಚರಣ್ ತೇಜ ನಿರ್ಮಾಣ ಮಾಡಿರುವ ಈ ಚಿತ್ರವನ್ನು ಸುಧೀಂದರ್ ರೆಡ್ಡಿ ನಿರ್ದೇಶಿಸಿದ್ದಾರೆ. ಈಗಾಗಲೇ ‘ಸೈರಾ ನರಸಿಂಹ ರೆಡ್ಡಿ’ ಚಿತ್ರೀಕರಣ ಮುಗಿದಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆದಿವೆ. ಈ ಚಿತ್ರ ಅಕ್ಟೋಬರ್ 2 ರಂದು ತೆರೆಗೆ ಬರುವ ಸಾಧ್ಯತೆಯಿದೆ.

ಅಂದ ಹಾಗೆ, ಚಿತ್ರದ ಕರ್ನಾಟಕದ ವಿತರಣೆ ಹಕ್ಕು ಬರೋಬ್ಬರಿ 32 ಕೋಟಿ ರೂ.ಗೆ ಮಾರಾಟವಾಗಿ ದಾಖಲೆ ನಿರ್ಮಿಸಿದೆ. ಇದೇ ಮೊದಲ ಬಾರಿಗೆ ತೆಲುಗು ಚಿತ್ರವೊಂದಕ್ಕೆ ರಾಜ್ಯದಲ್ಲಿ ಇಷ್ಟು ದೊಡ್ಡ ಮೊತ್ತ ನೀಡಿ ವಿತರಣೆ ಹಕ್ಕು ಪಡೆಯಲಾಗಿದೆ ಎಂದು ಹೇಳಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ